Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಪಹಲ್ಗಾಮ್ ನಲ್ಲಿ ನಡೆದಂತಹ ಉಗ್ರರ ದಾಳಿಗೆ ಇದೀಗ ಭಾರತ ತಕ್ಕ ಉತ್ತರ ನೀಡಲು ಸಜ್ಜಾಗಿದ್ದು, ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಈಗಾಗಲೇ ಕೇಂದ್ರ ಸರ್ಕಾರ ಹಲವು ಕಠಿಣ ಕ್ರಮ ಕೈಗೊಂಡಿದ್ದು, ಇದರ ಬೆನ್ನಲ್ಲೆ, ಇದೀಗ ಸಂಸತ್ ಭವನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಂಸತ್ ಭವನದಲ್ಲಿ ಸರ್ವ ಪಕ್ಷಗಳ ಸಭೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಇದೀಗ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಚರ್ಚೆಯಾಗಲಿದೆ.
ನವದೆಹಲಿ : ಆಕಸ್ಮಿಕವಾಗಿ ಅಂತರಾಷ್ಟ್ರೀಯ ಗಡಿ ದಾಟಿದ ಬಿಎಸ್ಎಫ್ ಯೋಧನನ್ನು ಇದೀಗ ಪಾಕಿಸ್ತಾನ ರೇಂಜರ್ ಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಗೊತ್ತಿಲ್ಲದೆ ಬಿಎಸ್ಎಫ್ ಯೋಧನೊಬ್ಬ ಗಡಿ ದಾಟಿದ್ದಾನೆ. ಪಂಜಾಬ್‌ನ ಫಿರೋಜ್‌ಪುರ ಬಳಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ದಾಟಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕಾನ್‌ಸ್ಟೆಬಲ್ ಒಬ್ಬರನ್ನು ಪಾಕಿಸ್ತಾನಿ ರೇಂಜರ್‌ಗಳು ಬುಧವಾರ ಬಂಧಿಸಿದ್ದಾರೆ. ಶೂನ್ಯ ರೇಖೆಯ ಬಳಿಯ ಜನನಿಬಿಡ ಪ್ರದೇಶದಲ್ಲಿ ಬೆಳೆ ಕೊಯ್ದು ಮಾಡುತ್ತಿದ್ದ ಭಾರತೀಯ ರೈತರನ್ನು ಮೇಲ್ವಿಚಾರಣೆ ಮಾಡುವ ನಿಯಮಿತ ಕಾರ್ಯಾಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಬಿಎಸ್‌ಎಫ್‌ನ 182 ನೇ ಬೆಟಾಲಿಯನ್‌ಗೆ ಸೇರಿದ ಕಾನ್‌ಸ್ಟೆಬಲ್ ಪಿಕೆ ಸಿಂಗ್ ಆ ಸಮಯದಲ್ಲಿ ತಮ್ಮ ಸಮವಸ್ತ್ರದಲ್ಲಿ ತಮ್ಮ ಸರ್ವಿಸ್ ರೈಫಲ್ ಅನ್ನು ಹಿಡಿದಿದ್ದರು. ಗಡಿ ಬೇಲಿ ಮತ್ತು ಶೂನ್ಯ ರೇಖೆಯ ನಡುವೆ ಇರುವ ಹೊಲಗಳಿಗೆ ಪ್ರವೇಶ ದ್ವಾರವಾದ ಗೇಟ್ ಸಂಖ್ಯೆ 208/1 ಬಳಿ ಅವರು ರೈತರೊಂದಿಗೆ ಹೋಗುತ್ತಿದ್ದರು. ತೀವ್ರ ಶಾಖದಿಂದಾಗಿ, ಅವರು ಗಡಿಯನ್ನು ದಾಟಿ ಮರದ…
ಶಿವಮೊಗ್ಗ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕರ್ನಾಟಕ ಮೂಲದ ಇಬ್ಬರು ಸಾವನ್ನಪ್ಪಿದ್ದು, ಈಗಾಗಲೇ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿತು. ಬಳಿಕ ಬೆಂಗಳೂರು ಮೂಲದ ಭರತ್ ಭೂಷಣ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಿತು. ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಭರತ್ ಭೂಷಣ ಅವರ ಅಂತ್ಯಕ್ರಿಯೆ ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಯಿತು.ಈ ಒಂದು ಅಂತ್ಯ ಸಂಸ್ಕಾರದಲ್ಲಿ ಸಚಿವ ರಾಮಲಿಂಗರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದಂತ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಜನರು ಉಗ್ರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕರ್ನಾಟಕ ಮೂಲದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿತು. ಪೊಲೀಸರು ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದರು. ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಅಂತ್ಯಕ್ರಿಯೆ ನೆರವೇರಿತು. ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯ ವಿಧಿ ವಿಧಾನ ನಡೆದು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಯಿತು.ಬಳಿಕ ಪುತ್ರ ಅಭಿಜನ್ ತಂದೆಯ ಮೃತ ದೇಹಕ್ಕೆ ಅಗ್ನಿ ಸ್ಪರ್ಶ ಮಾಡಿದ. ಈ ಒಂದು ಅಂತ್ಯ ಸಂಸ್ಕಾರದಲ್ಲಿ ಸಚಿವ ಮಧು ಬಂಗಾರಪ್ಪ ಸೇರಿದಂತೆ ಶಾಸಕರು ಮುಖಂಡರು ಗಣ್ಯ ವ್ಯಕ್ತಿಗಳು ಹಾಗೂ ಮೃತ ಮಂಜುನಾಥ್ ಕುಟುಂಬಸ್ಥರು ಸಂಬಂಧಿಕರು ಸ್ನೇಹಿತರು ಎಲ್ಲರೂ ಉಪಸ್ಥಿತರಿದ್ದರು. ಅಂತಿಮ ದರ್ಶನಕ್ಕೂ ವ್ಯವಸ್ಥೆ ಕಲ್ಪಿಸಲಾಗಿತ್ತು. ತೆರೆದ ವಾಹನದಲ್ಲಿ ಮಂಜುನಾಥ್ ಮೃತದೆಹದ ಮೆರವಣಿಗೆ ನಡೆಯಿತು. ಮಂಜುನಾಥ್…
ಶಿವಮೊಗ್ಗ : ನಾನು ದೂರದಲ್ಲಿ ಕೂತಿದ್ದೆ. ಅಪ್ಪ ಅಮ್ಮ ನಂಗೆ ಏನೋ ತರೋಕೆ ಹೋದ್ರು. ನನ್ನನ್ನು ಅಲ್ಲೇ ಕೂರೋಕೆ ಹೇಳಿ ಹೋದ್ರು. ಮತ್ತೇ ಅಪ್ಪ ಅಮ್ಮನ ಜೊತೆ ನನ್ನ ಕರ್ಕೊಂಡು ಬರೋಕೆ ಹೇಳಿದ್ರು. ಅಮ್ಮ ನನ್ನ ಕರ್ಕೊಂಡು ಬರುತ್ತಿರುವಾಗ ಎಲ್ಲರೂ ಓಡೋಕೆ ಶುರುಮಾಡಿದ್ರು, ಆಗ ಅಲ್ಲಿ ಎಲ್ಲರಿಗೂ ಗೊತ್ತಾಗಿತ್ತು ಉಗ್ರರು ಫೈರಿಂಗ್ ಮಾಡುತ್ತಿದ್ದಾರೆ ಅಂತಾ. ನಾನು ಅಮ್ಮ ಓಡೋಕೆ ಶುರು ಮಾಡಿದ್ವಿ. ಅಪ್ಪ ಎಲ್ಲಿ ಅಂತಾ ಹಿಂದೆ ತಿರುಗಿ ನೋಡಿದ್ರೆ ಶೂಟ್ ಆಗಿ ಬಿದ್ದಿದ್ರು. ಇದು ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಗ್ರ ಭೀಕರ ಗುಂಡಿನ ದಾಳಿಯಲ್ಲಿ ಬಲಿಯಾದ ಶಿವಮೊಗ್ಗದ ಮಂಜುನಾಥ್ ಅವರ ಪುತ್ರ ಅಭಿಜನ್ ಹೇಳಿದ ಮಾತುಗಳು.ನಮ್ಮ ಅಪ್ಪಾ ಅಲ್ಲಿ ಸತ್ರು ಅಂತಾ ಗೊತ್ತಾಗಿತ್ತು. ನಮ್ಮನ್ನೂ ಸಾಯಿಸಬೇಕಿತ್ತು ನಮ್ಮನ್ನು ಯಾಕೆ ಬಿಟ್ರಿ. ಅಪ್ಪನ್ನ ಸಾಯಿಸಿದ್ರಲ್ಲಾ ನಮ್ಮನ್ನು ಸಾಯಿಸಿ ಅಂತಾ ನಮ್ಮಮ್ಮ ಹೇಳಿದ್ದರು. ನಾನೂ ಉಗ್ರರ ಹತ್ರ ಹೋಗಿ ಕುತ್ತೇ ನಮ್ಮ ಅಪ್ಪನ್ನ ಸಾಯಿಸಿದ್ದಲ್ಲಾ ನಮ್ಮನ್ನು ಕೊಲ್ಲು ಅಂತಾ…
ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಚಿನ್ನ ವಂಚನೆ ಎಸಗಿದ್ದ ಪ್ರಕರಣ ಸಂಬಂಧ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ದಾಳಿ ನಡೆಸಿದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು, ಕಡತಗಳು ಹಾಗೂ ದಾಖಲೆಗಳ ಶೋಧ ಮಾಡಿದ್ದಾರೆ. ಶಾಸಕ ವಿನಯ್ ಕುಲಕರ್ಣಿಗೂ ED ಶಾಕ್! ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಏನಿದು ಪ್ರಕರಣ? ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಅಂಗಡಿ ಬಾಲಕಿ ವನಿತಾ ಎಸ್…
ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ED) ಬಿಗ್ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಹೌದು ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿ ನಿವಾಸದ ಮೇಲೆ ಇಡಿ ದಾಳಿ ಮಾಡಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಿನಯ್ ಕುಲಕರ್ಣಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿನಯ್ ಕುಲಕರ್ಣಿ ನಿವಾಸದಲ್ಲಿ ಇದೀಗ ಜಾರಿ ನಿರ್ದೇಶಕರು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನವದೆಹಲಿ : ಭಾರತದಲ್ಲಿ ಅಬಿರ್ ಗುಲಾಲ್ ಚಿತ್ರ ಪ್ರದರ್ಶನಕ್ಕೆ ಇದೀಗ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅನುಮತಿ ನಿರಾಕರಿಸಿದೆ. ಪಾಕ್ ನಟ ಫವಾದ್ ಖಾನ್ ನಟಿಸಿರುವ ಅಬಿರ್ ಗುಲಾಲ್ ಚಿತ್ರ ಭಾರತದಲ್ಲಿ ಚಿತ್ರ ಬಿಡುಗಡೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಎರಡು ದಿನಗಳ ಹಿಂದೆ ಉಗ್ರರು ಪ್ರವಾಸಿಗರ ಮೇಲೆ ಭೀಕರವಾಗಿ ಗುಂಡಿನ ದಾಳಿ ನಡೆಸಿದರು. ಈ ಒಂದು ಗುಂಡಿನ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ ಪ್ರವಾಸಿಗರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಪಾಕಿಸ್ತಾನ ಚಿತ್ರಗಳನ್ನು ನಿಷೇಧಿಸುವ ಕುರಿತು ಚಿಂತನೆ ನಡೆಯುತ್ತಿದ್ದು, ಹಾಗಾಗಿ ಈ ಒಂದು ಸಿನಿಮಾ ಮೇ 9 ರಂದು ಭಾರತದಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಉಗ್ರರ ದಾಳಿಯ ಘಟನೆ ಯಿಂದ ಇದೀಗ ಪಾಕಿಸ್ತಾನ ಚಿತ್ರ ಭಾರತದಲ್ಲಿ ಪ್ರದರ್ಶನಕ್ಕೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಹೌದು ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾದಾಗಿನಿಂದಲೂ ತೊಂದರೆಯಲ್ಲಿತ್ತು. ಈ ಭಯೋತ್ಪಾದಕ…
ಬಿಹಾರ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಕ್ರೂರವಾಗಿ ಸಾವನ್ನಪ್ಪಿದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತೇವೆ ಪತ್ತೆಹಚ್ಚುತ್ತೇವೆ ಮತ್ತು ಶಿಕ್ಷಿಸುತ್ತೇವೆ ಮತ್ತು ನಮ್ಮ ಮನೋಭಾವವನ್ನು ಎಂದಿಗೂ ಮುರಿಯುವುದಿಲ್ಲ ಎಂದು ಹೇಳಿದರು. ಬಿಹಾರದ ಮಧುಬನಿ ಸಮಾವೇಶದಲ್ಲಿ ಮಾತನಾಡಿದ ಅವರು, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ. ಕನ್ನಡಿಗರು ಸೇರಿದಂತೆ ಎಲ್ಲರನ್ನೂ ಹತ್ಯೆಗೈದಿದ್ದಾರೆ. ಉಗ್ರರು ಊಹಿಸಲಾಗದಂತಹ ಶಿಕ್ಷೆ ಆಗೋದು ನಿಶ್ಚಿತ. ಉಗ್ರರಿಗೆ ಈಗಿರುವ ಸ್ವಲ್ಪ ಜಾಗವು ಇರುವುದಿಲ್ಲ. ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗುಡುಗಿದ್ದಾರೆ. ಯಾವುದೇ ಕಾರಣಕ್ಕೂ ನಾವು ಬಿಡುವುದಿಲ್ಲ. ಭಾರತದ ಆತ್ಮ ಸ್ಥೈರ್ಯವನ್ನು ಕುಗ್ಗಿಸಲು ಆಗಲ್ಲ. ಯಾವುದೇ ಕಾರಣಕ್ಕೂ ಉಗ್ರರು ತಪ್ಪಿಸಿಕೊಳ್ಳಲು ಆಗಲ್ಲ ಬಿಹಾರದ ಈ ಮಣ್ಣಿನ ಮೇಲೆ ನಿಂತು ಜಗತ್ತಿಗೆ ಹೇಳುತ್ತಿದ್ದೇನೆ ಭಾರತದ ಪ್ರತಿಯೊಬ್ಬ ಉಗ್ರನನು ಮತ್ತು ಉಗ್ರರಿಗೆ ಬೆಂಬಲಿಸಿದವರನ್ನು ಹುಡುಕಿ ಹೋಗಿ ಹೊಡೆಯುತ್ತೇವೆ ಎಂದರು. ನಾವು ಅವರನ್ನು ಭೂಮಿಯ…
ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ನಡೆದಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಇದೀಗ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಹೌದು, ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಗಲಕೋಟೆ ಮೂಲದ ಪ್ರದೀಪ್ (40) ಯುವತಿಗೆ ಲೈಂಗಿಕ ಕಿಕುಕುಳ ನೀಡಿದ್ದಾನೆ. ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೋಲಿ ಕಂಡಕ್ಟರ್‌ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಕ್ಷಣವೇ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದ್ದು, ಇದೀಗ ಕೊಣಾಜೆ ಪೊಲೀಸರು…














