Author: kannadanewsnow05

ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹಗೆ ಅಯೋಗ್ಯ ಎಂಬ ಪದ ಬಳಸಿದ್ದರಿಂದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹೈಕೋರ್ಟ್ ಇದೀಗ ಮಾನನಷ್ಟ ಮೊಕದ್ದಮೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಹೌದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ಒಬ್ಬ ಅಯೋಗ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಾಗಿತ್ತು. ಇಂದು ಹೈಕೋರ್ಟ್ ಅಲ್ಲಿ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರದೀಪ್ ಈಶ್ವರ್ ಹೇಳಿದ್ದೇನು? ಅಯೋಧ್ಯಾ ಶ್ರೀ ರಾಮ ದೇವಸ್ಥಾನ ಉದ್ಘಾಟನೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸ್ಪೋಟಕ ಅಂಶ ಬಯಲಾಗಿದ್ದು, ಈ ಒಂದು ತರಕಾರಿಗಳಲ್ಲಿ ಲೋಹದ ಅಂಶ ಹಾಗೂ ವಿಷದ ಅಂಶಗಳು ಪತ್ತೆಯಾಗಿವೆ. ಈ ಹಿನ್ನೆಯಲ್ಲಿ ಸಮಗ್ರ ಅಧ್ಯಯನಕ್ಕೆ ಉನ್ನತ ಮಟ್ಟದ ಸಮೀತಿ ರಚನೆ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (Central Pollution Control Board-CPCB) ಸೂಚನೆ ನೀಡಿದೆ. ಹೌದು ಹೆವಿ ಮೆಟಲ್ಸ್ ಮತ್ತು ಕೀಟನಾಶಕಗಳ ಮಾದರಿಗಳ ಬಗ್ಗೆ ಎಫ್‌ಎಸ್‌ಎಸ್‌ಎಐ-ಅನುಮೋದಿತ ಪ್ರಯೋಗಾಲಯಗಳಲ್ಲಿ ಮಾತ್ರ ಅಧ್ಯಯನ ಕೈಗೊಳ್ಳಬೇಕು. ತರಕಾರಿಗಳಲ್ಲಿನ ಅವಶೇಷಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿರ್ದೇಶನ ಪ್ರಕಾರ, ಎಫ್‌ಎಸ್‌ಎಸ್‌ಎಐ ಸೂಚಿಸಿದ ಮಾನದಂಡಗಳೊಂದಿಗೆ ಮಾತ್ರ ಹೋಲಿಸಬೇಕು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಬೆಂಗಳೂರಿನ ತರಕಾರಿಗಳ ಸುಮಾರು 400 ಮಾದರಿಗಳ ಅಧ್ಯಯನ ನಡೆಸಿದ್ದ ಇಎಂಪಿಆರ್‌ಐ, ತರಕಾರಿಗಳಲ್ಲಿ ಕಬ್ಬಿಣ, ಕ್ಯಾಡ್ಮಿಯಮ್, ಸೀಸ ಮತ್ತು ನಿಕಲ್ ಅಂಶಗಳು ಆಹಾರ ಮತ್ತು ಕೃಷಿ ಸಂಸ್ಥೆಯು ಸೂಚಿಸಿದ ಮಿತಿಗಳಿಗಿಂತ ಹೆಚ್ಚಾಗಿದೆ ಎಂದು ಹೇಳಿತ್ತು. ಪರಿಸರ ನಿರ್ವಹಣಾ ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್‌ಐ) ನಡೆಸಿದ ಅಧ್ಯಯನದಲ್ಲಿ…

