Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ ನಡೆದಿದ್ದು, ಹುಬ್ಬಳ್ಳಿಯ ಜೈನ ಮಂದಿರದಲ್ಲಿ ತಡರಾತ್ರಿ ಕಳ್ಳರು ನುಗ್ಗಿ ಸುಮಾರು 3 ಕೆಜಿ ಬೆಳ್ಳಿ ಮತ್ತು ಚಿನ್ನಾಭರಣ ಕದ್ದು ಪರಾರಿ ಆಗಿರುವ ಘಟನೆ ಇದೀಗ ವರದಿಯಾಗಿದೆ. ಘಟನೆ ಕೋರಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹೌದು ಹುಬ್ಬಳ್ಳಿಯ ಹೊಸೂರು ಪ್ರದೇಶದಲ್ಲಿ ಮಧ್ಯರಾತ್ರಿ ಸಿನಿಮೀಯ ಶೈಲಿಯಲ್ಲಿ ಜೈನ ಮಂದಿರ ಕಳ್ಳತನವಾಗಿದ್ದು, ಭಕ್ತರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ. ದೇವರಿಗೆ ಅಲಂಕರಿಸಿದ್ದ ಭಾರೀ ಪ್ರಮಾಣದ ಬೆಳ್ಳಿ ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಮೂವರು ದುಷ್ಕರ್ಮಿಗಳು ಜೈನ ಮಂದಿರಕ್ಕೆ ನುಗ್ಗಿದ್ದಾರೆ ಎನ್ನಲಾಗಿದೆ. ಮಂದಿರಕ್ಕೆ ನುಗ್ಗುವ ಮೊದಲ ಖದೀಮರು ಎಲ್ಲ ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಮೊದಲು ದೇವಸ್ಥಾನದ ಸೈರನ್ ವ್ಯವಸ್ಥೆಯನ್ನು ಬಂದ್ ಮಾಡಿರುವ ಕಳ್ಳರು, ಬಳಿಕ ಸಿಸಿ ಕ್ಯಾಮೆರಾ ಕೇಬಲ್ ಕಟ್ ಮಾಡಿ ಒಳನುಗ್ಗಿದ್ದಾರೆ. ಮಂದಿರದ ಕೀಲಿ ಒಡೆದು ಒಳಗೆ…

Read More

ಗುರುಗ್ರಾಮ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣ ಗುರುಗ್ರಾಮದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಕಳೆದ ಕೆಲವು ದಿನಗಳಿಂದ ಸಣ್ಣಪ್ರಮಾಣದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಇಂದು ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ತೊಂದರೆ ಅಥವಾ ಜ್ವರದ ಲಕ್ಷಣಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ತಜ್ಞ ವೈದ್ಯರ ನಿಗಾವಣೆಯಲ್ಲಿ ಇರಿಸಲಾಗಿದ್ದು, ವಿವಿಧ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದ್ದು, ಆಸ್ಪತ್ರೆಯ ಕಡೆಯಿಂದ ಅಧಿಕೃತ ಆರೋಗ್ಯ ಬುಲೆಟಿನ್ ಬಿಡುಗಡೆಯಾಗುವುದನ್ನು ಎದುರುನೋಡಲಾಗುತ್ತಿದೆ. ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಆತಂಕ ಮನೆಮಾಡಿದೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈಗಾಗಲೇ ಆಸ್ಪತ್ರೆಗೆ ಧಾವಿಸಿದ್ದು,…

