Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಚನ್ನಪಟ್ಟಣ ಉಪಚುನಾವಣೆಯ ಪ್ರಚಾರಕ್ಕೆ ಎಚ್ ಡಿ ದೇವೇಗೌಡರು ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಕರೆ ಮಾಡಿ ಕರೆದರೂ ಕೂಡ ಅವರು ಬಂದಿಲ್ಲ ಎಂದು ಶಾಸಕ ಸಾರಾ ಮಹೇಶ್ ತಿಳಿಸಿದ್ದರು. ಇವರ ಈ ಒಂದು ಹೇಳಿಕೆಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ತಿರುಗೇಟು ನೀಡಿದ್ದು, ಉಪಚುನಾವಣೆಯ ಪ್ರಚಾರಕ್ಕೆ ಎಚ್ ಡಿ ದೇವೇಗೌಡರು ನನ್ನನ್ನು ಕರೆದೇ ಇಲ್ಲ. ಒಂದು ವೇಳೆ ಕರೆದಿದ್ದೇನೆ ಎಂದು ಹೇಳಿದರೆ ಈಗಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರಕ್ಕೆ ದೇವೇಗೌಡರು ನನ್ನನ್ನು ಕರೆದಿಲ್ಲ. ಸಾರ ಮಹೇಶ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿ ಚಾಮುಂಡಿ ಬೆಟ್ಟಕ್ಕೆ ಬಾ ಅಂದರೆ ಆಗುತ್ತಾ? ಈ ಹಿಂದೆ ವಿಶ್ವನಾಥ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ಹೋದರು ಅವರ ಕಥೆ ಏನಾಯ್ತು? ಆ ಕಥೆ ನನಗೂ ಆಗಬೇಕಾ? ನಾನು ಹೇಳುತ್ತಿರುವುದೇ ಸತ್ಯ. ನಾನು ತಪ್ಪು ಮಾಡಿದ್ದರೆ ಅದನ್ನು ಒಪ್ಪಿಕೊಳ್ಳುತ್ತೇನೆ. ಒಂದು ಬಾರಿ ಯಾವುದೋ ತಪ್ಪು…
ಬೆಂಗಳೂರು : ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಂಡಾಯವೆದಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಇದೀಗ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಶಿಗ್ಗಾವಿ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಅಜ್ಜಂಪಿರ್ ಖಾದ್ರಿಗೆ ಬಿಗ್ ಗಿಫ್ಟ್ ಸಿಕ್ಕಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷರಾಗಿ ಇದೀಗ ಖಾದ್ರಿ ಇದೀಗ ನೇಮಕಗೊಂಡಿದ್ದಾರೆ. ಶಿಗ್ಗಾವಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಿಎಂ ಸಿದ್ದರಾಮಯ್ಯ ಬಂಡಾಯವೇದಿದ್ದ ಅಜ್ಜಂಪಿರ್ ಖಾದ್ರಿಗೆ ಭರವಸೆ ನೀಡಿದ್ದರು. ಹೀಗಾಗಿ ಖಾದ್ರಿಗೆ ಹುದ್ದೆ ನೀಡಿ ಸಿಎಂ ಸಿದ್ದರಾಮಯ್ಯ ಮಾತು ಉಳಿಸಿಕೊಂಡಿದ್ದಾರೆ. ಹೀಗಾಗಿ ಅಜ್ಜಂಪೀರ್ ಖಾದ್ರಿಗೆ ಸಿಎಂ ಸಿದ್ದರಾಮಯ್ಯ ಪ್ರಮುಖವಾದ ಹುದ್ದೆ ನೀಡಿ ಇದೀಗ ಮಾತು ಉಳಿಸಿಕೊಂಡಿದ್ದಾರೆ. ಇನ್ನು ಶಿಗ್ಗಾವಿ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಪಠಾಣ್ ಖಾನ್ ಸ್ಪರ್ಧಿಸಿ ಭರತ್ ಬೊಮ್ಮಾಯಿ ವಿರುದ್ಧ ಗೆದ್ದಿದ್ದಾರೆ.
