Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೀಡಿದ್ದ 14 ನಿವೇಶನಗಳ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಇಡಿ ಅಧಿಕಾರಿಗಳ ಈ ಒಂದು ವಿಚಾರಣೆಗೆ ಸ್ವತಹ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ಬೆಚ್ಚಿಬಿದ್ದಿದ್ದಾರೆ. ಹೌದು ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಹಿಡಿ ಅಧಿಕಾರಿಗಳು ಇಂದು ಕೂಡ ತನಿಖೆಯನ್ನು ಮುಂದುವರಿಸಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಇಡಿ ಅಧಿಕಾರಿಗಳ ತನಿಖಾ ಪ್ರಕ್ರಿಯೆಯನ್ನು ಕಂಡು ಸ್ವತಃ ಮುಡಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೆಚ್ಚಿಬಿದ್ದಿದ್ದಾರೆ. ಅಧಿಕಾರಿಗಳ ಮೊಬೈಲ್ ಪರಿಶೀಲನೆ! ಇಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಕಡತಗಳು ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ ಕಚೇರಿಯ ಎಲ್ಲಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಮೊಬೈಲ್ ಗಳನ್ನು ಸಹ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮುಡಾದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಾಗಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ವೋಟರ್ ಐಡಿ ಹಗರಣ ಪ್ರಕರಣ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಹೇಳಿಕೆ ನೀಡಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ತನಿಖೆಗೆ ಐಪಿಎಸ್ ಅಧಿಕಾರಿ ನೇಮಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಜಾಲಹಳ್ಳಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಆರ್ ಆರ್ ನಗರ ಶಾಸಕ ಮುನಿರತ್ನ ಹಾಗೂ ಅವರ ಪಟಾಲಂ ಇದೆ. ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಿಗೆ ಶಾಸಕರು, ಬೆದರಿಕೆ ಹಾಕುತ್ತಿದ್ದಾರೆ. ನಾನು ಸಾಕ್ಷಿ ಹೇಳಲು ಹೋದರು ಪೊಲೀಸರು ದಾಖಲಿಸಿಕೊಂಡಿಲ್ಲ. ಬಿಜೆಪಿಯಲ್ಲಿದ್ದರು 6 ವರ್ಷದಿಂದ ನಿರಂತರವಾಗಿ ಹೋರಾಡುತ್ತಿದ್ದೇನೆ. ರಾಜ್ಯ ಪಾಲರು ನ್ಯಾಯಾಧೀಶರಿಗೆ ಪ್ರಕರಣ ಸಂಬಂಧ ದೂರ ಕೊಡುತ್ತೇನೆ. ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ತುಳಸಿ, ಮುನಿರಾಜು ದೂರು ನೀಡಿದ್ದಾರೆ. ಮೂರ್ನಾಲ್ಕು ವರ್ಷದಿಂದ ಪ್ರಕರಣದ ತನಿಖೆ ನಡೆಸದೆ ವಿಳಂಬ…
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೂರು ಕೇಸ್ ಗಳ ಕುರಿತಾಗಿ ಇದೇ ಅಕ್ಟೋಬರ್ 21ರಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ ಎಂದು ತಿಳಿದುಬಂದಿದೆ. ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ಸಂಬಂಧ ಅಕ್ಟೋಬರ್ 21ರಂದು ಹೈಕೋರ್ಟ್ ಆದೇಶ ಪ್ರಕಟಿಸಲಿದೆ. ಅಲ್ಲದೆ ಇದೆ ವೇಳೆ ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಅತ್ಯಾಚಾರ ಕೇಸ್ ಸಂಬಂಧ ಆದೇಶ ಪ್ರಕಟಿಸಲಿದೆ. ಹೈಕೋರ್ಟ್ ನ ನ್ಯಾಯಾಧೀಶರಾದ ಎಂ.ನಾಗ ಪ್ರಸನ್ನ ಅವರಿರುವ ಏಕ ಸದಸ್ಯ ಪೀಠ ಈ ಆದೇಶ ಪ್ರಕಟಿಸಲಿದೆ. ಕಳೆದ 120 ದಿನಗಳಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನದಲ್ಲಿ ಇದ್ದಾರೆ.
ಬೆಂಗಳೂರು : ಸದ್ಯ ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ಠಿಕಾಣಿ ಹೂಡಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಇದರ ಮಧ್ಯ ಈಡೇ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು 14 ಸೈಟ್ ಗಳ ಸಂಬಂಧ ಇಂಚಿಂಚು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಹಲವು ಕಡತಗಳನ್ನು ಕೂಡ ಈಡೇ ಅಧಿಕಾರಿಗಳು ಇದೆ ವೇಳೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಇಡಿ ಅಧಿಕಾರಿಗಳಿಗೆ ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಸಹಕಾರ ನೀಡಿದ್ದಾರೆ.
ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿಯವರು ಲೋಕಾಯುಕ್ತ, ಇಡಿ ಅಷ್ಟೇ ಅಲ್ಲ ಸಿಬಿಐ ತನಿಖೆ ಆದರೂ ಕೂಡ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಜಾಗಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಇಡಿ ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಏನೂ ಸಂಬಂಧವಿಲ್ಲ.ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಇಡಿ ಅಧಿಕಾರಿಗಳು ಸಿಎಂ ನಿವಾಸದ ಮೇಲೆ ದಾಳಿ ನಡೆಸಿಲ್ಲ ಎಂದರು. ಇನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ದಾಖಲೆ ನಾಶ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಹೇಳಿರುವುದು ಸಾಬೀತಾಗಲಿ. ಹಾಗೇನಾದರೂ ನಡೆದಿದ್ದರೆ, ಅದು ತನಿಖೆಯಿಂದ ಹೊರಬರುತ್ತೆ. ಇಡಿ ಅಧಿಕಾರಿಗಳ…
ಬೆಂಗಳೂರು : ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನ ಕೂಡ ಇದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು. ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು.
ಹುಬ್ಬಳ್ಳಿ : ಲೋಕಸಭೆ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚನೆ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಂಧಿಸಿದ್ದರು. ಇದೀಗ ಅವರನ್ನು ಹುಬ್ಬಳ್ಳಿಗೆ ಕರೆತಂದು ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ ಪೊಲೀಸರು ತೆರಳಿ, ಪಂಚನಾಮೆ ನಡೆಸುತ್ತಿದ್ದಾರೆ. ಎಸಿಪಿ ಚಂದನ್ ರೊಂದಿಗೆ ಅಶೋಕನಗರ ಪೊಲೀಸರು ತಂಡ ಆಗಮಿಸಿದೆ. ಇದೆ ವೇಳೆ ದೂರುದಾರ ಗೋಪಾಲ ಜೋಶಿ ಮನೆಗೆ ಸುನಿತಾ ಚೌಹಾನ್ ನನ್ನು ಪೊಲೀಸರು ಕರೆತಂದಿದ್ದಾರೆ.ಸದ್ಯ ಗೋಪಾಲ್ ಮನೆಯಲ್ಲಿ ಹಣ ಎಣಿಕೆ ಕಾರ್ಯ ನಡೆಯುತ್ತಿದ್ದು ಪೊಲೀಸರು ದುಡ್ಡು ಎಣಿಸುತ್ತಿದ್ದಾರೆ. ಬೆಂಗಳೂರು ತಂಡದ ಪೊಲೀಸರಿಂದ ಹಣ ಎಣಿಕೆ ಆಗುತ್ತಿದೆ. ಇದೇ ವೇಳೆ ಸುನಿತಾ ಚೌಹಾನ್ ಅವರು ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಯಾವುದೇ ಪಾತ್ರ ಇಲ್ಲ. ಅವರ ಹೆಸರು ಹೇಳಿಕೊಂಡು ಗೋಪಾಲ್ ನನ್ನ…
ಕಲಬುರ್ಗಿ : ಭೋವಿ ನಿಗಮದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ನಗರದ ತಮ್ಮ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಮಾತನಾಡಿದ MLC ಸುನೀಲ್ ವಲ್ಯಾಪುರೆ ಅವರು, ಈ ಪ್ರಕರಣದಲ್ಲಿ ನಮ್ಮದೇನೂ ಪಾತ್ರ ಇಲ್ಲ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಮ್ಮದೇನೂ ಪಾತ್ರ ಇಲ್ಲ. ನಮ್ಮ ಮನೆಯಲ್ಲಿ ಏನಾದ್ರು ಸಿಗಬಹುದು ಅಂತ ನನ್ನ ಮನೆಯಲ್ಲಿ ಸರ್ಚ್ ಮಾಡ್ತಿದ್ದಾರೆ. ಇಲ್ಲೇನ್ ಬದನೇಕಾಯಿಯೂ ಸಿಗಲ್ಲ. ಸಿಐಡಿ ಅಧಿಕಾರಿಗಳು ಸರ್ಚ್ ಮಾಡ್ತಿದ್ದಾರೆ ನಾನು ಅವರಿಗೆ ಸಹಕಾರ ನೀಡುತ್ತೇನೆ. ಅಧಿಕಾರಿಗಳು