Author: kannadanewsnow05

ತಿರುವನಂತಪುರಂ : ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಸದ್ಯಕ್ಕೆ ಬಂದಿರುವ ಮಾಹಿತಿ ಪ್ರಕಾರ 2,38,935 ಮತಗಳನ್ನು ಪಡೆದಿದ್ದು, 1 ಲಕ್ಷ 75 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಹುತೇಕ ಸಮೀಕ್ಷೆಗಳೆಲ್ಲ ಪ್ರಿಯಾಂಕಾ ಅವರ ಗೆಲುವಿನ ಭವಿಷ್ಯ ನುಡಿದಿದ್ದು, ಅದರಂತೆ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ಉತ್ತರ ಪ್ರದೇಶದ ರಾಯ್‌ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್‌ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದರು. ಕೊನೆಗೆ ಅನಿವಾರ್ಯವಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ಇಲ್ಲಿ ಉಪ ಚುನಾವಣೆ ಘೋಷಿಸಲಾಗಿತ್ತು. ನ. 13ರಂದು ಇಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್‌ ಭದ್ರಕೋಟೆಯಾಗಿದ್ದರೂ ಇಲ್ಲಿ ಈ ಬಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಸುಮಾರು 16 ಮಂದಿ ಕಣದಲ್ಲಿದ್ದು, ಈ ಪೈಕಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌, ಸಿಪಿಐ ನೇತೃತ್ವದ ಎಲ್‌ಡಿಎಫ್‌ ಮತ್ತು…

Read More

ಚನ್ನಪಟ್ಟಣ : ರಾಜ್ಯದಲ್ಲಿ ನವೆಂಬರ್ 13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಹೌದು ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದೀಗ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 15 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ ಈ ನೆಲೆಯಲ್ಲಿ ಮತ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಪಿ ಯೋಗೇಶ್ವರ್ 15,000 ಮತಗಳ ಮುನ್ನಡೆ ಸಾಧಿಸಿದ್ದು, ಇನ್ನು ಸಂಡೂರಿನಲ್ಲಿ ಅನುಪೂರ್ಣ ತುಕಾರಾಮ ಅವರು ಕೇವಲ 108 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಅದೇ ರೀತಿಯಾಗಿ ಶಿಗ್ಗಾವಿಯಲ್ಲಿ ಯಾಸೀರ್ ಪಠಾಣ್ ಖಾನ್ ಅವರು ರತ್ನಮಾ ವಿರುದ್ಧ 1158 ದ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕ ಸತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು…

Read More

ಮಹಾರಾಷ್ಟ್ರ : ಇಂದು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಈಗಾಗಲೇ ಮಹಾಯುತಿಯು 160 ಸ್ಥಾನಗಳ ಮುನ್ನಡೆ ಸಾಧಿಸುವುದರೊಂದಿಗೆ ಮ್ಯಾಜಿಕ್ ನಂಬರ್ ಅನ್ನು ದಾಟಿದೆ. ಇನ್ನು ಮಹಾವಿಕಾಸ್ ಅಘಾಡಿಯು 105 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಅಲ್ಲದೇ ಪಕ್ಷೇತರ ಅಭ್ಯರ್ಥಿಗಳು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಬಹುತೇಕ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎನ್ನಲಾಗಿದೆ. ಮ್ಯಾಜಿಕ್ ನಂಬರ್ ದಾಟಿದ ಮಹಾಯುತಿಯು ಸರ್ಕಾರ ರಚನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಈ ಹಿನ್ನೆಲೆಯಲ್ಲಿ 2022ರಲ್ಲಿ ಮಹಾರಾಷ್ಟ್ರದ ರಾಜಕೀಯದಲ್ಲಿ ಏಕನಾಥ್ ಶಿಂಧೆ ದೊಡ್ಡ ಬದಲಾವಣೆಯನ್ನು ತಂದವರು. ತಮ್ಮ ನಾಯಕರಾದ ಉದ್ಧವ್ ಠಾಕ್ರೆ ವಿರುದ್ಧವೇ ತಿರುಗಿಬಿದ್ದ ಶಿಂಧೆ ಶಕ್ತಿಶಾಲಿ ಬಣವನ್ನು ತಯಾರಿಸಿ ಶಿವಸೇನೆಗೆ ದೊಡ್ಡ ಅಘಾತವನ್ನು ಕೊಟ್ಟಿದ್ದರು. ಈ ಮೂಲಕ ಮಹಾರಾಷ್ಟ್ರದಲ್ಲಿ ರಾಜಕೀಯ ಸಮೀಕರಣಗಳನ್ನೇ ಬುಡಮೇಲು ಮಾಡಿ, ತಮ್ಮ ಪ್ರಭಾವವನ್ನು ಬೆಳೆಸಿಕೊಂಡಿದ್ದರು. ಹಾಗಾಗಿ ಬಿಜೆಪಿಯು ತನ್ನದೇ ಆದ ನಾಯಕನನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆಯಿದೆ. ಅಂದರೆ ಅವರು ಶಿಂಧೆ ಬಣವನ್ನು ಬಳಸಿಕೊಂಡು ಸ್ವತಂತ್ರವಾಗಿ ಸರ್ಕಾರ ಸ್ಥಾಪನೆಗೆ ಪ್ರಯತ್ನಿಸಬಹುದು.…

