Author: kannadanewsnow05

ಚಿಕ್ಕಮಂಗಳೂರು : ಜಾತ್ರೆಗೆ ಎಂದು ಬೈಕ್ ನಲ್ಲಿ ಹೊರಟಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಬಳಿ ಘಟನೆ ನಡೆದಿದೆ. ಮೃತರನ್ನು ಬಗ್ಗಬಳ್ಳಿಯ ಸಂಜು (26) ಹಾಗೂ ಪ್ರದೀಪ್ (30) ಎಂದು ತಿಳಿದುಬಂದಿದೆ. ಇಬ್ಬರು ಬೈಕ್ ಮೇಲೆ ಅಂತರಘಟ್ಟಮ್ಮ ಜಾತ್ರೆಗೆ ತರುತ್ತಿದ್ದರು. ಈ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಗಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸ್ವಪಕ್ಷದ ನಾಯಕರ ವಿರುದ್ಧವೆ ಅಪಸ್ವರ ಎತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಇದೀಗ ಕೇಂದ್ರ ಬಿಜೆಪಿಯ ಶಿಸ್ತು ಸಮೀತಿ ಶೋಕಾಸ್ ನೋಟಿಸ್ ನೀಡಿದ್ದು, 72 ಗಂಟೆಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.ಅಕಸ್ಮಾತ್ ಉತ್ತರಿಸದಿದ್ದರೆ ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆಯೂ ಯತ್ನಾಳ್ಗೆ ಶಿಸ್ತು ಸಮಿತಿ ನೋಟೀಸ್ ನೀಡಿತ್ತು. ಆಗ ಅವರು ನೀಡಿದ್ದ ಉತ್ತರ ತೃಪ್ತಿಕರವಾಗಿಲ್ಲ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು. ತಮ್ಮ ನಡವಳಿಕೆಯನ್ನು ತಿದ್ದುಕೊಳ್ಳುವುದಾಗಿ ಹೇಳಿದ್ದ ಯತ್ನಾಳ್, ಎಂದಿನಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು. ಇದೀಗ ಯತ್ನಾಳ್ ನೋಟೀಸ್ಗೆ ಯಾವ ಉತ್ತರ ನೀಡಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ. ಎಂದಿನಂತೆ ಅವರು ಅದೇ ವಿಜಯೇಂದ್ರ, ಯಡಿಯೂರಪ್ಪ, ಕುಟುಂಬ ರಾಜಕಾರಣ, ಹೊಂದಾಣಿಕೆ ಮತ್ತಿತರ ಕ್ಷಣಿಕ ಕಾರಣಗಳನ್ನು ನೀಡಿದರೆ, ಶಿಸ್ತು ಸಮಿತಿ ಸಹಿಸುವುದಿಲ್ಲ. ಬದಲಾಗಿ ಮುಲಾಜಿಲ್ಲದೆ, ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹಾಗಾಗಿ ಶೋಕಾಸ್ ನೋಟಿಸ್ ಗೆ ಮೂರು…

Read More

ಚಿತ್ರದುರ್ಗ : ನಿಧಿ ಪಡೆಯುವ ಆಸೆಯಿಂದಾಗಿ ಅಮಾಯಕ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಈ ಒಂದು ಕೊಲೆಗೆ ಸಂಬಂಧಿಸಿದಂತೆ ಜ್ಯೋತಿಷಿ ಸೇರಿದಂತೆ ಇಬ್ಬರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪ್ರಭಾಕರ್ (52) ಎಂದು ಗುರುತಿಸಲಾಗಿದೆ.ಪ್ರಭಾಕರ್ ಪರಶುರಾಂಪುರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುತ್ತಿದ್ದರು. ಕೊಲೆಗೈದ ಆರೋಪಿಯನ್ನು ಆನಂದ್ ರೆಡ್ಡಿ ಎಂದು ತಿಳಿದುಬಂದಿದೆ. ಈತ ಕುಂದುರ್ಪಿಯಲ್ಲಿ ಬಾರ್ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಆನಂದ ರೆಡ್ಡಿಗೆ ಪಾವಗಡದ ಜ್ಯೋತಿಷಿ ರಾಮಕೃಷ್ಣ, ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ಚಿನ್ನ ಸಿಗಲಿದೆ ಎಂದು ಹೇಳಿದ್ದ. ಹಾಗಾಗಿ ಅಮಾಯಕ ಪ್ರಭಾಕರ್‌ಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆರೋಪಿಯ ಬೈಕ್ ಡೀಟೈಲ್ ಪ್ರಕಾರ ಆತನನ್ನು ಪತ್ತೆ ಮಾಡಲಾಗಿದೆ. ಮಚ್ಚು ಹಾಗೂ ಬಟ್ಟೆಯನ್ನು ಪೊಲಿಸರು ಸೀಜ್ ಮಾಡಿದ್ದಾರೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.

