Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಬುರ್ಗಿಯಲ್ಲಿ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿದ್ದಾನೆ. ಕಲ್ಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಬಳಿ ಬಾಲಕರದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಪ್ರವಹಿಸಿ ಬಾಲಕ ಸಾವನಪ್ಪಿರುವ ಘಟನೆ ನಡೆದಿದೆ. ನಗರದ ಬಸವ ನಗರದ ಕಮಲರಾಜ್ (14) ಎನ್ನುವ ಬಾಲಕ ಸಾವನಪ್ಪಿದ್ದಾನೆ. ರಸ್ತೆ ದಾಟುವ ವೇಳೆ ರಸ್ತೆ ಮಧ್ಯ ಅಳವಡಿಸಿದ್ದ ವಿದ್ಯುತ್ ಕಂಬದ ಬಳಿ ಹೋದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಕಬ್ಬಿಣದ ರಾಡಿಗೆ ಅಂಟಿಕೊಂಡಿದ್ದ ವಿದ್ಯುತ್ ತಂತಿ ಹಿಡಿದಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ವಿದ್ಯುತ್ ಪ್ರವಹಿಸಿ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದ ಕಲಬುರ್ಗಿ ಪಾಲಿಕೆಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇದೀಗ ಸಾರ್ವಜನಿಕರು ಕಲ್ಬುರ್ಗಿ ಪಾಲಿಕೆಯ ನಿರ್ಲಕ್ಷತನಕ್ಕೆ ಬಾಲಕ ಸಾವಿನ ಪಿದ್ದಾನೆ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಬಿಎಂಆರ್ಸಿಎಲ್ ಮಾಹಿತಿಯ ಪ್ರಕಾರ ಕೇವಲ ಒಂದೇ ದಿನದಲ್ಲಿ 9 ಲಕ್ಷಕ್ಕೂ ಅಧಿಕ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ನಿರ್ವಹಣಾ ವೆಚ್ಚ ಕೂಡ ಹೆಚ್ಚಾದ ಹಿನ್ನೆಲೆಯಲ್ಲಿ ಬರುವ ಹೊಸ ವರ್ಷಕ್ಕೆ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಹೌದು ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಪರಾಮರ್ಶೆ ನಡೆಸಲು ಬಿಎಂಆರ್ಸಿಎಲ್ ಸಮಿತಿ ರಚನೆ ಮಾಡಿತ್ತು. ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಅಕ್ಟೋಬರ್ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಈ ತಿಂಗಳ 3 ನೇ ವಾರದಲ್ಲಿ ಬಿಎಂಆರ್ಸಿಎಲ್ಗೆ ಸಲ್ಲಿಸಲಿದೆ. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್ಸಿಎಲ್ ಸರ್ಕಾರಕ್ಕೆ ಸಲ್ಲಿಸಲಿದೆ. ಮೆಟ್ರೋ ಟಿಕೆಟ್ ದರ ಶೇ 15 ರಷ್ಟು ಹೆಚ್ಚಳಕ್ಕೆ ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದಲ್ಲಿ…
ಚಿಕ್ಕಮಗಳೂರು : ಚಿಕ್ಕಮಂಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದು ಮತ್ತು ನಾಳೆ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಧ್ಯ ಮಾರಟಣಿ ಶಶಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶಿಸಿದ್ದಾರೆ. ಚಿಕ್ಕಮಂಗಳೂರು ಕಡೂರು ಮೂಡಿಗೆರೆ, ಕೊಪ್ಪ ಹಾಗೂ ಎನ್ ಆರ್ ಪುರ ತರೀಕೆರೆ ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಮಧ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದೆ ವಿ ಎಚ್ ಪಿ ಬಜರಂಗದಳ ನೇತೃತ್ವದಲ್ಲಿ ಈ ಒಂದು ದತ್ತ ಜಯಂತಿ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಮಧ್ಯ ಮಾರಾಟ ಬಂದ್ ಮಾಡಲಾಗಿದೆ. ಚಿಕ್ಕಮಂಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ದತ್ತ ಜಯಂತಿ ಅಂಗವಾಗಿ ಇಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ನಾಳೆ ದತ್ತ ಮಾಲಾಧಾರಿಗಳು, ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ…