Read More

ಬೆಂಗಳೂರು : ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಸಿಪಿ ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೃಹತ್ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನಾಮಪತ್ರ ಸಲ್ಲಿಕೆಗೊ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್ ಅವರು, ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಅಂತ ಗೊತ್ತಿತ್ತು. ಪ್ರಾಮಾಣಿಕ ಪ್ರಯತ್ನ ಮಾಡಿದರು ಕೂಡ ಟಿಕೆಟ್ ಸಿಗಲಿಲ್ಲ. ನಾನು ಕಾಂಗ್ರೆಸ್ ಹಳೆಯ ಸದಸ್ಯ. ಮೊದಲೇ ಟಿಕೆಟ್ ಕೊಟ್ಟಿದ್ದರೆ ನಾನು ಯಾಕೆ ಕಾಂಗ್ರೆಸ್ ಸೇರಿಕೊಳ್ಳುತ್ತಿದ್ದೆ? ಟಿಕೆಟ್ ಕೊಟ್ಟಿದ್ದರೆ ಬಿಜೆಪಿಯಿಂದಲೇ ಸ್ಪರ್ಧಿಸುತ್ತಿದೆ. ಕೊನೆಯ ತನಕ ಕೂಡ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದೆ ಆದರೆ ಟಿಕೆಟ್ ಸಿಗಲಿಲ್ಲ ಎಂದು ತಿಳಿಸಿದರು. ನಿನ್ನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಸಿಪಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ.…

Read More

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಇದೀಗ ಇಂದು ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ದುರಂತದಲ್ಲಿ 8 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. 8 ಜನರನ್ನು ರಕ್ಷಣೆ ಮಾಡಲಾಗಿದೆ. ಆರು ಜನ ಗಾಯಗೊಂಡಿದ್ದು ಕೆಲವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರದಿಂದ ವೈದಿಕೀಯ ವೆಚ್ಚ ಭರಿಸಲಾಗುತ್ತದೆ. ಕಳಪೆ ಕಾಮಗಾರಿಯಿಂದ ಕಟ್ಟಡ ಬಿದ್ದಿದೆ ಮುಂದೆ ಈ ರೀತಿ ಘಟನೆ ಆಗದಂತೆ ಸೂಕ್ತವಾದಂತಹ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ನೋಟಿಸ್ ಕೊಡುವುದಕ್ಕೆ ಸೂಚನೆ ಕೊಟ್ಟಿದ್ದೇನೆ.ಎಂದು ಬಾಬುಸಾಬ್ ಪಾಳ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇದೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಬಿಜೆಪಿಯ ಭೈರತಿ ಬಸವರಾಜ್ ಕೂಡ ಇದ್ದರು. ಇದುವರೆಗೂ ಎನ್ ಡಿ ಆರ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಇದೀಗ ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಯ ಪರಿಣಾಮ ಕಾಡುಗೋಡಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ನೀರಿನ ಗುಂಡಿಗೆ ಬಿದ್ದು ಸುಹಾಸ್ ಗೌಡ (7) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕನ್ನಮಂಗಲದ ನಿರ್ಮಾಣ ಹಂತದ ಹಾಲಿನ ಡೈರಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.ಲಿಫ್ಟ್ ನಿರ್ಮಾಣಕ್ಕೆ ಅಗೆದಿದ್ದ ನೀರಿನ ಗುಂಡಿಗೆ ಬಿದ್ದು ದುರಂತ ಸಂಭವಿಸಿದೆ.ಆಟವಾಡುವಾಗುವ ನೀರಿನ ಗುಂಡಿಗೆ ಬಿದ್ದು ಸುಹಾಸ್ ಗೌಡ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ದೈನಿಕ ಸ್ಥಳೀಯ ಹವಾಮಾನ ಮುನ್ಸೂಚನೆಯ ಸೇವೆಯನ್ನು ಗ್ರಾಮ ಪಂಚಾಯತಿಗಳಿಗೆ ಒದಗಿಸುವ ಉಪಕ್ರಮಕ್ಕೆ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ಗುರುವಾರ ಚಾಲನೆ ನೀಡಲಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜತೆ ಸೇರಿ ಈ ಸೇವೆಯನ್ನು ಆರಂಭಿಸಲಾಗಿದೆ. ಪ್ರತಿ ಗಂಟೆಗೂ ಹವಾಮಾನದ ಪರಿಸ್ಥಿತಿ ಪರಿಶೀಲಿಸಲು ಇದು ನೆರವಾಗಲಿದ್ದು, ದೇಶದ ರೈತರು ಮತ್ತು ಗ್ರಾಮಸ್ಥರಿಗೆ ಲಾಭವಾಗಲಿದೆ ಎಂದು ಸಚಿವಾಲಯ ಬುಧವಾರ ತಿಳಿಸಿದೆ. ಚಾಲನೆ ಕಾರ್ಯಕ್ರಮದಲ್ಲಿ ಪಂಚಾಯತ್ ಸಚಿವ ರಾಜೀವ್ ರಂಜನ್ ಸಿಂಗ್ ಲಲನ್ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಭೂ ವಿಜ್ಞಾನಗಳ ಸಚಿವ ಜಿತೇಂದ್ರ ಸಿಂಗ್ ಭಾಗವಹಿಸಲಿದ್ದಾರೆ. ಸರ್ಕಾರದ 100 ದಿನಗಳ ಕಾರ್ಯಸೂಚಿ ಭಾಗವಾದ ಈ ಉಪಕ್ರಮವು ತಳಮಟ್ಟದ ಆಡಳಿತವನ್ನು ಬಲಪಡಿಸಲಿದೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪ್ರವರ್ತಿಸಲಿದೆ ಎಂದು ಸರ್ಕಾರ ಹೇಳಿದೆ.