Read More

ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ನಡು ರಸ್ತೆಯಲ್ಲಿಯೇ ನರ್ಸಿಂಗ್ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ನಗರದ ಶಂಕರೀಪುರಂನಲ್ಲಿ ಈ ಒಂದು ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಕೇರಳದ ಮೂಲದ ವಿದ್ಯಾರ್ಥಿಗಳು ಹಾಸನದಲ್ಲಿ ನರ್ಸಿಂಗ್ ಓದುತ್ತಿದ್ದಾರೆ. ಈ ವೇಳೆ ಬೆಲ್ಟ್, ಹೆಲ್ಮೆಟ್ ಹಿಡಿದು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ಗಲಾಟೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.ಸ್ಥಳೀಯ ಪುಂಡರನ್ನು ಕರೆದುಕೊಂಡು ವಿದ್ಯಾರ್ಥಿಗಳು ಈ ಗಲಾಟೆ ಮಾಡಿದ್ದಾರೆ.

Read More

ಮೈಸೂರು : ಮೈಸೂರು ನಗರದಲ್ಲಿ ನಿನ್ನೆ ರಾತ್ರಿ ನಡೆದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟದ ಘಟನೆ ಡಿಜೆ ಹಳ್ಳಿ, ಕೇಜೆ ಹಳ್ಳಿ ಮಾದರಿಯಲ್ಲಿ ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್.ಅಶೋಕ್ ಈ ಘಟನೆಯನ್ನು ಖಂಡಿಸಿದ್ದು, ನವೆಂಬರ್ ವರೆಗೆ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಅಲ್ಲಿವರೆಗೂ ಆದರೂ ಒಳ್ಳೆಯ ಆಡಳಿತ ಕೊಡಿ ಎಂದು ಆರ್ ಅಶೋಕ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನವೆಂಬರ್ ವರೆಗೆ ಮಾತ್ರ ಸಿಎಂ ಆಗಿರುತ್ತಾರೆ. ಅಲ್ಲಿವರೆಗೂ ಸಿಎಂ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಲಿ. ಒಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ ಎಂದು ಹಾಡಿನ ಮೂಲಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರ ಕಾಲು ಎಳೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಆಗೋದು ಬಿಟ್ಟು ಆಡಳಿತದತ್ತ ಗಮನಹರಿಸಬೇಕು ಎಂದು ಇದೆ ವೇಳೆ ತಿಳಿಸಿದರು.

