Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ ಎಂದು ತಿಳಿಸಿದರು. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ…
ಯಾದಗಿರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಯಾದಗಿರಿ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ಕೋರನ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ನೇಣು ಬಿಗಿದುಕೊಂಡು ಯುವಕ ಅಂಜಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಂಜಪ್ಪ ಸೂಸೈಡ್ ಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಯಾದಗಿರಿಯ ಸ್ವಾಮಿ ವಿವೇಕಾನಂದರ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಮೀಟರ್ ಬಡ್ಡಿ ದಂಧೆಗೆ ಯುವಕ ನೊಂದು ಆತ್ಮಹತ್ಯೆ ಯತ್ನಿಸಿದ್ದಾನೆ. ಮೌನೇಶ್ ಎಂಬ ವ್ಯಕ್ತಿ ಅವಳಿ ಅಂಜಪ್ಪ 10,000 ಸಾಲವನ್ನು ಪಡೆದಿದ್ದ ಈ ವೇಳೆ ಹತ್ತು ಸಾವಿರಕ್ಕೆ ಅಸಲು ಮೀಟರ್ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದರಿಂದ ನೊಂದ ಅಂಜಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಹಾಸನ : ಹಾಸನದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಕ್ಕಿಹಳ್ಳಿ ನಡೆದಿದೆ. ಮೃತ ಯುವಕನನ್ನು ಹಾಸನ ತಾಲೂಕಿನ ಮಲ್ಲಾಪುರ ಗ್ರಾಮದ ಸಂಜು (25) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಬೇಲೂರು ತಾಲ್ಲೂಕಿನ ಹಕ್ಕಿಹಳ್ಳಿ ಸಮೀಪದ ಸಿಲ್ವರ್ ಸ್ಯಾಂಡ್ ಕ್ರಷರ್ನಿಂದ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸಂಜು ಟ್ರ್ಯಾಕ್ಟರ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರಷರ್ ಮಾಲೀಕರು ಸಮರ್ಪಕ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ ಬಳಿ ಕಂಬಳಿಪುರದಲ್ಲಿ ನಡೆದಿದೆ. ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ವೇಗವಾಗಿ ಬಂದಂತಹ ಕಾರು ಭೀಕರವಾಗಿ ಡಿಕ್ಕಿ ಹೊಡೆದಿದೆ.ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ಕಿಗೆ ಕಾರು ಡಿಕ್ಕಿ ಹೊಡೆದಿದೆ ಕೂಡಲೇ ಕಾರು ಚಾಲಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಮೃತನನ್ನು ಆಂಧ್ರ ಮೂಲದ ಅಮರ್ ಪ್ರಸಾದ್ ಮೃತ ಚಾಲಕ ಎಂದು ತಿಳಿದುಬಂದಿದ್ದು ಅಪಘಾತದ ರಭಸಕ್ಕೆ ಕಾರು ಮೂರು ರೌಂಡ್ ಪಲ್ಟಿ ಹೊಡೆದಿದೆ.
ಹಾಸನ : ನಿನ್ನೆ ತಾನೇ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಹಾಸನದಲ್ಲಿ ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು ಸದ್ಯ ಆರೋಪಿಯನ್ನು ಪೊಲೀಸರು ಆಯ್ಕೆ ಪಡೆದುಕೊಂಡಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಕಾಮುಕ ಕೃಷ್ಣ ಎನ್ನುವ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ ಸಂಬಂಧಿಕರ ಮದುವೆಗೆ ಪೋಷಕರು ತೆರಳಿದ್ದರು. ಈ ಸಂದರ್ಭದಲ್ಲಿ ಚಾಕ್ಲೆಟ್ ಕೊಡುವ ನೆಪದಲ್ಲಿ ಕೀಚಕ ಕೃಷ್ಣ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಟೆಂಪೋ ಡಿಕ್ಕಿಯಾಗಿ ನೌಕಾ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಪಶ್ಚಿಮ ಬಂಗಾಳ ಮೂಲದ ಕಟ್ಟಡ ಕಾರ್ಮಿಕ ಜಸ್ತಿ ಮಂದಾಲ್ (50) ಸಾವನ್ನಪ್ಪಿರುವ ಕಾರ್ಮಿಕ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನೌಕಾ ನೆಲೆಯಲ್ಲಿ ನಿನ್ನೆ ರಾತ್ರಿ ಒಂದು ಘಟನೆ ಸಂಭವಿಸಿದೆ. ಎಲ್ ಎನ್ ಟಿ ಕಂಪನಿಯ ಗುತ್ತಿಗೆ ಆಧಾರದಲ್ಲಿ ಮಂಡಾಲ್ ಕೆಲಸ ಮಾಡುತ್ತಿದ್ದ. ಕೆಲಸ ಮುಗಿದ ಬಳಿಕ ಕಾರ್ಮಿಕರನ್ನು ಕರೆದೊಯ್ಯಲು ಟೆಂಪೋ ಬಂದಿತ್ತು. ಈ ವೇಳೆ ನಿಯಂತ್ರಣ ತಪ್ಪಿ ಕಾರ್ಮಿಕ ಮಂಡಾಲ್ ಗೆ ಟೆಂಪೋ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಕಾಯ್ಕೊಂಡಿದ್ದ ಮಂಡಾಲ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಜಸ್ತಿ ಮಂಡಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ಕಾರವಾರ ಪೊಲೀಸರು ಟೆಂಪೋ ಚಾಲಕರ ಅಜಯ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಮಿಕರು ಮತ್ತು ಕುಟುಂಬಸ್ಥರು ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.…
ಬೆಂಗಳೂರು : ತೆಲುಗಿನಲ್ಲಿ ನಟ ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾದಲ್ಲಿ ರಕ್ತಚಂದನ ಕಳ್ಳ ಸಾಗಾಟ ಮಾಡಿ, ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸುವ ದೃಶ್ಯ ಸಿನಿಮಾದಲ್ಲಿ ಇದೆ. ಇದೀಗ ಅದೇ ರೀತಿ ಆಂಧ್ರದಿಂದ ರಕ್ತ ಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಬೇಟೆಯಾಡಿದ್ದಾರೆ. ಹೌದು ಪುಷ್ಪ ಸಿನಿಮಾದ ರೀತಿಯಲ್ಲಿ ಆಂಧ್ರದ ನಲ್ಲಮಲ ಅರಣ್ಯದಿಂದ ಅಕ್ರಮವಾಗಿ ರಕ್ತಚಂದನ ಮರಗಳ ಸಾಗಾಟ ಮಾಡುತ್ತಿದ್ದವರನ್ನು ಬೇಟೆಯಾಡಿದ ಆಂಧ್ರದ ಚಿತ್ತೂರು ಪೊಲೀಸರು, ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದ 150 ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಬಳಿ ರಕ್ತಚಂದನ ತುಂಡು ಜಪ್ತಿ ಮಾಡಲಾಗಿದೆ.
