Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಕೊಪ್ಪಳ : ಸದ್ಯ ರಾಜ್ಯದಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಮಾತ್ರ ರಾಜ್ಯದ ಎಲ್ಲಾ ಕಡೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಇದೀಗ ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ ಗಂಡು ಮಕ್ಕಳಿಗೂ ಉಚಿತ ಪ್ರಯಾಣದ ಕುರಿತು ಚಿಂತನೆ ನಡೆಸಲಾಗುತ್ತೆ ಎಂದು ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದರು. ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲ ಕುಂಟ ಗ್ರಾಮದಲ್ಲಿ ಬಾಲಕಿಯರ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಕಸ್ಮಾತ್ ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ ಗಂಡು ಮಕ್ಕಳಿಗೂ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನಾವು ಯಾವುದೇ ಗ್ಯಾರೆಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿಲ್ಲ. ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡಿದರೆ ಏನೇನೋ ಮಾತನಾಡುತ್ತಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಗ್ಗೆ ಎಷ್ಟೋ ಟೀಕೆ ಮಾಡಿದರು ಎಂದು ಹೇಳಿಕೆ ನೀಡಿದರು. ಸರ್ಕಾರದಲ್ಲಿ ಹಣ ಕಡಿಮೆ ಇದೆ ಎಂದು ಯಾರೂ ಹೇಳಿದರು? ಹೆಣ್ಣು ಮಕ್ಕಳಿಗೆ 2000 ಕೊಡುತ್ತೀರಿ, ನಮಗ್ಯಾಕೆ…
ಮಂಡ್ಯ : ಮಂಡ್ಯದಲ್ಲಿ ನಿನ್ನೆ ಘೋರವಾದ ಘಟನೆ ನಡೆದಿದ್ದು, ಫೋಟೋ ತೆಗೆದುಕೊಳ್ಳಲು ಹೋಗಿ ದುರಂತ ಒಂದು ಸಂಭವಿಸಿದ್ದು, ಫೋಟೋ ತೆಗೆಸಿಕೊಳ್ಳೋವಾಗಲೇ ಆಯತಪ್ಪಿ ಬಿದ್ದು ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸರ್ವಧರ್ಮ ಆಶ್ರಮದ ಬಳಿ ಈ ಒಂದು ಘಟನೆ ನಡೆದಿದ್ದು, ನೋಡುತ್ತಿದ್ದಂತೆ ಮಹೇಶ್ (36) ಆಯತಪ್ಪಿ ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಮೈಸೂರಿನಲ್ಲಿ ಮಹೇಶ್ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಸಂಜೆ ಸ್ನೇಹಿತರೊಂದಿಗೆ ಕೆ ಆರ್ ಎಸ್ ಡ್ಯಾಮ್ ಗೆ ಬಂದಿದ್ದರು.ಫೋಟೋ ತೆಗೆಸಿಕೊಳ್ಳುವಾಗ ಮಹೇಶ್ ಆಯತಪ್ಪಿ ನದಿಗೆ ಬಿದ್ದಿದ್ದಾರೆ.ಸದ್ಯ ನದಿಯಲ್ಲಿ ಕೊಚ್ಚಿ ಹೋದ ಮಹೇಶ್ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಆಹಾರ ಧಾನ್ಯ ಸಾಗಾಣಿಕೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲ ಗಡುವು ನೀಡಲಾಗಿತ್ತು. ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಷಣ್ಮುಖಪ್ಪ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದರು. ಯಾವುದೇ ಭರವಸೆ ಈಡೇರಿಸಿದ ಹಿನ್ನೆಲೆಯಲ್ಲಿ ಅನ್ನಭಾಗ್ಯ ಸಾಗಾಣಿಕೆ ಬಂದ್ ಮಾಡಿ ಇದೀಗ ಕರೆ ನೀಡಿದ್ದಾರೆ. ಹೌದು ಕರ್ನಾಟಕ ರಾಜ್ಯದ ಅನ್ನಭಾಗ್ಯ ಅಕ್ಕಿ ಸಪ್ಲೈ ಮಾಡುವ ಲಾರಿ ಮಾಲೀಕರು ಮತ್ತು ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಕಾರಣ ಕಳೆದ ಫೆಬ್ರವರಿನಿಂದ ಹಿಂದಿನವರೆಗೆ ಐದು ತಿಂಗಳ ಬಾಕಿ ಹಣ ಬಿಡುಗಡೆ ಮಾಡಬೇಕಾಗಿತ್ತು. ರಾಜ್ಯಾದ್ಯಂತ ಇರುವ ಎಲ್ಲಾ ತಾಲೂಕು ಮಟ್ಟ ಜಿಲ್ಲಾ ಕೇಂದ್ರಗಳಿಗೆ ಸೊಸೈಟಿಗಳಿಗೆ ಹಾಕಿ ಸಪ್ಲೈ ಮಾಡುತ್ತಾರೋ ಅಕ್ಕಿ ಸಪ್ಲೈ ಮಾಡುವಂತಹ ಲಾರಿ ಮಾಲೀಕರಿಗೆ ಇಲ್ಲಿವರೆಗೂ ಆಹಾರ ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಈ ಒಂದು ಹಣದ ಮೊತ್ತ 250 ಕೋಟಿ ರೂಪಾಯಿ ಇದ್ದು ಬಾಕಿ ಹಣ ಬಿಡುಗಡೆ ಮಾಡಬೇಕಿದೆ. ಹಾಗಾಗಿ ಸರ್ಕಾರದ ವಿರುದ್ಧ ಪಡಿತರ…
ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕಲುಷಿತ ನೀರು ಸೇವನೆ ಮಾಡಿದ್ದರಿಂದ ಒಂದೇ ಗ್ರಾಮದ ಮೂವರು ಸಾವನಪ್ಪಿದ್ದಾರೆ. ವಾಂತಿ ಭೇದಿಯಿಂದ ಮೂವರು ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರನ್ನು ದೇವಕಮ್ಮ ಹುಟ್ಟಿ (48) ವೆಂಕಮ್ಮ (60) ರಾಮಣ್ಣ ಪೂಜಾರಿ (50) ಎನ್ನುವವರು ಸಾವನ್ನಪ್ಪಿದ್ದಾರೆ. ಇದೀಗ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಕಳೆದ 10 ದಿನಗಳ ಹಿಂದೆ ಮೂವರು ವಾಂತಿ ಭೇದಿಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಚಿಕಿತ್ಸೆ ಫಲಿಸದೆ ಮೂವರು ಸಾವನಪ್ಪಿದ್ದಾರೆ.
ಬೆಂಗಳೂರು : ಮಾಜಿ ಪ್ರಿಯಸಿಗೆ ಯುವಕನೊಬ್ಬ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂದು ಆತನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಂಧಿತ ಎಲ್ಲಾ ಆರೋಪಿಗಳನ್ನು ಜಾಮಿನಿನ ಮೇಲೆ ಬಿಡುಗಡೆ ಮಾಡಿದ್ದು, ಇನ್ನು 17 ವರ್ಷದ ಬಾಲಕಿಯನ್ನು ಪೊಲೀಸರು ಮಾಡಿದ್ದಾರೆ ಹೌದು ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 17 ವರ್ಷದ ಬಾಲಕಿಯನ್ನು ಅರೆಸ್ಟ್ ಮಾಡಿದ್ದಾರೆ. ಬಾಲಕಿಯನ್ನು ಬಂಧಿಸಿ ಪೊಲೀಸರು ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನನ್ನು ಬಟ್ಟೆ ಬಿಚ್ಚಿಸಿ ಮರಣಾಂತಿಕ ಹಲ್ಲೆ ನಡೆಸಿದ್ದರು ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಹೇಮಂತ್, ಯಶವಂತ್, ಶಿವಶಂಕರ್ ಮತ್ತು ಶಶಾಂಕ ಗೌಡ ಬಿಡುಗಡೆಯಾಗಿದ್ದಾರೆ. ಯುವಕ ಕುಶಾಲ್ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ ನಡೆಸಿ ಆರೋಪಿಗಳು ವಿಕೃತಿ ಮೆರೆದಿದ್ದರು.
