Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡದ ಈ ಸಾಧನೆ ಕುರಿತು ಮಾಜಿ ಮಾಲೀಕ ವಿಜಯ್ ಮಲ್ಯ ತಂಡಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ. ಹೌದು ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ರಂಗಳ ಭರ್ಜರಿ ಗೆಲುವು ದಾಖಲಿಸಿ ಸ್ವಚ್ಛದ ಐಪಿಎಲ್ ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿತು. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್ಸಿಬಿ ಇದೀಗ ಆ ಒಂದು ಬರವನ್ನು ನೀಗಿಸಿಕೊಂಡಿದೆ. ಇನ್ನು ಆರ್ಸಿಬಿ ಕಪ್ ಗೆದ್ದ ಬೆನ್ನಲ್ಲೇ ಮಾಜಿ ಮಾಲಿಕ ವಿಜಯ ಮಲ್ಯ ಮಹತ್ವದ ಸಂದೇಶ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ’18 ವರ್ಷಗಳ ನಂತರ ಆರ್‌ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಪಂದ್ಯಾವಳಿಯಾದ್ಯಂತ ಅದ್ಭುತ ಅಭಿಯಾನ. ಅತ್ಯುತ್ತಮ ತರಬೇತಿ ಮತ್ತು ಸಹಾಯಕ…
ಬೆಂಗಳೂರು : ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಆರ್ಸಿಬಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜಕೀಯ ನಾಯಕರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ” Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ‘ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ‘ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ.…
ಬೆಂಗಳೂರು : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡುತ್ತಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಮಂಜೂರಾತಿ ಹುದ್ದೆಗಳಿಗೆ ಅನುಗುಣವಾಗಿ 2025-26ನೇ ಸಾಲಿಗೆ 4,689 ಅತಿಥಿ ಉಪನ್ಯಾಸಕ ರನ್ನು ನೇಮಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಹೌದು ಅತಿಥಿ ಉಪನ್ಯಾಸಕರಿಗೆ ಮಾಸಿಕ 14 ಸಾವಿರ ವೇತನ ನಿಗದಿಪಡಿಸಲಾಗಿದೆ. ಅತಿಥಿ ಉಪನ್ಯಾಸಕ ರಿಗೆ ವಾರದಲ್ಲಿ 10 ಗಂಟೆಗಳ ಕಾರ್ಯಭಾರ ನಿರ್ವಹಿಸಲು ಮಾತ್ರ ಅನುಮತಿ ನೀಡಬೇಕು. ಯಾವುದೇ ಕಾಲೇಜಿನಲ್ಲಿ 10/12 ಗಂಟೆಗಳಿಗಿಂತ ಹೆಚ್ಚು ಕಾರ್ಯಭಾರ ಇದ್ದಲ್ಲಿ ಮಾತ್ರ ಇಬ್ಬರು ಅತಿಥಿ ಉಪನ್ಯಾ ಸಕರನ್ನು ನೇಮಿಸಿಕೊಳ್ಳಬಹುದು. ವಿಷಯದಲ್ಲಿ ಬೋಧನೆಗೆ ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಮುಂದೆ ಬಂದರೆ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಕಾಲೇಜಿನ ಪ್ರಾಚಾರ್ಯರು ಮತ್ತು ಹಿರಿಯ ಉಪನ್ಯಾಸಕರ ಸಮಿತಿ ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.ಆಯಾ ಜಿಲ್ಲಾ ವ್ಯಾಪ್ತಿಯ ಪಿಯು ಕಾಲೇಜುಗಳಲ್ಲಿ ಕಡಿಮೆ ಕಾರ್ಯ ಭಾರ ಹೊಂದಿರುವ ವಿಷಯಗಳಿಗೆ ಉಪ ನ್ಯಾಸಕರನ್ನು ಜಿಲ್ಲೆಯ ಇತರೆ ಕಾಲೇ ಜುಗಳಲ್ಲಿ ಖಾಲಿ…
