Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯಕ್ಕೆ ಕೊರೊನಾ ಮತ್ತೆ ಒಕ್ಕರಿಸಿದೆ. ರಾಜ್ಯಾದ್ಯಂತ 38 ಸಕ್ರಿಯ ಪ್ರಕರಣಗಳು ದೃಢಪಟ್ಟಿದ್ದು, ಅದರಲ್ಲಿ 32 ಬೆಂಗಳೂರಿನಲ್ಲಿವೆ. ವಿಜಯನಗರ, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಕಾಲಿಟ್ಟಿದೆ. ಕೊರೊನಾದಿಂದ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೌದು ನಿನ್ನೆ ಬೆಂಗಳೂರಿನಲ್ಲಿ ವೈಟ್ ಫೀಲ್ಡ್ ನ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ.ನಿನ್ನೆ ವಿಜಯನಗರ ಜಿಲ್ಲೆಯಲ್ಲಿ ಒಬ್ಬರು, ಮೈಸೂರಿನಲ್ಲಿ ಇಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿ ಸೂಚನೆ ಮೇರೆಗೆ ಇಂದಿನಿಂದ ದಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ…
ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ 6 ವರ್ಷದ ಬಾಲಕಿ ಇದೀಗ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ. ಹೌದು ಬೀದಿ ನಾಯಿಗಳ ದಾಳಿಯಿಂದ ನವ್ಯಾ (6) ಎಂಬ ಬಾಲಕಿ ಸಾವನಪ್ಪಿದ್ದಾಳೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳು ಬಾಲಕಿಯ ಮೇಲೆ ಏಕಾಏಕಿ ದಾಳಿ ನಡೆಸಿವೆ. ದಾಳಿಯ ವೇಳೆ ಬಾಲಕಿಯ ತಲೆ ಹಾಗೂ ಹೊಟ್ಟೆ ಭಾಗವನ್ನು ಕಚ್ಚಿ ಎಳೆದಾಡಿವೆ. ಬಾಲಕಿಯ ಮುಖ, ಕೈ, ಕಾಲು ಮತ್ತು ತೊಡೆ ಭಾಗವನ್ನು ಬೀದಿ ನಾಯಿಗಳು ಕಿತ್ತು ಹಾಕಿವೆ. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ನವ್ಯ ಸಾವನ್ನಪಿದ್ದಾಳೆ. ಈ ಕುರಿತು ತಿಪಟೂರು ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಬರುವ ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿಪಕ್ಷದ ನಾಯಕರು ಸೇರಿ ಇನ್ನು ಮೂರ್ನಾಲ್ಕು ಶಾಸಕರ ಜೊತೆಗೆ ಚರ್ಚಿಸುತ್ತೇನೆ. ಎಲ್ಲರ ಸಲಹೆ ಪಡೆದು ಸಂಪುಟದಲ್ಲಿ ಪ್ರಸ್ತಾಪಿಸಿ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಕೊಡಗು : ರಾಜ್ಯದಲ್ಲಿ ಇದೀಗ ಒಂದು ಕಡೆ ವರುಣ ಅಬ್ಬರಿಸುತ್ತಿದ್ದು ಭಾರಿ ಮಳೆ ಆಗುತ್ತಿರುವುದರಿಂದ ಬೆಂಗಳೂರು ಮಹಾನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ. ಇದೀಗ ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಮತ್ತು ಭಾರಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಹೌದು ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮನೆಯ ಹಿಂಭಾಗ ಪಾತ್ರ ತೊಳೆಯುತ್ತಿದ್ದ ವೇಳೆ ಗೌರಿ (60) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಮರ ಬಿದ್ದಿದ್ದರಿಂದ ಗಾಯಗೊಂಡಿದ್ದ ಗೌರಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಬೆಂಗಳೂರು : ಕೊರೋನಾ ಮಹಾಮಾರಿ ಇದೀಗ ಮತ್ತೆ ಭಾರತಕ್ಕೆ ಎಂಟ್ರಿ ಕೊಟ್ಟಿದ್ದು ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಇದೀಗ ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಹೌದು ರಾಜ್ಯದಲ್ಲಿ ಇದೀಗ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದ್ದು ಬೆಂಗಳೂರಿನಲ್ಲಿ ಒಂದೇ ಕಡೆ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ 32 ಇವೆ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಹೊಸ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಐವರಿಗೆ ಕೊರೋನಾ ಸೋಂಕು ದೃಢವಾಗಿದೆ. ಕೊರೋನಾ ಸೋಂಕಿಗೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ನಾಗ್ಪುರ : ಮಹಿಳೆಯರ ಮೇಲೆ ಯುವತಿಯರ ಮೇಲೆ ಹಾಗೂ ಪುಟ್ಟ ಪುಟ್ಟ ಮಕ್ಕಳ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಎಸುಗುತ್ತಿದ್ದ ಕಾಮಾಂಧರು ಇದೀಗ ಪ್ರಾಣಿಗಳನ್ನು ಸಹ ಬಿಡುತ್ತಿಲ್ಲ. ಹೌದು ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕಳೆದ ಮೇ 17ರಂದು ನಾಗ್ಪುರದ ಗಿಟ್ಟಿಖಾದನ್ ಪ್ರದೇಶದ ಕುದುರೆ ಸವಾರಿ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ.ರಾತ್ರಿ ವೇಳೆ ಅಕ್ರಮವಾಗಿ ಅಕಾಡೆಮಿ ಪ್ರವೇಶಿಸಿದ ಆರೋಪಿ ಕುದುರೆಯೊಂದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧ ಕುದುರೆ ಅಕಾಡೆಮಿಯ ಮಾಲೀಕರು ದೂರು ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿ ಚೋಟ್ಯಾ ಸುಂದರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ…
ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರ ಆಯ್ಕೆಯನ್ನ ಒಂದು ಕಡೆ ಕನ್ನಡ ಪರ ಸಂಘಟನೆಗಳು ಕನ್ನಡಪಟ ಹೋರಾಟಗಾರರು ವಿರೋಧಿಸುತ್ತಿದ್ದರೆ ಇನ್ನೊಂದು ಕಡೆ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.ಹಾಕಿರೋ ಬಂಡವಾಳ ಬರ್ಬೇಕು, ಉದ್ಯೋ ಸೃಷ್ಟಿಯಾಗಬೇಕು ಅದಕ್ಕೆ ಯಾರಾದರೇನು? ಎಂದು ಸಮರ್ಥನೆ ಮಾಡಿದ್ದಾರೆ. ಇಂದು ಬೆಂಗಳೂರಲ್ಲಿ ಮಾತನಾಡಿದ ಸಚಿವರು ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ ನಾವು 437 ಕೋಟಿ ಲಾಭ ಮಾಡಿದ್ದೇವೆ. ಅದನ್ನ ಸಾವಿರ ಕೋಟಿ ಮಾಡಬೇಕು. ಅದಕ್ಕೆ ಎಲ್ಲರ ಸಹಕಾರ ಮುಖ್ಯ. ನಮ್ಮ ಮಾರ್ಕೆಟಿಂಗ್ ಹೆಚ್ಚಾಗುತ್ತಲ್ಲ, ಹಾಕಿರುವ ಬಂಡವಾಳವೂ ಬರಬೇಕು, ಉದ್ಯೋಗ ಸೃಷ್ಟಿಯೂ ಆಗಬೇಕು. ಅಕ್ಕೆ ಯಾರಾದರೇನು? ಇನ್ವೆಸ್ಟ್ ಕರ್ನಾಟಕದಲ್ಲಿ 15.20 ಸಾವಿರ ಕೋಟಿ ರಾಜ್ಯಕ್ಕೆ ಬಂತಲ್ಲ, ಬಂಡವಾಳ ಹರಿದು ಬಂದಿದೆಯಲ್ಲ ಅಂತ ಸಮರ್ಥನೆ ನೀಡಿದರು. ಇನ್ನು ಇದೇ ವಿಚಾರವಾಗಿ ಸ್ಯಾಂಡಲ್ವುಡ್ ಕ್ವೀನ್ ಮೋಹಕ ತಾರೆ ನಟಿ ರಮ್ಯಾ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದು, ಬೇರೆಯವರಿಗೆ ದುಡ್ಡು ಹಾಕಿ ಟ್ಯಾಕ್ಸ್ ವ್ಯರ್ಥ ಮಾಡುತ್ತಿದ್ದೀರಿ ಎಂದು ಬೇಸರ…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಒಂದು ಸಂಭವಿಸಿದ್ದು, ಪರಸ್ಪರ ಎರಡು ಬೈಕುಗಳು ಡಿಕ್ಕಿಯಾಗಿ ಹೊತ್ತಿ ಉರಿದಿವೆ ಈ ವೇಳೆ ಮೈ ಮೇಲೆ ಪೆಟ್ರೋಲ್ ಬಿದ್ದು ಬೆಂಕಿ ತೆಗೆದುವಾಗಿ ದಹನಗೊಂಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ಪಟ್ಟಣದ ಕೊಡದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಬೈಕ್ ಸವಾರ ದಶರತ್ ಮಡಿವಾಳ (28) ಸಜೀವ ದಹನ ಹೊಂದಿದ್ದಾರೆ. ಪರಸ್ಪರ ಬೈಕ್ ಗಳು ಡಿಕ್ಕಿ ಆದ ಪರಿಣಾಮ ಮೈ ಮೇಲೆ ಪೆಟ್ರೋಲ್ ಬಿದ್ದು ದಶರಥ ಸಾವನ್ನಪ್ಪಿದ್ದಾರೆ.ಇನ್ನು ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಇನ್ನು ಮುಂದೆ ಬೆಂಗಳೂರಿನಲ್ಲಿ ಫುಟ್ಪಾತ್ ನಲ್ಲಿ ಶಾಪಿಂಗ್ ಮಾಡುವಂತಿಲ್ಲ. ಅದಕ್ಕೆ ಆದಂತಹ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ತಳ್ಳುವ ಗಾಡಿಯ ಮೂಲಕ ವ್ಯಾಪಾರ ನಡೆಸಬೇಕು. ಹಾಗಾಗಿ ಫುಟ್ಪಾತ್ ನಲ್ಲಿ ಶಾಪಿಂಗ್ ನಿಲ್ಲಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಫುಟ್ಪಾತ್ ನಲ್ಲಿ ಶಾಪಿಂಗ್ ನಿಲ್ಲಿಸಬೇಕು ಎಂದು ತೀರ್ಮಾನಿಸಿದ್ದೇವೆ. ತಳ್ಳುವ ಗಾಡಿ ಕೊಡೋಕೆ ಸಿದ್ದರಿದ್ದೇವೆ. ನಿರ್ದಿಷ್ಟವಾದ ಜಾಗದಲ್ಲಿ ಮಾತ್ರ ಮಾರಾಟ ಮಾಡಬೇಕು. ನಾಲ್ಕು ರೀತಿಯ ಗಾಡಿ ಡಿಸೈನ್ ಮಾಡಿದ್ದೇವೆ. 3000ಕ್ಕೂ ಹೆಚ್ಚು ಜನ ಗಾಡಿ ಕೊಡುವಂತೆ ಮನವಿ ಮಾಡಿದ್ದಾರೆ. ಈಗಲೂ ಕೂಡ ಎಚ್ಚರಿಕೆ ನೀಡುತ್ತೇನೆ. ನಾಳೆ ಯಾರು ಒತ್ತಡ ತರದಂತೆ ಶಾಸಕರಿಗೆ ತಿಳಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ಪಿಸ್ತೂಲ್ ಮಾರಾಟಕ್ಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ರಮವಾಗಿ ನಾಡಪಿಸ್ತೂಲ್ ತಂದು ಮಾರಾಟ ಮಾಡುತ್ತಿದ್ದ ರೌಡಿ ಶೀಟರ್ ಸಮೀರ್ ನನ್ನು ಇದೀಗ ಬೆಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಸಮೀರ್ ಕೆ ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಕಡಿಮೆ ಬೆಲೆಗೆ ಖರೀದಿಸುತ್ತಿದ್ದ. ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಗನ್ ಮಾರಾಟ ಮಾಡುತ್ತಿದ್ದ. ರೌಡಿಶೀಟರ್ ಗಳಿಗೆ ಗನ್ ಮಾರಾಟ ಮಾಡುತ್ತಿದ್ದ ಆರೋಪಿ ಸಮೇತ ಆರೋಪಿಯನ್ನು ಬಂಧಿಸಿ ಎರಡು ನಾಡಪಿಸ್ತುಲ್ ಸಿಸಿಬಿ ಪೊಲೀಸ್ ವಶಕ್ಕೆ ಪಡೆದುಕೊಂಡಿದೆ.












