Author: kannadanewsnow05

ಕಾಶ್ಮೀರ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ನಿನ್ನೆ ಎರಡು ದೇಶಗಳು ಕದನ ವಿರಾಮ ಘೋಷಿಸಿದವು ಆದರೆ ರಾತ್ರಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಾಲ್ಕು ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೇ. ಭಾರತ ಸೇನೆ ಕೂಡ ಪಾಕಿಸ್ತಾನದ ಎಲ್ಲಾ ಡ್ರೋನ್ ಗಳನ್ನು ಹೊಡೆದು ಧ್ವಂಸಗೊಳಿಸಿದೆ. ಇದೀಗ ಕಾಶ್ಮೀರದಲ್ಲಿ ರಾಜ್ಯ ತನಿಕಾ ಸಂಸ್ಥೆ (SIA) 20 ಹೆಚ್ಚು ಕಡೆ ದಾಳಿ ಮಾಡಿದೆ. ಹೌದು ದಕ್ಷಿಣ ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ SIA ದಾಳಿ ಮಾಡಿದ್ದು, ಉಗ್ರರ ಜೊತೆ ಸಂಪರ್ಕ ಹೊಂದಿದವರ ಮನೆಗಳ ಮೇಲೆ ಇದೀಗ SIA ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ದಾಳಿಯ ವೇಳೆ ಉಗ್ರರ ಜೊತೆ ಸಂಪರ್ಕ ಹೊಂದಿದ ಶಂಕಿತನನ್ನು ವಶಕ್ಕೆ ಪಡೆದು ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.

Read More

ಬಾಗಲಕೋಟೆ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ, ಓವರ್ ಟೇಕ್ ಮಾಡಲು ಹೋಗಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ಬಾಲಕರು ಲಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿತ್ತು. ಇದೀಗ ಬಾಗಲಕೋಟೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮರಳು ತುಂಬಿದ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಘಟನೆ ನಡೆದಿದ್ದು ಬೈಕ್‌ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿ ನೀರಲಕೇರಿ ಗ್ರಾಮದ ನಿವಾಸಿ ಬೀರಪ್ಪ ಹಂಪಿಹೊಳ್ಳಿ (55) ಎಂದು ತಿಳಿದುಬಂದಿದೆ. ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Read More

ಕಲಬುರ್ಗಿ : ಹೊಸದಿಲ್ಲಿ-ಬೆಂಗಳೂರು ಮಾರ್ಗದಲ್ಲಿ ಓಡಾಡುವ ಕರ್ನಾಟಕ ಎಕ್ಸ್ ಪ್ರೆಸ್(KK ಎಕ್ಸ್ ಪ್ರೆಸ್) ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಅದೇ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ರೈಲ್ವೆ ಕಂಟ್ರೋಲ್ ರೂಮ್ ಗೆ ಬೆದರಿಕೆ ಕರೆ ಮಾಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವ ಅನುಮಾನವಿದೆ ಎಂದು ಪ್ರಯಾಣಿಕನೋರ್ವ ರೈಲ್ವೆ ಕಂಟ್ರೋಲ್ ರೂಮ್ ಗೆ ಕರೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಹೊಸದಿಲ್ಲಿ-ಬೆಂಗಳೂರು ಕರ್ನಾಟಕ ಎಕ್ಸ್ ಪ್ರೆಸ್ ರೈಲನ್ನು ಇಂದು (ಮೇ 11) ಮುಂಜಾನೆ ವಾಡಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿ 4 ಗಂಟೆಗಳ ಕಾಲ ತಪಾಸಣೆಗೊಳಪಡಿಸಲಾಯಿತು. ಬಾಂಬ್ ನಿಷ್ಕ್ರಿಯ ದಳದ ಡಾಗ್ ಸಿಬ್ಬಂದಿ ಪ್ರಯಾಣಿಕರನ್ನು ಕೆಳಗಿಳಿಸಿ ರೈಲಿನ 22 ಬೋಗಿಗಳನ್ನು ತಪಾಸಣೆ ಮಾಡಿದರು. ಬಳಿಕ ಅದೊಂದು ಹುಸಿಬಾಂಬ್ ಕರೆ ಎಂಬುದು ದೃಢಪಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಇದೀಗ ಕಲಬುರ್ಗಿಯ ವಾಡಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶ ಮೂಲದ ದೀಪಸಿಂಗ್ ರಾಥೋಡ್ (33) ಬಂಧಿತ…