Read More

ಬೆಂಗಳೂರು : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಮತ ಎಣಿಕೆ ಆರಂಭವಾಗಿದ್ದು, ಈಗಾಗಲೇ ಮಹಾಯುತಿಯು ಮ್ಯಾಜಿಕ್ ನಂಬರ್ ದಾಟಿದ್ದು ಇನ್ನು ಮಹಾವಿಕಾಸ್ ಅಘಾಡಿಯು 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದು ಟಾಸ್ಕ್ ನೀಡಿದ್ದು ಆಪರೇಷನ್ ತಡೆಯುವ ನಿಟ್ಟಿನಲ್ಲಿ ಮುಂಬೈಗೆ ತೆರಳಿ ಎಂದು ಸೂಚನೆ ನೀಡಿದೆ. ಎಂವಿಎ ಶಾಸಕರನ್ನು ರಾಜ್ಯಕ್ಕೆ ಕರೆ ತರುವ ಸಾಧ್ಯತೆ ಇದ್ದು, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಸಂಜೆ ನಾಲ್ಕು ಗಂಟೆಯೊಳಗೆ ಮುಂಬೈಯಲ್ಲಿ ಇರುವಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ. ಫಲಿತಾಂಶದ ಬಳಿಕ ಆಪರೇಷನ್ ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಇದೊಂದು ಪ್ರಮುಖ ಟಾಸ್ಕ್ ನೀಡಿದೆ. ರಾಜ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಗೆ ಕಾಂಗ್ರೆಸ್ ಹೈಕಮಾಂಡ್ ಈ ಒಂದು ಜವಾಬ್ದಾರಿ ವಹಿಸಿದ್ದು,…

Read More

ಬೆಂಗಳೂರು: ಲೋಕಸಭೆ ಚುನಾವಣೆ ವೇಳೆ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಹೌದು ಕಳೆದ ಲೋಕಸಭೆ ಚುನಾವಣೆ ವೇಳೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣದಲ್ಲಿ ರಾಜಕೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ಚುನಾವಣಾ ಸಂಚಾರ ಜಾಗೃತ ದಳದ ಅಧಿಕಾರಿಯು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ ದೂರನ್ನು ರದ್ದುಪಡಿಸುವಂತೆ ಕೋರಿ ಸಂಸದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿ ದಾರರ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ಅಧಿಕಾರ…

Read More

ಚನ್ನಪಟ್ಟಣ : ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್  ಮತ್ತು ಜೆಡಿಎಸ್​ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಮಬಲದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಮೊದಲ ಸುತ್ತಿನಲ್ಲಿ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಭಾರಿ ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 31 ಮತಗಳ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಈ ಒಂದು ಹಾವು ಏಣಿಯ ಆಟದಲ್ಲಿ ಕೊನೆಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎನ್ನುವುದು ಕೊನೆಯ ಹಂತದಲ್ಲಿ ತಿಳಿದು ಬರುತ್ತದೆ. ಇನ್ನು ಅದೇ ರೀತಿಯಾಗಿ ಸಂಡೂರು ವಿಧಾನಸಭಾ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು ಕಾಂಗ್ರೆಸ್…

