Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು :ಆಸ್ತಿ ವಿಚಾರವಾಗಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಪತ್ನಿ ಪಲ್ಲವಿ ಅವರಿಂದ ಭೀಕರವಾಗಿ ಕೊಲೆಯಾಗಿದ್ದರು ಇದೀಗ ಇಂದು ಪಂಚಭೂತಗಳಲ್ಲಿ ಓಂ ಪ್ರಕಾಶ್ ಅವರು ಲೀನವಾದರು. ಹೌದು ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ದಲ್ಲಿ ಓಂ ಪ್ರಕಾಶ್ ಅಂತ್ಯಕ್ರಿಯೆ ನೆರವೇರಿತು. ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ಅವರಿಂದ ಓಂ ಪ್ರಕಾಶ್ ಅವರ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಪೊಲೀಸ್ ಗೌರವದೊಂದಿಗೆ ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಕುಟುಂಬದವರು ಸ್ನೇಹಿತರು ಮತ್ತು ನಿವೃತ್ತ ಐಪಿಎಸ್ ಅಧಿಕಾರಿಗಳಾದ ಚಂದುಲಾಲ್, ಕಿಶೋರ ಚಂದ್ರ, ರಾಣಾ, ಗಾಂವ್ಕರ್, ಮುನಿಕೃಷ್ಣ, ಟಿ.ಜಯಪ್ರಕಾಶ್, ಎಂ ಎನ್ ರೆಡ್ಡಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತಿ ಇದ್ದರು. ಅಂತ್ಯಕ್ರಿಯೆಗೆ ಮುನ್ನ ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಓಂ ಪ್ರಕಾಶ್ ಅವರಿಗೆ ಅಂತಿಮ…
ಬೆಂಗಳೂರು : ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ. ಓಂ ಪ್ರಕಾಶ್ ಪುತ್ರಿ ಕೃತಿಯ ಫಿಂಗರ್ ಪ್ರಿಂಟ್ ಪಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಗೂ ಆಕೆಯ ಫಿಂಗರ್ ಪ್ರಿಂಟ್ ಪಡೆಯಲು ಇದೀಗ ಪೊಲೀಸರು ಯಶಸ್ವಿಯಾಗಿದ್ದಾರೆ. ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ. ಇದೀಗ ಬೆಂಗಳೂರಿನಲ್ಲಿ ನಿವೃತ್ತ ಡಿಜಿ ಮತ್ತು ಐಜಿಪಿ ಓಂ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭದ್ರಾ ಜಲಾಶಯದ ಹಿನ್ನೀರಿಗೆ ತೆರಳಿದ್ದ ಬಾಲಕ ಕಾಲು ಜಾರಿ ಬಿದ್ದು ಸಾವಿಗೀಡಾದ ಘಟನೆ ಭದ್ರಾವತಿ ತಾಲೂಕಿನ ಬಿಆರ್‌ಪಿ ಜಲಾಶಯದಲ್ಲಿ ನಡೆದಿದೆ. ಆದರೆ ಬಾಲಕನನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿಯೋರ್ವ ನಾಪತ್ತೆಯಾಗಿದ್ದಾನೆ. ಬಾಲಕನ ಶವ ಪತ್ತೆಯಾಗಿದ್ದು, ಬಾಲಕನನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ. ರಜೆ ಇದ್ದಿದ್ದರಿಂದ ಜಲಾಶಯವನ್ನು ವೀಕ್ಷಿಸಲು ಕುಟುಂಬದೊಂದಿಗೆ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.