Author: kannadanewsnow05

ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆ ಹೊನ್ನೂರಿನಲ್ಲಿ ನಡೆದಿದೆ. ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಕೊಲೆಯಾಗಿದೆ. ಹೇಮಣ್ಣ (68) ಎನ್ನುವವರು ಭೀಕರವಾಗಿ ಕೊಲೆಯಾದವರು ಎಂದು ತಿಳಿದುಬಂದಿದೆ. ಹೇಮಣ್ಣ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಪಾಕಿಸ್ತಾನದ ದಾಳಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿ ಈಗಾಗಲೇ ಪಾಕಿಸ್ತಾನಕ್ಕೆ ನುಗ್ಗಿ ಭಾರತ ಸೇನೆ ತಕ್ಕ ಪಾಠ ಕಲಿಸಿದೆ. ಆದರೂ ಕೂಡ ಪಾಕಿಸ್ತಾನ ತನ್ನ ಬುದ್ಧಿ ಬಿಡದೆ ಮತ್ತೆ ಗಡಿಯಲ್ಲಿ ಶೆಲ್ ದಾಳಿ ನಡೆಸುತ್ತಿದೆ. ಇದೀಗ ಪಾಕಿಸ್ತಾನದ ನಾಲ್ಕು ಫೈಟರ್ ವಿಮಾನಗಳನ್ನು ಭಾರತ ಸೇನೆ ಹೊಡೆದುರುಳಿಸಿದೆ. ಹೌದು ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದ F16 ಎರಡು, ಹಾಗು F17 ಎರಡು ಫೈಟರ್ ಜೆಟ್ ವಿಮಾನಗಳನ್ನು ಭಾರತೀಯ ಸೇನೆ ಇದೀಗ ಹೊಡೆದುರುಳಿಸಿದೆ. ಈ ಮೂಲಕ ಪಾಕಿಸ್ತಾನದ ನಾಲ್ಕು ಜೆಟ್ ಗಳನ್ನು ಸೇನೆ ಹೊಡೆದು ಉಳಿಸಿದೆ. ಇನ್ನು ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಮತ್ತು ನಾಳೆ ಜಮ್ಮು-ಕಾಶ್ಮೀರದಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಮ್ಮು…

Read More

ಶ್ರೀನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಪಾಕಿಸ್ತಾನದ ದಾಳಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿ ಈಗಾಗಲೇ ಪಾಕಿಸ್ತಾನಕ್ಕೆ ನುಗ್ಗಿ ಭಾರತ ಸೇನೆ ತಕ್ಕ ಪಾಠ ಕಲಿಸಿದೆ. ಆದರೂ ಕೂಡ ಪಾಕಿಸ್ತಾನ ತನ್ನ ಬುದ್ಧಿ ಬಿಡದೆ ಮತ್ತೆ ಗಡಿಯಲ್ಲಿ ಶೆಲ್ ದಾಳಿ ನಡೆಸುತ್ತಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಇಂದು ಮತ್ತು ನಾಳೆ 2 ದಿನಗಳ ಕಾಲ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಮತ್ತು ನಾಳೆ ಜಮ್ಮು-ಕಾಶ್ಮೀರದಲ್ಲಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಶಿಕ್ಷಣ ಸಚಿವೆ ಸಕೀನಾ ಇಟೂ ಈ ಕುರಿತು ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದ್ರು ಸಹ ಪಾಕಿಸ್ತಾನ ತನ್ನ ಚಾಳಿ ಬಿಟ್ಟಿಲ್ಲ. ಮತ್ತೆ ಮತ್ತೆ ಗಡಿಯಲ್ಲಿ ಶೆಲ್ ದಾಳಿ ನಡೆಸುತ್ತಿದೆ. ಇನ್ನು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಈ ಒಂದು ಕಾಳಗದ ಮಧ್ಯ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಈ ವಿಚಾರವಾಗಿ ಅಂತವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಬೆಂಗಳೂರಲ್ಲಿ ಕಮಿಷನರ್ ಬಿ.ದಯಾನಂದ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್,ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ ಆಗಿವೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಿಬ್ಬಂದಿಗಳಿಗೆ ಹಲವು ಸೂಚನೆ ನೀಡಲಾಗಿದೆ ನಗರದ ಎಲ್ಲಾ ಕಡೆಗೆ ಸೂಕ್ತ ಆಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಹೇಳಿಕೆ ನೀಡಿದರು.

