Author: kannadanewsnow05

ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸುತ್ತಾರೆ. ಹೀಗಾಗಿ, ಬಂಧನಕ್ಕೆ ಅವಕಾಶ ನೀಡಬಾರದು. ಇದೆಲ್ಲವೂ ರಾಜಕೀಯ ಪ್ರೇರಿತ ಪ್ರಕರಣ ಎಂದರು. ಇದಕ್ಕೆ ಆಕ್ಷೇಪಿಸಿದ್ದ ಸಂತ್ರಸ್ತೆ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯವು ಮುನಿರತ್ನ ಮತ್ತು ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ, ಕಸ್ಟಡಿಗೆ ತನಿಖೆ ನಡೆಸಬೇಕಾದ ಅಗತ್ಯವಿದೆ. ಮುನಿರತ್ನ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಹೀಗಾಗಿ, ರಕ್ಷಣೆ ನೀಡಬಾರದು ಎಂದು ವಾದ ಮಂಡಿಸಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಆನೇಕಲ್ ನ ನಾರಾಯಣಘಟ್ಟ ಮೂಲದ ತನಿಷ್ಕ ಎಂದು ಗುರುತಿಸಲಾಗಿದೆ. ಸಂಪಂಗಿ ಮತ್ತು ಮಂಜುಳಾ ದಂಪತಿ ಪುತ್ರಿ ತನಿಷ್ಕ, ಇಲ್ಲಿನ ವಿಸ್ಮಯ ಶಾಲೆಯಲ್ಲಿ ಓದುತ್ತಿದ್ದಳು. ಇಂದು ಶಾಲೆ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿದ್ದಳು.ಮನೆ ಮುಂದೆ ಆಟ ಆಡುವಾಗ ವಿದ್ಯುತ್ ತಂತಿ ತಗಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜೂ.11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಉಳಿದೆಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಜೂ.12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂ. 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು : ಸರ್ಕಾರಿ ಶಾಲಾ ದಾಖಲಾತಿ ಮತ್ತು ಶಿಕ್ಷಕರ ನೇಮಕ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಗ್​ ಅಪ್ಡೇಟ್​ ನೀಡಿದ್ದಾರೆ. ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಐ ಆಧಾರಿತ ಹಾಜರಾತಿ ಜಾರಿ ಮಾಡಲಾಗುವುದು. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಎಐ ಆಧಾರಿತ ಹಾಜರಾತಿ ಜಾರಿಯಲ್ಲಿದೆ ಎಂದು ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಎರಡೂವರೆ ತಿಂಗಳ ಹಿಂದೆ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರ ಜತೆ ಚರ್ಚಿಸಿದ್ದೇನೆ.ಲ್ ಎಂದು ಹೇಳಿದರು. ಪಠ್ಯದಲ್ಲಿ ನೈತಿಕ ವಿಜ್ಞಾನ ಅಳವಡಿಸುವ ಬಗ್ಗೆ ಚರ್ಚಿಸಿದ್ದೇವೆ. ಮೊದಲು ನೈತಿಕ ವಿಜ್ಞಾನ ಅಂತ ವಿಷಯ ಇತ್ತು. 10-15 ವರ್ಷದಿಂದ ನೈತಿಕ ವಿಜ್ಞಾನ ಇಲ್ಲ. ಮಕ್ಕಳಲ್ಲೂ ನೈತಿಕ ಇಲ್ಲ ಅದು ಕಳೆದು ಹೋಗಿದೆ. ಈ ವರ್ಷದಿಂದ ಮತ್ತೆ ಅದನ್ನ ಜಾರಿಗೊಳಿಸಲು ತೀರ್ಮಾನ ಮಾಡಲಾಗಿದೆ. ಪಠ್ಯಪುಸ್ತಕ ಕೂಡ ತಯಾರಾಗುತ್ತಿದೆ ಎಂದು ಹೇಳಿದರು.

Read More

ಚಿಕ್ಕಮಗಳೂರು : ಗೂಗಲ್ ಮ್ಯಾಪ್ ಆಧರಿಸಿ ಚಾರಣ ಹೋಗಿದ್ದ 10 ಜನ ವಿದ್ಯಾರ್ಥಿಗಳು ದಿಕ್ಕುತಪ್ಪಿ ಕಾಡಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದರು. ಅವರನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹೌದು ನಿನ್ನೆ ಚಿತ್ರದುರ್ಗ ಮೂಲದ ಐವರು ಕಾಲೇಜು ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನದುರ್ಗ ಮತ್ತು ಬಂಡಾಜೆ ಜಲಪಾತಕ್ಕೆ ಚಾರಣ ಹೋಗಲು ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್‌ ಮಾಡಿದ್ದರು. ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಣಿಝರಿ ಕಡೆಯಿಂದ ಚಾರಣ ಆರಂಭಿಸಬೇಕಿತ್ತು. ಗೂಗಲ್‌ ಮ್ಯಾಪ್‌ನಲ್ಲಿ ಬಂಡಾಜೆ ಟ್ರಕ್ಕಿಂಗ್ ಎಂದು ನಮೂದಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ದಿಡಪೆ ಮಾರ್ಗ ತೋರಿಸಿದೆ. ಅಲ್ಲಿಗೆ ಬಂದು ಚಾರಣ ಆರಂಭಿಸಿದ್ದು, ಬಂಡಾಜೆ ಜಲಪಾತ ತನಕ ಹೋಗಿದ್ದಾರೆ. ವಾಪಸ್ ಬರಲು ಬಲ್ಲಾಳರಾಯನದುರ್ಗ ಹಾಗೂ ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅದಕ್ಕೂ ಮುನ್ನ ತಾವು ಬಂದಿದ್ದ ಟೆಂಪೊ ಟ್ರಾವೆಲರ್‌ ಚಾಲಕನಿಗೆ ವಿಷಯ ಮುಟ್ಟಿಸಿ ರಾಣಿಝರಿ ಕಡೆಗೆ ಬರಲು ತಿಳಿಸಿದ್ದಾರೆ. ವಾಪಸ್ ಚಾರಣ ಹೊರಟ ಸ್ವಲ್ಪ ದೂರದಲ್ಲೇ ದಿಕ್ಕು ತಪ್ಪಿದ್ದಾರೆ.…

Read More

ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು, ರಾಜ್ಯ ಸರ್ಕಾರ ಕರ್ನಾಟಕದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆರು ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಿನ್ನೆ ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ ಕಾಯಕಲ್ಪ ಕುರಿತು 60 ಕಂಪನಿಗಳ 80 ಮುಖ್ಯಸ್ಥರು ಮತ್ತು ಸಿಇಒಗಳೊಂದಿಗೆ ‘ಉತ್ಪಾದನಾ ಮಂಥನ’ ನಡೆಯಿತು. ಈ ಸಮಾವೇಶದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ಸ್, ಕ್ಯಾಪಿಟಲ್ ಗೂಡ್ಸ್ ಮತ್ತು ರೋಬೋಟಿಕ್ಸ್, ಆಟೋ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್, ಟೆಕ್ನಿಕಲ್ ಮತ್ತು ಎಂಎಂಎಫ್ ಬೇಸ್ಡ್ ಟೆಕ್ಸ್ಟೈಲ್ಸ್ ಹಾಗೂ ಪಾದರಕ್ಷೆ, ಗೊಂಬೆ ಮತ್ತು ಎಫ್ಎಂಸಿಜಿ ಉತ್ಪನ್ನಗಳನ್ನು ಒಳಗೊಂಡಿರುವ ಗ್ರಾಹಕ ಉತ್ಪನ್ನಗಳ ವಲಯಗಳ ಮೇಲೆ ಗಮನ ಕೇಂದ್ರೀಕರಿಸಲಾಗಿತ್ತು. ರಾಜ್ಯದ ಕೈಗಾರಿಕಾ ವಲಯವು ತಯಾರಿಕಾ ವಲಯಕ್ಕೆ ಹೊರಳಿಕೊಳ್ಳಬೇಕಾಗಿದೆ. ಇದಕ್ಕಾಗಿ ರಫ್ತು ಕೇಂದ್ರಿತವಾಗಿರುವಂಥ `ಫ್ರೀ ಟ್ರೇಡ್ ವೇರ್-ಹೌಸಿಂಗ್ ಝೋನ್’ಗಳು, ರಫ್ತನ್ನೇ ಮುಖ್ಯವಾಗಿ ಹೊಂದಿರುವ ಕೈಗಾರಿಕಾ ಪಾರ್ಕುಗಳು, ಬಂದರುಗಳಿಗೆ ತ್ವರಿತ…

