Author: kannadanewsnow05

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಯರಿಗೆ ಮಾಸಿಕ ರೂ.2 ಸಾವಿರ ಸಂದಾಯವಾಗುತ್ತದೆ. ಆದರೆ ಕಳೆದ 2-3 ತಿಂಗಳವರೆಗೆ ಫಲಾನುಭವಿಗಳ ಖಾತೆಗೆ ಹಣ ಬಂದಿಲ್ಲ ಎಂದು ಯಜಮಾನಿಯರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿಯರಿಗೆ ಖುದ್ದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದು, ಶೀಘ್ರವೇ ಹಣ ಸಂದಾಯ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕೂರ್ತು ಮಾತನಾಡಿ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳೆಯರಿಗೆ ಕಳೆದ ಎರಡರಿಂದ ಮೂರು ತಿಂಗಳಿನಿಂದ ಗ್ರಹಲಕ್ಷ್ಮಿ ಹಣ ಬಂದಿಲ್ಲ ಎಂಬ ದೂರುಗಳು ಬಂದಿವೆ. ಶೀಘ್ರದಲ್ಲೇ ಅವರ ಖಾತೆಗೆ ಮೂರು ತಿಂಗಳ ಹಣ ಒಮ್ಮೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ…

Read More

ದಾವಣಗೆರೆ : ಶಾಸಕ ಯತ್ನಾಳ್ ಗೆ ನಾನು ನೋಟಿಸ್ ಕೊಟ್ಟಿಲ್ಲ. ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ ಎಂದು ಸೂರಗೊಂಡನಕೊಪ್ಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಯತ್ನಾಳ್ ಉಚ್ಚಾಟನೆ ಕುರಿತು ನಾನು ಏನು ಹೇಳಲ್ಲ. ಎಲ್ಲರಿಗೂ ಮುಂದೆ ಒಳ್ಳೆಯದಾಗುತ್ತದೆ. ಶೀಘ್ರದಲ್ಲಿ ಎಲ್ಲಾ ಬಗೆಹರಿಯುತ್ತೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜೇಂದ್ರ ತಿಳಿಸಿದರು. ಬಿಜೆಪಿ ಬಣ ಬಡಿದಾಟ ಬೀದಿಗೆ ಬಂದ ಹಿನ್ನೆಲೆಯಲ್ಲಿ ಇತ್ತೀಚಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿಯು 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ನೀಡಿತು ಆದರೆ ಶೋಕಾಶ್ ನೋಟಿಸ್ ಗಡವು ಅವಧಿ ಮುಕ್ತಾಯವಾಗಿದ್ದು, ಯತ್ನಾಳ್ ಯಾವುದೇ ಉತ್ತರ ನೀಡಿಲ್ಲ ಹಾಗಾಗಿ ಬಿಜೆಪಿ ಯತ್ನಾಳ್ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಕಳೆದ 24 ಗಂಟೆಗಳಲ್ಲಿ ಮೂವರ ವ್ಯಕ್ತಿಗಳ ಭೀಕರವಾದ ಮರ್ಡರ್ ಆಗಿದ್ದು, ನಿನ್ನೆ ರಾತ್ರಿ ಇಂದು ಬೆಳಿಗ್ಗೆ ಹಾಗೂ ಇದೀಗ ಮಧ್ಯಾಹ್ನ ಸೇರಿದಂತೆ ಒಟ್ಟು ಮೂವರ ಭೀಕರ ಕೊಲೆಯಾಗಿದೆ ಇದರಿಂದ ಸಹಜವಾಗಿ ಚಿಕ್ಕಬಳ್ಳಾಪುರ ಜನತೆ ಬೆಚ್ಚಿಬಿದ್ದಿದ್ದಾರೆ. ಹೌದು ಚಿಂತಾಮಣಿಯಲ್ಲಿ ನಿನ್ನೆ ರಾತ್ರಿ, ಇಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ಮೂವರ ಮೃತದೇಹಗಳು ಪತ್ತೆಯಾಗಿವೆ. ನಿನ್ನೆ ರಾತ್ರಿ ರಾಮಸ್ವಾಮಿ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ವ್ಯಕ್ತಿಯ ರುಂಡವನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಇದೀಗ ಚಿಂತಾಮಣಿಯ ವೆಂಕಟಗಿರಿ ಕೋಟೆ ಬಡಾವಣೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಇದು ಕೂಡ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಚಿಂತಾಮಣಿಯಲ್ಲಿ ಕಳೆದ 24 ಗಂಟೆಯಲ್ಲಿ ಮೂರು ಮರ್ಡರ್ ಆಗಿದ್ದರಿಂದ ಜನರು ಬೆಚ್ಚಿ ಬಿದ್ದಿದ್ದು, ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