Read More

ವಿಜಯಪುರ : ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಸಹ ಪಾಕಿಸ್ತಾನ ಗಡಿಯಲ್ಲಿ ಮತ್ತೆ ಮತ್ತೆ ಬಾಲ ಬಿತ್ತುತ್ತಿದೆ. ಇದೀಗ ಕರ್ನಾಟಕದಲ್ಲಿ ಕೂಡ ಹಲವು ಪಾಕಿಸ್ತಾನಿ ಪ್ರೇಮಿಗಳು ಬಾಲ ಬಿಚ್ಚಿದ್ದು, ವಿಜಯಪುರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಪಾಕಿಸ್ತಾನದ ಪರವಾಗಿ ಪೋಸ್ಟ್ ಮಾಡಿದ್ದು ಆಕೆಯ ವಿರುದ್ಧ ಇದೀಗ ದೇಶದ್ರೋಹದ ಅಡಿ ಪ್ರಕರಣ ದಾಖಲಾಗಿದೆ. ಹೌದು ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​​ ಹಂಚಿಕೊಂಡಿದ್ದಾಳೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್…

Read More

ನವದೆಹಲಿ : ಪಾಕಿಸ್ತಾನ ಭಾರತದ ಮೇಲೆ ನಿರಂತರವಾಗಿ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ ಅದಲ್ಲದೆ ಪಾಕಿಸ್ತಾನದ ದಾಳಿಗೆ ಪ್ರತಿಕಾರವಾಗಿ ಭಾರತ ಕೂಡ ಪಾಕಿಸ್ತಾನದ ಎಲ್ಲಾ ಡ್ರೋನ್ ಮತ್ತು ಕ್ಷಿಪಣಿಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ. ಇದೀಗ ಭಾರತದ ಕ್ಷಿಪ್ರ ದಾಳಿಗಳಿಂದ ಪಾಕಿಸ್ತಾನ ನಲುಗಿದ್ದು ಪಾಕಿಸ್ತಾನದ ಚಾಂಬ್ ಹಾಗೂ ಸಿಯಾಲ್ ಕೊಟ್ ನಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಭಾರತದ ಕ್ಷಿಪ್ರ ದಾಳಿಗಳಿಂದಾಗಿ ಪಾಕಿಸ್ತಾನ ಇದೀಗ ಸಹಜವಾಗಿ ಕಂಗಾಲಾಗಿದೆ. ಪಾಕಿಸ್ತಾನದ ಚಾಂಬ್ ಮತ್ತು ಸಿಯಾಲ್ ಕೋಟ್ ಮೇಲೆ ಭಾರತ ತೀವ್ರ ದಾಳಿ ನಡೆಸಿದೆ. ಭಾರತದ ದಾಳಿಯಿಂದಾಗಿ ಇದೀಗ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಚಾಂಬ್ ಹಾಗೂ ಸಿಯಾಲ್ ಕೋಟ್ ನಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಮನೆಯಲ್ಲಿಯೇ ಇರುವಂತೆ ಪಾಕಿಸ್ತಾನ ಸೇನೆ ಅಲ್ಲಿನ ಜನರಿಗೆ ಸೂಚಿಸಿದೆ.

Read More

ಸಾಂಬಾ : ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ಈಗಾಗಲೇ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ, 100ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿದ್ದು, ಇದರ ಬೆನ್ನಲ್ಲೆ ಇದೀಗ ಜಮ್ಮು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಬಿಎಸ್ಎಫ್ ಯೋಧರು ಮತ್ತೆ 7 ಉಗ್ರರನ್ನು ಹತ್ಯೆಗೈದಿದ್ದಾರೆ. ಹೌದು ಜಮ್ಮು ಕಾಶ್ಮೀರದ ಸಾಂಬಾರು ಸೆಕ್ಟರ್ ನಲ್ಲಿ 7 ಉಗ್ರರ ಹತ್ಯೆಯಾಗಿದ್ದು, 7 ಭಯೋತ್ಪಾದಕರನ್ನು ಬಿ ಎಸ್ ಎಫ್ ಯೋಧರು ಹತ್ಯೆಗೈದಿದ್ದಾರೆ. ಭಾರತದ ಮೇಲೆ ಪಾಕಿಸ್ತಾನ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದು, ಇದರ ಲಾಭ ಪಡೆದ ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ 7 ಉಗ್ರರನ್ನು ಬಿ ಎಸ್ ಎಫ್ ಹತ್ಯೆಗೈದಿದ್ದಾರೆ. ಹಾಗಾಗಿ ಸಾಂಬಾ ಸೆಕ್ಟರ್ ನಲ್ಲಿ 7 ಉಗ್ರರನ್ನು ಬಿಎಸ್ಎಫ್ ಯೋಧರು ಹತ್ಯೆಗೈದಿದ್ದಾರೆ.

