Author: kannadanewsnow05

ಹಾವೇರಿ : ಜಮ್ಮು ಕಾಶ್ಮೀರದಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಅದರಲ್ಲಿ ಕನ್ನಡಿಗರು ಇಬ್ಬರು ಬಲಿಯಾಗಿದ್ದಾರೆ. ಈ ಒಂದು ದಾಳಿಯ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಟಿಕಲ್ 370 ತೆರವುಗೊಳಿಸಿದ ನಂತರ ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿತ್ತು, ಈ ಪ್ರಾಂತ್ಯ ತನ್ನ ಕೈ ತಪ್ಪಿಹೋಗುತ್ತಿದೆ ಅಂತ ಪಾಕಿಸ್ತಾನಕ್ಕೆ ಹತಾಶೆ ಶುರುವಾಗಿತ್ತು, ಅದರ ಪರಿಣಾಮವೇ ನಿನ್ನೆ ಪಹೆಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದು 28 ಅಮಾಯಕ ಹಿಂದೂಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಕಳೆದ 10 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿಯವರು ಆ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ಅದು ಕೇಂದ್ರಾಡಳಿತ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಜೆಗಾಗಿ ತನ್ನ ಊರಿಗೆ ತೆರಳಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ಯುವಕನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧನಂಜಯ್ ಎಂದು ತಿಳಿದುಬಂದಿದೆ. ಈ ಘಟನೆ ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ವೈದ್ಯಕೀಯ ತಪಾಸಣೆಯಿಂದ ಅತ್ಯಾಚಾರದ ಆರೋಪ ದೃಢಪಟ್ಟಿದ್ದು, ಸೋಲದೇವನಹಳ್ಳಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಧನಂಜಯನನ್ನು ಬಂಧಿಸಿದರು. ಲೈಂಗಿಕ ಅಪರಾಧಗಳಿಂದ ಪೋಕ್ಸೋ…

Read More

ಮೈಸೂರು : ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ನಿನ್ನೆ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಇಬ್ಬರು ಕರ್ನಾಟಕದವರು ಸೇರಿದ್ದಾರೆ. ಇದೀಗ ಮೈಸೂರು ಜಿಲ್ಲೆಯ ಮೂಲದ ಹತ್ತು ಜನ ಪ್ರವಾಸಿಗರು ಶ್ರೀನಗರದಲ್ಲಿ ಸುರಕ್ಷಿತವಾಗಿ ಇದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು ಮೈಸೂರಿನಿಂದ ಪ್ರವಾಸಕ್ಕೆ ತೆರಳಿದ 10 ಜನರು ಶ್ರೀನಗರದಲ್ಲಿ ಸೇಫ್ ಆಗಿದ್ದಾರೆ. ದೆಹಲಿ ಹಾಗೂ ಕಾಶ್ಮೀರ ಪ್ರವಾಸಕ್ಕೆ ಮೈಸೂರಿನ 10 ಜನರು ತೆರಳಿದ್ದರು. ಏಪ್ರಿಲ್ 28 ರಂದು ಮೈಸೂರು ಪ್ರವಾಸಿಗರು ಕರ್ನಾಟಕಕ್ಕೆ ವಾಪಸ್ ಬರಬೇಕಿತ್ತು, ಆದರೆ ಕಾಶ್ಮೀರದಲ್ಲಿ ಉಗ್ರರಿಂದ ದಾಳಿ ಹಿನ್ನೆಲೆಯಲ್ಲಿ ಪ್ರವಾಸವನ್ನು ಮೊಟಕು ಗೊಳಿಸಿದ್ದರು.ಇದೀಗ ಶ್ರೀನಗರದ ಹೋಟೆಲ್ ಒಂದರಲ್ಲಿ ಪ್ರವಾಸಿಗರು ಉಳಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಸಚಿವ ಸಂತೋಷ್ ಲಾಡ್ ಮೈಸೂರು ಮೂಲದ 10 ಜನ ಪ್ರವಾಸಿಗರನ್ನು ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಚಿಕ್ಕಬಳ್ಳಾಪುರ : ಮಾಜಿ ಎಂಎಲ್ಸಿ ವೈ.ಎ ನಾರಾಯಣಸ್ವಾಮಿ ಸಂಬಂಧಿಯಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಗುಂಡಿನ ದಾಳಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಎಂಬಲ್ಲಿ ನಡೆದಿದೆ. ಸರ್ಕಾರಿ ಜಾಗದಲ್ಲಿ ಕ್ರಷರ್ ನಿರ್ಮಾಣಕ್ಕೆ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಮಂಚೇನಹಳ್ಳಿಯಲ್ಲಿ ಸ್ಥಳೀಯರು ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಮಾಜಿ ಎಂಎಲ್ಸಿ ವೈ.ಎ ನಾರಾಯಣಸ್ವಾಮಿ ಸಂಬಂಧಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಚಿಕನ್ ರವಿ ಎಂಬುವವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 27 ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ರಿಯಾಕ್ಟ್ ಮಾಡಿದ್ದಾರೆ. ಮುಗ್ಧ ಜನರ ಕ್ರೂರ ಹತ್ಯೆಯಿಂದ ತೀವ್ರ ದುಃಖವಾಗಿದೆ ಎಂದು ಯಶ್ ಹೇಳಿದ್ದಾರೆ. ಟ್ವೀಟ್ ನಲ್ಲಿ ಈ ಕುರಿತು ಬೇಸರ ಹೊರಹಾಕಿರುವ ಅವರು, ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಗಳಿಂದ ತೀವ್ರ ದುಃಖವಾಗಿದೆ. ಮುಗ್ಧ ವ್ಯಕ್ತಿಗಳ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದ ಶೋಕದಲ್ಲಿ ಬಲಿಪಶುಗಳ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ. https://twitter.com/TheNameIsYash/status/1914936733067509792?t=ilH_cSSMSMIIB2s8PmgAuQ&s=19

