Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ತುಮಕೂರು : ತುಮಕೂರಿನಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗನ ವಿಚಾರವಾಗಿ ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತುಮಕೂರು ನಗರ ಪೊಲೀಸರ ತನಿಖೆಯ ವೇಳೆ ಈ ಒಂದು ವಿಚಾರ ಬೆಳಕಿಗೆ ಬಂದಿದೆ. ಪಿಎಸ್ಐ ನಾಗರಾಜಪ್ಪ ಬರೆದಿದ್ದ ಡೆತ್ ನೋಟನ್ನು ಪೊಲೀಸರು ಪಡೆದಿದ್ದರು. ನಾಗರಾಜಯ್ಯ ಸಾವಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದರು. ತುಮಕೂರಿಗೆ ಬರುವ ಮುನ್ನ ಮನೆಯಲ್ಲಿ ಪಿಎಸ್ಐ ನಾಗರಾಜಪ್ಪ ಜಗಳವಾಡಿದ್ದರು. ಇಂಜಿನಿಯರ್ ಮುಗಿಸಿದ್ದ ಮಗ ಮನೆಯಲ್ಲಿ ಇದ್ದಿದ್ದಕ್ಕೆ ನಾಗರಾಜಪ್ಪ ತೀವ್ರ ಬೇಸರಗೊಂಡಿದ್ದರು. ಇದೇ ವಿಚಾರವಾಗಿ ನಾಗರಾಜಪ್ಪ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಾವಣಗೆರೆಯಿಂದ ತುಮಕೂರಿಗೆ ಬಂದು ಲಾಡ್ಜ್ ನಲ್ಲಿ ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ. ಮಗನ ವಿಚಾರವಾಗಿ ಬೇಸರಗೊಂಡು ನಾನು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಪಿಎಸ್ಐ ನಾಗರಾಜಪ್ಪ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪಿಎಸ್ಐ ಆತ್ಮಹತ್ಯೆ ಕೇಸ್ ಶೀಘ್ರದಲ್ಲೇ ದಾವಣಗೆರೆಗೆ ವರ್ಗಾಯಿಸಲಾಗುತ್ತದೆ ದಾವಣಗೆರೆಯ ಕೆಟಿಜೆ…
ಬೆಂಗಳೂರು : ನಾನು ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿಕೆ ಸುರೇಶ್ ಇಂದು ಬೆಂಗಳೂರಲ್ಲಿ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯ ಗೌಡ ಡಿಕೆ ಸುರೇಶ್ ಹೆಸರು ಹೇಳಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚನೆ ಎಸಗಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಇತ್ತೀಚಿಗೆ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಯಾದರು. ಇದೀಗ ಇದೆ ಕೇಸ್ ಗೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿಕೆ ಸುರೇಶ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆಯೂ ಒಮ್ಮೆ ಡಿಕೆ ಸುರೇಶ್ ವಿತರಣೆಗೆ ಹಾಜರಾಗಿದ್ದು ಇಂದು ಮತ್ತೊಮ್ಮೆ ಇಡಿ ವಿಚಾರಣೆಗೆ ಡಿಕೆ ಸುರೇಶ ಹಾಜರಾಗಿದ್ದಾರೆ.