Read More

ನವದೆಹಲಿ : ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಏರಿಕೆಯಾದ ಬೆನ್ನಲ್ಲೇ ಎಂಸಿಎಕ್ಸ್‌ನಲ್ಲಿ ಫ್ಯೂಚರ್‌ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 8,838 ರೂ.(5.66%) ಏರಿಕೆಯಾಗಿ 1,61,887 ರೂ.ನಲ್ಲಿ ವ್ಯವಹಾರ ನಡೆಸುತ್ತಿದ್ದರೆ 1 ಕೆಜಿ ಬೆಳ್ಳಿ ದರ 18,0920 ರೂ. (6.36%) ಏರಿಕೆಯಾಗಿ 2,98,400 ರೂ. ನಲ್ಲಿ ವ್ಯವಹಾರ ನಡೆಸುತ್ತಿದೆ. ಮಧ್ಯಾಹ್ನ 3:30ರ ವೇಳೆಗೆ ಈ ದರ ಮತ್ತಷ್ಟು ಏರಿಳಿತವಾಗುವ ಸಾಧ್ಯತೆಯಿದೆ. ಬೆಲೆ ಏರಿಕೆಯ ವಿವರ: ಇಂದು ಬೆಳಿಗ್ಗೆ 9:45ರ ಸುಮಾರಿಗೆ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 8,838 ರೂ. (5.6% ರಷ್ಟು) ಏರಿಕೆಯಾಗಿದೆ. ಈ ಮೂಲಕ ಪ್ರತಿ 10 ಗ್ರಾಂ ಚಿನ್ನದ ದರ 1,61,887 ರೂ. ತಲುಪಿ ವ್ಯವಹಾರ ನಡೆಸುತ್ತಿದೆ. ಕೇವಲ ಚಿನ್ನ ಮಾತ್ರವಲ್ಲದೆ ಬೆಳ್ಳಿಯ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡಿದ್ದು, ಪ್ರತಿ ಕೆಜಿ ಬೆಳ್ಳಿಗೆ 18,092 ರೂ. (6.36%) ಹೆಚ್ಚಳವಾಗಿದೆ. ಇದರಿಂದ ಒಂದು…

Read More

ಮಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಘೆರಾವ್ ಹಾಕಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಒಟ್ಟು 11 ಜನರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಸಭಾಧ್ಯಕ್ಷರ ಅಂಗರಕ್ಷಕ ಮೊಹಮ್ಮದ್ ಯಾಸಿನ್ ಅವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪ್ರಮುಖ ಆರೋಪಿಗಳ ಪಟ್ಟಿ: ಮದನಿ ನಗರದ ನಿವಾಸಿ ಜುನೈದ್ ಎಂಬಾತನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದ್ದು, ಆತನೊಂದಿಗೆ ಇತರ 10 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಜನಪ್ರತಿನಿಧಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅಶಿಸ್ತಿನಿಂದ ವರ್ತಿಸಿದ ಆರೋಪಗಳನ್ನು ಇವರ ಮೇಲೆ ಹೊರಿಸಲಾಗಿದೆ. ಘಟನೆಯ ಹಿನ್ನೆಲೆ: ಇತ್ತೀಚೆಗೆ ಯು.ಟಿ. ಖಾದರ್ ಅವರು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಸ್ಥಳೀಯ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಅಸಮಾಧಾನಗೊಂಡಿದ್ದ ಗುಂಪೊಂದು ಅವರನ್ನು ತಡೆದು ನಿಲ್ಲಿಸಿತ್ತು. ಈ ವೇಳೆ ಸಭಾಧ್ಯಕ್ಷರ ವಾಹನಕ್ಕೆ ಮುತ್ತಿಗೆ ಹಾಕಿ, ಘೋಷಣೆಗಳನ್ನು ಕೂಗುತ್ತಾ ಘೆರಾವ್ ಹಾಕಲಾಗಿತ್ತು. ಈ…

