Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಹಾವೇರಿಯಲ್ಲಿ ಚಲಿಸುತ್ತಿದ್ದ ಬಸ್ ಅನ್ನು ಸಡನ್ ಆಗಿ ಚಾಲಕ ನಿಲ್ಲಿಸಿ ಹಿಂದುಗಡೆ ಇರುವ ಸೀಟ್ ಗೆ ಬಂದು ನಮಾಜ್ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್-ಹಾವೇರಿ ಮಾರ್ಗದ ಮಧ್ಯದಲ್ಲಿ ನಡೆದಿದೆ. ಈ ಒಂದು ವಿಡಿಯೋವನ್ನು satish_kandagalpura ಎನ್ನುವವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಸ್ ಚಾಲಕ ನಮಾಜ್ ಮಾಡುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು, ಭಾರೀ ವೈರಲ್ ಆಗುತ್ತಿದೆ.ಜೊತೆಗೆ, ಸರ್ಕಾರಿ ಕೆಲಸದ ಅವಧಿಯಲ್ಲಿ ಹತ್ತಾರು ಪ್ರಯಾಣಿಕರನ್ನು ಬಸ್‌ನಲ್ಲಿ ಕೂರಿಸಿ ನಮಾಜ್ ಮಾಡಿದ ಡ್ರೈವರ್‌ನ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಗೆ ಸೇವೆ ನೀಡುವ ಸರ್ಕಾರಿ ಸಂಸ್ಥೆಯ ಬಸ್‌ನಲ್ಲಿ ಕರ್ತವ್ಯದ ವೇಳೆ ಈ ರೀತಿಯ ಧಾರ್ಮಿಕ ಚಟುವಟಿಕೆಯನ್ನು ಮಾಡುವುದು ಸರಿಯಾದ ಚಟುವಟಿಕೆ ಅಲ್ಲ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದ್ದಾರೆ. ಕೆಲವರು ಇದು ಸಾರ್ವಜನಿಕ ಸೇವೆಯ ದುರಪಯೋಗವೆಂದು ನಿಂದಿಸಿದ್ದಾರೆ. ಇದಲ್ಲದೆ, ಬಸ್ ಸಕಾಲದಲ್ಲಿ ತಲುಪದೇ ವಿಳಂಬವಾಗಿರುವ ಬಗ್ಗೆ ಸಹ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸ್ ನಲ್ಲಿ ಹಲವು…
ಕೊಲ್ಕತ್ತಾ : ಕೋಲ್ಕತ್ತಾದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಫಾಲ್ಪಟ್ಟಿ ಮಚುವಾ ಬಳಿ ಇರುವ 6 ಅಂತಸ್ತಿನ ರಿತುರಾಜ್ ಹೋಟೆಲ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಜೀವ ದಹನ ಹೊಂದಿದ್ದಾರೆ. ಈಗಾಗಲೇ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ 14 ಮೃತ ದೇಹಗಳನ್ನು ಹೊರಗರೇ ತೆಗೆದಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಹೋಟೆಲ್ ನಲ್ಲಿ ಹಲವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಕಟ್ಟಡದಿಂದ ಬಿದ್ದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಗರದ ಬುರ್ರಬಜಾರ್ ಪ್ರದೇಶದ ಮದನ್ಮೋಹನ್ ಬೀದಿಯಲ್ಲಿರುವ ಋತುರಾಜ್ ಹೋಟೆಲ್‌ನಲ್ಲಿ ಸಂಜೆ 7:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಹತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಬೆಂಗಳೂರು : ಕಳೆದ ಏಪ್ರಿಲ್ 13 ರಂದು ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಬಿಹಾರ್ ಮೂಲದ ರಿತೇಶ್ ಎಂಬ ಆರೋಪಿ ಕಿಡ್ನ್ಯಾಪ್ ಮಾಡಿ ಅತ್ಯಾಚಾರಗೈದು ಕೊಲೆ ಮಾಡಿದ್ದ. ಬಳಿಕ ಆತನನ್ನು ಬಂಧಿಸಲು ಹೋದಾಗ ಆರೋಪಿ ರಿತೇಶ್ ಪೊಲೀಸರ ಎನ್ಕೌಂಟರ್ ಗೆ ಬಲಿಯಾಗಿದ್ದ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (NHRC) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ನೀಡಿದ್ದು, ಸಂತ್ರಸ್ತೆಯ ಹಾಗೂ ಆರೋಪಿ ಆರೋಪಿಯ ಮರಣೋತ್ತರ ಪರೀಕ್ಷೆ ವರದಿ ಮ್ಯಾಜಿಸ್ಟ್ರಿರಿಯಲ್ ತನಿಖಾವರದಿ ಸೇರಿದಂತೆ ಒಟ್ಟಾರೆಯಾಗಿ ಎಲ್ಲಾ ವರದಿಯನ್ನು ನಾಲ್ಕು ವಾರದೊಳಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. ಕಳೆದ ಏಪ್ರಿಲ್ 13 ರಂದು 5 ವರ್ಷದ ಬಾಲಕಿಯನ್ನು ಬಿಹಾರ್ ಮೂಲದ ರಿತೇಶ್ ಎಂಬ ಆರೋಪಿ ಅಪಹರಣ ಮಾಡಿ ಬಳಿಕ ಅತ್ಯಾಚಾರ ಎಸಗಿದ್ದ.…
ಮೈಸೂರು : ಜಮೀನು ಸರ್ವೆ ಮಾಡಲು ಎಂದು ತೆರಳಿದ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬೆಟ್ಟದಬೀಡು ಗ್ರಾಮದಲ್ಲಿ ಇಲಾಖೆಯ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೆಟ್ಟದ ಬಿಡು ಗ್ರಾಮದಲ್ಲಿ ಈ ಘಟನೆ ನಡೆದಿ. ಜಮೀನು ಸರ್ವೆಗೆ ಎಂದು ಸಿಬ್ಬಂದಿಗಳು ತೆರಳಿದ್ದರು. ಇಲಾಖೆ ಸಿಬ್ಬಂದಿಗಳಾದ ಮಂಜುನಾಥ ಹಾಗೂ ಇನ್ನೊರ್ವ ಸಿಬ್ಬಂದಿಯ ಮೇಲೆ ಗ್ರಾಮದ ಶಿವಣ್ಣೇಗೌಡ ಸ್ವಾಮಿಗೌಡ ಸಹೋದರ ವಿರುದ್ಧ ಇದೀಗ ಹಲ್ಲೆಯ ಆರೋಪ ಕೇಳಿ ಬಂದಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸರ್ವೇ ನಂಬರ್ 32ರ ಜಮೀನು ಸರ್ವೆ ನಡೆಸಿ ಜಾಗ ಗುರುತಿಸಲು ತೆರಳಿದ್ದಾಗ ಇಬ್ಬರು ಸಹೋದರರು ಹಲ್ಲೆ ಮಾಡಿದ್ದಾರೆ. ಇಬ್ಬರು ಸಿಬ್ಬಂದಿಗಳ ಮುಖ ಮತ್ತು ಎದೆಯ ಭಾಗಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ. ಇಬ್ಬರಿಗೂ ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಎಚ್ ಡಿ…
ಬೆಂಗಳೂರು : ರಾಜ್ಯದ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದೆ. ಟ್ಯಾಕ್ಸಿ ಲಘು ವಾಹನಗಳು ದುಬಾರಿ ಆಗಲಿವೆ 10 ಲಕ್ಷದೊಳಗಿನ ವಾಣಿಜ್ಯ ವಾಹನಗಳ ತೆರಿಗೆ ಹೆಚ್ಚಾಗಲಿದೆ. ಕರ್ನಾಟಕ ಮೋಟಾರ್ ವಾಹನಗಳ ವಿಧೇಯಕಕ್ಕೆ ರಾಜಪಾಲರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಇದೀಗ ವಾಹನ ಮಾಲೀಕರಿಗೆ ತೆರಿಗೆ ಶಾಕ್ ನೀಡಲಾಗಿದೆ. ಹೌದು ನಾಳೆಯಿಂದ ವಾಹನಗಳ ಜೀವಿತಾವಧಿ ತೆರಿಗೆ ಏರಿಕೆ ಆಗಲಿದೆ. 10 ಲಕ್ಷದೊಳಗಿನ ಟ್ಯಾಕ್ಸಿ, ಲಘು ವಾಹನಗಳ ತೆರಿಗೆ ಏರಿಕೆಯಾಗಲಿದೆ. ವಾಹನಗಳ ಜೀವಿತಾವಧಿ ತೆರಿಗೆ ಶೇಕಡ 5ರಷ್ಟು ಏರಿಕೆಯಾಗಲಿದೆ. ವಾಣಿಜ್ಯ ಉದ್ದೇಶ ಬಳಕೆಯ ಎಲೆಕ್ಟ್ರಿಕ್ ವಾಹನಗಳ ತೆರಿಗೆಯು ಏರಿಕೆಯಾಗಲಿದೆ. 25 ಲಕ್ಷಕ್ಕೂ ಹೆಚ್ಚಿನ ವಾಣಿಜ್ಯ ಬಳಕೆ ಇವಿಗೆ ಶೇಕಡ 10 ರಷ್ಟು ತೆರಿಗೆ ಏರಿಕೆಯಾಗಿದೆ. ಇದುವರೆಗೂ 10 ಲಕ್ಷಕ್ಕಿಂತ ಕಡಿಮೆ ಮುಳ್ಳಿದ ವಾಹನಗಳಿಗೆ ತೆರಿಗೆ ಇರಲಿಲ್ಲ. ನಾಳೆಯಿಂದ ಈ ಎಲ್ಲ ವಾಹನಗಳ ಜೀವಿತಾವಧಿ ತೆರಿಗೆ ಏರಿಕೆ ಆಗಲಿದೆ.