ಬೆಂಗಳೂರು : ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿಸಿ ಸುಮಾರು 7 ಕೋಟಿಗೂ ಅಧಿಕ ಹಣ ಪಡೆದು ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಯನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಬ್ಯಾಂಕ್ ವಂಚನೆ ಕೇಸ್ ನಲ್ಲಿ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ಹೊರಡಿಸಿದರು. ಸಿಬಿಐ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣ ಶೆಟ್ಟಿ ದೋಷಿ ಎಂದು ಇದೀಗ ಕೋರ್ಟ್ ಆದೇಶ ಹೊರಡಿಸಿದೆ. 2008ರಲ್ಲಿ ಎಸ್ಬಿಎಂ ಬ್ಯಾಂಕ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಂಚನೆ, ಫೋರ್ಜರಿ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಆದೇಶ ನೀಡಿದೆ. 7.17 ಕೋಟಿ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಲಾಗಿತ್ತು. ಸರ್ಕಾರಿ ನೌಕರರ ನಕಲಿ ದಾಖಲೆ ಸೃಷ್ಟಿ ಮಾಡಿ ಸಾಲ ಪಡೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಬ್ಯಾಂಕ್ ವಂಚನೆ ಪ್ರಕರಣದಲ್ಲಿ…
ಬೆಂಗಳೂರು : ಇದೇ ಫೆಬ್ರವರಿ 8ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆಗೆ ನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ಆಹ್ವಾನಿಸಿದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಸಿಸಿಎಲ್ 11ನೇ ಆವೃತ್ತಿ ಉದ್ಘಾಟನೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುದೀಪ ಅವರು ಆಹ್ವಾನ ನೀಡಿದ್ದಾರೆ. ಫೆಬ್ರವರಿ 8 ರಿಂದ ಬೆಂಗಳೂರಿನಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಆರಂಭವಾಗಲಿದೆ. ಫೆಬ್ರವರಿ 8ರಿಂದ ಈ ಒಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಆರಂಭವಾಗಲಿವೆ. ಫೆಬ್ರವರಿ 8 ಮತ್ತು 9ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.ಮೊದಲ ಪಂದ್ಯ ಕರ್ನಾಟಕದ ಮತ್ತು ಹೈದ್ರಾಬಾದ್ ನಡುವೆ ನಡೆಯಲಿದೆ.ಅನೂಪ್ ಭಂಡಾರಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ಕೂಡ ನಟ ಸುದೀಪ್ ಕಾರಿನಲ್ಲೇ ತೆರಳಿದರು. https://twitter.com/KicchaSudeep/status/1886728124215517572?t=_orGnURH9iEZQLYl9BovNA&s=19
ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ SIT ಅಧಿಕಾರಿಗಳು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಗೆ ಎರಡನೇ ಬಾರಿ ನೋಟಿಸ್ ನೀಡಿದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಇದು ತನಿಖೆಯ ಒಂದು ಭಾಗ ಅಷ್ಟೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ತನಿಖೆಯ ಒಂದು ಭಾಗ ಅಷ್ಟೇ. ಯಾರನ್ನು ಕರೆದು ಹೇಳಿಕೆ ದಾಖಲು ಮಾಡಿಕೊಳ್ಳಬೇಕು ಆ ಪ್ರಕ್ರಿಯೆ ಮಾಡುತ್ತಿದ್ದಾರೆ. ಅದರಲ್ಲಿ ಮೊಹಮ್ಮದ್ ನಲಪಾಡ್ ಒಬ್ಬರು ಎಂದು ಸಚಿವ ಜಿ.ಪರಮೇಶ್ವರ್ ಅವರು ತಿಳಿಸಿದರು. ಈ ಒಂದು ಪ್ರಕರಣದಲ್ಲಿ ಯಾವ ರೀತಿ ವ್ಯವಹಾರ ಇದೆ ಎಂದು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ. ಹಣಕಾಸಿನ ವ್ಯವಹಾರ ಇದೆಯಾ ಅಥವಾ ಇಲ್ವಾ ಅಂತ ತನಿಖೆ ನಡೆಸುತ್ತಾರೆ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.SIT ಅಧಿಕಾರಿಗಳು ನೋಟಿಸ್ ನೀಡಿದ್ದರ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನದ ಭೀತಿ ಕೂಡ ಎದುರಾಗಿದೆ.