ಬೆಂಗಳೂರು : ಆರೆಸ್ಸೆಸ್ ಬ್ಯಾನ್ ವಿಚಾರದಲ್ಲಿ ಹೇಳಿಕೆ ನೀಡಿ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ಮಾತಿನ ಸಮರ ಇನ್ನಷ್ಟು ತೀವ್ರವಾಗಿದೆ. ಇದೀಗ ಪ್ರತಾಪ್ ಸಿಂಹ ಇದೆ ವಿಚಾರವಾಗಿ ಪ್ರಿಯಾಂಕ್ ಖರ್ಗೆಯ ಹೆಸರನ್ನೇ ಹಿಡಿದು ಜನ್ಮ ಜಾಲಾಡಿದ್ದರು.ಈಗ ಪ್ರತಾಪ್ ಸಿಂಹ ಮಾತಿಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ತಿರುಗೇಟು ಕೊಟ್ಟಿದ್ದಾರೆ. ನರಿಗಳು ಸಿಂಹ ಅಂತಾ ಹೆಸರಿಟ್ಟುಕೊಂಡರೆ ಸಿಂಹ ಆಗಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ. ಹೌದು ಟ್ವೀಟ್ ನಲ್ಲಿ ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ. ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ.…
ಬೆಂಗಳೂರು : ಕಳೆದ ವರ್ಷ ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದರು. ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸಿದ್ದರು. ಇದೀಗ ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ರೀತಿಯೇ ಅಮಾನುಷ ಕೃತ್ಯ ನಡೆದಿದ್ದು ಹುಡುಗಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಾಲಿನ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಹೌದು ದರ್ಶನ್ ಗ್ಯಾಂಗ್ ರೀತಿ ಮತ್ತೊಂದು ಗ್ಯಾಂಗ್ ಈ ಕೃತ್ಯ ಎಸಗಿದ್ದು, ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ ರೇಣುಕಾ ಸ್ವಾಮಿ ರೀತಿ ಮತ್ತೊಂದು ಅಮಾನುಷ ಕೃತ್ಯ ನಡೆದಿದ್ದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ರಾಕ್ಷಸರಂತೆ ವರ್ತಿಸಿದ ಇವರಿಗೆ ದರ್ಶನ್ ಸ್ಪೂರ್ತಿ ಎಂದು ಹೇಳಲಾಗುತ್ತಿದೆ. ನೀನು…
ಚಿತ್ರದುರ್ಗ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚತ್ತಿದ್ದು, ಹಾಸನ ಜಿಲ್ಲೆಯ ಒಂದರಲ್ಲೆ ಕಳೆದ 46 ದಿನಗಳಲ್ಲಿ 38 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ.ಇದೀಗ ಚಿತ್ರದುರ್ಗದಲ್ಲಿ ಕೂಡ ಹೃದಯಾಘಾತದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಿತ್ರದುರ್ಗದಲ್ಲಿ ಹೃದಯಾಘಾತದಿಂದ ಕಂಪ್ಲೇಶ್ (34) ಎಂಬುವರು ಸಾವನಪ್ಪಿದ್ದಾರೆ. ಚಿತ್ರದುರ್ಗದ ಸೊಲ್ಲಾಪುರ ನಾಯಕರಹಟ್ಟಿಯಲ್ಲಿ ಈ ಒಂದು ಘಟನೆ ನಡೆದಿದ್ದು, ರಾತ್ರಿ ಮಲಗಿದ್ದಾಗ ಕಂಪ್ಲೇಶ್ ಅವರಿಗೆ ಎದೆ ನೋವು ಕಾಣಿಸಿತ್ತು. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕಂಪ್ಲೇಶ್ ಸಾವನಪ್ಪಿದ್ದಾರೆ.