ಮಂಡ್ಯ : ಸಾಮಾನ್ಯವಾಗಿ ಚಿನ್ನಾಭರಣ ಆಗಿರಲಿ ಅಥವಾ ನಗದು ಹಣವಾಗಿರಲಿ ಯಾವುದೇ ವಸ್ತುಗಳನ್ನು ಕಳ್ಳರು ಕದ್ದರು ಸಹ, ಕಳೆದುಕೊಂಡವರು ಅದರ ಮೇಲಿನ ಆಸೆ ಬಿಡಬೇಕು. ಆದರೆ ಮಂಡ್ಯದಲ್ಲಿ ವಿಚಿತ್ರವಾದಂತಹ ಘಟನೆ ನಡೆದಿದ್ದು, ಚಿನ್ನಾಭರಣ ಕದ್ದಂತಹ ಕಳ್ಳರು ಪ್ರಾಮಾಣಿಕವಾಗಿ ಎಲ್ಲಿಂದ ಕದ್ದರೋ ಅಲ್ಲಿಯೇ ಮರಳಿ ಇಟ್ಟಿರುವ ಘಟನೆ ನಡೆದಿದೆ. ಹೌದು ರಾಗಿಮುದ್ದನಹಳ್ಳಿ ಗ್ರಾಮದ ಸಿದ್ದೇಗೌಡ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆ ದೇವರ ಪೂಜೆಗೆ ಹೋಗಿದ್ದ ವೇಳೆ ಕಳ್ಳತನ ನಡೆದಿತ್ತು. ಮನೆಯ ಹೆಂಚುಗಳನ್ನ ತೆಗೆದು ಒಳನುಗ್ಗಿದ್ದ ಕಳ್ಳರು, ಬೀರುವನ್ನ ಹೊಡೆದು ಕಳ್ಳತನ ಮಾಡಿದ್ದರು. 50 ಗ್ರಾಂ ಚಿನ್ನದ ಸರ, 10 ಗ್ರಾಂ ಚೈನ್, 15 ಗ್ರಾಂ ಮೂರು ಜೊತೆ ಓಲೆಗಳನ್ನು ಕದಿದ್ದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಗೆ ಸಿದ್ದೇಗೌಡ ದೂರು ನೀಡಿದ್ದರು. ಯಾವಾಗ ಪೊಲೀಸರಿಗೆ ದೂರು ಹೋಯಿತೋ ಕೂಡಲೇ ಪೊಲೀಸರಿಗೆ ಹೆದರಿ ಕದ್ದ ಚಿನ್ನಾಭರಣಗಳನ್ನು ಕಳ್ಳರು,ದೂರು ನೀಡಿದ ಎರಡು ದಿನಗಳ ನಂತರ ಕಳ್ಳರು ಕದ್ದ ಚಿನ್ನಾಭರಣವನ್ನು ಮನೆಯ ಮುಂಭಾಗದ ಜಗಲಿ ಮೇಲೆ ಇಟ್ಟುಹೋಗಿದ್ದಾರೆ.…
ಶಿವಮೊಗ್ಗ : ಕ್ಷುಲ್ಲಕ ಕಾರಣಕ್ಕಾಗಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಮಗ ಕೋಪದಲ್ಲಿ ಸುತ್ತಿಗೆಯಿಂದ ತಂದೆಗೆ ಹೊಡೆದು ಗಾಯಗೊಳಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಆಶ್ರಯ ಕಾಲೋನಿಯಲ್ಲಿ ಈ ಒಂದು ಬರ್ಬರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮುಸ್ತಫಾ ಬೇಗ್ (42) ಎಂದು ತಿಳಿದುಬಂದಿದ್ದು, ಇನ್ನು ಶಾಹಿದ್ ಬೇಗ್ ಎನ್ನುವ ಪಾಪಿ ಮಗ ಹತ್ಯೆ ಮಾಡಿದಾವನಾಗಿದ್ದಾನೆ. ಈ ಒಂದು ಹತ್ಯೆಯ ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಮಗ ಶಾಹಿದ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು, ಕುಡಿಯಬೇಡ ಎಂದು ತಂದೆ ಬುದ್ಧಿ ಹೇಳಿದ್ದಕ್ಕೆ ಪಾಪಿ ಪುತ್ರನೊಬ್ಬ ತಂದೆಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗನಿಂದ ಕೊಲೆಯಾದ ತಂದೆಯನ್ನು ನಾಗರಾಜ್ ಮೈಸೂರು (77) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಮಗನನ್ನು ಅಣ್ಣಪ್ಪ ಎಂದು ತಿಳಿದುಬಂದಿದೆ. ಈ ಕುರಿತು ಮೃತನ ಪತ್ನಿ ರೇಣುಕಾ, ಮಗನ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನ.19 ರಂದು ತಂದೆ ಮತ್ತು ಮಗನ ನಡುವೆ ಜಗಳ ವಿಕೋಪಕ್ಕೆ ತಿರುಗಿದೆ. ಮದ್ಯದ ಅಮಲಿನಲ್ಲಿ ಅಣ್ಣಪ್ಪ ತಂದೆ ನಾಗರಾಜ್ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ನಾಗರಾಜ್ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಾಗರಾಜ್ ಮೃತಪಟ್ಟಿದ್ದಾರೆ. ಆರೋಪಿ ಮಗ ತನ್ನ ಪತ್ನಿಯನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಅಣ್ಣಪ್ಪನಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
ಮೈಸೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ವಿರುದ್ಧ ಎನ್ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿ ಸೋತಿದ್ದಾರೆ. ಈ ಒಂದು ವಿಚಾರವಾಗಿ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ 150 ಕೋಟಿ ಖರ್ಚು ಮಾಡಿ ನಿಖಿಲ್ ಕುಮಾರಸ್ವಾಮಿ 25,000 ಮತಗಳ ಅಂತರದಿಂದ ಸೋತಿದ್ದಾರೆ ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಇನ್ನಾದರೂ ಬುದ್ಧಿ ಕಲಿಯಬೇಕು. ಕಳೆದ ಬಾರಿ ನಾನು ಕುಮಾರಸ್ವಾಮಿ ಜೊತೆಯಲ್ಲಿ ಇದ್ದಾಗ 4 ಕೋಟಿ ಖರ್ಚು ಮಾಡಿ 20 ಸಾವಿರ ಲೀಡ್ನಲ್ಲಿ ಗೆದ್ದರು. ಈಗ ನಾನು ಎಚ್ ಡಿ ಕುಮಾರಸ್ವಾಮಿ ಅವರ ಜೊತೆಗೆ ಇಲ್ಲ. ಈಗ 150 ಕೋಟಿ ಖರ್ಚು ಮಾಡಿ 25,000 ಮತಗಳಿಂದ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ ಎಂದು ಮೈಸೂರಿನಲ್ಲಿ ಸಿಎಂ ಇಬ್ರಾಹಿಂ ತಿಳಿಸಿದರು. ಮುಸ್ಲಿಮರು ಇರದಿದ್ದರೆ ಜೆಡಿಎಸ್ ಗೆ ಒಂದು ಮತವು ಬರುತ್ತಿರಲಿಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್ 19 ಸ್ಥಾನ ಗೆದ್ದಿದ್ದು…
ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಭ್ರಷ್ಟಾಚಾರದ ಹಗರಣದ ತನಿಖೆಯನ್ನು ಎದುರಿಸಿದ್ದ ವಕೀಲೆ ಎಸ್ ಜೀವಾ (34) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೆಚ್ಚಿನ ತನಿಖೆಗಾಗಿ ಈ ಒಂದು ಪ್ರಕರಣವನ್ನು ಸಿಸಿಬಿಗೆ ವಹಿಸಿ ಬೆಂಗಳೂರು ಕಮಿಷನರ್ ಬಿ.ದಯಾನಂದ ಆದೇಶಿಸಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಸುತ್ತಿದ್ದ ಜೀವಾ ಎಂಬುವವರು ಆತ್ಮಹತ್ಯೆಗೆ ಶರಣಾದ ಘಟನೆ ನವೆಂಬರ್ 22ರಂದು ನಡೆದಿತ್ತು. ಬನಶಂಕರಿ ಠಾಣೆ ವ್ಯಾಪ್ತಿಯ ರಾಘವೇಂದ್ರ ಲೇಔಟಿನಲ್ಲಿರುವ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು. ಜೀವಾ ಆತ್ಮಹತ್ಯೆಯ ಕುರಿತು ಅವರ ಸಹೋದರಿ ಸಂಗೀತಾ ನೀಡಿದ್ದ ದೂರಿನನ್ವಯ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು, ಜೀವಾ ಆತ್ಮಹತ್ಯೆಯ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ವಕೀಲರ ಸಂಘ ಹೈಕೋರ್ಟ್ಗೆ ಮನವಿ ಸಲ್ಲಿಸಿತ್ತು. ಪ್ರಕರಣ ಗಂಭೀರತೆ ಪಡೆಯುತ್ತಿದ್ದಂತೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ತನಿಖೆಯನ್ನ ಸಿಸಿಬಿಗೆ ವಹಿಸಿದ್ದಾರೆ. ಸಿಸಿಬಿಯ ಎಸಿಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಗೆ…
ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಭರದಿಂದ ಸಾಗುತ್ತಿದ್ದು, ಇವಂದು ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಡವರ ಬಿಪಿಎಲ್ ಕಾರ್ಡ್ಗಳಿಗೆ ಯಾವುದೇ ತೊಂದರೆ ಇಲ್ಲ ಎಲ್ಲಾ ಬಡವರಿಗೂ ಬಿಪಿಎಲ್ ಕಾರ್ಡ್ಗಳನ್ನು ನೀಡುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ರೀತಿಯಾದ ತೊಂದರೆ ಇಲ್ಲ. ಬಡವರಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ. ಎಲ್ಲಾ ಬಡವರಿಗೂ ಕೂಡ ಕಾರ್ಡ್ ಗಳನ್ನು ಕೊಡುತ್ತೇವೆ. ನಾವು ಯಾವುದೇ ಕಾರ್ಡುಗಳನ್ನು ರದ್ದು ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು. ಈಗಾಗಲೇ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಬಾಗಲಕೋಟೆಯಲ್ಲಿ ರವಿವಾರ ರಜೆಯ ದಿನದಂದು ಕೂಡ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ನಡೆಸುತ್ತಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯಲ್ಲಿ 5 ಸಾವಿರಕ್ಕೂ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಸುತ್ತಿದ್ದು, ಇದೀಗ ಬೆಂಗಳೂರಿನ ರಾಜಾಜಿನಗರದ ಆಹಾರ ಇಲಾಖೆಯಲ್ಲಿ ಜನರು ರದ್ದಾಗಿದ್ದಂತಹ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಸರಿಪಡಿಸಿಕೊಂಡು ಮತ್ತೆ ಆಕ್ಟಿವ್ ಮಾಡಿಸಿಕೊಂಡು ಸಂತಸದಿಂದ ಹೊರ ಬರುತ್ತಿದ್ದಾರೆ. ಹೌದು ಬಿಪಿಎಲ್ ಕಾರ್ಡ್ ಮತ್ತೆ ಆಕ್ಟಿವ್ ಆಗಿದ್ದು, ಜರು ಸಂತೋಷಗೊಂಡಿದ್ದಾರೆ. ಕಾರ್ಡ್ ಆಕ್ಟಿವ್ ಆಗುತ್ತಿದ್ದಂತೆ ಜನರು ಖುಷಿಯಿಂದ ಇಲಾಖೆಯಿಂದ ಹೊರಗಡೆ ಬಂದಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಅಧಿಕಾರಿಗಳು ಕಾರ್ಡ ಪರಿಷ್ಕರಣೆ ಮಾಡುತ್ತಿದ್ದು, ಎಪಿಎಲ್ ಗೆ ಶಿಫ್ಟ್ ಆಗಿದ್ದ ಕಾರ್ಡುಗಳ ಮರುಪರುಶೀಲನೆ ಮಾಡಲಾಗುತ್ತಿದೆ. ಕೆಲವೊಂದು ಬಿಪಿಎಲ್ ಕಾರ್ಡ್ ಅಮಾನತ್ತಿನಲ್ಲಿದ್ದವು ಆದಾಯ ತೆರಿಗೆ ಹೊಂದಿದವರ ಕಾರ್ಡ್ ರದ್ದಾಗಿದ್ದವು.BPL ಕಾರ್ಡ್ ಪರಿಶೀಲನೆ ಸದ್ಯಕ್ಕೆ ಭರದಿಂದ ಸಾಗಿದೆ. ಕಾರ್ಡ್ ಪರಿಶೀಲನೆ ಬಳಿಕ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಆಕ್ಟಿವ್ ಮಾಡುತ್ತಿದ್ದಾರೆ.ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್, ಪಾನ್ ಕಾರ್ಡ್,…
ಬೆಂಗಳೂರು : ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ. ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.














