Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ಅವರು ಎಸ್.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ. ಶಿಸ್ತು ಅವರು ಮಾಡುವ ಕೆಲಸದಲ್ಲಿ ಇರುತ್ತಿತ್ತು. ನಮ್ಮ ಕುಟುಂಬಕ್ಕೂ ಅವರಿಗೂ ತುಂಬಾ ಆತ್ಮೀಯತೆ ಇತ್ತು. ವೀರಪ್ಪನ್ ಘಟನೆ ಆದಾಗ ಅವರು ನಮ್ಮ ಜೊತೆಗೆ ನಿಂತಿದ್ದರು. ಎಸ್.ಎಂ. ಕೃಷ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಬೆಂಗಳೂರಿನಲ್ಲಿ ನಟ ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಸಂಜೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಸ್ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ 5:30ಕ್ಕೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಈ ಒಂದು ಶ್ರದ್ಧಾಂಜಲಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸೇರಿದಂತೆ ಪಕ್ಷದ ನಾಯಕರು ಸಚಿವರು, ಶಾಸಕರು,ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಹೌದು ಇಂದು ಬೆಳಂಬೆಳಗ್ಗೆ ಬೆಂಗಳೂರು, ಕೊಪ್ಪಳ ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. 10 ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್…
ಬೆಳಗಾವಿ : ರಾಜ್ಯದ ಎಲ್ಲಾ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಇಲಾಖೆಯ ಈ ಒಂದು ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮೆಲ್ಮನೆಯಲ್ಲಿ ಬಿಜೆಪಿಯ ಡಾ. ಧನಂಜಯ ಸರ್ಜೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವ ಧನ ಮೊತ್ತವನ್ನು 2022ರಲ್ಲಿ ಆರ್ಥಿಕ ಇಲಾಖೆಯು ಪರಿಷ್ಕರಿಸಲು ಅನುಮತಿ ನೀಡಿತ್ತು. ಈಗ ಮತ್ತೆ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಆದರೆ ಈಗ ಮರು ಪರಿಶೀಲನೆಗಾಗಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಾಗ, 48 ಸಾವಿರ ಅತಿಥಿ ಶಿಕ್ಷಕರಿದ್ದಾರೆ. ಕನಿಷ್ಠ ವೇತನಕ್ಕೆ ಅನುಗುಣವಾಗಿಯೂ ವೇತನ ನೀಡುತ್ತಿಲ್ಲ ಹೀಗಿರುವಾಗ ಗುಣಮಟ್ಟದ ಶಿಕ್ಷಣ ಹೇಗೆ ಸಾಧ್ಯ ಎಂದು ಡಾ. ಸರ್ಜಿ ಸಚಿವರಿಗೆ ಪ್ರಶ್ನಿಸಿದರು.
ಮನೆಯ ಮಗನಂತೆ ನನ್ನ ನೋಡುತ್ತಿದ್ದರು : ಎಸ್.ಎಂ ಕೃಷ್ಣ ಕುರಿತು ಮಾತನಾಡುತ್ತಲೆ, ಕಂಬನಿ ಮಿಡಿದ ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಸ್ಎಂ ಕೃಷ್ಣ ಅವರು ನನ್ನನ್ನು ಮಗನಂತೆ ಕಾಣುತ್ತಿದ್ದರು. ಅವರ ಮನೆಯ ಮಕ್ಕಳಂತೆ ನನ್ನನ್ನು ಕಂಡಿದ್ದಾರೆ ಎಂದು ಅವರ ಕುರಿತು ಮಾತನಾಡುತ್ತಲೇ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಡಿಸಿಎಂ ಡಿಕೆ ಶಿವಕುಮಾರ್, ನನ್ನ ರಾಜಕಾರಣದ ಮೊದಲ ಗುರು. ಅವರ ಮತ್ತು ನನ್ನ ಒಡನಾಟದ ಇತಿಹಾಸವನ್ನು ಈಗ ನಾನು ಹೇಳುವುದಿಲ್ಲ. ನಾನು ಏನಾದ್ರೂ ತಪ್ಪು ಮಾಡಿದರೆ ಬಹಳ ನೊಂದು ಮಾತನಾಡುತ್ತಿದ್ದರು ಎಂದು ತಿಳಿಸಿದರು. ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ.ಇವತ್ತು ಬೆಳಗ್ಗೆ 3 ಗಂಟೆಗೆ ಪುತ್ರಿ ಕರೆ ಮಾಡಿ ವಿಚಾರ ತಿಳಿಸಿದಳು. ನಮ್ಮ ಕುಟುಂಬಕ್ಕೆ ಇದು ದೊಡ್ಡ ಆಘಾತ. ನಾನು ಅವರ ಕುಟಂಬದ ಒಬ್ಬ ಸದಸ್ಯ. ರಾಜಕಾರಣದಲ್ಲಿ ನಾನು ಬೆಳೆದಿದ್ದು, ಅವರು ನನ್ನನ್ನು ಬೆಳೆಸಿದ್ದು ದೊಡ್ಡ ಇತಿಹಾಸವಿದೆ ಎಂದರು.
