Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಕಳೆದ ವರ್ಷ ರಾಜ್ಯ ಬರಕ್ಕೆ ತುತ್ತಾಗಿದ್ದರೆ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ಕಳೆದ ವರ್ಷ ರೂ.4200 ಕೋಟಿ ಹಣವನ್ನು ರೈತರಿಗೆ ಪರಿಹಾರದ ರೂಪದಲ್ಲಿ ನೀಡಿದರೆ, ಮಳೆಹಾನಿಗೆ ಈ ವರ್ಷ ರೂ.297 ಕೋಟಿ ಹಣವನ್ನು ಪರಿಹಾರವಾಗಿ ರೈತರಿಗೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ ಮಳೆಹಾನಿ ಹಾಗೂ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸದನಕ್ಕೆ ಉತ್ತರ ನೀಡಿದ ಅವರು, “ಕಳೆದ ವರ್ಷದ ಬರ ಗಾಲದಲ್ಲಿ ರಾಜ್ಯ ಸರ್ಕಾರ 45 ಲಕ್ಷ ರೈತರಿಗೆ ರೂ.4200 ಕೋಟಿ ಹಣ ಪರಿಹಾರ ನೀಡಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆ ಮಳೆ 115 ಮಿ.ಮೀ. ಆದರೆ, ವಾಸ್ತವದಲ್ಲಿ 151 ಮಿ.ಮೀ ಮಳೆಯಾಗಿದೆ. ಮುಂಗಾರಿನಲ್ಲಿ ವಾಡಿಕೆ 852 ಮಿ.ಮೀ. ಆದರೆ, 928 ಮಿ.ಮೀ…
ಬೆಳಗಾವಿ, ಡಿಸೆಂಬರ್ 13 : ಇಡೀ ದೇಶದಲ್ಲಿ ಕರ್ನಾಟಕ ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದೇ ಡಿಸೆಂಬರ್ 23, 24, 25 ರಂದು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದ್ದು, ಪೂರ್ವಭಾವಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿರುವುದಾಗಿ ತಿಳಿಸಿದರು. ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ.…
ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ. ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಮೈಸೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಈ ಒಂದು ವಿಚಾರವಾಗಿ ಬಹುಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ, ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಇಲ್ಲಿ ಮಕ್ಕಳ ಬಗ್ಗೆ ಮಾತನಾಡಲು ಬಂದಿದ್ದೇನೆ ಹೊರಟು ಕಳ್ಳನನ್ನ ಮಕ್ಕಳ ಬಗ್ಗೆ ಮಾತನಾಡಲು ಬಂದಿಲ್ಲ. ರಾಜಕೀಯೆತರ ಪ್ರಶ್ನೆ ಕೇಳಬೇಡಿ ಎಂದು ಪ್ರಕಾಶ್ ರೈ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮಾತನಾಡುತ್ತೇನೆ ಎಂದು ತಿಳಿಸಿದರು.
ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದರು. ಬಳಿಕ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಾಂಪಲ್ಲಿ ಕೋರ್ಟಿಗೆ ವಿಚಾರಣೆಗೆ ಹಾಜರುಪಡಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ವಿರುದ್ಧ IPC ಸೆಕ್ಷನ್ 105, 118(1), ಮತ್ತು BNS 3(5) ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಗಳು ಸಾಮಾನ್ಯವಾಗಿ ತೊಂದರೆಗಳನ್ನು ಉಂಟುಮಾಡುವ, ಅಜಾಗರೂಕತೆ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಹಾನಿ ಮಾಡಿದ ಪ್ರಕರಣಗಳಿಗೆ ಸಂಬಂಧಿಸುತ್ತವೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ ಅಲ್ಲದೆ ಈ ಒಂದು ಪ್ರಕರಣದ ಎಲ್ಲಾ ಇವಳು ಆರೋಪಿಗಳಿಗೂ ಕೂಡ ಹೈಕೋರ್ಟ್ ಜಾಮೀನು ನೀಡಿ ಆದೇಶದ ಬೆನ್ನಲ್ಲೇ ನಟ ದರ್ಶನ್ ಅವರ ಮನೆಯ ಬಳಿ ಅಭಿಮಾನಿಗಳು ಆಗಮಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನ ಆರ್ ಆರ್ ನಗರದ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದು, ದರ್ಶನ್ ಮನೆಯ ಬಳಿ ಆಗಮಿಸಿ ಸಂಭ್ರಮ ಆಚರಿಸುತ್ತಿದ್ದಾರೆ. ದರ್ಶನ್ ಮನೆಯ ಬೋರ್ಡ್ ಗೆ ಹಾರ ಹಾಕಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರ ನಿವಾಸದ ಬಳಿ ಅಭಿಮಾನಿಗಳು ಬಂದಿದ್ದಾರೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ ನಟ ದರ್ಶನ್ ಅವರಿಗೆ ಬೇಲ್ ಸಿಕ್ಕರು ಸಂಕಷ್ಟ ತಪ್ಪಿಲ್ಲ. ಏಕೆಂದರೆ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಇಂದು ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ ರಾಜ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈ ಕುರಿತಂತೆ ರಾಜ್ಯ ಸರ್ಕಾರ ಈಗಾಗಲೇ ಚಿಂತನೆ ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಚಿತ್ರದುರ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಷರತ್ತು ಬದ್ಧ ಜಾಮೀನು ನೀಡಿದೆ.ಈ ಒಂದು ವಿಚಾರವಾಗಿ ಮೃತ ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯಾ ಅವರು ಈ ವಿಚಾರವಾಗಿ ಸಿಎಂ ಅವರನ್ನು ಭೇಟಿ ಮಾಡುವ ಕುರಿತು ಆಪ್ತರೊಂದಿಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೃತ ರೇಣುಕಾ ಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿಕೆ ನೀಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಬಗ್ಗೆ ಆಪ್ತರ ಜೊತೆ ಚರ್ಚಿಸುತ್ತೇವೆ. ಸರ್ಕಾರ ಮಧ್ಯಂತರ ಬೇಲ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಜಾಮೀನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗುವ ವಿಶ್ವಾಸವಿದೆ.ಈ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಮೇಲೆ ಯಾವುದೇ ಒತ್ತಡ ಹಾಕಲ್ಲ ಯೋಚಿಸುತ್ತೇವೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಹೂವು ಹಿಡಿದುಕೊಂಡು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಹೌದು ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಯಾವಾಗ ಜೈಲಿಗೆ ಹೋದರೋ, ವಿಜಯಲಕ್ಷ್ಮಿ ಸುತ್ತದ ದೇವಸ್ಥಾನಗಳಿಲ್ಲ, ಹಲವು ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿ ನಟ ದರ್ಶನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಕಷ್ಟು ಶ್ರಮಪಟ್ಟಿದ್ದಾರೆ. ಇದೀಗ ಅವರ ಒಂದು ಪೂಜೆ ಫಲ ಎನ್ನುವ ಹಾಗೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಕೈಯಲ್ಲಿ ಹೂವು ಹಿಡಿದುಕೊಂಡು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ವಿಚಾರ ತಿಳಿದು ಪರಪ್ಪನ ಅಗ್ರಹಾರ ಜೈಲಲ್ಲಿರುವ A1 ಆರೋಪಿ ಪವಿತ್ರಾಗೌಡ ಸಹ ಕೈದಿಗಳ ಜೊತೆಗೆ ಖುಷಿ ಹಂಚಿಕೊಂಡು ಆನಂದ ಭಾಷ್ಪ ಸುರಿಸಿದ್ದಾರೆ. ಈ ವೇಳೆ ಅವರ ಪರ ವಕೀಲೆ ಶಿಲ್ಪಾ ಅವರು, ಸೋಮವಾರ ಪವಿತ್ರಾಗೌಡ ಜೈಲಿನಿಂದ ಬಿಡುಗಡೆ ಆಗುತ್ತಾರೆ. ಹೈಕೋರ್ಟ್ ನಿಂದ ಜಾಮೀನು ಪ್ರತಿ ಸಿಕ್ಕ ಕೂಡಲೇ ಜೈಲಿನ ಮುಖ್ಯ ಅಧಿಕಾರಿಗಳಿಗೆ ತಲುಪಿಸಲಾಗುತ್ತೆ. ಸೋಮವಾರ ಜೈಲಿಂದ ಅವರು ರಿಲೀಸ್ ಆಗ್ತಾರೆ ಎಂದು ತಿಳಿಸಿದರು.