ಬೆಳಗಾವಿ : ಇತ್ತೀಚಿಗೆ ದೇಶ ಹಾಗೂ ರಾಜ್ಯದಲ್ಲಿ ಡಿಜಿಟಲ್ ವಂಚನೆ ಹಾಗೂ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ ಈ ಕುರಿತು ಸಾರ್ವಜನಿಕರಿಗೆ ವಾಟ್ಸಾಪ್, ಫೇಸ್ ಬುಕ್ ಹಾಗೂ ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದೆ. ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು,…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಯಲಹಂಕ ನ್ಯೂಟೌನ್ನ ಬಯಲು ಬಸವೇಶ್ವರ ದೇವಸ್ಥಾನದ ಸಮೀಪದ ಫ್ಯಾಕ್ಟರಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಡಿ.9 ರಂದು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಜೋಡಿ ಕೊಲೆ ನಡೆದಿತ್ತು. ಬಿಕ್ರಂ ಸಿಂಗ್ ಮತ್ತು ಚೋಟೋ ತೂರಿ ಕೊಲೆಗೀಡಾಗಿದ್ದರು. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಗೆಳತಿಗೆ ಇವರು ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡುತ್ತಿದ್ದರಿಂದ ಮನನೊಂದು ಇವರಿಬ್ಬರನ್ನು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಲವರ್ ಗೆ ಮೆಸೇಜ್ ಮಾಡಿದಕ್ಕೆ ಮರ್ಡರ್! ಮೊದಲ ಆರೋಪಿಯ ಗೆಳತಿಗೆ ಕೊಲೆಯಾದ ಬಿಕ್ರಂ ಸಿಂಗ್ ಆಗಾಗ ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡುತ್ತಿದ್ದ. ಇವರೆಲ್ಲರೂ ಪರಿಚಯಸ್ಥರು ಹಾಗೂ ನೇಪಾಳದವರು. ರಕೂನ್ ಸಂಸ್ಥೆಯಲ್ಲಿ ಬಿಕ್ರಂ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡ್ತಿದ್ದ. ಅಲ್ಲಿಯೇ ಹಳೆಯ ಕಟ್ಟಡದಲ್ಲಿ ತನ್ನ ವಸತಿ ಪಡೆದುಕೊಂಡಿದ್ದ. ಇನ್ನೊಬ್ಬ ಚೋಟೋ ತೂರಿ ಎಂಬಾತ ವೆಂಕಟೇಶ್ವರ ಟೆಕ್ಸ್ಟೈಲ್ಸ್ನಲ್ಲಿ ಡ್ರೈವಿಂಗ್ ಕೆಲಸ…
ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಒಂದು ಹೇಳಿಕೆಗೆ ಸದನದಲ್ಲಿ ಭಾರಿ ಕೋಲಾಹಲ ಗಲಾಟೆ ಉಂಟಾಗಿ ಸದನ ಮುಂದೂಡಲಾಯಿತು.ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಕಾಶಪ್ಪನವರ ಅವರು, ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್, ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಕ್ ಮಾಡುವ ಹಾಗಾಯಿತು. ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್ಎಸ್ಎಸ್ನವರು. ಪೊಲೀಸರ ಮೇಲೆ ಕಲ್ಲು ತೂರಲು ಪ್ರವೋಕ್ ಮಾಡಿದ್ದು ಸ್ವಾಮೀಜಿ. ಸಮಾಜವನ್ನ ಕಟ್ಟುವ ಕೆಲಸ ನಮಗೆ ಗೊತ್ತಿದೆ ಎಂದು…
ಕೋಲಾರ : ಮುರುಡೇಶ್ವರ ಬೀಚ್ ನಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆ ಹೋದಾಗ ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿಯರ ತವರೂರಿಗೆ ಅವರ ಮೃತದೇಹಗಳನ್ನು ರವಾನಿಸಲಾಗಿದೆ. ಈಗ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗುಟ್ಟಳ್ಳಿ ಗ್ರಾಮದ ವಂದನಾ ಎಂಬ ವಿದ್ಯಾರ್ಥಿನಿ ವೈದ್ಯೆಯಾಗಿ ತನ್ನ ತಾಯಿಯನ್ನು ಸಾಕುವ ಕನಸು ಹೊತ್ತಿದ್ದಳು. ಆದರೆ ಮುಡೇಶ್ವರದಲ್ಲಿ ನಡೆದ ಆ ಒಂದು ಘಟನೆ ಅವಳ ಜೀವವನ್ನೇ ಬಲಿ ಪಡೆಯಿತು. ಹೌದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗುಟ್ಟಳ್ಳಿ ನಿವಾಸಿಯಾದ ವಂದನಾ ಸಹೋದರಿ ಚಾಂದನಿ ಈ ಕುರಿತು ಹೇಳಿಕೆ ನೀಡಿದ್ದಾಳೆ. ಪ್ರವಾಸಕ್ಕೆ ಹೊರಡುವ ಒಂದು ವಾರ ಮೊದಲು ಅಪರಿಚಿತ ವಿದ್ಯಾರ್ಥಿನಿಯರ ಕೊಠಡಿಗೆ ನುಗ್ಗಿದ್ದ. .ಕೊತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅಪರಿಚಿತ ಒಬ್ಬ ನುಗ್ಗಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಬಳಿ ಇರುವ ಮೊರಾರ್ಜಿ ವಸತಿ ಶಾಲೆ ಹೆಣ್ಣು ಮಕ್ಕಳ ಕೊಠಡಿಗೆ ಅಪರಿಚಿತ ನುಗ್ಗಿದ್ದರ ಬಗ್ಗೆ ಪ್ರಾಂಶುಪಾಲೇಗೆ ದೂರು ನೀಡಲಾಗಿತ್ತು.…