ಬೆಂಗಳೂರು : ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಕ್ಫ್, ಮುಡಾ ಹಗರಣ ಹಾಗೂ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ವಿಷಯವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದವು. ಇದರ ಬೆನ್ನಲ್ಲೇ ಕಳೆದ ಬಿಜೆಪಿ ಅವಧಿಯಲ್ಲಿ ಎಷ್ಟು ಬಾಣಂತಿಯರು ಸಾವನಪ್ಪಿದ್ದಾರೆ ಎನ್ನುವುದನ್ನು ಸಿಎಂ ಕಚೇರಿ ಮಾಹಿತಿ ಬಹಿರಂಗಗೊಳಿಸಿದೆ. ಹೌದು ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದಾಗಿ ಸಿಎಂ ಕಚೇರಿ ಮಾಹಿತಿ ನೀಡಿದೆ. ಈ ಸಂಬಂಧ ಅಂಕಿಅಂಶ ನೀಡಿರುವ ಮುಖ್ಯಮಂತ್ರಿಗಳ ಕಚೇರಿ 2019-20ರಿಂದ 2024-25 ನವೆಂಬರ್ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿರುವುದು ವರದಿಯಾಗಿದೆ ಎಂದು ತಿಳಿಸಿದೆ. ಸದನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷಗಳು ಮುಂದಾಗಿವೆ. ಈ ಮಧ್ಯೆ ಮುಖ್ಯಮಂತ್ರಿ ಕಚೇರಿ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಬಾಣಂತಿಯರ ಸಾವುಗಳ ಅಂಕಿಅಂಶ ನೀಡಿದೆ. ಆ ಮೂಲಕ ಬಿಜೆಪಿ ಅವಧಿಯಲ್ಲೂ ಬಾಣಂತಿಯರ ಸಾವು ಹೆಚ್ಚಿರುವ ಬಗ್ಗೆ ಅಂಕಿಅಂಶ ಬಹಿರಂಗ ಪಡಿಸಿದೆ. ಅದರಂತೆ 2019-20ರಲ್ಲಿ ರಾಜ್ಯದಲ್ಲಿ ಒಟ್ಟು 662…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇದೇ ವೇಳೆ ನಾಳೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ನಾಳೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ…
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ಕಾರ್ಯ ಕಲಾಪಗಳ ಸಲಹಾ ಸಮಿತಿಯ ತುರ್ತು ಸಭೆ ನಡೆಸಲಾಗುತ್ತಿದೆ. ಹೌದು ಸುವರ್ಣ ಸೌಧದಲ್ಲಿ ಸ್ಪೀಕರ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸಲಾಗುತ್ತಿದೆ. ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ಈ ಒಂದು ಸಭೆ ನಡೆಸಲಾಗುತ್ತಿದೆ. ಮೀಟಿಂಗ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಸೇರಿದಂತೆ ಬಿಎಸಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಅಂತಿಮ ದರ್ಶನ ಕೆ ವ್ಯವಸ್ಥೆ ಮಾಡಲಾಗಿದೆ. ಅದಾದ ನಂತರ ಅವರ ಹುಟ್ಟೂರಿಗೆ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ಅಲ್ಲಿನ ಸ್ಥಳೀಯ ಜನರಿಗೆ 12 ರಿಂದ 3 ಗಂಟೆಯವರೆಗೆ ಮಂಡ್ಯ ಮದ್ದೂರು ಸುತ್ತಮುತ್ತಲಿನ ಅವರ ಅಭಿಮಾನಿಗಳಿಗೆ, ಅಂತಿಮ ನಮನ ಸಲ್ಲಿಸೋಕೆ ಅವಕಾಶ ಇರುತ್ತದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.
ಬೆಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಟ ಅವರ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ರಾಜ್ಯದ ಧೀಮಂತ ನಾಯಕ ಹಾಗೂ ರಾಜಕೀಯ ಮುತ್ಸದ್ದಿಯಾದ ಅವರು ಬೆಂಗಳೂರು ಭಾರತದ ತಂತ್ರಜ್ಞಾನದ ರಾಜಧಾನಿಯಾಗಿ ಬೆಳೆಯಲು ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಎಂದಿದ್ದಾರೆ. ಅವರ ಜೊತೆ ದಶಕಗಳ ಸ್ನೇಹ ಹೊಂದಿದ್ದ ನಾನು, ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ ಕ್ಷಣಗಳು ಎಂದೆಂದಿಗೂ ಅವಿಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ತಿಳಿಸಿದರು.