Read More

ಬೆಂಗಳೂರು : ಸತತ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಐಪಿಎಲ್ ನಲ್ಲಿ ಕಪ್ ಬರ ನೀಗಿಸಿದ್ದು 18ನೇ ಆವೃತ್ತಿಯಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿದಿದೆ. ಹಾಗಾಗಿ ಆರ್ಸಿಬಿ ತಂಡದ ಆಟಗಾರರಿಗೆ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಒಂದು ಸಮಾರಂಭದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ತನಿಖೆ ಚುರುಕುಗೊಳಿಸಿದೆ. ಅಲ್ಲದೇ ಇಂದು ಕಾಲ್ತುಳಿತದಲ್ಲಿ ಆರ್‌ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಘಟನೆ ಕುರಿತು ಮ್ಯಾಜಿಸ್ಟ್ರಿಯಲ್ ತನಿಖೆ ಮುಂದುವರೆದಿದ್ದು, ಇಂದು ಬೆಂಗಳೂರು ನಗರದ ಜಿಲ್ಲಾಧಿಕಾರಿ ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಡಿಸಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಜಿಲ್ಲಾಧಿಕಾರಿ ಆಗಿರುವಂತಹ ಜಗದೀಶ್ ಅವರು ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಒಂದು ವಿಚಾರಣೆ ನಡೆಯಲಿದೆ.

Read More

ಬೆಳಗಾವಿ : ಡೆತ್ ನೋಟ್ ಅಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಯಾದಗಿರಿ : ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದು, ಸಚಿವ ಸಂಪುಟ ಪುನಾರಚನೆ ಆಗುತ್ತೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಕರೆದು ಸಿಎಂ ಸ್ಥಾನ ಕೊಟ್ಟರೆ ನಾಳೆ ನಾನೂ ಸಹ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ತಮ್ಮ ಸಿಎಂ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಜನರ ವಿಚಾರದ ಮೇಲೆ ಸಂಪುಟ ಪುನರ್ ರಚನೆ ಆಗುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ತೀರ್ಮಾನ ದಂತೆ ಆಗುತ್ತದೆ. ಸರ್ಜರಿ ಆದೇಲೆ 10 ರಿಂದ 15 ಸಚಿವರು ಬದಲಾವಣೆ ಆದರೂ ಆಗಬಹುದು. ಅವರಿಗೆ ಯಾವ ಖಾತೆ ಕೊಡಬೇಕು ಅನ್ನೋದು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದರು. ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿ ಬಹಳಷ್ಟು ಜನ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನೂ ಆಗುತ್ತೇನೆ. ಶಾಸಕ ಚೆನ್ನಾರೆಡ್ಡಿ ಅವರೂ ಆಗುತ್ತಾರೆ. ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಅವರು ತಿಳಿಸಿದರು.

Read More

ಬೆಂಗಳೂರು : ಜೂನ್ 19ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ 5 ದಿನ ನಂದಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ವಾಹನ ದಟ್ಟಣೆಯನ್ನು ತಪ್ಪಿಸಲು ಹಾಗೂ ಸುಗಮ ಸಭೆಗೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 17 ರಿಂದ 19 ರವರೆಗೆ ಹೋಟೆಲ್ ಬುಕಿಂಗ್‌ಗಳನ್ನು ರದ್ದುಗೊಳಿಸಲಾಗಿದೆ. ಹೌದು 2025ನೇ ಸಾಲಿನ 13ನೇ ರಾಜ್ಯ ಸಚಿವ ಸಂಪುಟದ ಸಭೆ ಜೂನ್ 19 ರಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಭಾಗಿಯಾಗುತ್ತಾರೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20ರ ನಸುಕಿನ ಜಾವ 5 ಗಂಟೆವರೆಗೂ ಸಾರ್ವಜನಿಕರು ನಂದಿ…

Read More