ಬೆಂಗಳೂರು : ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿನ್ನೆ ಗುಜರಾತಿನ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಪಂಜಾಬ್ ವಿರುದ್ಧ 6 ರನ್ ಗಳ ಗೆಲುವು ಸಾಧಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಹಿನ್ನೆಲೆ ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಭಾರಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆಯ ವೇಳೆ ಯುವಕನಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಗಳ ರಾತ್ರಿ ನಡೆದ ಘಟನೆಯಾಗಿದ್ದು, ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಸಂಭ್ರಮಾಚರಣೆ ಮಾಡುತ್ತಾ ಯುವಕ ಬಾರ್ ಗೆ ತೆರಳುತ್ತಿರುವಾಗ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.ಆದರೆ ಚಾಕು ಇರಿತಕ್ಕೆ ಒಳಗಾಗಿರುವ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಯುವಕ ಪ್ರತಿರೋಧ ತೋರಿದ ಬಳಿಕ ಘಟನಾ ಸ್ಥಳದಿಂದ ದುಷ್ಕರ್ಮಿಗಳ ಗ್ಯಾಂಗ್ ಪರಾರಿಯಾಗಿದೆ. ತಕ್ಷಣ ಹಲ್ಲೆಗೆ ಒಳಗಾದಂತಹ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಪೀಣ್ಯ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಕಳೆದ 17 ವರ್ಷಗಳಿಂದ ಐಪಿಲ್ ಟ್ರೊಫಿ ಬರ ಎದುರಿಸುತ್ತಿದ್ದ RCB ಕೊನೆಗೂ ಕಪ್ ಎತ್ತುವಲ್ಲಿ ಯಶಸ್ವಿಯಾಗಿದೆ. ಇದರ ಹಿಂದೆ RCB ಆಟಗಾರರ ಎಷ್ಟು ಶ್ರಮವಿದೆಯೋ ಅಷ್ಟೆ RCB ಅಭಿಮಾನಿಗಳ ಪ್ರೀತಿ, ನಿಯತ್ತು ಹಾಗು ತಪಸ್ಸು ಕೂಡ ಅಷ್ಟೆ ಇದೆ. ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಂತಿಮವಾಗಿ ಐಪಿಎಲ್‌ಗೆ ಹೊಸ ಚಾಂಪಿಯನ್ ಸಿಕ್ಕಿತು. ಪಂಜಾಬ್ ಕಿಂಗ್ಸ್ ಕೂಡ ಉತ್ತಮವಾಗಿ ಆಡಿದರೂ ಆರ್‌ಸಿಬಿ ಸಾಂಘೀಕ ದಾಳಿಯ ಮುಂದೆ ಮಂಡಿಯೂರಿತು. 17 ವರ್ಷಗಳ ಟ್ರೋಫಿ ಬರವನ್ನು ನೀಗಿಸಿಕೊಂಡ ಬಳಿಕ ಭಾವುಕರಾದ ವಿರಾಟ್ ಕೊಹ್ಲಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದರು.ಬನ್ನಿ ಕೊಹ್ಲಿ ಏನು ಹೇಳಿದ್ದಾರೆ ಅನ್ನೋದನ್ನ ತಿಳಿಯೋಣ. ವಿರಾಟ್ ಕೊಹ್ಲಿ ಹೇಳಿದ್ದೇನು? ಕರ್ನಾಟಕದ ದತ್ತು ಪುತ್ರ ವಿರಾಟ್ ಕೊಹ್ಲಿ ಐಪಿಎಲ್ ಆರಂಭವಾದಾಗಿನಿಂದಲೂ ಅಂದರೆ ಕಳೆದ 18 ವರ್ಷಗಳಿಂದ ಆರ್‌ಸಿಬಿಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐತಿಹಾಸಿಕ ಜಯ ದಾಖಲಿಸಿದ್ದು, 18 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಹೌದು ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 190 ರನ್ ಕಲೆಹಾಕಿತ್ತು. ಅಂತೆಯೇ ಪಂಜಾಬ್ ಗೆ ಗೆಲ್ಲಲು 191 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಕೇವಲ 6 ರನ್ ಅಂತರದಲ್ಲಿ ವಿರೋಚಿತ ಗೆಲುವು ಕಂಡಿತು. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ! ಇತ್ತ ಗೆಲುವು ಖಚಿತವಾಗುತ್ತಿದ್ದಂತೆಯೇ ಮೈದಾನದಲ್ಲಿ ವಿರಾಟ್…
