Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹಾಸನ : ಹಾಸನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಿಲ್ಲ ಏಕೆಂದರೆ ಕಳೆದ ಒಂದು ತಿಂಗಳಲ್ಲಿ ಇದುವರೆಗೂ ಹೃದಯಘಾತದಿಂದ 14 ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ಘಟನೆ ನಡೆದಿದ್ದು, ಹೃದಯಾಘಾತದಿಂದ ಕಾರು ಚಾಲಕ ಮಂಜುನಾಥ್ (51) ಇದೀಗ ಸಾವನ್ನಪ್ಪಿದ್ದಾರೆ. ಹೌದು ಹಾಸನ ನಗರದ ಪೆನ್ಷನ್ ಮೊಹಲ್ಲಾದ ನಿವಾಸಿಯಾಗಿರುವ ಮಂಜುನಾಥ್ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಖಾಸಗಿ ವೈದ್ಯರ ಕಾರು ಚಾಲಕನಾಗಿದ್ದ ಮಂಜುನಾಥ್ ಬುಧವಾರ ತಡರಾತ್ರಿ ಮನೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಂಜುನಾಥ್ ಆಸ್ಪತ್ರೆಗೆ ದಾಖಲಾಗಿದ್ದರು. ಇಸಿಜಿ ಮಾಡಿ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿ ಕರೆ ಮಾಡಿದ್ದಾರೆ. ಆದರೆ ವೈದ್ಯರು ಬರುವಷ್ಟರಲ್ಲಿ ಮಂಜುನಾಥ್ ಸಾವನಪ್ಪಿದ್ದಾರೆ. ಮಂಜುನಾಥ್ ಮೂಲತಹಃ ಆಲೂರು ತಾಲೂಕಿನ ಬಾವಿ ಕೊಪ್ಪಲು ಗ್ರಾಮದ ನಿವಾಸಿಯಾಗಿದ್ದರು. ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಹೃದಯಘಾತಕ್ಕೆ 15 ಜನರು ಬಲಿಯಾಗಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಶಿವಮೊಗ್ಗ : ಮೆಡಿಕಲ್ ಕಾಲೇಜಿನ ಪಿಜಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಗಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹ ಪ್ರಾಧ್ಯಾಪಕ ಹಾಗೂ ಶಸ್ತ್ರ ಚಿಕಿತ್ಸೆಕನಾಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಅಶ್ವಿನ್ ಅನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ನನ್ನು ಮಹಿಳಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಕೇಸ್ ನಲ್ಲಿ ಡಾ. ಅಶ್ವಿನ್ ಅರೆಸ್ಟ್ ಆಗಿದ್ದಾರೆ.ಲೈಂಗಿಕ ಕಿರುಕುಳ ಪ್ರಕರಣ ಸಿಮ್ಸ್ ಕಾಲೇಜಿನಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಜೂನ್ 20ರಂದು ಶಿವಮೊಗ್ಗದ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಕುರಿತಂತೆ ವಿದ್ಯಾರ್ಥಿನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಅಲ್ಲದೆ ಕಾಲೇಜು ವಿದ್ಯಾರ್ಥಿಗಳು ಎರಡು ದಿನ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದರು. ಸಂಘ ಸಂಸ್ಥೆಗಳು ಆರೋಪಿಯ ಬಂದನಕ್ಕೆ ಗಡುಗು ಸಹ ನೀಡಿದ್ದವು ಇದೀಗ ಬೆಂಗಳೂರಿನಲ್ಲಿ ಇಂದು ಡಾ. ಅಶ್ವಿನ್ ಅನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ವಿಜಯಪುರ : ಕಳೆದ ತಿಂಗಳು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಕೆನರಾ ಬ್ಯಾಂಕ್ ನಲ್ಲಿ ಬೆಲೆ ಬಾಳುವ ಚಿನ್ನಾಭರಣ ಹಾಗೂ ನಗದು ಹಣ ದರೋಡೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು, ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ವ್ಯವಸ್ಥಾಪಕ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವವರನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೆ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದರು. ಆರೋಪಿಗಳ ಬಳಿ ಇದ್ದ 10.75 ಕೋಟಿ ಮೌಲ್ಯದ…
ಬೆಂಗಳೂರು : ವಕ್ಫ್ ಕುರಿತಂತೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದೋಗೊಳಿಸಿ ಆದೇಶ ಹೊರಡಿಸಿದೆ. ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ವಕ್ಫ್ ಕುರಿತಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಚೋದನಕಾರಿ ಹೇಳಿಕೆಯ ಯಾವುದೇ ಅಂಶಗಳಿಲ್ಲ ಎಂದು ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿದರು. ಬಳಿಕ ಪ್ರಕರಣವನ್ನು ರದ್ದುಪಡಿಸಿ ನ್ಯಾ.ಎಸ್.ಆರ್ ಕೃಷ್ಣಕುಮಾರ್ ಅವರಿಂದ ಏಕ ಸದಸ್ಯ ಪೀಠ ಆದೇಶ ಹೊರಡಿಸಿತು.