Read More

ಬೀದರ್ : ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ನಿನ್ನೆ ಭಾರತ ಪಾಕಿಸ್ತಾನ್ ಮಧ್ಯ ಕದನ ವಿರಾಮ ಘೋಷಣೆಯಾಗಿತ್ತು. ಆದರೆ ನಿನ್ನೆ ರಾತ್ರಿ ಮತ್ತೆ ಪಾಕಿಸ್ತಾನ್ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದೀಗ ತಂಗಿಯ ಮದುವೆಗೆಂದು ಬಂದಿದ್ದ ಯೋಧನಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೇನೆಯಿಂದ ತುರ್ತು ಕರೆ ಬಂದಿದ್ದರಿಂದ ಸೇವೆಗೆ ಯೋಧರೊಬ್ಬರು ಹಾಜರಾಗಿದ್ದಾರೆ. ಹೌದು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಂದಾಪುರ ಗ್ರಾಮದ ಯೋಧ ಬಸವಕಿರಣ ಬಿರಾದಾರ ಅವರು ಪಂಜಾಬ್‌ನ ಅಮೃತಸರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಏ.27ರಂದು ತಂಗಿಯ ಮದುವೆಗಾಗಿ ರಜೆ ಪಡೆದು ಊರಿಗೆ ಬಂದಿದ್ದರು. ಸದ್ಯ ಭಾರತ-ಪಾಕಿಸ್ತಾನದ ಗಡಿ ಪಂಜಾಬ್‌ನಲ್ಲಿ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ತವ್ಯಕ್ಕೆ ಹಾಜರಾಗುವಂತೆ ಸೇನೆಯಿಂದ ತುರ್ತು ಕರೆ ಬಂದಿದೆ. ಯೋಧನ ಹಣೆಗೆ ತಿಲಕವಿಟ್ಟು, ಆರತಿ ಬೆಳಗಿ ಕುಟುಂಬಸ್ಥರು ಶುಭ ಹಾರೈಸಿ ಸೇವೆಗೆ ಕಳುಹಿಸಿಕೊಟ್ಟಿದ್ದಾರೆ.

Read More

ಬೆಂಗಳೂರು : ಮೇ 12 ರಂದು ಬುದ್ಧ ಪೂರ್ಣಿಮ ಹಿನ್ನೆಲೆಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಸೋಮವಾರ ಬುದ್ಧ ಪೂರ್ಣಿಮೆ ಆಚರಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಗಳವಾರದಿಂದ ಎಂದಿನಂತೆ ಮಾಂಸ ಮಾರಾಟ ಮುಂದುವರಿಯಲಿದೆ. ಹೌದು ಸೋಮವಾರದಂದು ಬುದ್ಧ ಪೂರ್ಣಿಮ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ನಾಳೆ ಭಾನುವಾರ ಎಂದಿನಂತೆ ಕಾರ್ಯನಿರ್ಹಿಸಲಿದೆ. ಜೊತೆಗೆ ಸೋಮವಾರ ಬುದ್ಧ ಪೂರ್ಣಿಮೆ ದಿನವನ್ನು ಹೊರತುಪಡಿಸಿ ಮರುದಿನ ಅಂದರೆ ಮಂಗಳವಾರದಿಂದ ಎಂದಿನಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿ ಖಾನೆಗಳು ಕಾರ್ಯ ನಿರ್ವಹಿಸಲಿವೆ ಎಂದು ಪಾಲಿಕೆ ಅಧಿಕಾರಿ ತಿಳಿಸಿದ್ದಾರೆ.