Read More

ಕಲಬುರಗಿ : ಗಂಡ ಹೆಂಡತಿಯ ಮಧ್ಯೆ ಗಲಾಟೆ ಸಂಭವಿಸಿದ ಹಿನ್ನೆಲೆಯಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿದಾಗ ಮನನೊಂದ ಗೃಹಿಣಿ ಓರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ತಾಲೂಕಿನ ಮಾಡಬೂಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿಪ್ಪಾಣಿ ಗ್ರಾಮದ ಸುಜಾತ ತಳವಾರ (28) ಆತ್ಮಹತ್ಯೆ ಮಾಡಿಕೊಂಡಂತಹ ಗೃಹಿಣಿ ಎಂದು ತಿಳಿದುಬಂದಿದೆ. ಸುಜಾತ ಪತಿ ಸಿದ್ದು ಜೊತೆಗೆ ಜಗಳವಡಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ಲಾರಿ ಚಾಲಕನಾಗಿರುವ ಸಿದ್ದು ಮದ್ಯಪಾನ ಮಾಡಿ ಪತ್ನಿ ಜೊತೆ ಗಲಾಟೆ ಮಾಡಿಕೊಂಡಿರುವ ಪರಿಣಾಮ ಮನೆಯಲ್ಲಿ ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಆಕೆಯ ಗಂಡ ಸಿದ್ದು ಕೊಲೆ ಮಾಡಿ ನೇಣು ಹಾಕಿರುವುದಾಗಿ ಸಂಬಂಧಿಕರು ಆರೋಪ ಮಾಡಿದ್ದಾರೆ. ಈ ಒಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರಿತು ಮಾಡಬೂಳ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Read More

ಚಾಮರಾಜನಗರ : ಇದೇ ಫೆಬ್ರವರಿ 17ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿತ್ತು. ಆದರೆ ಇದೀಗ ಕಾರಣಾಂತರಗಳಿಂದ ಈ ಒಂದು ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಹೌದು ಫೆಬ್ರವರಿ 17 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಇದೀಗ ಮುಂದೂಡಲಾಗಿದೆ. ಅಲ್ಲದೇ ಫೆಬ್ರವರಿ 16ರಂದು ನಿಗದಿಯಾಗಿದ್ದ ಫಲಾನುಭವಿಗಳ ಸಮಾವೇಶವ ಕೂಡ ಇದೀಗ ಮುಂದೂಡಲಾಗಿದೆ. ಚಾಮರಾಜನಗರದಲ್ಲಿ ನಿಗದಿಯಾಗಿದ್ದ ಫಲಾನುಭವಿಗಳ ಸಮಾವೇಶ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸಂಪುಟ ಸಭೆ ಸಮಾವೇಶಕ್ಕೆ ಚಾಮರಾಜನಗರ ಜಿಲ್ಲಾ ಆಡಳಿತ ಸಿದ್ಧತೆ ನಡೆಸಿತ್ತು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರೂ ರೌಡಿಶೀಟರ್ ಗಳನ್ನು ಅರೆಸ್ಟ್ ಮಾಡಲಾಗಿದ್ದು, ಬಂಧಿತರನ್ನು ಯೂಸುಫ್ ಶರೀಫ್ ಹಾಗೂ ಜಾಫರ್ ಸಾಧಿಕ್ ಅಲಿಯಾಸ್ ಚಪ್ಪರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.5 ಲಕ್ಷ ಮೌಲ್ಯದ 1.854 ಗ್ರಾಂ ಗಾಂಜಾ, 1 ಮೊಬೈಲ್ ಮತ್ತು 1 ಬೈಕ್ ಅನ್ನು ಜಪ್ತಿ ಮಾಡಿದ್ದಾರೆ. ಭವಾನಿ ನಗರದಲ್ಲಿ ಗಾಂಜಾ ಮಾರುತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಯೂಸುಫ್ ಶರೀಫ್ ನನ್ನ ಪೊಲೀಸರು ಬಂಧಿಸಿದ್ದಾರೆ. ನಂತರ A1 ಆರೋಪಿ ಯುಸುಫ್ ಮಾಹಿತಿ ಆಧಾರದ ಮೇಲೆ A2 ಆರೋಪಿ ಜಾಫರ್ ಸಾಧಿಕನ್ನು ಅರೆಸ್ಟ್ ಮಾಡಿದ್ದಾರೆ. ಯೂಸುಫ್ ಶರೀಫ್ ವಿರುದ್ಧ ಹೊರ ರಾಜ್ಯಗಳಲ್ಲಿ 3 ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ಎಂದು ತಿಳಿದುಬಂದಿದೆ. A2 ಜಾಫರ್ ಸಾಧಿಕ್ ವಿಧಾನಸೌಧ ಠಾಣಾ ವ್ಯಾಪ್ತಿಯ ರೌಡಿಶೀಟರ್ ಎಂದು ತಿಳಿದುಬಂದಿದೆ. ಜಾಫರ್ ಸಾಧಿಕ್ ವಿರುದ್ಧ ಕೂಡ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳಿವೆ ಸದ್ಯ ಇಬ್ಬರನ್ನು…