Read More

ಬೆಂಗಳೂರು : ನಿನ್ನೆ ಕಾಶ್ಮೀರದ ಪಹಲ್ಗಾಮ್ ಪಟ್ಟಣದಲ್ಲಿನಡೆದ ಉಗ್ರರ ದಾಳಿಯಲ್ಲಿ ಬೆಂಗಳೂರಿನ ಮತ್ತೊಬ್ಬ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ನಿನ್ನೆ ಶಿವಮೊಗ್ಗ ಹಾಗು ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಟೆಕ್ಕಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಮಧುಸೂದನ್ ಮೃತಪಟ್ಟವರು. ಮೂಲತಃ ಆಂಧ್ರಪ್ರದೇಶದವರಾದ ಮಧುಸೂದನ್‌ ಅವರು ರಾಮಮೂರ್ತಿ ನಗರದಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡು ಕುಟುಂಬಸ್ಥರ ಜತೆಗೆ ನೆಲಸಿದ್ದರು. ಪತ್ನಿ, ಮಕ್ಕಳು ಹಾಗೂ ಸ್ನೇಹಿತರೊಂದಿಗೆ ಭಾನುವಾರ ಕಾಶ್ಮೀರದ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಪಹಲ್ಲಾಮ್ ಪಟ್ಟಣವನ್ನು ತಲುಪಿದ್ದರು. ಪತ್ನಿ, ಮಕ್ಕಳು ಹಾಗೂ ಸ್ನೇಹಿತರು ತಿಂಡಿ ತರಲು ತೆರಳಿದ್ದರು. ಮಧುಸೂದನ್ ರಾವ್ ಅವರು ಹುಲ್ಲಿನ ಮೇಲೆ ಕುಳಿತಿದ್ದರು. ಆ ಸಂದರ್ಭದಲ್ಲಿ ನಡೆದ ಉಗ್ರರ ದಾಳಿಗೆ ಮಧುಸೂದನ್ ಅವರು ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ.

Read More

ಶ್ರೀನಗರ : ಜಮ್ಮು ಕಾಶ್ಮೀರದ ಅನಂತ್ ನಾಗನ ಪಹಲ್ಗಾಮ್ ನಲ್ಲಿ ನಿನ್ನೆ ಪ್ರವಾಸಿಗರ ಮೇಲೆ ಉಗ್ರರು ಭೀಕರವಾದ ಗುಂಡಿನ ದಾಳಿ ನಡೆಸಿದ್ದರು.ಈ ಒಂದು ಗುಂಡಿನ ದಾಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, ಅದರಲ್ಲಿ ಕರ್ನಾಟಕದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಘಟನೆಯ ಹಿಂದೆ ಪಾಪಿ ಪಾಕಿಸ್ತಾನದ ಕೈವಾಡ ಇರುವುದು ಬಟಾ ಬಯಲಾಗಿದೆ. ಹೌದು ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡ ಇದೀಗ ಬಯಲಾಗಿದೆ. ನಿನ್ನೆ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ನಂಟಿರೋದು ಬಟಾ ಬಯಲಾಗಿದೆ. ಘಟನೆ ಹಿಂದೆ ಪಾಕಿಸ್ತಾನದ ಡಿಜಿಟಲ್ ಫೂಟ್ ಪ್ರಿಂಟ್ ಇರೋದು ಪತ್ತೆಯಾಗಿದೆ. ಅಲ್ಲದೇ LTE ಸಂಘಟನೆಯ ಡೆಪ್ಯುಟಿ ಚೀಫ್ ಸೈಫುಲ್ ಕಸೂರಿಯನ್ನು ಪಾಕಿಸ್ತಾನ ಛೂ ಬಿಟ್ಟು ಕಳ್ಳಾಟ ನಡೆಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. LET ಉಗ್ರ ಸಂಘಟನೆಯ ಉಗ್ರ ಕಸೂರಿ ಸೇರಿದಂತೆ ಅನೇಕ ಉಗ್ರರನ್ನು ಇದೀಗ ಪಾಕಿಸ್ತಾನ ಪೋಷಣೆ ಮಾಡುತ್ತಿದೆ. ಅಲ್ಲದೇ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಕೈವಾಡ…