Read More

ವಿಜಯಪುರ : ವಿಜಯಪುರದಲ್ಲಿ ಘೋರ ದುರಂತ ಒಂದು ನಡೆದಿದ್ದು ಕ್ರಿಕೆಟ್ ಪಂದ್ಯ ಗೆದ್ದ ಸಂಭ್ರಮದಲ್ಲಿ ಇದ್ದಾಗ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಒಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲಾರ ಪಟ್ಟಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನ ತೌಸಿಫ್ ಗಿರಗಾವಿ ಎಂದು ತಿಳಿದುಬಂದಿದೆ. ಕೋಲಾರ ಪಟ್ಟಣ ಪಂಚಾಯಿತಿ 16ನೇ ವಾರ್ಡಿನ ಸದಸ್ಯ ಆಗಿರುವ ತೌಸಿಫ್ ಗಿರಾಗಾವಿ ತಲೆ ಸುತ್ತಿ ಏಕಾಏಕಿ ಮೈದಾನದಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದರೆ. ಕೋಲಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಬೆಂಗಳೂರು : ‘ಇಂಧನವನ್ನು ಮಿತವಾಗಿ ಬಳಸಿ’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸಂಬಂಧಿಸಿದಂತೆ ಬಹುಭಾಷಾ ನಟ ಕಿಶೋ‌ರ್ ಕುಮಾ‌ರ್ ಅವರು ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಯವಾಗಿ ಪ್ರತಿಕ್ರಿಯಿಸಿದ್ದಾರೆ.ಇತ್ತೀಚೆಗೆ ಪ್ರಧಾನಿ ಮೋದಿ ಅವರು, ‘ಪಶ್ಚಿಮ ಏಶ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ವಿವೇಚನೆಯಿಂದ ಬಳಸುವುದು ಅನಿವಾರ್ಯವಾಗಿದೆ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ನಟ ಕಿಶೋ‌ರ್ ಅವರು, ಸರಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ಕಿಶೋ‌ರ್ ಅವರ ಪೋಸ್ಟ್‌ನಲ್ಲೇನಿದೆ? : “ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು ? ನಮ್ಮನ್ನು ಇಂಧನ ಉಳಿಸಿ ಕಡಿಮೆ ಖರ್ಚು ಮಾಡಿ, ಅದೇ ದೇಶಭಕ್ತಿ ಎಂದು ಹೇಳಿ ಮರುದಿನವೇ ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಇವನೋ ???(ಗಲ್ಫ್ ಯುದ್ಧ ಪ್ರಾರಂಭವಾದ ನಂತರದ ಕಳೆದ ಕೆಲವು ತಿಂಗಳುಗಳಲ್ಲಿ ಅವನು ಮಾಡಿದ ಚುನಾವಣಾ ರ್ಯಾಲಿಗಳನ್ನು ಮರೆಯಬಾರದು) ಅಥವಾ ಇವನ ಮಾತನ್ನು ನಂಬಿ, ಮತ ಹಾಕಿ ಇವನನ್ನು ಅಧಿಕಾರದಲ್ಲಿಡುವ ಜನರೋ ???” ಎಂದು ಅವರು ಪ್ರಶ್ನಿಸಿದ್ದಾರೆ.

Read More

ಬೆಳಗಾವಿ : ಬೆಳಗಾವಿ ನಗರದ ಅಜಂ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ನಿವಾಸಿಯಾಗಿರುವ ಕಾವೇರಿ ಉಮೇಶ ನಾಯಕ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಅವರು ಬಿಎಸ್ಸಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರು. ಇಂದು ತನ್ನ ಜನ್ಮದಿನದಂದೇ ಕಾವೇರಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ. ಕಳೆದ ಮೂರು ತಿಂಗಳ ಹಿಂದಷ್ಟೇ ಕಾವೇರಿಯ ನಿಶ್ಚಿತಾರ್ಥ ನಡೆದಿದ್ದು, ಪೊಲೀಸ್ ಪೇದೆಯೊಬ್ಬರೊಂದಿಗೆ ಮದುವೆ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಮಾಹಿತಿ ತಿಳಿದು ಎಪಿಎಂಸಿ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರವು ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ನಿಗಮಗಳ ಲಕ್ಷಾಂತರ ನೌಕರರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಕೆಲವು ವರ್ಷಗಳಿಂದ ಸಾರಿಗೆ ನೌಕರರು ವೇತನ ಹೆಚ್ಚಳಕ್ಕಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದರು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಹಾಗೂ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈ ವೇತನ ಹೆಚ್ಚಳವು ಅತ್ಯಗತ್ಯವಾಗಿತ್ತು. ನೌಕರರ ಸಂಘಟನೆಗಳ ಜೊತೆ ನಡೆಸಿದ ಸುದೀರ್ಘ ಚರ್ಚೆ ಹಾಗೂ ಆರ್ಥಿಕ ಇಲಾಖೆಯ ಸಮ್ಮತಿಯ ನಂತರ, ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.2025 ಏಪ್ರಿಲ್ 1 ರಿಂದ ವೇತನ ಪರಿಷ್ಕರಣೆ ಅನ್ವಯ ಆಗಲಿದೆ. ಈ ವೇತನ ಹೆಚ್ಚಳದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ಹೆಚ್ಚುವರಿ ಹೊರೆ ಬೀಳಲಿದೆ. ಆದರೂ, ಸಾರಿಗೆ ಸಂಸ್ಥೆಯನ್ನು…