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಟ್ರೋಫಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿದ್ದು ಈ ಒಂದು ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆ ಪ್ರಮಾಣದಲ್ಲಿ ಅಭಿಮಾನಿಗಳು ಸೇರಿದ್ದರಿಂದ ಒಟ್ಟು 11 ಜನರು ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಇವಂದು ಪ್ರಕರಣದ ತನಿಖೆ ನಡೆಸಿರುವ ಸಿಐಡಿ ತಂಡ ಕಾಲ್ತುಳಿತಕ್ಕೆ ಫ್ರೀ ಟಿಕೆಟ್ ಘೋಷಿಸಿದ್ದೆ ಕಾರಣವಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಹೌದು ಕಳೆದ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ಬಿ. ದಯಾನಂದ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಬಳಿಕ ಈ ಒಂದು ಪ್ರಕರಣದ ತನಿಖೆ ನಡೆಸಿದ ಸಿಐಡಿ ತಂಡ ಎಂದು ಸರ್ಕಾರಕ್ಕೆ ತನಿಖೆಯ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕಾಲ್ತುಳಿತ ಘಟನೆಗೆ ಫ್ರೀ ಟಿಕೆಟ್ ಘೋಷಣೆ ಸೇರಿದಂತೆ…
ಬೆಳಗಾವಿ : ಸುಪಾರಿ ನೀಡಿ ವಕೀಲ ಸಂತೋಷ್ ಕಿಡ್ನಾಪ್ ಮತ್ತು ಕೊಲೆ ಕೇಸ್ ಗೆ ಸಂಬಂಧಿಸಿದಂತೆ 8 ಇದೀಗ ಆರೋಪಿಗಳನ್ನು ರಾಯಬಾಗ ಠಾಣೆ ಪೋಲಿಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಕೊಲೆಗೆ ಸುಪಾರಿ ನೀಡಿದ ವಕೀಲ ಶಿವಗೌಡ ಪಾಟೀಲ್ ಮತ್ತು ಗ್ಯಾಂಗ್ ಅನ್ನು ರಾಯಭಾಗ ಠಾಣೆ ಪೋಲಿಸರು ಇಂದು ಅರೆಸ್ಟ್ ಮಾಡಿದ್ದಾರೆ ಬಂಧಿತರಿಂದ ಕಾರು, ಮಚ್ಚು, ಹಣ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಅವರು ಮಾತನಾಡಿ, ಬಂಧಿತರನ್ನು ರಾಯಬಾಗ ತಾಲ್ಲೂಕಿನ ಬಸ್ತವಾಡದ ಶಿವಗೌಡ ಬಸಗೌಡ ಪಾಟೀಲ, ಭರತ ಕೋಳಿ, ಬಿರನಾಳದ ಕಿರಣ ಕೆಂಪವಾಡೆ, ಗೋಕಾಕ ತಾಲ್ಲೂಕಿನ ಗುಜನಾಳದ ಉದಯ ಮುಶೆನ್ನವರ, ಬೈಲಹೊಂಗಲ ತಾಲ್ಲೂಕಿನ ವಣ್ಣೂರಿನ ಸಂಜಯಕುಮಾರ ಹಳಬನ್ನವರ, ಗಜಮನಾಳದ ರಾಮು ದಂಡಾಪುರೆ, ಬೆಳಗಾವಿ ತಾಲ್ಲೂಕಿನ ಚಂದೂರಿನ ಸುರೇಶ ನಂದಿ, ಹೊನ್ನಿಹಾಳದ ಮಂಜುನಾಥ ತಳವಾರ ಬಂಧಿತರು. ಪರಾರಿಯಾಗಿರುವ ರಾಯಬಾಗ ತಾಲ್ಲೂಕಿನ ಅಳಗವಾಡಿಯ ಮಹಾವೀರ ಹಂಜೆ, ಹೊನ್ನಿಹಾಳದ ನಾಗರಾಜ ನಾಯಕ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದರು. ಏಪ್ರಿಲ್ 29ರಂದು ಸವಸುದ್ದಿಯಿಂದ…
ಗದಗ : ನಮ್ಮ ಭಾರತೀಯ ಆಹಾರ ಸಂಪ್ರದಾಯದಲ್ಲಿ ಸಾಮಾನ್ಯವಾಗಿ ಊಟ ಆದ ಮೇಲೆ ಬಾಳೆಹಣ್ಣು, ಅಥವಾ ಎಲೆ ಅಡಿಕೆ ತಿನ್ನುವ ರೂಢಿ ಇದೆ ಏಕೆಂದರೆ, ಊಟ ಆದ ನಂತರ ಬಾಳೆಹಣ್ಣು ಅಥವಾ ಎಲೆ ಅಡಿಕೆ ತಿಂದರೆ ಚಯಾಪಚಯ ಕ್ರಿಯೆ ಸುಲಭವಾಗಿ ಆಗಿ ಯಾವುದೇ ರೀತಿಯಾದ ಗ್ಯಾಸ್ಟ್ರಿಕ್ ಸಮಸ್ಯೆ ಇರುವುದಿಲ್ಲ ಎನ್ನುವುದು ನಮ್ಮ ಹಿರಿಯರು ಮಾಡಿಕೊಂಡು ಬಂದಂತಹ ಸಂಪ್ರದಾಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಒಂದು ಅಡಿಕೆಗಳಲ್ಲೂ ಕೂಡ ಕೆಮಿಕಲ್ ಮಿಶ್ರಣ ಮಾಡಿ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು ಗದಗದಲ್ಲಿ ಅಡಿಕೆಗಳಿಗೆ ಕೆಂಪು ಕಲರ್ ಕೆಮಿಕಲ್ ಮಿಶ್ರಣ ಮಾಡಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಹೌದು ಊಟ ಆದ್ಮೇಲೆ ಎಲೆ ಅಡಿಕೆ ಹಾಕೋಣ ಅನ್ನೋರಿಗೆ ಶಾಕ್ ಎದುರಾಗಿದ್ದು, ಬೀಡಾ, ಎಲೆ ಅಡಿಕೆ ತಿನ್ನೋರು ಈ ಸುದ್ದಿ ಒಮ್ಮೆ ನೋಡಲೇಬೇಕು. ಈ ಅಡಿಕೆ ತಿಂದರೆ ನಿಮ್ಮ ಪ್ರಾಣಕ್ಕೆ ಕುತ್ತು ಬರೋದು ಗ್ಯಾರಂಟಿ. ಬಾಯಿ ಕೆಂಪಾಗಿಸುವ ಈ ಅಡಿಕೆ ತಿಂದರೆ ಜೀವಕ್ಕೆ ಸಂಚಕಾರ ಕಟ್ಟಿಟ್ಟ ಬುತ್ತಿ. ಅಡಿಕೆ ಕೆಂಪು…
ಮಂಗಳೂರು : ರಾಜ್ಯದಲ್ಲಿ ಹೃದಯಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮಂಗಳೂರು ಜಿಲ್ಲೆಯ ಸೂರತ್ಕಲ್ ನಲ್ಲಿ ಮನೆಯಲ್ಲಿ ಸ್ನಾನಕ್ಕೆ ಎಂದು ತೆರಳುವ ವೇಳೆ ಇಂಜಿನಿಯರ್ ವಿದ್ಯಾರ್ಥಿ ಒಬ್ಬ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾನೆ. ಹೌದು ಹೃದಯಾಘಾತದಿಂದ 18 ವರ್ಷದ ಯುವಕ ಸಾವನಪ್ಪಿದ್ದಾನೆ, ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಅಫ್ತಾಬ್ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮಂಗಳೂರಿನ ಸೂರತ್ಕಲ್ ಕೃಷ್ಣಪುರದ ನಿವಾಸಿ ಆಗಿರೋ ಅಫ್ತಾಬ್ ಇಂದು ಹಾರ್ಟ್ ಅಟ್ಯಾಕ್ ನಿಂದ ಸಾವನಪ್ಪಿದ್ದಾನೆ. ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಏಕಾಏಕಿ ಹೃದಯಸ್ತಂಭನವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವಷ್ಟರಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಮತ್ತೆ ಹಾಸನ, ವಿಜಯನಗರ, ಹಾವೇರಿ ಜಿಲ್ಲೆಗಳಲ್ಲಿ ಹಲವು ಜನರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.ಇದೀಗ ದಾವಣಗೆರೆಯಲ್ಲೂ ಕೂಡ ಎದೆ ನೋವು ಕಾಣಿಸಿಕೊಂಡು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ದಾವಣಗೆರೆ ತಾಲೂಕಿನ ನಾಗರಕಟ್ಟೆಯ ಮಂಜ್ಯಾ ನಾಯಕ್ (38) ಸಾವನ್ನಪ್ಪಿದ್ದಾರೆ. ಮನೆಯಲ್ಲಿಯೇ ಎದೆ ನೋವು ಕಾಣಿಸಿಕೊಂಡು ಮಂಜ್ಯಾ ನಾಯಕ್ ಕುಸಿದು ಬಿದ್ದಿದ್ದಾರೆ. ತಕ್ಷಣ ಕುಟುಂಬಸ್ಥರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಂಜ್ಯಾ ನಾಯಕ ಸಾವನಪ್ಪಿದ್ದಾರೆ. ಇನ್ನು ವಿಜಯನಗರ ಜಿಲ್ಲೆಯಲ್ಲೂ ಕೂಡ ಹೃದಯಾಘಾತಕ್ಕೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಅಂಗಡಿಯಲ್ಲಿ ಕುಸಿದು ಬಿದ್ದು ಜಯಾಬಾಯಿ (52) ಮತಪಟ್ಟಿದ್ದಾರೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದಿದ್ದಗಿ ತಾಂಡಾ ನಿವಾಸಿಯಾಗಿರುವ ಜಯಾಭಾಯಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಬೆಂಗಳೂರು : ಮೆಡಿಕಲ್ ಎಂದು ಓದೋಕೆ ವೀಸಾ ಪಡೆದು ಭಾರತಕ್ಕೆ ಬಂದಿದ್ದ ನೈಜೀರಿಯಾ ಮೂಲದ ಪ್ರಜೆಗಳು, ಇಲ್ಲಿ ಬಂದು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದು ಸದ್ಯ ಪೊಲೀಸರು ಇಬ್ಬರು ನೈಜೀರಿಯಾ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದು ಅವರ ಬಳಿ ಇದ್ದಂತಹ ನಾಲ್ಕೂವರೆ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಹೌದು ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್ಡಮ್ ಎಂದು ಗುರುತಿಸಲಾಗಿದೆ. ಬಂಧಿತರು ಡ್ರಗ್ ಮಾರಾಟ ಮಾಡಲು ಹಾಗೂ ಶೇಖರಿಸಿಡಲು ಆರೋಪಿಗಳು ಸಖತ್ ಪ್ಲಾನ್ ಮಾಡಿಕೊಂಡಿದ್ದರು. ರೆಡಿಮೇಡ್ ಬಟ್ಟೆಗಳು, ಅದರಲ್ಲೂ ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್ , ಪ್ಯಾಂಟ್ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಇಟ್ಟು ಮಾರಾಟ ಮಾಡುತ್ತಿದ್ದರು. ಇದೀಗ ಖಚಿತ ಮಾಹಿತಿಯ ಮೇರೆಗೆ…
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಲ್ಲಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಯಿತು. ವರದಿಯಲ್ಲಿ ಕೋವಿಡ್ ಆದವರಿಗೆ ಹೃದಯಘಾತ ಆಗಿದ್ದು ಕಂಡು ಬಂದಿದೆ. ಆದರೆ ಲಸಿಕೆಯಿಂದ ಹೃದಯಘಾತವಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕೋವಿಡ್ ಪರಿಣಾಮ ಸಾರ್ವಜನಿಕರ ಮೇಲೆ ಆಗಿದೆ. ಸ್ವಲ್ಪ ಮಟ್ಟಿಗೆ ಹೃದಯಾಘಾತ ಹೆಚ್ಚಾಗಿದೆ. ಆದರೆ ಕೋವಿಡ್ ಲಸಿಕೆ ಇದಕ್ಕೆ ಕಾರಣವಲ್ಲ. MRNA ವಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ. ಕೋವಿಡ್ ನ ಸಿಕೆಯಿಂದ ನಮ್ಮ ಜನರಿಗೆ ಅನುಕೂಲ ಆಗಿದೆ. ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯ. ಹೃದಯಾಘಾತ ಸಂಬಂಧ ಸಂಶೋಧನೆಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರು. ಕೋವಿಡ್ ಹಾಗೂ ಕೋವಿಡ್ ಲಸಿಕೆಯ ದುಷ್ಪರಿಣಾಮ ಏನು? ಲಸಿಕೆಯಿಂದ ಹೃದಯಾಘಾತ ಆಗುತ್ತಿದೆಯಾ ಎಂಬುವುದರ ಬಗ್ಗೆ ವರದಿ ಕೇಳಿದ್ದರು. ಇಲಾಖೆಯ ಮುಖ್ಯ ಕಾರ್ಯದರ್ಶಿ ತಾಂತ್ರಿಕ ಸಲಹಾ ಸಮಿತಿ…
ಬೆಂಗಳೂರು : ರಾಜ್ಯದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಬೆಂಗಳೂರು ಗ್ತಾಮಂತರ ಜಿಲ್ಲೆಯ ನೆಲಮಂಗಲದಲ್ಲಿ 45 ದಿನದ ಮಗುವನ್ನು ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದಾಳೆ. ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಭೀಕರವಾಗಿ ಹತ್ಯೆಗೈದಿದ್ದಾಳೆ. ಹೌದು ನೆಲಮಂಗಲದಲ್ಲಿ 45 ದಿನದ ಗಂಡು ಮಗುವನ್ನು ಪಾಪಿ ತಾಯಿ ಒಬ್ಬಳು ಕೊಲೆ ಮಾಡಿದ್ದಾಳೆ. ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಕೊಲೆ ಮಾಡಿದ್ದಾಳೆ. ವಿಶೇಷಪುರದ ನಾಗಕಲ್ಲು ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಪವನ್ ಹಾಗೂ ರಾಧೆ ದಂಪತಿಗೆ ಈ ಒಂದು ಗಂಡು ಮಗು ಜನಿಸಿತ್ತು.ಮನೆ ನಿಭಾಯಿಸದೆ ಕುಡಿತದ ಚಟಕ್ಕೆ ಒಳಗಾಗಿದ್ದ. ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆಯಲ್ಲಿ ತಡರಾತ್ರಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರಾಧಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.