Read More

ಕೊಡಗು : ಇನ್ನೇನು ಕೆಲವೇ ತಿಂಗಳಲ್ಲಿ ಆಹಾರ ಇಲಾಖೆಯಲ್ಲಿ ಸೇವಿ ಸಲ್ಲಿಸುತ್ತಿದ್ದ ವ್ಯಕ್ತಿ ಒಬ್ಬರು ನಿವೃತ್ತಿಯಾಗುವ ಸಮಯದಲ್ಲಿ ತೀರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಹೌದು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಹೃದಯಾಘಾತದಿಂದ ಆಹಾರ ಇಲಾಖೆಯ ಡಿಡಿ ಸಾವನಪ್ಪಿದ್ದಾರೆ. ಕಚೇರಿಗೆ ತೆರಳುವಾಗ ಶ್ರೀಧರ್ಮೂರ್ತಿ (59) ಎನ್ನುವವರು ಕೊನೆಯುಸಿರೆಳೆದಿದ್ದಾರೆ. ಶ್ರೀಧರ್ ಮೂರ್ತಿ ಕೆಲವೇ ತಿಂಗಳಲ್ಲಿ ನಿವೃತ್ತಿಯಾಗುವವರಿದ್ದರು. ಇದೇ ವೇಳೆ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ.

Read More

ಬೆಂಗಳೂರು : ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕಿಂತ ದೇಶ ದೊಡ್ಡದು. ಪಕ್ಷಕ್ಕಿಂತ ಯಾರು ಮುಖ್ಯರಲ್ಲ ಮುಂದಿನ 20 ವರ್ಷಗಳ ನಾಯಕತ್ವಕ್ಕಾಗಿ ಬಿ ವೈ ವಿಜಯೇಂದ್ರ ಅಧ್ಯಕ್ಷ ಮಾಡಿದ್ದು ಯಡಿಯೂರಪ್ಪ ವಿಜಯೇಂದ್ರರನ್ನು ಟೀಕಿಸಿದಂತೆ ಪಕ್ಷ ಟೀಕಿಸಿದಂತೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ಕಿಡಿ ಕಾರಿದರು. ಶಾಸಕ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿರುವ ವಿಚಾರವಾಗಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ನೋಟಿಸ್ ಏನು ಅಲ್ಲವೆಂದು ಕೆಲವರು ಮಾತನಾಡಿದ್ದಾರೆ. ರಾಜ್ಯದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲರ ಹೇಳಿಕೆಯನ್ನು ಗಮನಿಸುತ್ತಾರೆ. ಯಾವ ಸಂದರ್ಭದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ನೋಡುತ್ತಾರೆ ಎಂದರು.ನಾಳೆ ನಾವು ಸಭೆ ನಡೆಸಬೇಕು ಎಂದಿದ್ದೆವು. ಯಡಿಯೂರಪ್ಪ ರಾಜ್ಯ ಬಿಜೆಪಿ ಅಧ್ಯಕ್ಷರು ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ನಾಳಿನ ಸಭೆಯನ್ನು ರದ್ದು ಮಾಡಿದ್ದೇವೆ. ನಮ್ಮ ಉದ್ದೇಶ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಒಂದಾಗಬೇಕು ಎಂಬುದಾಗಿದೆ. ರಾಜ್ಯಾಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಸಂಘಟನೆಗೆ ಕೈಜೋಡಿಸಬೇಕು ರಾಷ್ಟ್ರೀಯ…

Read More