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನವರು ಬಳ್ಳಾರಿ ಜೈಲಿನಲ್ಲಿದ್ದು, ತೀವ್ರ ಬೆನ್ನು ನೋವಿಗೆ ಒಳಗಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಕಳೆದ ಮಂಗಳವಾರ ಬಳ್ಳಾರಿ ಆಸ್ಪತ್ರೆಗೆ ದರ್ಶನ್ ಅವರನ್ನು ಪೊಲೀಸರು ಕರೆದುಕೊಂಡು ಹೋಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿಸಿದರು. ಇದೀಗ ದರ್ಶನ್ ಎಂಆರ್‌ಐ ಸ್ಕ್ಯಾನ್ ರಿಪೋರ್ಟ್ ಜೈಲಾಧಿಕಾರಿಗಳ ಕೈತಲುಪಿದೆ. ಮಂಗಳವಾರ ರಾತ್ರಿ ವಿಮ್ಸ್ ಆಸ್ಪತ್ರೆಯ ವೈದ್ಯರು ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿದ್ದರು. ಈ ವೇಳೆ ನಟ ದರ್ಶನ್ ಅವರ ಬೆನ್ನಿನ ಹಿಂಭಾಗದಲ್ಲಿ L5 ಹಾಗೂ S1ನಲ್ಲಿ ನೋವು ಕಂಡುಬಂದಿದೆ. ಈ ಕುರಿತು ರಾತ್ರಿಯೆ ಜೈಲಿಗೆ ಬಂದು L5 S1 ಸಮಸ್ಯೆಯ ಬಗ್ಗೆ ವೈದ್ಯರಿಂದ ಮನವರಿಕೆ ಮಾಡಲಾಗಿದೆ. ವೈದರ ವರದಿಯನ್ನು ಆಧರಿಸಿ ದರ್ಶನ್ ಕುಟುಂಬಸ್ಥರ ಜೊತೆ ಜೈಲಾಧಿಕಾರಿಗಳು ಚರ್ಚಿಸಿದ್ದಾರೆ. ವಿಜಯಲಕ್ಷ್ಮಿ ಜೊತೆಗೆ ಚರ್ಚಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ನಿರ್ಧಾರ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ನಾಳೆ ಪತ್ನಿ ವಿಜಯಲಕ್ಷ್ಮಿ, ಬಳ್ಳಾರಿ ಜೈಲಿಗೆ ಭೇಟಿ…