Read More

ಮೈಸೂರು : ಮೈಸೂರಿನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಉದಯನಗರ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣ ನಡೆದಿತ್ತು ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಗೆ ಮೈಸೂರಿನ ನ್ಯಾಯಾಲಯ ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ. ಆರೋಪಿಗೆ 1 ದಿನದ ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡಿ ಮೈಸೂರಿನ ನ್ಯಾಯಾಲಯವು ಆದೇಶ ಹೊರಡಿಸಿಗಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಪೊಲೀಸರು 20 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಅದರಲ್ಲಿ ಓರ್ವ ಅಪ್ರಾಪ್ತ ಬಾಲಕ ಕೂಡ ಇದ್ದಾನೆ ಎಂದು ತಿಳಿದುಬಂದಿದೆ.

Read More

ತುಮಕೂರು : ತುಮಕೂರಿನ ಮಾಜಿ ಶಾಸಕ ಡಿಸಿ ಗೌರಿಶಂಕರ್ ಅವರು ಶಾಸಕ ಸುರೇಶ್ ಗೌಡರ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಗೌರಿಶಂಕರ್ ಅವರು ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡು, ಗೃಹ ಸಚಿವರ ರಕ್ಷಣೆ ಕೋರಿದ್ದಾರೆ. ಸುರೇಶ ಗೌಡ ನನ್ನ ಕೊಲೆಗೆ ಸಂಚು ರೂಪಿಸಿದ್ದಾನೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುರೇಶ್ ಗೌಡ ನನ್ನನ್ನು ಕೊಲೆ ಮಾಡಿಸುತ್ತೀಯಾ? ಗೃಹ ಸಚಿವರನ್ನು ಭೇಟಿ ಮಾಡಿ ರಕ್ಷಣೆ ಕೋರಿ ಮನವಿ ಮಾಡುತ್ತೇನೆ. ನನಗೆ ಏನೇ ಆದರೂ ಅದಕ್ಕೆ ಸುರೇಶ್ ಗೌಡ ಕಾರಣನಾಗುತ್ತಾನೆ.ರಾಜಕೀಯ ಲಾಭಕ್ಕಾಗಿ ನಿಮ್ಮಿಷ್ಟ ಬಂದಂಗೆ ಹೋರಾಟ ಮಾಡಿಕೊಂಡರೆ ಅದಕ್ಕೆಲ್ಲಾ ನಾವು ಸೊಪ್ಪು ಹಾಕಲ್ಲ ಎಂದು ತುಮಕೂರಿನಲ್ಲಿ ಮಾಜಿ ಶಾಸಕ ಗೌರಿ ಶಂಕರ್ ಗಂಭೀರವಾದ ಆರೋಪ ಮಾಡಿದರು. ನನ್ನ ಮೇಲೆ ಕೇಸ್​ ಹಾಕಿದ್ದೇನೆ ಎಂದು ಹೇಳಿದ್ದಾನೆ, ಕೋರ್ಟ್​ನಲ್ಲಿದ್ದಾಗ ಮಾತನಾಡಬಾರದು ಎಂಬ ಅರಿವಿಲ್ಲದ ಅಜ್ಞಾನಿ. ಸ್ನೇಹಿತ ಎಂದು ಹೇಳಿದವನು, ಡೆಲ್ಲಿಗೆ ಹೋಗಿ ಬಂದ್ಮೇಲೆ ಇಂಜೆಕ್ಷನ್ ಕೊಟ್ಟವರು ಯಾರು? ಪಟ್ಟಿ…