Read More

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಜೂಜಿನ ಅಮಲು ಅದೆಷ್ಟೋ ಕುಟುಂಬಗಳನ್ನು ಬೀದಿಗೆ ತರುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕರುಣಾಜನಕ ಘಟನೆಯೊಂದು ಸಂಭವಿಸಿದೆ. ಬೆಟ್ಟಿಂಗ್ ಚಟಕ್ಕೆ ಬಲಿಯಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ, ಸಾಲ ತೀರಿಸಲಾಗದೆ ಸಾವಿಗೂ ಮುನ್ನ ವಿಡಿಯೋ ಮಾಡಿ ಅಳಲು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನ ಹಿನ್ನೆಲೆ: ಮೃತ ಯುವಕನನ್ನು ತಮಿಳುನಾಡು ಮೂಲದ ಶಿವಕುಮಾರ್ (28) ಎಂದು ಗುರುತಿಸಲಾಗಿದೆ. ಉದ್ಯೋಗದ ಅನ್ವೇಷಣೆಯಲ್ಲಿ ನೆಲಮಂಗಲಕ್ಕೆ ಬಂದಿದ್ದ ಈತ, ಅರಿಶಿನಕುಂಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದನು. ಕಳೆದ ಕೆಲವು ಸಮಯದಿಂದ ಐಪಿಎಲ್ ಪಂದ್ಯಗಳ ಮೇಲೆ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದ ಎನ್ನಲಾಗಿದ್ದು, ಇದೇ ಚಟ ಆತನ ಪ್ರಾಣಕ್ಕೆ ಮುಳುವಾಗಿದೆ. ಸಾವಿಗೂ ಮುನ್ನ ಮನಕಲಕುವ ವಿಡಿಯೋ: ಶಿವಕುಮಾರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಮೊಬೈಲ್‌ನಲ್ಲಿ ವಿಡಿಯೋವೊಂದನ್ನು ಚಿತ್ರೀಕರಿಸಿದ್ದಾನೆ. ವಿಡಿಯೋದಲ್ಲಿ ಅತ್ಯಂತ ಭಾವುಕನಾಗಿ ಮಾತನಾಡುತ್ತಾ, ತನ್ನ ಸಾವಿಗೆ ತಾನೇ ಕಾರಣ ಎಂದು ಒಪ್ಪಿಕೊಂಡಿದ್ದಾನೆ. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡಿರುವುದು…

Read More

ಬೆಂಗಳೂರು : ಮಾದಕ ಪದಾರ್ಥಗಳ ಮಾರಾಟ ಜಾಲದ ವಿರುದ್ಧ ಬೆಂಗಳೂರು ಪೊಲೀಸರ ಸಮರ ಮುಂದುವರೆದಿದೆ. ಅಶೋಕನಗರ, ಮಲ್ಲೇಶ್ವರಂ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅನ್ಯ ರಾಜ್ಯದ ಮೂವರ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಮೊಹಮ್ಮದ್ ಹಮ್ಜಾ ಹಾಗೂ ಯಾಸೀರ್ ಅಹಮದ್, ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಮೊಹಮ್ಮದ್ ಅಫ್ರಾನ್, ಮೊಹಮ್ಮದ್ ಸಬೀತ್ ಹಾಗೂ ಶ್ರೀನಾಥ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ ಒಟ್ಟು 1.28 ಕೋಟಿ ಮೌಲ್ಯದ 3 ಕೆಜಿ 686 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಹೈಡ್ರೋ ಗಾಂಜಾ ಖರೀದಿಸಿ ತರುತ್ತಿದ್ದ ಆರೋಪಿಗಳು ನಗರದಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಲ್ಲೇಶ್ವರಂ ಪೊಲೀಸರಿಂದ ಬಂಧಿಸಲ್ಪಟ್ಟ ಆರೋಪಿಗಳು ಮಡಿವಾಳದಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು. ಬಿಟಿಎಂ ಲೇಔಟ್ ವ್ಯಾಪ್ತಿಯಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದರು.…

Read More