ಬಾಂಗ್ಲಾದೇಶ : ಕಳೆದ 5 ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಒಟ್ಟುಗೂಡಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕೆ ಬಂಧಿಸಲಾಗಿದ್ದ ಇಸ್ಕಾನ್ ಸಂಸ್ಥೆಯ ಮಾಜಿ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ 5 ತಿಂಗಳ ಬಳಿಕ ಜಾಮೀನು ನೀಡಿದೆ. ಹೌದು ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ ಚಿನ್ಮಯ್ ಕೃಷ್ಣದಾಸ್‌ರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು.ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ 5 ತಿಂಗಳ ಬಳಿಕ ಜಾಮೀನು ನೀಡಿದೆ. ಪ್ರಕರಣ ಹಿನ್ನೆಲೆ? ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಚಿನ್ಮಯ್ ಕೃಷ್ಣದಾಸ್ ಅವರು ಧ್ವನಿ ಎತ್ತಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿತ್ತು. ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ…
ಲಾಹೋರ್ : ಪಾಕಿಸ್ತಾನದ ಕರಾಳ ಮುಖ ಇದೀಗ ಮತ್ತೊಮ್ಮೆ ಬಯಲಾಗಿದ್ದು, ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಹಾಗು ಲಷ್ಕರ್ ಸಂಘಟನೆಯ ಮುಖ್ಯಸ್ಥ ಉಗ್ರ ಹಫೀಜ್ ಸಯೀದ್ ಮನೆಗೆ ಇದೀಗ ಪಾಕಿಸ್ತಾನ ಸೇನೆಯೇ ಬಿಗಿ ಭದ್ರತೆ ಒದಗಿಸಿದೆ. ಉಗ್ರರನ್ನು ನಾವು ಸಾಕುತ್ತಿಲ್ಲ ಎಂದು ಇತ್ತೀಚಿಗೆ ಪಾಕಿಸ್ತಾನ ಅಧಿಕಾರಿಯೊಬ್ಬ ಹೇಳಿದ್ದ ಇದೀಗ ಪಾಕಿಸ್ತಾನದ ಮತ್ತೊಂದು ಕರಾಳ ಮುಖ ಬಟಾ ಬಯಲಾಗಿದೆ. ಉಪಗ್ರಹಗಳ ಚಿತ್ರಗಳ ಪ್ರಕಾರ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ತಿಳಿದುಬಂದಿದ್ದು, ಉಗ್ರ ಹಫೀಜ್ ಸಯೀದ್ ಪಾಕಿಸ್ತಾನ ಜೈಲಲ್ಲಿ ಇದ್ದಾನೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಬಂದಿರುವ ಮಾಹಿತಿಯ ಪ್ರಕಾರ ಉಗ್ರ ಹಫೀಜ್ ಸಯೀದ್ ಜೈಲಲ್ಲಿ ಇಲ್ಲ ಲಾಹೋರ್ ನಲ್ಲಿ ತನ್ನ ಮನೆಯಲ್ಲಿ ಅಡಗಿ ಕುಳಿತಿದ್ದಾನೆ ಇದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ ಇದೀಗ ಆತನ ಮನೆಗೆ ಪಾಕಿಸ್ತಾನ ಸೇನೆಯೇ ಬಿಗಿ ಭದ್ರತೆ ನೀಡಿದೆ ಎಂದು ತಿಳಿದುಬಂದಿದೆ.ಆತನ ಮನೆಗೆ ಡ್ರೋನ್ ಗಳ ಮೂಲಕ ಪಾಕಿಸ್ತಾನ ಸೇನೆ ಬಿಗಿ ಭದ್ರತೆ ಮೂಲಕ ಕಣ್ಗಾವಲು ಇರಿಸಿದೆ. ಲಾಹೋರ್ ನಲ್ಲಿ ತನ್ನ…
ಬೆಂಗಳೂರು : ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಬೆಂಗಳೂರಲ್ಲಿ ಇಂದು ಏಕಾಏಕಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದೆ ಬೆಂಗಳೂರಿನ ಹಲವೆಡೆ ಇಂದು ಧಾರಾಕಾರ ಮಳೆ ಸುರಿಯುತ್ತಿದ್ದು, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್ ರಸ್ತೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಎಂ ಜಿ ರಸ್ತೆ, ಶಾಂತಿನಗರ, ಕೆಆರ್ ಮಾರ್ಕೆಟ್ ಹಾಗು ಜಯನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇದೀಗ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಕಲಬುರ್ಗಿ : ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಕಲಬುರ್ಗಿಯ ಕಾಂಗ್ರೆಸ್ ಮುಖಂಡ ಭೀಮಾಶಂಕರ ಬಿಲಗುಂದಿ ಸೇರಿದಂತೆ ಮೂವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ದಾಳಿ ಮಾಡಿ, ಶೋಧ ನಡೆಸಿದ್ದಾರೆ. ಹೌದು 2018ರಿಂದ 2024ರವರೆಗೆ ಎಂಆರ್‌ಎಂಸಿಯ 282 ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 81.21 ರೂ.ಕೋಟಿ ಸ್ಟೈಫಂಡ್ ಹಣವನ್ನು ಭೀಮಾಶಂಕರ ಸೇರಿ ನಾಲ್ವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ 2023ರ ಮಾರ್ಚ್ 31ರಂದು ಕಲಬುರ್ಗಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿಗಳ ಖಾತೆಗೆ ಸ್ಟೈಫಂಡ್ ಹಣ ಜಮೆ ಮಾಡಿಸಿ, ಬಳಿಕ ವಿದ್ಯಾರ್ಥಿಗಳಿಂದ ಖಾಲಿ ಚೆಕ್‌ಗಳಿಗೆ ಅಕ್ರಮವಾಗಿ ಸಹಿ ಪಡೆದುಕೊಂಡಿದ್ದರು. ಆ ನಂತರ ಅಕ್ರಮವಾಗಿ ಸ್ಟೈಫಂಡ್ ಹಣವನ್ನು ವಿತ್‌ಡ್ರಾ ಮಾಡಿಕೊಂಡ ಈ ನಾಲ್ವರು, ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಈ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ ಈ ಸಂಬಂಧ ಭೀಮಾಶಂಕರ ಬಿಲಗುಂದಿ, ಡಾ.ಎಸ್.ಎಂ. ಪಾಟೀಲ, ಸುಭಾಷ ಜಗನ್ನಾಥ ಅವರ ಮನೆಗಳಲ್ಲಿ…
ಠಾಣೆ : ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮೊಬೈಲ್ ಎಂಬ ಗೀಳಿಗೆ ಅಂಟಿಕೊಂಡಿದ್ದು, ಇದೀಗ ಅತಿಯಾದ ಮೊಬೈಲ್ ಬಳಕೆ ಮಾಡದಂತೆ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನೊಂದ 20 ವರ್ಷದ ಯುವತಿ, 11ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಘಟನೆ ಠಾಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸಮೀಕ್ಷಾ ನಾರಾಯಣ ವಡ್ಡಿ ಎಂದು ಗುರುತಿಸಲಾಗಿದೆ.ಯುವತಿ ರಾತ್ರಿ ವೇಳೆಯಲ್ಲಿ ಮೊಬೈಲ್‌ನಲ್ಲಿ ಅತಿಯಾಗಿ ಮಾತನಾಡುತ್ತಿದ್ದರು. ಇದಕ್ಕೆ ಅವರ ಮನೆಯವರು ಆಕ್ಷೇಪ ವ್ಯಕ್ತಪಡಿಸಿ, ಮೊಬೈಲ್ ಬಳಕೆಯನ್ನು ತಗ್ಗಿಸುವಂತೆ ಸಲಹೆ ನೀಡಿದ್ದರು. ಇದಕ್ಕೆ ನಿರಾಕರಿಸಿದ ಯುವತಿಯಿಂದ ಮೊಬೈಲ್ ಕಸಿದುಕೊಳ್ಳಲಾಗಿತ್ತು. ಇದರಿಂದ ಯುವತಿ ಮನನೊಂದಿದ್ದಳು.ಈ ವೇಳೆ ತಾನು ವಾಸವಿದ್ದ ಅಪಾರ್ಟ್ಮೆಂಟ್ 12ನೇ ಮಹಡಿಯಿಂದ ಜಿಗಿದು ಜಿಗಿದಿದ್ದಾಳೆ. ಈ ವೇಳೆ ತಕ್ಷಣ ಇವರನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ, ಆ ಹೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.