ಬೆಂಗಳೂರು : ಬಾಲ್ಯ ವಿವಾಹಕ್ಕೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ಸರ್ಕಾರ ಇದೀರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಅಂದರೆ 20221-22ರಿಂದ 2024-25ರ ವರೆಗೆ ಬರೋಬ್ಬರಿ 2,165 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಹಾಗಾಗಿ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) 2025 ಕರಡು ವಿಧೇಯಕವನ್ನು ಸಿದ್ಧಪಡಿಸಿದೆ. ರಾಜ್ಯದ ಹೊಸ ಮಸೂದೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006ಗೆ ತಿದ್ದುಪಡಿ ತರಲಾಗಿದೆ. ಹೌದು ರಾಜ್ಯದಲ್ಲಿ ಬಾಲ್ಯ ವಿವಾಹದ ಪ್ರಮಾಣ ವರ್ಷಂಪ್ರತಿ ಹೆಚ್ಚುತ್ತಲೇ ಇದೆ. ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರೂ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ), 2025 ಕರಡು ಮಸೂದೆ ಸಿದ್ಧಪಡಿಸಿದೆ. ಬಾಲ್ಯ ವಿವಾಹಕ್ಕೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ಸರ್ಕಾರ ಇದೀಗ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) 2025 ಕರಡು ವಿಧೇಯಕವನ್ನು ಸಿದ್ಧಪಡಿಸಿದೆ. ರಾಜ್ಯದ ಹೊಸ ಮಸೂದೆಯಲ್ಲಿ…
ಬೆಂಗಳೂರು : ಬಹು ನಿರೀಕ್ಷಿತ ರಿಷಬ್ ಶೆಟ್ಟಿ ನಟನೆಯ ಕಾಂತಾರ-1 ಚಲನಚಿತ್ರವು ಅಕ್ಟೋಬರ್ 2 ರಂದು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಹೊಂಬಾಳೆ ಫಿಲಂಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್ 2ರಂದು ಪ್ಯಾನ್ ಇಂಡಿಯಾ ಭಾಷೆಗಳಲ್ಲಿ ಕಾಂತಾರ ಚಾಪ್ಟರ್-1 ಸಿನಿಮಾ ರಿಲೀಸ್ ಆಗಲಿದೆ ಎಂದು ಅನೌನ್ಸ್ ಮಾಡಿದೆ. ಚಲನಚಿತ್ರದ ಪೋಸ್ಟರ್ ಕೂಡ ಚಿತ್ರತಂಡ ರಿಲೀಸ್ ಮಾಡಿದೆ. ಹೌದು ಅಕ್ಟೋಬರ್ 2ರಂದು ಕಾಂತರಾ-1ಚಲನಚಿತ್ರ ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಭಾಷೆಗಳಲ್ಲಿದೆ ರಿಷಬ್ ಶೆಟ್ಟಿ ಹುಟ್ಟು ಹಬ್ಬಕ್ಕೆ ಕಾಂತಾರ ಚಿತ್ರ ತಂಡ ಇದೀಗ ಉಡುಗೊರೆ ನೀಡುತ್ತಿದ್ದೂ, ಇಂದು ಕಾಂತಾರ-1 ಪೋಸ್ಟರ್ ರಿಲೀಸ್ ಮಾಡಿದೆ. ಹಿಂದೆ ಅನೌನ್ಸ್ ಮಾಡಿರೋ ದಿನಾಂಕದಂದು ಸಿನಿಮಾವನ್ನು ರಿಲೀಸ್ ಮಾಡಲಿದ್ದು, ಒಟ್ಟು 7 ಭಾಷೆಗಳಲ್ಲಿ ಕಾಂತಾರ-1 ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲಿಷ್ ಮತ್ತು ಬೆಂಗಾಲಿ ಭಾಷೆಗಳಲ್ಲಿ ಕಾಂತಾರ-1 ರಿಲೀಸ್ ಆಗಲಿದೆ. ಕಾಂತಾರ ಚಾಪ್ಟರ್ 1 ಚಲನಚಿತ್ರ ಶೂಟಿಂಗ್…