Read More

ಶ್ರೀನಗರ : ಇಂದು ಸಂಜೆಯಷ್ಟೇ ಪಾಕಿಸ್ತಾನ ಹಾಗೂ ಭಾರತ ಕದನ ವಿರಾಮ ಘೋಷಿಸಿತ್ತು. ಇದೀಗ ಮತ್ತೆ ಪಾಕಿಸ್ತಾನ ಗಡಿಯಲ್ಲಿ ಬಾಲ ಬಿಚ್ಚಿದ್ದು ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ. ಹೌದು ಜಮ್ಮು ಕಾಶ್ಮೀರ ರಾಜಧಾನಿ ಶ್ರೀ ನಗರದಲ್ಲಿ 4-5 ಬಾರಿ ಸ್ಪೋಟ ಕೇಳಿಸಿದ್ದು, ಶ್ರೀನಗರದಲ್ಲಿ ಬ್ಲಾಕ್ ಔಟ್ ಮಾಡಲಾಗಿದೆ. ಎಲ್ ಓ ಸಿ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಜಾರಿಯಾದ 3 ಗಂಟೆಗಳಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದೆ. ಅಲ್ಲದೆ ಶ್ರೀನಗರದಲ್ಲಿ 11 ಡ್ರೋನ್ ಗಳಿಂದ ದಾಳಿ ಮಾಡಿದೆ. ಶ್ರೀನಗರದತ್ತ 50ಕ್ಕೂ ಹೆಚ್ಚು ಪಾಕಿಸ್ತಾನ್ ಡ್ರೋನ್ ಗಳು ನುಗ್ಗಿ ಬಂದಿವೆ. ಸೇನಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುತ್ತಿದೆ. ಕಾಶ್ಮೀರ, ರಾಜಸ್ಥಾನ್, ಗುಜರಾತ್ ಪಂಜಾಬ್ ಗಳನ್ನು ಪಾಕಿಸ್ತಾನ ಟಾರ್ಗೆಟ್ ಮಾಡಿದೆ. ಆದರೆ ಭಾರತ ತಕ್ಕ ಪ್ರತ್ಯುತ್ತರ ನೀಡಿದ್ದು, 50ಕ್ಕೂ…

Read More

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಈ ಒಂದು ಕದನ ವಿರಾಮ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕದನ ವಿರಾಮದ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮೊದಲಿಗೆ ಸಿಎಂ ಹೇಳಿದರು. ಆಗ ಪಕ್ಕದಲ್ಲೇ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ಕದನ ವಿರಾಮವನ್ನು ಸ್ವಾಗತಿಸಿದರು. ಯುದ್ಧ ವಿರಾಮ ಘೋಷಣೆಯಾಗಿದೆ ಅಂತ ಸರ್ಕಾರವೇನೂ ಕೈಕಟ್ಟಿ ಕೂರೋದಿಲ್ಲ, ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು. ಕರ್ನಾಟಕದಲ್ಲಿದ್ದ ಎಲ್ಲ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸಲಾಗಿದೆ ಎಂದು ಹೇಳಿದರು. ಅದರೆ ಮೈಸೂರಲ್ಲಿ 6ವರ್ಷದೊಳಗಿನ ಮೂರು ಮಕ್ಕಳು ಉಳಿದುಕೊಂಡು ಬಿಟ್ಟಿವೆ, ಅವರ ತಂದೆ ಪಾಕಿಸ್ತಾನಿ…

Read More

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ಹೆಚ್ಚಾದ ಹಿನ್ನಲೆ ಐಪಿಎಲ್ ಸೀಸನ್ 18 ಅನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿತ್ತು. ಇಂದು ಪಾಕಿಸ್ತಾನ ಮತ್ತು ಭಾರತ ಕದನ ವಿರಾಮ ಘೋಷಿಸಿದೆ. ಹಾಗಾಗಿ ಇದೀಗ ಮೂರು ನಗರಗಳಲ್ಲಿ ಮುಂದಿನ ಪಂದ್ಯಗಳನ್ನು ನಡೆಸಲು ಪ್ಲಾನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸೇನಾ ಕಾರ್ಯಾಚರಣೆಗೆ ತಾತ್ಕಾಲಿಕ ಕದನವಿರಾಮ ಘೋಷಣೆಯಾಗಿದೆ. ಇದರಿಂದ ಅರ್ಧಕ್ಕೆ ನಿಂತಿದ್ದ ಐಪಿಎಲ್ 2025ರ ಎರಡನೇ ಹಂತ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ. ಆದರೆ, ವಿದೇಶಿ ಆಟಗಾರರ ಆಗಮನ ಮತ್ತು ಗಡಿಯಲ್ಲಿನ ಉದ್ವಿಗ್ನತೆಯಿಂದಾಗಿ ಲೀಗ್‌ನ ತಕ್ಷಣದ ಆರಂಭ ಅನುಮಾನದಲ್ಲಿದೆ. ಬಿಸಿಸಿಐ ಸರ್ಕಾರದೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಅದರಂತೆ ಇದೀಗ ಮುಂದಿನ ಪಂದ್ಯಕ್ಕೆ ಬಿಸಿಸಿಐ ಮೂರು ಮೈದಾನಗಳನ್ನು ಸೂಚಿಸಿದ್ದು, ಉಳಿದ 16 ಪಂದ್ಯಗಳು ಅಲ್ಲೇ ನಡೆಸಲು ಚಿಂತನೆ ನಡೆಸಲಾಗಿದೆ. ಉತ್ತರ ಭಾರತದಲ್ಲಿ ಯುದ್ಧದ ಭೀತಿ ಹೆಚ್ಚಿರುವ ಹಿನ್ನಲೆ ಮುಂದಿನ ಪಂದ್ಯಾಟವನ್ನು ದಕ್ಷಿಣ ಭಾರತದ ನಗರಗಳಾದ…