Read More

ಬೆಂಗಳೂರು : ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ದುರಂತದಲ್ಲಿ ಇದುವರೆಗೂ ಎಂಟು ಜನ ಕಾರ್ಮಿಕರು ಸಾವನಪ್ಪಿದ್ದಾರೆ ಈ ಒಂದು ಪ್ರಕರಣಕ್ಕೆ ಇದೀಗ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು ಹಳೇ ಕಟ್ಟಡದ ಮೇಲೆನೆ ಮಾಲೀಕ ಭುವನ್ ರೆಡ್ಡಿ ಹೊಸ ಕಟ್ಟಡ ನಿರ್ಮಾಣ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಹೌದು ಈ ಕುರಿತು ಕಳೆದ ಎರಡು ತಿಂಗಳ ಹಿಂದೆಯೇ ಬಿಬಿಎಂಪಿ ಆಯುಕ್ತರು, ಸೇರಿದಂತೆ ಸ್ಥಳೀಯ ಬಿಬಿಎಂಪಿ ಅಧಿಕಾರಿಗಳಿಗೆ ಇಲ್ಲಿನ ಸ್ಥಳೀಯರು ಪತ್ರ ಬರೆದಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಬಿ ಖಾತಾ ಇರುವ ಜಾಗದಲ್ಲಿ ಆರು ಅಂತಸ್ತಿನ ಕಟ್ಟಡ ಕಟ್ಟುತ್ತಿರೋದು, ಕಳಪೆ ಕಾಮಗಾರಿ ಕಟ್ಟಡ ಕಟ್ಟುತ್ತಿರುವ ಬಗ್ಗೆ ಸ್ಥಳೀಯರು ಪತ್ರ ಬರೆದು ಎಚ್ಚರಿಸಿದ್ದಾರೆ. ಆದರೆ ಅಧಿಕಾರಿಗಳು ಇದನ್ನು ನಿರ್ಲಕ್ಷಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಮಾಲೀಕ 40-60 ಅಡಿ ಅಂತಸ್ತಿನ ಕಟ್ಟಡವನ್ನು ಬಿ ಖಾತಾ ಜಾಗದಲ್ಲಿ ಖರೀದಿಸಿದ್ದಾರೆ.ಇವಳೆ ಗುತ್ತಿಗೆದಾರ ಮುನಿರಾಜು ಇದು ನಾನೇ ಕಟ್ಟಿದ್ದು ಗಟ್ಟಿಯಾಗಿದೆ ಎಂದು ಹೇಳಿದಾಗ ಮಾಲೀಕ ಇದರ ಮೇಲೇನೆ ನಾಲ್ಕು ಅಂತಸ್ತು ದಿನ…

Read More

ಬೆಂಗಳೂರು : ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಡೆದ ಕಟ್ಟಡ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಬುಸಾಬ್ ಪಾಳ್ಯಕ್ಕೆ ಕೆಲವೇ ಕ್ಷಣಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಒಂದು ಕಟ್ಟಡ ದುರಂತದಲ್ಲಿ ಇದುವರೆಗೂ 8 ಜನ ಕಾರ್ಮಿಕರು ಸಾವನ್ನಪ್ಪಿದ್ದು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಒಂದು ದುರಂತದಲ್ಲೇ ಮೃತಪಟ್ಟ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಅಧಿಕಾರಿಗಳು ಕೂಡ ಸಾಥ್ ನೀಡಲಿದ್ದಾರೆ. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.ನಂತರ ಅಲ್ಲಿಂದ ರಾಮನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇಂದು ಸಿ ಪಿ ಯೋಗೇಶ್ವರ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಇದೀಗ ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಯ ಪರಿಣಾಮ ಕಾಡುಗೋಡಿಯಲ್ಲಿ ಸುಹಾಸ್ ಗೌಡ (7) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.  ಲಿಫ್ಟ್ ನಿರ್ಮಾಣಕ್ಕೆ ಅಗದಿದ್ದ ನೀರಿನ ಗುಂಡಿಗೆ ಬಿದ್ದು ದುರಂತ ಸಂಭವಿಸಿದೆ. ಆಟವಾಡುವಾಗುವ ನೀರಿನ ಗುಂಡಿಗೆ ಬಿದ್ದು ಸುಹಾಸ್ ಗೌಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕೊಡುತಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More