ಈ ವೇಳೆ ಬಾಲಕನವನ್ನು ರಕ್ಷಿಸಲು ಹೋಗಿದ್ದ ವ್ಯಕ್ತಿ ಕೂಡ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ ಏಪ್ರಿಲ್ 16 ರಂದು ನಡೆದ ಸಿಇಟಿ ಪರೀಕ್ಷಾ ವೇಳೆ ಬೀದರ್ ಧಾರವಾಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸಿಇಟಿ ಬರೆಯುವ ವೇಳೆ ಪ್ರವೇಶ ದ್ವಾರದ ಬಳಿ ಅಭ್ಯರ್ಥಿಗಳಿಂದ ಜನಿವಾರ ತಿಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿಇಟಿ ಬರೆಯುವ ವೇಳೆ ಅಭ್ಯರ್ಥಿಗಳ ಜನಿವಾರ ತೆಗೆಯದಿದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ನೀಡದ ವಿಚಾರವಾಗಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಯಾವ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ MLC ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ಈ ಒಂದು ಮುಡಾ ಕೇಸ್ ಇಡಿ ಹಾಗು ಸಿಬಿಐ ತನಿಖೆಗೆ ಕೊಟ್ಟರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ತಿಳಿಸಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆದರುವ ಅವಶ್ಯಕತೆ ಇಲ್ಲ. ಮುಡಾ ಕೇಸ್ ಗು ಜಾತಿ ಗಣತಿ ವರದಿ ಮಂಡನೆಗು ಯಾವುದೇ ರೀತಿಯಾದ ಸಂಬಂಧವಿಲ್ಲ. ಜಾತಿ ಗಣತಿ ಮಾಡಬೇಕು ಸಿಎಂ ಸಿದ್ದರಾಮಯ್ಯ ಅವರ ಬದ್ಧತೆ, ಮುಡಾ ಕೇಸ್ ಇಡಿಗೆ ವಹಿಸಿದರೆ ರಾಜೀನಾಮೆ ಪರಿಸ್ಥಿತಿ ಬರುವುದಿಲ್ಲ ಎಂದು ಅವರು ತಿಳಿಸಿದರು. ಮುಡಾ ಕೇಸ್ನಲ್ಲಿ ಏನು ಸತ್ಯಾಂಶ ಇಲ್ಲ. ಇಡಿ ಅಧಿಕಾರಿಗಳು ಬೇಕು ಅಂತಲೇ ಹಿಂಸೆ ಕೊಡುತ್ತಿದ್ದಾರೆ. ಮುಡಾ ಕೇಸ್ನಲ್ಲಿ ಕಾನೂನಾತ್ಮಕ ಹೋರಾಟ ಮುಂದುವರಿಸುತ್ತೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯಲ್ಲಿ ಮುಂದುವರೆಯುತ್ತಾರೆ. ಮುಡಾ ಕೇಸ್ ಸಿಬಿಐಗೆ ಬೇಕಾದರೂ ಕೊಡಲಿ ನಾವು ತಪ್ಪು ಮಾಡಿಲ್ಲ ಎಂದು ಮೈಸೂರಿನಲ್ಲಿ ಎಂ ಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಬೆಂಗಳೂರಿನ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಅವರು ಸದ್ಯಕ್ಕೆ ಯಾರನ್ನು ಅರೆಸ್ಟ್ ಮಾಡಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಮಾಹಿತಿ ಸಿಗಲಿದೆ. ಘಟನೆ ಕುರಿತು ಎಫ್ಐಆರ್ ದಾಖಲಿಸಲಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು. ಓಂ ಪ್ರಕಾಶ್ ಅವರ ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಪತ್ನಿ ಪಲ್ಲವಿ ಹತ್ಯೆಗೈದಿದ್ದಾರೆ. ಓಂ ಪ್ರಕಾಶ್ ಅವರ ಹೊಟ್ಟೆ ಭಾಗಕ್ಕೆ 4ರಿಂದ 5 ಬಾರಿ ಇರಿದಿದ್ದರಿಂದ ನೆಲ ಮಹಡಿಯಲ್ಲಿ ರಕ್ತದ ಮಡುವಿನಲ್ಲಿ 15 ರಿಂದ 20 ನಿಮಿಷ ರಕ್ತದ ಮಡುವಿನಲ್ಲಿ ಒದ್ದಾಡಿ ಸಾವನ್ನಪ್ಪಿದ್ದಾರೆ. ಈ…
ರಾಯಚೂರು : ರಾಜ್ಯದಲ್ಲಿ ಸಿಇಟಿ ಪರೀಕ್ಷೆ ಬರೆಯುವ ವೇಳೆ ಅಭ್ಯರ್ಥಿಗಳಿಗೆ ಜನಿವಾರ ತೆಗೆಸಿದ್ದ ಪ್ರಕರಣ ಇಡಿ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ಇದೀಗ ಈ ಒಂದು ಪ್ರಕರಣಕ್ಕೆ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ, ಬೀದರ್‌ನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದನ್ನು ಅಅವರವರ ಧರ್ಮವನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶ ಹಾಗೂ ಅಧಿಕಾರವಿದೆ. ಸಂವಿಧಾನದ ಬಗ್ಗೆ ಒಂದೆಡೆ ಮಾತನಾಡುವುದು, ಇನ್ನೊಂದೆಡೆ ಸ್ವಾತಂತ್ರ‍್ಯವನ್ನು ಹರಣ ಮಾಡುವಂತಹ ದ್ವಂದ್ವ ನಿಲುವು ಅತ್ಯಂತ ಖಂಡನೀಯ. ಕೇವಲ ವಿಪ್ರ ಸಮಾಜ ಮಾತ್ರವಲ್ಲ, ಯಾವುದೇ ಸಮುದಾಯದ ವಿಚಾರ ಬಂದಾಗ ಈ ರೀತಿಯಾದ ಧರ್ಮ-ವಿರೋಧಿ ಚಟುವಟಿಕೆಗಳು ಅತ್ಯಂತ ಅಸಹ್ಯ, ಹೇಯವಾಗಿರುವಂತವು. ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುತ್ತೇವೆ ಹಾಗೂ ಖಂಡಿಸುತ್ತೇವೆ. ಇದರ ವಿರುದ್ಧ ಪ್ರತಿಭಟಿಸುತ್ತೇವೆ.ಬೇರೆ ಯಾವ ಸಮುದಾಯಕ್ಕೆ ಇಲ್ಲದಿರುವುದು ವಿಪ್ರ ಸಮುದಾಯಕ್ಕೆ ಮಾತ್ರ ಯಾಕೆ? ಇದನ್ನ ತೀವ್ರವಾಗಿ ಖಂಡಿಸುತ್ತೇವೆ, ಅನ್ಯಾಯ ಸರಿಪಡಿಸಬೇಕು. ಮುಂದೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ…
ಮಂಡ್ಯ : ಮಂಡ್ಯದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾಫ್ಟ್ ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ ನಡೆದಿದೆ. ಮೃತ ಇಂಜಿನಿಯರ್ ಅನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಎಂದು ತಿಳಿದುಬಂದಿದೆ. ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ ಭಟ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾದಂತಹ ಓಂ ಪ್ರಕಾಶ್ (68) ಅವರನ್ನು ಪತ್ನಿ ಪಲ್ಲವಿಯೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಇದೀಗ ಸಹೋದರಿಯರಿಗೆ ಆಸ್ತಿ ಮಾಡಿದ್ದಕ್ಕೆ ಈ ಒಂದು ಕೊಲೆಗೆ ಮೂಲ ಕಾರಣ ಎಂಬುದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರನ್ನು ಅವರ ಪತ್ನಿ ಪಲ್ಲವಿ ಅವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ ದಾಂಡೇಲಿಯಲ್ಲಿದ್ದ ಆಸ್ತಿ ವಿಚಾರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಓಂ ಪ್ರಕಾಶ್ ಅವರು ತಂಗಿಯವರ ಹೆಸರಿಗೆ ಆಸ್ತಿಯನ್ನು ಮಾಡಿದ್ದರು. ಇದೇ ವಿಚಾರವಾಗಿ ಹಲವು ದಿನಗಳಿಂದ ಪಲ್ಲವಿ ಹಾಗೂ ಓಂ ಪ್ರಕಾಶ್ ನಡುವೆ ಗಲಾಟೆ ನಡೆಯುತ್ತಿತ್ತು. ಈ ಬಗ್ಗೆ ಮಾತನಾಡಬೇಡ ಎಂದು ಓಂ ಪ್ರಕಾಶ್ ಅವರು ಪತ್ನಿ ಪಲ್ಲವಿ ಅವರಿಗೆ ವಾರ್ನಿಂಗ್ ಸಹ ಮಾಡಿದ್ದರು. ಕೊಲೆಗೈದ ಬಳಿಕ ಪತ್ನಿ ಪಲ್ಲವಿ…
ಬೆಂಗಳೂರು : ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಹೌದು ಮೊದಲಿಗೆ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿ ಮಾಹಿತಿ ನೀಡಿದ್ದರು. ಆದರೆ ಇದೀಗ ಸ್ವತಹ ಓಂ ಪ್ರಕಾಶ್ ಅವರ ಪತ್ನಿಯೇ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಕೊಡಲೇ ಅವರ ಪತ್ನಿ ಪತಿಯ ಹತ್ಯೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ…