Read More

ಕಲಬುರ್ಗಿ : ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 45.50 ಲಕ್ಷ ರೂ. ಮೌಲ್ಯದ 40 ಕೆಜಿ ಗಾಂಜಾವನ್ನು ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಲಕ್ಷ್ಮಣ್ ನಾಯಕ ತಾಂಡ ನಿವಾಸಿ ಚಂದ್ರಕಾಂತ ಪಪ್ಪು ಹರಿಶ್ಚಂದ್ರ ಚವ್ಹಾಣ್ (40), ಕೊಡ್ಲಿ ಗ್ರಾಮದ ಮಲ್ಲಯ್ಯ ಮಹಾಬಲೇಶ್ವರ ಪ್ಯಾಟಿನಮನಿ ಎಂದು ತಿಳಿಬಂದಿದೆ.ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ತಾಲೂಕಿನ ಕೊಡ್ಲಿ ಗ್ರಾಮಕ್ಕೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡದ ಹತ್ತಿರ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದರ ಕುರಿತು ಖಚಿತ ಮಾಹಿತಿಯನ್ನು ಪಡೆದ ಪೊಲೀಸರು, ದಾಳಿ ಮಾಡಿದ್ದಾರೆ. ದಾಳಿಯ ವೇಳೆ 40 ಲಕ್ಷ ಮೌಲ್ಯದ ಗಾಂಜಾ, ಒಂದು ಕಾರು, ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ.

Read More

ಮೈಸೂರು : ಮೈಸೂರಿನ ಉದಯನಗರ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಮೂರು ದಿನಗಳ ನಂತರ ಇಂದು ಮೈಸೂರು ಜಿಲ್ಲೆಗೆ ಗ್ರಹ ಸಚಿವಾ ಜಿ ಪರಮೇಶ್ವರ್ ಭೇಟಿ ನೀಡಿದರು ಈ ವೇಳೆ ಘಟನೆ ಕುರಿತಂತೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಘಟನೆಯಲ್ಲಿ ಯಾರೇ ತಪ್ಪಿಸಸ್ಥರಿದ್ದರೂ ಪಕ್ಷ ಹಾಗೂ ಧರ್ಮಭೇದವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಪೊಲೀಸರು ಯಾರದೇ ಹೇಳಿಕೆಯಿಂದ ಕುಗ್ಗುವುದಿಲ್ಲ. ಅದಕ್ಕಾಗಿ ಪೊಲೀಸರು ತರಬೇತಿ ಪಡೆದಿರುತ್ತಾರೆ. ಏನೇನೋ ಮಾತನಾಡುವವರನ್ನು ತಡೆಯಲು ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಇನ್ನು ಠಾಣೆಯಲ್ಲಿ ಆರೋಪಿ ಇರಿಸಿದಕ್ಕೆ ರಾಜಣ್ಣ ಕಿಡಿ ಕಾರಿರುವ ವಿಚಾರವಾಗಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಇಲಾಖೆಗೆ ಕಾನೂನು ಅಷ್ಟೇ ಮುಖ್ಯವಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಪಕ್ಷ ವ್ಯಕ್ತಿ ಪೊಲೀಸರಿಗೆ ಮುಖ್ಯವಲ್ಲ…