ಕೋಲಾರ : ಕಳೆದ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅದರಲ್ಲಿ ಬದುಕುಳಿದು ಬಂದಂತಹ ವಿದ್ಯಾರ್ಥಿನಿಯಾದ ಪಲ್ಲವಿ ಸಮುದ್ರದ ಅಲೆಗಳ ಹೊಡೆತಕ್ಕೆ ನಾವು ನಾಲ್ಕಲ್ಲ 15 ಜನರು ಮುಳುಗಿ ಹೋಗಿ ಸಾಯುತ್ತಿದ್ದೆವು ಎಂದು ಕಣ್ಣೆದುರಿಗೆ ನಡೆದ ನೈಜ ಘಟನೆ ವಿವರಿಸಿದ್ದಾಳೆ. ಮಾಧ್ಯಮಗಳೊಂದಿಗೆ ಮಾತನಾಡಿದ ಆಕೆ, ದೊಡ್ಡ ದೊಡ್ಡ ಅಲೆಗಳಿಗೆ 15 ಜನರು ಸಮುದ್ರದ ಅಲೆಗಳ ಮಧ್ಯ ಸಿಲುಕಿಕೊಂಡಿದ್ದರು. ಈ ವೇಳೆ ನಾವು ನಾಲ್ವರು ಅಲ್ಲ ಸುಮಾರು 15 ಜನರು ಸಿಲುಕಿಕೊಂಡಿದ್ದೆವು. ಕೂಡಲೇ ಅಲ್ಲಿದ್ದ ಸ್ಥಳೀಯ ಲೈಫ್ ಗಾರ್ಡ್ಸ್ ಸಿಬ್ಬಂದಿ ಹಾಗೂ ಶಿಕ್ಷಕರು ಉಳಿದವರನ್ನು ಕಾಪಾಡಿದರು ಆದರೆ ನಾಲ್ವರು ಮಾತ್ರ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳಿಗೆ ವಿದ್ಯಾರ್ಥಿನಿ ಪಲ್ಲವಿ ಮಾಹಿತಿ ನೀಡಿದ್ದಾಳೆ. ಅಲ್ಲದೆ ಇಂದು ಮೃತ ನಾಲ್ವರು ವಿದ್ಯಾರ್ಥಿನಿಯರ ಮೃತದೇಹಗಳು ಸ್ವ ಗ್ರಾಮಕ್ಕೆ…
ಬೆಂಗಳೂರು : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇದೀಗ ಹೈಕೋರ್ಟ್ ರದ್ದುಗೊಳಿಸಿದೆ. ಹೌದು 2022 ನವೆಂಬರ್ 9 ರಂದು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ವಕೀಲ ದಿಲೀಪ್ ಕುಮಾರ್ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದರು. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಂದು ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣವನ್ನು ರದ್ದುಗೊಳಿಸಿದೆ. ಸತೀಶ್ ಜಾರಕಿಹೊಳಿ ಹೇಳಿದ್ದೇನು? ‘ಹಿಂದೂ’ ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಸಚ್ಚುವ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿರುವುದು ವಿವಾದಕ್ಕೀಡಾಗಿದೆ. ಹಿಂದೂ ಎಂಬ ಪದ ಇದು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ?…
ಚಿಕ್ಕಬಳ್ಳಾಪುರ : ಹಣಕಾಸಿನ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆ ನಡೆದು, ಸ್ನೇಹಿತನೊಬ್ಬ ತನ್ನ ಇನ್ನೊಬ್ಬ ಸ್ನೇಹಿತನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಆರ್ಟಿಓ ಕಚೇರಿ ಬಳಿ ಒಂದು ಕೃತ್ಯ ನಡೆದಿದೆ. ಬೆಂಗಳೂರು ಮೂಲದ ಆನಂದ್ ಎನ್ನುವವನಿಗೆ ಸುರೇಶ ಎನ್ನುವ ಸ್ನೇಹಿತ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಗಾಯಾಳು ಆನಂದನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೇವರಬಿಸನಹಳ್ಳಿಯ ಆದರ್ಶ ಟ್ರೀ ಫಾರಂನಲ್ಲಿ ಇವರಿಬ್ಬರು ಚಾಲಕರಾಗಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಸಪ್ಪಂಗಿಹಳ್ಳಿಗೆ ಆನಂದ ಮತ್ತು ಸುರೇಶ್ ಬಂದಿದ್ದರು. ಈ ವೇಳೆ ಚಂದ್ರು ಮನೆಗೆ ತೆರಳುತ್ತಿದ್ದಾಗ ಆನಂದಗೆ ಸುರೇಶ ಚಾಕು ಇರದಿದ್ದಾನೆ ಹಣಕಾಸು ವಿಚಾರವಾಗಿ ಜಗಳವಾಗಿ ಚಾಕು ಇರಿದಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನೆ ಕುರಿತಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