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಧರಿಸುತ್ತಿರುವ ಬ್ರಿಟಿಷ್ ಕಾಲದ ಟೋಪಿ ಬದಲಾವಣೆಯ ಕಾಲ ಸನ್ನಿಹಿತವಾಗಿದೆ. ಟೋಪಿ ಬದಲಿಸುವಂತೆ ಹಲವು ವರ್ಷಗಳಿಂದಲೂ ಪೊಲೀಸ್ ಸಿಬ್ಬಂದಿ ಬೇಡಿಕೆಯಿಡುತ್ತಲೇ ಬಂದಿದ್ದರಾದರೂ ಇದುವರೆಗೂ ಬೇಡಿಕೆ ಈಡೇರಿಲ್ಲ. ಇದೀಗ ಹಳೆಯ ಮಾದರಿಯ ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್ ಕ್ಯಾಪ್ ನೀಡುವುದರ ಕುರಿತು ಚರ್ಚೆ ನಡೆಸಿ ನೂತನ ಕ್ಯಾಪ್ ಬಳಕೆಗೆ ಚಿಂತನೆ ನಡೆಸಲಾಗುತ್ತಿದೆ. ಹೌದು ಕರ್ನಾಟಕ ಪೊಲೀಸರ ಕ್ಯಾಪ್ ದಲಾವಣೆಗೆ ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ರಾಜ್ಯದಲ್ಲಿ ಸದ್ಯ ಪೊಲೀಸರು ಬಳಸುತ್ತಿರುವ ಕ್ಯಾಪ್ ಬದಲು ಮಾಡಲು ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸುತ್ತಿದೆ. ಹೊಸ ಮಾದರಿಯ ಪೊಲೀಸ್ ಕ್ಯಾಪ್ ಬಳಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹೊಸ ಪ್ರಸ್ತಾಪಿತ ಕ್ಯಾಪ್ ಅನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ವೀಕ್ಷಿಸಿದರು. ಬೇರೆ ರಾಜ್ಯಗಳ ಪೊಲೀಸರು ಬಳಸುತ್ತಿರುವ ಕ್ಯಾಪ್ ಗಳನ್ನು ಇದೇ ಸಂದರ್ಭದಲ್ಲಿ ವೀಕ್ಷಣೆ ಮಾಡಿದರು. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್…
ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಮೀಣ್ಯಂ ಬೀಟ್ನ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಸಾವನ್ನಪ್ಪಿದ್ದು, ಬುಧವಾರ ಬೆಳಕಿಗೆ ಬಂದಿದೆ. ಹುಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆ ಐವರನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಈ ವಿಚಾರವಾಗಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, 5 ಹುಲಿಗಳ ಸಾವು ಅತ್ಯಂತ ದುಃಖಕರ ಘಟನೆಯಾಗಿದೆ. ಹುಲಿಗಳ ಸಾವಿನ ಬಗ್ಗೆ ತನಿಖೆ ಈಗಾಗಲೇ ತಂಡ ರಚಿಸಿದ್ದೇವೆ. ಇನ್ನು ಮೂರು ದಿನಗಳಲ್ಲಿ ವರದಿ ಬರಲಿದೆ ಪ್ರಾಥಮಿಕ ಹಂತದಲ್ಲಿ ಗೊತ್ತಾಗಿರುವಂತೆ ವಿಷಪ್ರಾಶನ ಆಗಿರಬಹುದು. ಸತ್ತುಹೋದ ಹಸಿವಿನ ಮೇಲೆ ಯಾರೋ ವಿಷ ಹಾಕಿರಬಹುದು ಅದನ್ನು ಹುಲಿಗಳು ತಿಂದು ಮೃತಪಟ್ಟಿರಬಹುದು. ಹುಲಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರ…
ಕೇರಳ : ಕೇರಳದಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸುಮಾರು 40 ವರ್ಷದ ಹಳೆಯ ಕಟ್ಟಡ ಕುಸಿದು ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಕೇರಳದ ತ್ರಿಶೂರ್‌ನಲ್ಲಿ ವಲಸೆ ಕಾರ್ಮಿಕರನ್ನು ಹೊಂದಿದ್ದ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ಪಶ್ಚಿಮ ಬಂಗಾಳದ ರಾಹುಲ್ (19) ಮತ್ತು ರೂಪೆಲ್ (21) ಇಬ್ಬರೂ. ರೂಪೆಲ್ ಮೃತಪಟ್ಟಿರುವುದು ಕಂಡುಬಂದರೂ, ರಾಹುಲ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಪಶ್ಚಿಮ ಬಂಗಾಳ ಮೂಲದ ಅಲೀಮ್ (30) ಅವರ ಪತ್ತೆಗಾಗಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ, ಅವರು ಕಟ್ಟಡದಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ 14 ವಲಸೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಕಟ್ಟಡ ದುರ್ಬಲಗೊಂಡಿರಬಹುದುಪೊಲೀಸರ ಪ್ರಕಾರ, ಮೂವರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು ಅವರಲ್ಲಿ ಇಬ್ಬರನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
BIG NEWS : ಕಲಬುರ್ಗಿಯಲ್ಲಿ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ : ದೂರು ದಾಖಲು
ಕಲಬುರ್ಗಿ : ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಇಡಿ ರಾಜ್ಯದ್ಯಂತ ಎಲ್ಲಿ ಬೇಕಾದಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದೀಗ ಕಲ್ಬುರ್ಗಿ ಜಿಲ್ಲೆಯ ವಾಡಿಯಲ್ಲಿ ಕಂಡಕ್ಟರ್ ಒಬ್ಬರು ಮಹಿಳೆಗೆ ಆಧಾರ್ ಕಾರ್ಡ್ ತೋರಿಸಿ ಎಂದಿದ್ದಕ್ಕೆ ಆಕೆ ಸಂಬಂಧಿಕರು ಕಂಡಕ್ಟರ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ನಡೆದಿದೆ. ಹೌದು ನಿನ್ನೆ ಕಲಬುರಗಿ-ಯಾದಗಿರಿ ನಡುವೆ ಸಂಚರಿಸುತ್ತಿದ್ದ ಬಸ್‌ಗೆ ರಾವೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಹತ್ತಿದ್ದಾರೆ. ಟಿಕೆಟ್ ಪಡೆಯುವ ವೇಳೆ ಝರಾಕ್ಸ್ ಪ್ರತಿ ತೋರಿಸಿದ್ದಾರೆ. ಕಂಡಕ್ಟರ್ ಅರ್ಜುನ ನಾಗಪ್ಪ ಕಟ್ಟಿಮನಿ ಅವರು ಓರಿಜಿನಲ್ ತೋರಿಸಿ ಎಂದು ಹೇಳಿ, ಇತರರಿಗೆ ಟಿಕೆಟ್ ನೀಡಲು ಹೋಗಿದ್ದಾರೆ. ವಾಪಸ್ ಮಹಿಳೆ ಬಳಿ ಬಂದಾಗ, ಬೇರೆಯವರ ಆಧಾರ್ ಕಾರ್ಡ್ ತೋರಿಸಿದ್ದಾರೆ. ಇದರಿಂದ ಕೋಪಗೊಂಡ ಕಂಡಕ್ಟರ್ ಹಣ ಕೊಟ್ಟು ಟಿಕೆಟ್ ಪಡೆಯಿರಿ, ಇಲ್ಲವೇ ಬಸ್‌ನಿಂದ ಇಳಿಯಿರಿ ಎಂದಿದ್ದಾರೆ. ಹಣಕೊಟ್ಟು ಟಿಕೆಟ್ ಪಡೆದ ಮಹಿಳೆ, ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಘಟನೆ…
