Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಸೋಮವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ಮಾಡಿದ ಪರಿಣಾಮ ರವಿ ಎಂಬ ವ್ಯಕ್ತಿ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳು ರವಿ ಅವರನ್ನು ಚಾಮರಾಜನಗರ ಸರ್ಕಾರಿ ಬೋಧನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಡುಗುಳಿಯ ರಾಮಯ್ಯನ ಪೋಡಿನಲ್ಲಿ ನಡೆದ ಹುಲಿ ದಾಳಿಯಿಂದಾಗಿ ನಿವಾಸಿಗಳು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಹುಲಿ ಸೆರೆಯಾಗುವ ತನಕ ತಾತ್ಕಾಲಿಕವಾಗಿ ಬೇಡುಗುಳಿಯಲ್ಲಿನ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ನವದೆಹಲಿ : ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಸಂಪುಟದಲ್ಲಿ ಹಲವು ಬಾರಿ ಚರ್ಚೆಯಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಸಮೀಕ್ಷೆ ನಡೆಸಿ 9ರಿಂದ 10 ವರ್ಷಗಳಾಗಿದೆ. ಹಾಗಾಗಿ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಕೊಂಡಿದ್ದು, 90 ದಿನಗಳಲ್ಲಿ ಜಾತಿ ಗಣತಿ ಸಮೀಕ್ಷೆ ಮುಗಿಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಡಿಸಿಎಂ ಜೊತೆಗೆ ರಾಹುಲ್ ಗಾಂಧಿ ಸಭೆ ಮಾಡಿದ ವಿಚಾರವಾಗಿ, ರಾಜ್ಯದಲ್ಲಿ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದರು. ಮುಖ್ಯವಾಗಿ ಜಾತಿಗಣತಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿ ಗಣತಿ ಸಮೀಕ್ಷೆ ಮುಗಿಯಲಿದೆ ಎಂದು ದೆಹಲಿ…
ಬೆಳಗಾವಿ : ಐಪಿಎಲ್ ನಲ್ಲಿ ರಾಜಸ್ಥಾನ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, 23 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದ ಉತ್ತರಪ್ರದೇಶ ಮೂಲದ ಸುಸಂಜನ್ ಹಾಗು ದಿವಾಕರ್ ಎನ್ನುವ ಆರೋಪಿಗಳನ್ನು ಬೆಳಗಾವಿ ಜಿಲ್ಲಾ ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೇ 17 ರಂದು ಯುವ ಕ್ರಿಕೆಟಿಗ ರಾಕೇಶ್ ಯಾಡೋರೆಗೆ 23 ಲಕ್ಷ ಪಡೆದು ವಂಚನೆ ಎಸಗಿದ್ದರು. ರಾಕೇಶ್ ಹೈದರಾಬಾದ್ಗೆ ತೆರಳಿದಾಗ ಕ್ರಿಕೆಟ್ ಆಡುತ್ತಿದ್ದ ಯಾಡೋರೆ ಇನ್ಸ್ಟಾಗ್ರಾಮ್ ನಲ್ಲಿ ರಿಲ್ಸ್ ಹಾಕಿದ್ದ. ಇದನ್ನು ಗಮನಿಸಿ ರಾಕೇಶ್ ಗೆ ವಂಚಕರು ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದರು. ಬಳಿಕ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಮೆಸೇಜ್ ಮಾಡಿದ್ದಾರೆ. ರಾಕೇಶ್ ಯಾಡೋರೆಗೆ ಕೆಲವು ಸುಳ್ಳು ದಾಖಲೆಗಳನ್ನು ಕಳುಹಿಸಿದ್ದಾರೆ. ಆನ್ಲೈನ್ ಮೂಲಕ ರಾಕೇಶ್ 23 ಲಕ್ಷಕ್ಕೂ ಹೆಚ್ಚು ಹಣ ವರ್ಗಾಯಿಸಿದ್ದಾನೆ. ರಾಕೇಶ್ ಗೆ ತಾನು ವಂಚನೆಗೆ ಒಳಗಾಗಿದ್ದು ತಡವಾಗಿ ಅರಿವಿಗೆ ಬಂದಿತ್ತು. ಬಳಿಕ…
ಯಾದಗಿರಿ : ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಿದ್ದು, ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆ ಬದಲಾವಣೆಯಾಗುವ ನಿರೀಕ್ಷೆಯಿದೆ. ಇದೇ ವಿಚಾರವಾಗಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ 10 ರಿಂದ 15 ಸಚಿವರು ಬದಲಾವಣೆ ಆದರೂ ಆಗಬಹುದು ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ. ಯಾದಗಿರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಯಾಕೆ ಕರೆದಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಆದರೆ 10ರಿಂದ 15 ಜನರ ಬದಲಾವಣೆಯಾದರೂ ಆಗಬಹುದು. ಜನರ ತೀರ್ಮಾನದಂತೆ ಸಚಿವ ಸಂಪುಟ ವಿಸ್ತರಣೆ ಆಗಲ್ಲ ಎಲ್ಲವನ್ನು ಪಕ್ಷದ ಹೈಕಮಾಂಡ ತೀರ್ಮಾನ ಮಾಡುತ್ತದೆ. ಸಚಿವ ಸ್ಥಾನ ನೀಡುವುದೇ ಆದರೆ 34 ಕ್ಕಿಂತ ಹೆಚ್ಚಿನ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗಲ್ಲ. ಸಚಿವ ಸ್ಥಾನ ಯಾರಿಗೆ ನೀಡಬೇಕು ಅನ್ನೋದರ ಕುರಿತು ಸಿಎಂ ಸಿದ್ದರಾಮಯ್ಯ ತೀರ್ಮಾನಿಸುತ್ತಾರೆ. ಸಚಿವ ಸಂಪುಟ ಪುನರ್ ರಚನೆಯಾದರೆ ಸಚಿವರ ಬದಲಾವಣೆ…