ಅವರ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು. ಭೋವಿ ನಿಗಮದಲ್ಲಿ ಅವ್ಯವಹಾರ ಆಗಿದೆ ಅಂತ ನಾನೇ ಧ್ವನಿ ಎತ್ತಿದ್ದೆ. ಕಳೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಭೋವಿ ನಿಗಮದಲ್ಲಿ ಅವ್ಯವಹಾರ ಆಗಿದೆ ಅಂತ ಪ್ರಸ್ತಾವನೆ ಸಲ್ಲಿಸಿ ಮಾತನಾಡಿದ್ದೆ. ಈ ಹಗರಣದಲ್ಲಿ ಕೆಲವು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಅವರೇ ನನ್ನ ಮೇಲೆ ಗೂಬೆ ಕುರಿಸಲು ಈ ರೀತಿ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರು : ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅದರಲ್ಲೂ ತೀವ್ರ ಚುನಾವಣಾ ರಂಗೇರಿದ್ದು, ಚನ್ನಪಟ್ಟಣ ಕ್ಷೇತ್ರ ಎಂದು ಹೇಳಲಾಗುತ್ತಿದೆ. ಈ ಒಂದು ಉಪಚುನಾವಣೆ ಕುರಿತಾಗಿ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಅಂತ ಹೇಳಿದ್ದೇನೆ. ಬೆಂಗಳೂರಿನಲ್ಲಿ ಸಭೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಪಕ್ಷದಿಂದ ಯಾರೇ ಸ್ಪರ್ಧಿಸಲಿ ಅದನ್ನು ನೋಡೋಕೆ ಹೋಗಬೇಡಿ. ಜೆಡಿಎಸ್ ನವರು ಸೀಟು ಬಿಟ್ಟು ಕೊಡುತ್ತಿದ್ದಾರೆಂದು ಯಾರೋ ಹೇಳಿದರು. ಸಭೆಯಲ್ಲಿದ್ದಾಗ ಯಾರೋ ಫೋನ್ ಕರೆ ಮಾಡಿ ನನಗೆ ಹೇಳಿದರು. ನಿನ್ನೆ ರಾತ್ರಿ ಎಲ್ಲಾ ಸಭೆಯ ಮೇಲೆ ಸಭೆ ಮಾಡಿದ್ದಾರೆ. ಅಷ್ಟು ವೀಕ್ ಆಗ್ತಾರೆ ಅಂತ ತಿಳಿದುಕೊಂಡಿರಲಿಲ್ಲ. ನೋಡೋಣ, ಫೈಟ್ ಮಾಡ್ತಾರೆ ಅಂತ ಅಂದುಕೊಂಡಿದ್ದೆ ಆದರೆ ಬಿಟ್ಟುಕೊಡುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಮುಖಂಡರ ಅಭಿಪ್ರಾಯವನ್ನು ಕೇಳಿದ್ದೇನೆ. ಸೇವೆ ಮಾಡುವ ಸಲುವಾಗಿ ನಾನು…
ರಾಯಚೂರು : ಕಾಲೇಜು ಫೀಸ್ ಕಟ್ಟಲು ವಿಳಂಬವಾಗಿದಕ್ಕೆ ಆಡಳಿತ ಮಂಡಳಿಯ ಅಧಿಕಾರಿಗಳು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಇದರಿಂದ ಬೇಸತ್ತ ವಿದ್ಯಾರ್ಥಿನಿಯು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಫೀಸ್ ಕಟ್ಟಲು ವಿಳಂಬವಾಗಿದ್ದಕ್ಕೆ ಬಡ್ಡಿ ಕಟ್ಟಲು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆಡಳಿತಾಧಿಕಾರಿ ಉಮಾಶಂಕರ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮಾನ್ವಿಯ KPSVS ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಫೀಸ್ ಕಟ್ಟಲು ವಿಳಂಬವಾದರೆ ಬಡ್ಡಿ ಕಟ್ಟುವಂತೆ ಆಡಳಿತಾಧಿಕಾರಿ ಉಮಾಶಂಕರ್ ವಿರುದ್ಧ ಆರೋಪ ಕೇಳಿ ಬಂದಿದೆ. ಬಯೋಮೆಟ್ರಿಕ್ ನೀಡದೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ ಕೆಟ್ಟದಾಗಿ ನಿಂದಿಸಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಆಡಳಿತಾಧಿಕಾರಿ ಉಮಾಶಂಕರ ವಿರುದ್ಧ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಒಂದು ವಿಚಾರ ತಿಳಿದು ವಿದ್ಯಾರ್ಥಿನಿಯರ ಪೋಷಕರು ಕಾಲೇಜಿಗೆ ಬಂದಿದ್ದಾರೆ. ಆಂಧ್ರ ಮಹಾರಾಷ್ಟ್ರ ಹಾಗೂ…