ಬೆಂಗಳೂರು : ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಈ ನಡುವೆ ನಿನ್ನೆ ನಡೆದ ಮ್ಯಾಚ್ ಗು ಮುನ್ನ RCB ಅಭಿಮಾನಿಗಳು ಒಂದು ಲೆಕ್ಕಾಚಾರ ಹಾಕಿಕೊಂದಿದ್ರು. ಏನಪ್ಪಾ ಅದು ಅಂದ್ರೆ ನಿನ್ನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನಲು 18ರ ಲೆಕ್ಕಾಚಾರವನ್ನು ಮುಂದಿಟ್ಟಿದ್ದರು . ಈ ಲೆಕ್ಕಾಚಾರವು ಆರ್ಸಿಬಿ ಪರವಿರುವುದರಿಂದ ಕೊನೆಗೂ ರಾಯಲ್ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗಾದ್ರೆ ಅಂತಹ ಲೆಕ್ಕಾಚಾರ ಏನು ಅಂತೀರಾ ಮುಂದೆ ಓದಿ ಅಂದರೆ ಈ ಬಾರಿ ನಡೆಯುತ್ತಿರುವುದು 18ನೇ ಸೀಸನ್ನ ಐಪಿಎಲ್. ವಿರಾಟ್ ಕೊಹ್ಲಿಯ ಜೆರ್ಸಿ ನಂಬರ್ 18. ಅಲ್ಲದೆ ಕೊಹ್ಲಿ ಆರ್ಸಿಬಿ ಪರ ಕಣಕ್ಕಿಳಿಯಲಾರಂಭಿಸಿ 18 ವರ್ಷಗಳಾಗಿವೆ. ಅತ್ತ ಆರ್ಸಿಬಿ ಅಭಿಮಾನಿಗಳ ಕಪ್ ಗೆಲ್ಲುವ ಕಾಯುವಿಕೆ…
ಬೆಂಗಳೂರು : ನಿನ್ನೆ ರಾತ್ರಿ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಹೌದು ತಡ ರಾತ್ರಿ ಬೆಂಗಳೂರಿನ MG ರೋಡ್, ಚರ್ಚ್ಸ್ಟ್ರೀಟ್, ವಿಜಯನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚರ್ಚ್ಸ್ಟ್ರೀಟ್ನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ಪಬ್ ಮತ್ತು ಹೋಟೆಲ್ಗಳಲ್ಲಿ ಡಿಜೆ ಸಾಂಗ್ಗೆ ಅಭಿಮಾನಿಗಳು ಸಕತ್ ಸ್ಟೆಪ್ ಹಾಕುತ್ತಿದ್ದಾರೆ. ಈ ಸಲ ಕಪ್ ನಮ್ದು, ಜೈ ಆರ್ಸಿಬಿ ಎಂದು ಘೋಷಣೆಗಳನ್ನು ಕೂಗಿದರು. https://twitter.com/NareshB07879501/status/1929965041379619018?t=t-dOuzXunfaVTcCWIdyvpQ&s=19
ಬೆಂಗಳೂರು : ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 8ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಕಳೆದ ಎರಡು ವಾರದಿಂದ ಭಾರಿ ಮಳೆಯಾದ ಹಿನ್ನಲೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಇದೀಗ ಜೂ.8ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭಾರಿ ಅಪಘಾತವನ್ನು ಸಂಭವಿಸಿದ್ದು, ಚಲಿಸುತ್ತಿದ್ದ ಸರ್ಕಾರಿ ಬಸ್ ವೀಲ್ ಬೋಲೆಂಡ್ ತುಂಡಾಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ 49 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಿರ್ಜಾಂ ಸಮೀಪ ಖಂಡಗಾರ ಕ್ರಾಸ್ ನಲ್ಲಿ ಸರ್ಕಾರಿ ಬಸ್ ಅಪಘಾತಕ್ಕೆ ಈಡಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು ವ್ಯಾಪ್ತಿಯ ಖಂಡಕರ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೊನ್ನಾವರದಿಂದ ಕೆಎಸ್ಆರ್ಟಿಸಿ ಬಸ್ ದಾಂಡೇಲಿಗೆ ತೆರಳುತ್ತಿತ್ತು. ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ವ್ಹಿಲ್ ಬೋಲೆಂಡ್ ಕಟ್ಟಾಗಿದೆ. ರಸ್ತೆಯ ಎಡಬದಿಯಿಂದ ಡಿವೈಡರ್ ದಾಟಿ ಬಲಬದಿಯ ಗುಡ್ಡಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಗುಡ್ಡಕ್ಕೆ ಡಿಕ್ಕಿ ಹೊಡೆದ ರಬ್ಬಸಕ್ಕೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. KA 25 3411 ಸಂಖ್ಯೆಯ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ…