ಬೆಂಗಳೂರು : ಆರ್‌ಸಿಬಿ ತಂಡವು ಅಹಮದಾಬಾದ್‌ನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿ ಚಾಂಪಿಯನ್ ಆಗುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ನೂಕುನುಗ್ಗಲಿನಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಆರ್‌ಸಿಬಿ ಮಾರಾಟದ ಸುದ್ದಿ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಹೌದು 2025ರ ಟ್ರೋಫಿಯನ್ನ ಗೆದ್ದ ಕೇವಲ ಒಂದು ವಾರದ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ಮಾಲೀಕರನ್ನ ಹುಡುಕುವ ಸಾಧ್ಯತೆಯಿದೆ. ಫ್ರಾಂಚೈಸಿಯ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಪಿಎಲ್‌ಸಿ ಮಾರುಕಟ್ಟೆಯಲ್ಲಿದ್ದು, ಫ್ರಾಂಚೈಸಿಯನ್ನ ಭಾಗಶಃ ಅಥವಾ ಸಂಪೂರ್ಣವಾಗಿ ಮಾರಾಟ ಮಾಡಲು ನೋಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಯಾಜಿಯೋ ತನ್ನ ಭಾರತೀಯ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮೂಲಕ ಆರ್‌ಸಿಬಿಯ ಮಾಲೀಕತ್ವವನ್ನು ಪಡೆದುಕೊಂಡಿದೆ. ಈ ತಂಡದ ಮೌಲ್ಯವನ್ನು ಸುಮಾರು 2 ಬಿಲಿಯನ್ ಡಾಲರ್‌ಗೆ (ಸುಮಾರು 16,700 ಕೋಟಿ ರೂ.)…
ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ರಾಜಭವನ ರಸ್ತೆಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದ್ದ ವಾಟಳ್ ನಾಗರಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆ ವೇಳೆ ಮೃತರ ಕುಟುಂಬಸ್ಥರಿಗೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಆಗ್ರಹಿಸಲಾಯಿತು. ಇದೆ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಗಲು ಹೊರಟಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸರು ಕರೆದೋಯ್ದಿದ್ದಾರೆ. ಕಮಿಷನರ್ ಸೇರಿ ಅಧಿಕಾರಿಗಳ ಅಮಾನತು ಹಿಂಪಡೆಯುವಂತೆ ಆಗ್ರಹಿಸಲಾಯಿತು. ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಚಲೋ ಹಮ್ಮಿಕೊಂಡಿದ್ದು ಈ ಒಂದು ರ್‍ಯಾಲಿ ತಡೆದು ವಾಟಾಳ್ ನಾಗರಾಜ ಸೇರಿದಂತೆ ಹಲವರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ವೇಳೆ ವ್ಯಕ್ತಿ ಒಬ್ಬ ರಾಜಭವನದ ಮುಂದೆ ಕಪ್ಪು ಬಟ್ಟೆಯನ್ನು ಪ್ರದರ್ಶಿಸಿದ್ದಾರೆ ಕಪ್ಪು ಬಟ್ಟೆ ಪ್ರದರ್ಶಿಸಿದ ವ್ಯಕ್ತಿಯನ್ನು…
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಗೆದ್ದ ಆರ್‌ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇತ್ತೀಚಿಗೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಈ ಒಂದು ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ದುರಂತಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು. ಹೌದು ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಇದೀಗ ಚುರುಕುಗೊಂಡಿದೆ. ಎಮ್ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಲ್ತುಳಿತದ ದುರಂತದ ಸ್ಥಳದಲ್ಲಿ ಸಿಐಡಿ ತಂಡ ಸ್ಥಳ ಮಹಜರು ನಡೆಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಲಿನ ಸಿಸಿ ಕ್ಯಾಮೆರಾ ಹಾಗೂ ದೃಶ್ಯಾವಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟೇಡಿಯಂನ ಎಲ್ಲಾ ಗೇಟ್ಗಳಲ್ಲಿ ಸಿಐಡಿ ಪರಿಶೀಲನೆ ನಡೆಸಿದೆ. ಸ್ಟೇಡಿಯಂ ಅಧಿಕಾರಿಗಳಿಂದಸಿಐಡಿ ತಂಡ ಮಾಹಿತಿ ಪಡೆದುಕೊಂಡಿದ್ದಾರೆ. ಸಿಐಡಿ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿಯಿಂದ ಸ್ಟೇಡಿಯಂ ಸುತ್ತಮುತ್ತಲು ಪರಿಶೀಲನೆ ನಡೆಸಲಾಯಿತು. ದುರಂತ ನಡೆದ ಸ್ಥಳದಲ್ಲಿ ಪರಿಶೀಲಿಸಿ ಸೇಡಿ…
ರಾಯಚೂರು : ಇತ್ತೀಚಿಗೆ ಬೀಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ರಾಯಚೂರಿನಲ್ಲಿ ಏಕಾಏಕಿ 15 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಗಾಯಗೊಂಡ 8 ಜನರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಗಂಗಾನಿವಾಸ ಹಾಗೂ ಟ್ಯಾಂಕ್ ಬಂಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಹುಚ್ಚುನಾಯಿ ಕಡಿತ ಶಂಕೆ ಎದುರಾಗಿದ್ದು, ಗಾಯಾಳುಗಳು ಆತಂಕಗೊಂಡಿದ್ದಾರೆ. ಓರ್ವ ಬಾಲಕ ಸೇರಿದಂತೆ ಗಾಯಗೊಂಡ ಎಂಟು ಜನರನ್ನು ನಗರದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಸಿಕ್ಕಸಿಕ್ಕವರ ಕೈ, ಕಾಲಿಗೆ ಹಾಗೂ ಮೈ ಮೇಲೆ ಎಗರಿ ಗಾಯಗೊಳಿಸಿವೆ. ಲಿಂಗಪ್ಪ, ಶರಣಪ್ಪ, ರಮೇಶ್, ಮೊಹಮದ್ ಗೌಸ್ ಸೇರಿ 15 ಜನರು ಗಾಯಗೊಂಡಿದ್ದು, ಪಾಲಿಕೆ ವಿರುದ್ದ ಗಾಯಾಳುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪಾದಚಾರಿಗಳ ಮೇಲೆ ನಾಯಿಗಳ ಹಿಂಡು ದಾಳಿ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಬೀದಿ ನಾಯಿಗಳನ್ನು ಹಿಡಿದು ಸ್ಥಳಾಂತರ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಮಧ್ಯಪ್ರದೇಶ : ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಓವರ್ಟೇಕ್ ಮಾಡುವಾಗ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬದ ಐವರು ಸಾವನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಇಂಥದ್ದೇ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಸಿಮೆಂಟ್ ಸಾಗಿಸಿತ್ತಿದ್ದ ಟಿಪ್ಪರ್ ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ. ಮೇಘನಗರದ ಶಿವಗಢ ಮಹುದಾ ಗ್ರಾಮದ ನಿವಾಸಿಗಳಾದ ಮುಖೇಶ್ (40), ಸಾವ್ಲಿ (35), ವಿನೋದ್ (16), ಪಾಯಲ್ (12), ಮಾಧಿ (38), ವಿಜಯ್ ಭರು ಬಮಾನಿಯಾ (14), ಕಾಂತಾ (14), ರಾಗಿಣಿ (9), ಮತ್ತು ಅಕಾಲಿ (35) ಮೃತರೆಂದು ಗುರುತಿಸಲಾಗಿದೆ. ಪಾಯಲ್ ಸೋಮ್ಲಾ (19) ಮತ್ತು ಆಶು (5) ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆಯ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆಗೆ ಕಡೆ ತಿರುಗುತ್ತಿದ್ದಾಗ ಟಿಪ್ಪರ್ ನಿಯಂತ್ರಣ ತಪ್ಪಿ…
ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಆದರೆ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೂ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ಆರ್ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಇನ್ನು ಇದೇ ವೇಳೆ ಅಭಿನಂದನಾ ಕಾರ್ಯಕ್ರಮ…