Read More

ಹುಬ್ಬಳ್ಳಿ : ಎರಡು ಅಥವಾ ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2-3 ತಿಂಗಳಲ್ಲಿ ಜಿಪಂ ಹಾಗೂ ತಾಪಂ ಚುನಾವಣೆ ನಡೆಯಲಿದ್ದು ಸರ್ಕಾರ ಎಲ್ಲ ತಯಾರಿ ಮಾಡಿಕೊಳ್ಳುತ್ತಿದೆ. ಜಿಪಂ, ತಾಪಂ ಜತೆಗೆ 8 ತಿಂಗಳಲ್ಲಿ ಗ್ರಾಪಂ ಮತ್ತು ಪಪಂ ಚುನಾವಣೆ ಸಹ ನಡೆಯುವ ಸಾಧ್ಯತೆ ಇದೆ ಎಂದರು. ಈ ಹಿಂದಿನ ಸರ್ಕಾರ ಬಹಳಷ್ಟು ಗೊಂದಲ ಸೃಷ್ಟಿಸಿ, ಚುನಾವಣೆಯನ್ನೇ ನಡೆಸಲಿಲ್ಲ. ಅವರಿಗೆ ಚುನಾವಣೆ ನಡೆಸುವ ಇಚ್ಛೆಯೇ ಇರಲಿಲ್ಲ. ನಾವು ಅಧಿಕಾರ ವಿಕೇಂದ್ರೀಕರಣದ ಪರವಾಗಿರುವವರು. ಹಿಂದಿನ ಸರ್ಕಾರ ಮೀಸಲಾತಿಯಲ್ಲಿ ದೊಡ್ಡ ಸಮಸ್ಯೆ ಮಾಡಿದೆ. ಅದೆಲ್ಲವನ್ನು ಇದೀಗ ಸರಿಪಡಿಸಿ ಚುನಾವಣೆ ಮಾಡುತ್ತೇವೆ ಎಂದರು.

Read More

ಶ್ರೀನಗರ : ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಇಂದು ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಇಂದಿನ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಬಲಿಯಾಗಿದ್ದಾರೆ. ಇವರಲ್ಲದೇ ಉಗ್ರರ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಭರತ್ ಭೂಷಣ್ ಎಂಬುವರು ಉಗ್ರರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಇದೀಗ ವರದಿಗಳ ಪ್ರಕಾರ ಈ ಒಂದು ಉಗ್ರರ ಗುಂಡಿನ ದಾಳಿಯಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ರಾಜಸ್ಥಾನದ ಪ್ರವಾಸಿಗರ ಗುಂಪಿನ ಮೇಲೆ ದಾಳಿ ನಡೆಸಲಾಯಿತು. ಕಣಿವೆಯ ಮೇಲ್ಭಾಗದಲ್ಲಿ ಗುಂಡಿನ ದಾಳಿ ನಡೆದಿತ್ತು. ಇದೇ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಇನ್ನು ಉಗ್ರರ ಗುಂಡಿನ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಇದೀಗ ಸಾವನಪ್ಪಿದ್ದಾರೆ. ಇನ್ನೊರ್ವ ಕನ್ನಡಿಗ ಅಭಿಜ್ಞಾ ರಾವ್ ಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮಂಜುನಾಥ…

Read More

ಬಳ್ಳಾರಿ : ಸರ್ಕಾರಿ ಕೆಲಸವನ್ನು ಮಾಡಿಕೊಡುವುದಕ್ಕೆ ವ್ಯಕ್ತಿಯೊಬ್ಬರ ಬಳಿ 3.50 ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಾಗುಪ್ಪದಲ್ಲಿ ನಡೆದಿದೆ. ಸಿರುಗುಪ್ಪ ತಾಲೂಕು ತಹಶೀಲ್ದಾರ್ ಹೆಚ್.ವಿಶ್ವನಾಥ್ ಲೋಕಾಯುಕ್ತ ಬಲೆಗೆ ಬದ್ದಿದ್ದಾರೆ.ಸರ್ಕಾರಿ ಕೆಲಸವನ್ನು ಮಾಡಿಕೊಡುವಲ್ಲಿ ವಿಳಂಬ ಮಾಡಿದ್ದಲ್ಲದೆ, ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ರಾಯಚೂರಿನ ಸಮಾಜ ಸೇವಕ ಮಹಾಂತೇಶ್ ಎನ್ನುವವರು ನೀಡಿದ್ದ ದೂರನ್ನು ಆಧರಿಸಿ, ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. 3.50 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದ ತಹಸೀಲ್ದಾರ್ ವಿಶ್ವನಾಥ್, ಮುಂಗಡವಾಗಿ 1.50 ಲಕ್ಷ ರೂ.ಗಳನ್ನು ಈಗಾಗಲೇ ಪಡೆದಿದ್ದರು. ಇಂದು ಉಳಿದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಾಲೂಕು ತಹಶೀಲ್ದಾರ್ ಹೆಚ್.ವಿಶ್ವನಾಥ್ ನನ್ನು ಬಂಧಿಸಿದ್ದಾರೆ.

Read More