Read More

ಯಾದಗಿರಿ : ಯಾದಗಿರಿಯಲ್ಲಿ ಗೌರವಾದ ದುರಂತ ಒಂದು ಸಂಭವಿಸಿದ್ದು ಸ್ನೇಹಿತರ ಜೊತೆಗೆ ಈಸಲು ತಳ್ಳಿದಾಗ ಕಾಲು ಜಾರಿ ಹೊಂಡದಲ್ಲಿ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಹೊಂಡಕ್ಕೆ ಕಂಠಿತಾಂಡಾದ ನಾಲ್ಕು ಹುಡುಗರು ಟ್ಯೂಬ್‌ಗಳ ಸಹಾಯದಿಂದ ಈಜಾಡಲು ಹೋಗಿದ್ದಾರೆ.ಈ ವೇಳೆ ವಿನೋದ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಮೃತ ಬಾಲಕ ವಡಗೇರಾ ತಾಲ್ಲೂಕಿನ ಕಾಡಂಗೇರಾ(ಬಿ) ಗ್ರಾಮದ ಮೋರಾರ್ಜಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ಥಳಕ್ಕೆ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಬೂಬಅಲಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಇಸ್ಲಾಮಾಬಾದ್ : ಪಾಕಿಸ್ತಾನದ ದಾಳಿಗೆ ಭಾರತ ಪ್ರತಿಕಾರವಾಗಿ ಪ್ರತಿದಾಳಿ ಮಾಡಿದೆ. ಇದರಿಂದ ಪಾಕಿಸ್ತಾನ ತತ್ತರಿಸಿ ಹೋಗಿದೆ. ಇದರ ನಡುವೆ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್(PSL) ನ ಉಳಿದ ಕ್ರಿಕೆಟ್ ಪಂದ್ಯಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಸ್ಥಳಾಂತರಿಸಲಾಗಿದೆ.ಮೇ 8 ರಂದು ರಾವಲ್ಪಿಂಡಿ ಕ್ರೀಡಾಂಗಣವು ಡ್ರೋನ್ ದಾಳಿಯಿಂದ ಹಾನಿಗೊಳಗಾದ ಹಿನ್ನೆಲೆ ಪಿಎಸ್ಎಲ್ ಪಂದ್ಯಗಳು ದುಬೈಗೆ ಶಿಫ್ಟ್ ಆಗಿವೆ. ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ಸಂಜೆ ನಿಗದಿಯಾಗಿದ್ದ ಪೇಶಾವರ್ ಝಲ್ಮಿ ಮತ್ತು ಕರಾಚಿ ಕಿಂಗ್ಸ್ ನಡುವಿನ ಪಂದ್ಯವನ್ನು ಭಾರತೀಯ ಸಶಸ್ತ್ರ ಪಡೆಗಳು ರಾವಲ್ಪಿಂಡಿ ಸೇರಿದಂತೆ ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ರದ್ದುಗೊಳಿಸಲಾಯಿತು. PSL ನ ಉಳಿದ ಎಲ್ಲಾ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧಿಕಾರಿಗಳು ದೃಢಪಡಿಸಿದ್ದಾರೆ. ಭಾರತದ ದಾಳಿ ಮತ್ತು ಉಭಯ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ PSL ಯೋಜಿಸಿದಂತೆ ಮುಂದುವರಿಯುತ್ತದೆ ಎಂದು PCB ಹೇಳಿದೆ.…

Read More

ನವದೆಹಲಿ : ಪಾಕಿಸ್ತಾನದಿಂದ ಭಾರತದ ಮೇಲೆ ದಾಳಿ ಮುಂದುವರೆದಿದ್ದು ಇದೀಗ ನಿನ್ನೆ ಪಾಕಿಸ್ತಾನ ಅನೇಕ ಶಸ್ತ್ರಾಸ್ತ್ರ ಬಳಸಿಕೊಂಡು ಭಾರತದ ಮೇಲೆ ದಾಳಿ ಮಾಡಿದೆ ಎಂದು ಭಾರತೀಯ ಸೇನೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ ಇದರ ಜೊತೆಗೆ ಪಾಕಿಸ್ತಾನದ ದಾಳಿಯ ವಿಡಿಯೋ ಸಹ ಭಾರತೀಯ ಸೇನೆ ಬಿಡುಗಡೆ ಮಾಡಿದೆ. ನಿನ್ನೆ ಪಾಕಿಸ್ತಾನದಿಂದ ಹಲವು ಬಾರಿ ದಾಳಿಯಾಗಿದೆ ಎಂದು ಭಾರತೀಯ ಸೇನೆಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದ್ದು, ಅನೇಕ ಶಸ್ತ್ರಾಸ್ತ್ರ ಬಳಸಿಕೊಂಡು ಪಾಕಿಸ್ತಾನ ದಾಳಿ ಮಾಡಿದೆ. ನಾವು ಸಹ ಪಾಕಿಸ್ತಾನದ ದಾಳಿಗಳನ್ನು ಪರಿಣಾಮಕಾರಿಯಾಗಿ ಹೆಮ್ಮೆಟ್ಟಿಸಲಾಗಿದೆ. ಕದನ ವಿರಾಮ ಉಲ್ಲಂಘನೆಗೆ ತಕ್ಕ ಉತ್ತರ ನೀಡಲಾಗಿದೆ ಎಂದು ವಿಡಿಯೋ ಭಾರತೀಯ ಸೇನೆ ವಿಡಿಯೋ ಬಿಡುಗಡೆ ಮಾಡಿದೆ. https://twitter.com/adgpi/status/1920659952630460441?t=b6HHvzaPFVYZdhYl195IXQ&s=19

Read More