Read More

ರಾಮನಗರ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮೂರೂ ಕ್ಷೇತ್ರಗಳ ಪೈಕಿ ಅತ್ಯಂತ ಪ್ರಮುಖ ಹಾಗೂ ಕುತೂಹಲ ಮೂಡಿಸುವಂತಹ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ ಮೊದಲ ಸುತ್ತಿನಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಇನ್ನು ಅದೇ ರೀತಿಯಾಗಿ ಸಂಡೂರು ವಿಧಾನಸಭಾ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಏನೋ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭಾರತ್ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ ಅವರ ವಿರುದ್ಧ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ನಾನು ಪ್ರಾರಂಭದಲ್ಲಿ ಚುನಾವಣೆ ಕಣದ ಬಳಿಕ ಒಂದು ಮಾತನ್ನು ಹೇಳಿದ್ದೆ ನನಗೆ ಆತ್ಮವಿಶ್ವಾಸವಿದೆ. ಚನ್ನಪಟ್ಟಣದಲ್ಲಿ ಜನರು ಆಶೀರ್ವಾದ ಮಾಡುತ್ತಾರೆ ಎಂದು ನಂಬಿಕೆ ಇದೆ. ಹಳ್ಳಿಗಳ…

Read More

ಬೆಂಗಳೂರು : ನವೆಂಬರ್ 27ರಿಂದ 3 ದಿನಗಳ ಕಾಲ ರಾಜ್ಯದ 10 ಜಿಲ್ಲೆಗಳಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಇಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Read More

ಭೈರವ ಅಷ್ಟಮಿ 2024 ಈ ಕಾರ್ತಿಕ ಮಾಸದಲ್ಲಿ ಹಲವು ವಿಶೇಷ ದಿನಗಳಿವೆ. ಕಾರ್ತಿಕ ಮಾಸವು ಭಗವಂತನ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಮಾಸವಾಗಿದ್ದು, ಇಂದು ಭೈರವನ ಅಷ್ಟಮಿ ತಿಥಿ. ಕಾರ್ತಿಕ ಮಾಸದಲ್ಲಿ ಬರುವ ತೇಯ್ಪರೈ ಅಷ್ಟಮಿ ತಿಥಿಯನ್ನು ‘ಭೈರವಾಷ್ಟಮಿ’ ಎಂದು ಕರೆಯಲಾಗುತ್ತದೆ. ಈ ದಿನ ಭೈರವ ಅವತಾರವೆತ್ತಿದ್ದಾನೆ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಬಹಳಷ್ಟು ಅನಾಹುತಗಳು ನಡೆಯುತ್ತಲೇ ಇರುತ್ತವೆ, ಜೀವನದಲ್ಲಿ ನೆಮ್ಮದಿ ಇರುವುದಿಲ್ಲ, ಮನೆಯಲ್ಲಿದ್ದವರಿಗೆ ಅಪಘಾತಗಳು ಸಂಭವಿಸುತ್ತವೆ, ಕೆಲವರು ಮನೆಯಲ್ಲಿ ಇದರಿಂದ ಪ್ರಾಣ ಕಳೆದುಕೊಳ್ಳುತ್ತಾರೆ, ಪದೇ ಪದೇ ರಕ್ತ ಸ್ರಾವ ಆಗುತ್ತಿದೆ, ಈ ಅಶುಭ ಶಕುನಗಳನ್ನು ಇಟ್ಟರೆ ನಂತರ ಕುಟುಂಬ ಸದಸ್ಯರು (23-11-2024) ಭೈರವನನ್ನು ಪೂಜಿಸಬೇಕು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು…

Read More

ಬೆಂಗಳೂರು : ಕರ್ನಾಟಕ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಸದ್ಯ ಆರಂಭವಾಗಿದ್ದು, ಈಗಾಗಲೇ 3 ಕ್ಷೇತ್ರಗಳಲ್ಲಿ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್ ರೂಮ್ ಅನ್ನು ಚುನಾವಣಾ ಸಿಬ್ಬಂದಿಗಳು ಓಪನ್ ಮಾಡಿ ಮತ ಎಣಿಕೆಯನ್ನು ಆರಂಭಸಿದ್ದಾರೆ. ಕಳೆದ ನವೆಂಬರ್ 13ರಂದು ರಾಜ್ಯದ ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಉಪಚುನಾವಣೆಗೆ ಮತದಾನ ನಡೆದಿತ್ತು. ಇದೀಗ ಇಂದು ಈ ಒಂದು ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಮಧ್ಯಾಹ್ನದೊಳಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮತ ಎಣಿಕೆ ಕೇಂದ್ರದಿಂದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ನಿಲ್ಲುವಂತಿಲ್ಲ ಹಾಗೂ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಮತ ಎಣಿಕೆ ಕೇಂದ್ರದ ಸುತ್ತಲೂ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಮೂರು…

Read More