Read More

ಬೆಂಗಳೂರು : ಇಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಕುರಿತು ಚರ್ಚಿಸಿದರು. ಇದೆ ವೇಳೆ ಎಐಸಿಸಿ ನಾಯಕರು ಒಪ್ಪಿದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ ಎಂದು ತಿಳಿಸಿದ್ದರು. ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ 3 ವರ್ಷ ಮಂತ್ರಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ನಿಭಾಯಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹೌದು ಕೆಪಿಸಿಸಿ ಅಧ್ಯಕ್ಷ ಪಟ್ಟದ ಮೇಲೆ ಸತೀಶ್ ಜಾರಕಿಹೊಳಿ ಇದೀಗ ಕಣ್ಣು ಇಟ್ಟಿದ್ದಾರೆ. ಹೈಕಮಾಂಡ್ ಮುಂದೆ ಸಚಿವ ಸತೀಶ್ ಜಾರಕಿಹೊಳಿ ಈ ಕುರಿತು ಪ್ರಸ್ತಾಪ ಮಾಡಿದ್ದು, ಸಚಿವ ಸ್ಥಾನದ ಜೊತೆಗೆ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ರೀತಿ ನನಗೂ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ. ಮೂರು ವರ್ಷ ಮಂತ್ರಿ ಸ್ಥಾನದ ಜೊತೆಗೆ ಅಧ್ಯಕ್ಷ ಗಾದಿಯನ್ನು ಸಹ ನಿಭಾಯಿಸುತ್ತೇನೆ ಪಕ್ಷದ ಸಾರಥ್ಯಕ್ಕೆ ನಾನು ರೆಡಿ ಅಂತ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ…

Read More

ಮೈಸೂರು : ಮೈಸೂರಿನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೈಸೂರಿನ ಉದಯನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ನಿಂದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ನಿಂದ ಉದಯಗಿರಿ ಠಾಣೆಗೆ ಇದೀಗ ದೂರು ಸಲ್ಲಿಸಲಾಗಿದೆ. ಪ್ರಕರಣದ ಪ್ರಮುಖ ರೂವಾರಿಯೇ ಪ್ರತಾಪ್ ಸಿಂಹ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರತಾಪ್ ಸಿಂಹ ಅವರನ್ನು ತನಿಖೆ ಮಾಡುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಆರೋಪಿ ಸುರೇಶ್ ಪ್ರತಾಪ್ ಸಿಂಹನ ಬಂಟನಾಗಿದ್ದಾನೆ. ಮೈಸೂರಿನ ಶಾಂತಿ ಕೆಡಿಸುವುದರಲ್ಲಿ ಪ್ರತಾಪಸಿಂಹನ ಕೈವಾಡವಿದೆ. ಇಬ್ಬರನ್ನು ತನಿಖೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Read More

ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಫೆ.13 ರಂದು ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇಯರ್ ಶಿವಕುಮಾರ್ ಸಾವಿನ ರಹಸ್ಯ ಹೊರಬಿದ್ದಿದೆ. ಕಚೇರಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅವರು ಹನಿಟ್ರ್ಯಾಪ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ್ರಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಡೆತ್ ನೋಟ್ ನಲ್ಲಿ ಹಲವು ವಿಷಯಗಳನ್ನು ಅವರು ಉಲ್ಲೇಖಿಸಿದ್ದಾರೆ.ಸರ್ವೆ ಅಧಿಕಾರಿ ಶಿವಕುಮಾರ್ ಅವರು ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ. ಸರ್ವೆಗೆ ಹೋದಾಗ ಪರಿಚಯವಾಗಿದ್ದ ಮಹಿಳೆ ಜೊತೆ ಫೋನಿನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ಶಿವಕುಮಾರ್ ಬಳಿ ಮಹಿಳೆ ಹಣಕ್ಕಾಗಿ ಪೀಡಿಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರ ಎಫ್ಐಆರ್‌ನಲ್ಲಿ ಕೂಡ ಪ್ರಸ್ತಾಪವಾಗಿದೆ. ಆಕೆಗೆ ಶಿವಕುಮಾರ್ ಈಗಾಗಲೇ ಒಂದೂವರೆ ಲಕ್ಷ ರೂ. ಹಣ ನೀಡಿದ್ದರು. ಆಕೆ ಪದೇ ಪದೇ ಹಣ ಕೇಳಿದ್ದಕ್ಕೆ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಶಿವಕುಮಾರ್‌ಗೆ ಪತ್ನಿ ಹಾಗೂ ಮಗಳಿದ್ದು, ಮಗಳ ಓದಿಗಾಗಿ ಪತ್ನಿ ಹಾಗೂ…

Read More