ಬೆಂಗಳೂರು : ಮೊದಲ ಬಾರಿ ಆರ್‌ಸಿಬಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದು ಈ ಹಿನ್ನೆಲೆಯಲ್ಲಿ ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಒಂದು ಕಾರ್ಯಕ್ರಮ ವೀಕ್ಷಿಸಲು ಆರ್‌ಸಿಬಿ ಅಭಿಮಾನಿಗಳು ಬಂದಾಗ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಕಮಿಷನರ್ ಬಿ ದಯಾನಂದ ಸೇರಿದಂತೆ ಹಲವು ಅಧಿಕಾರಿಗಳನ್ನು, ಸಸ್ಪೆಂಡ್ ಮಾಡಲಾಯಿತು, ಇದೀಗ ಅಮಾನತುಕೊಂಡಿರುವ ಬೆಂಗಳೂರು ಕಮಿಷನರ್ ಬಿ.ದಯಾನಂದ್ ವಿಚಾರಣೆಗೆ ಹಾಜರಾಗಿದ್ದಾಗ, ಉಚಿತ ಟಿಕೆಟ್ ಎಂದು ಘೋಷಣೆ ಮಾಡಿದ್ದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತು ಎಂದು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ವಿಚಾರಣೆಗೆ ಹಾಜರಾದ ದಯಾನಂದ್ ಅಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಘಟನೆ ನಡೆದ ದಿನ 21 ಗೇಟ್‌ಗಳಿಗೂ ನಾನೇ ಖುದ್ದಾಗಿ ಭೇಟಿ ನೀಡಿದ್ದೆ. ಸಂಪೂರ್ಣವಾಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು.ಪ್ರತಿ ಬಾರಿ ಐಪಿಎಲ್ ಮ್ಯಾಚ್ ನಡೆಯುವಾಗ ಇರುವಷ್ಟು ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಆದರೆ ಅಂದು ಗೇಟ್ ತೆಗೆಯಲು ತಡಮಾಡಿದ್ದರು. ಉಚಿತ ಟಿಕೆಟ್…
ಕೊಪ್ಪಳ : ತನ್ನ ಮೂರನೇ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿ ಬಸ್ನಲ್ಲಿ ಲಗೇಜ್ ಇದೆ ಎಂದು ಕಳುಹಿಸಿ ವಿಕೃತಿ ಮೆರೆದಿದ್ದ ವೃದ್ಧ ಬರೋಬ್ಬರಿ 23 ವರ್ಷದ ಬಳಿಕ ಪೊಲೀಸರ ಅತಿಥಿಯಾಗಿದ್ದಾನೆ. ಹೌದು ವೃದ್ಧನೊಬ್ಬ ತನ್ನ ಮೂರನೇ ಹೆಂಡತಿಯನ್ನು ಭೀಕರ ಬಗ್ಗೆ ಕೊಲೆ ಮಾಡಿದ್ದು ಅಲ್ಲದೆ ಬಸ್ನಲ್ಲಿ ಲಗೇಜ್ ಎಂದು ಶವ ಸಾಗಿಸಿ ಏನು ಆಗಿಲ್ಲವೆಂಬತ್ತೆ ಇದ್ದ ಆದರೆ ಇದೀಗ ರಾಯಚೂರು ಪೊಲೀಸರು ಆದರೆ ರಾಯಚೂರು ಪೊಲೀಸರು ವೃದ್ಧನನ್ನು ಅರೆಸ್ಟ್ ಮಾಡಿದ್ದಾರೆ. ವ್ಯಕ್ತಿಯೊಬ್ಬ ಇಳಿ ವಯಸ್ಸಿನಲ್ಲಿ ತನ್ನ ಮೂರನೇ ಹೆಂಡತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಲಗೇಜ್ ಎಂದು ಬಸ್ಸಿನಲ್ಲಿ ಕಳುಹಿಸಿ ಪರಾರಿಯಾಗಿದ್ದಲ್ಲದೆ, ತಲೆಮರೆಸಿಕೊಂಡು ಹಾಯಾಗಿದ್ದ! ಇದೀಗ ಕೃತ್ಯ ಎಸಗಿ 23 ವರ್ಷಗಳ ಬಳಿಕ ರಾಯಚೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಹಂತಕನ ಜಾಡು ಹಿಡಿದು ಶೋಧ ನಡೆಸಿದ ಪೊಲೀಸರು, ಕೊನೆಗೂ ಆತನನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರ ಜಿಲ್ಲೆಯ ಮಾನ್ವಿಯಲ್ಲಿ ಆರೋಪಿ 75 ವರ್ಷದ ಹುಸೇನಪ್ಪನನ್ನು ಬಂಧಿಸಲಾಗಿದೆ.…