Read More

ನವದೆಹಲಿ : ಪಹಲ್ಗಾಂ ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಈಗಾಗಲೇ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಅನೇಕ ಉಗ್ರರನ್ನು ಹತ್ಯೆಗೈದಿದೆ. ಇದೀಗ ಇಂದು ಸಂಜೆ 5 ಗಂಟೆಯಿಂದಲೇ ಪಾಕಿಸ್ತಾನ ಭಾರತಕ್ಕೆ ಕರೆ ಮಾಡಿ ಕದನ ವಿರಾಮಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಇದರ ಮಧ್ಯ 2019ರಲ್ಲಿ ನಡೆದ ಪುಲ್ವಾಮ ದಾಳಿಯ ಕುರಿತು ಪಾಕಿಸ್ತಾನದ ವಾಯುಪಡೆಯ ಮುಖ್ಯಸ್ಥ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಪುಲ್ವಾಮಾ ಭಯೋತ್ಪಾದಕ ದಾಳಿ ನಮ್ಮ ಯುದ್ಧ ತಂತ್ರದ ಭಾಗ ಎಂದು ಇದೀಗ ಪಾಕಿಸ್ತಾನ ಒಪ್ಪಿಕೊಂಡಿದೆ. ಪಾಕಿಸ್ತಾನ ಇದೀಗ ತನ್ನ ಹಳೆಯ ಪುಲ್ವಾಮಾ ಭಯೋತ್ಪಾದಕ ದಾಳಿ ಕೃತ್ಯವನ್ನ ಒಪ್ಪಿಕೊಂಡಿದೆ. ಪುಲ್ವಾಮಾ ದಾಳಿ ತನ್ನದೇ ಕೃತ್ಯ ಎಂದು ಪಾಕ್ ವಾಯು ಪಡೆಯ ಮುಖ್ಯಸ್ಥ ಸುದ್ದಿಗೋಷ್ಠಿಯಲ್ಲಿ ಒಪ್ಪಿಕೊಂಡಿರುವ ವಿಡಿಯೋ ಹರಿದಾಡುತ್ತಿದೆ. ಪುಲ್ವಾಮಾದಲ್ಲಿ ಸ್ಟಾಟರ್ಜಿಕ್ ಬ್ರಿಲಿಯನ್ಸ್​​​ ತೋರಿಸಿದ್ದೇವೆ ಅಂದರೆ ಆ ಭಯೋತ್ಪಾದಕ ದಾಳಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಭಾಗ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ…

Read More

ನವದೆಹಲಿ : ಕೊನೆಗೂ ಪಾಕಿಸ್ತಾನ ಕದನ ವಿರಾಮವನ್ನು ಘೋಷಿಸಿದೆ. ಪಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಹೀಗಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನದ ಮೇಲೆ ನಿರಂತರವಾಗಿ ಭಾರತ ದಾಳಿ ನಡೆಸಿದ್ದು ಇದೀಗ ಪಾಕಿಸ್ತಾನ ಕೊನೆಗೂ ಕದನ ವಿರಾಮ ಘೋಷಿಸಿದೆ. ಈ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಧಾರ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವು ಕದನ ವಿರಾಮಕ್ಕೆ ಸಿದ್ದರಿದ್ದೇವೆ ಎಂದು ತಿಳಿಸಿದ್ದಾರೆ.ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸಿದೆ ಎಂದು ಬರೆದುಕೊಂಡಿದ್ದಾರೆ. https://twitter.com/MIshaqDar50/status/1921175494633943541?t=MsqHt3Ee-DPS19hFLtEsvw&s=19

Read More