Author: kannadanewsnow05

ದಾವಣಗೆರೆ : ಭಾರಿ ಮಳೆಗೆ ಮನೆ ಗೋಡೆ ಒಂದು ಕುಸಿತಗೊಂಡು ನಾಲ್ಕು ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಮಳೆಯಿಂದ ಮನೆ ಗೋಡೆ ಕುಸಿದು 4 ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿದೆ. ದಾವಣಗೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಸದ್ಯ ಬಾಲಕಿಯನ್ನು ಬಾಪೂಜಿ ಮಕ್ಕಳ ಆಸ್ಪತ್ರೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯಿಂದ ಬಾಪೂಜೆ ಮಕ್ಕಳ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನೆನ್ನೆ ಹರಿಹರದ ಜೈಭೀಮ ನಗರದಲ್ಲಿ ಮನೆ ಗೆ ಗೋಡೆ ಕುಸಿತವಾಗಿತ್ತು.ಮನೆಗೂಡೆ ಕುಸಿತಗೊಂಡು ನಾಲ್ಕು ವರ್ಷದ ಬಾಯಕೆಗೆ ಗಾಯವಾಗಿದೆ.

Read More

ಬೆಳಗಾವಿ : ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ವರ್ಣಾರ್ಭಟಕ್ಕೆ ಇಡೀ ಬೆಂಗಳೂರಿನ ಜನತೆ ತತ್ತರಿಸಿ ಹೋಗಿದ್ದರು. ಬೆಂಗಳೂರಿನ ಹಲವು ರಸ್ತೆಗಳಂತೂ ನೀರು ತುಂಬಿ ಸಂಪೂರ್ಣವಾಗಿ ಕೆರೆಗಳಂತಾಗಿದ್ದವು. ಇದೀಗ ಇದೆ ಪರಿಸ್ಥಿತಿ ಬೆಳಗಾವಿಯಲ್ಲೂ ಕೂಡ ನಿರ್ಮಾಣವಾಗಿದೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದೂ, ಹುಕ್ಕೇರಿ ತಾಲೂಕಿನ ಬುಗಟಿ ಆಲೂರು, ಮತ್ತೆವಾಡಿ ಹಾಗೂ ಸಂಕೇಶ್ವರ ಪಟ್ಟಣದಲ್ಲೂ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶದಲ್ಲಿ ಇರುವಂತಹ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್​ಗಳನ್ನು ವಾಪಸ್​ ಕೊಟ್ಟ ಮಾತ್ರಕ್ಕೆ ಮುಗಿಯುವುದಿಲ್ಲ. ಮುಡಾ ಎಲ್ಲಾ ಸೈಟ್​​ಗಳನ್ನು ವಾಪಸ್​ ಪಡೆಯಬೇಕು ಎಂದು ಕಾಂಗ್ರೆಸ್ಸಿಗರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಕೂಡ ಬೇನಾಮಿ ಹೆಸರಿನಲ್ಲಿ ಸೈಟ್ ಪಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಂಬಂಧ ತೀವ್ರ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಇದೀಗ ಅದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ನಾಯಕರಿಗೂ ಬಿಸಿ ಮುಟ್ಟಿಸಲು ಮುಂದಾಗಿದೆ. ಮುಡಾದಿಂದ ಹಂಚಿಕೆಯಾಗಿರುವ 14 ಸೈಟ್​​ಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾವರ್ತಿ ವಾಪಸ್ ನೀಡಿರುವ ಬೆನ್ನಲ್ಲೇ, 50:50 ಅನುಪಾತದಲ್ಲಿ ಮುಡಾ ನೀಡಿದ ಎಲ್ಲಾ ನಿವೇಶನಗಳ ವಾಪಸಾಗಿಗೆ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ. ವಿಪಕ್ಷಗಳ ತಂತ್ರಕ್ಕೆ ಸಿಎಂ ರಣತಂತ್ರ ಮುಡಾ ಹಗರಣ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಭಾರಿ ಪ್ರತಿಭಟನೆ ನಡೆಸಿವೆ. ಪಾದಯಾತ್ರೆಯನ್ನೂ ಮಾಡಿದ್ದವು. ಸದ್ಯ ಪ್ರಕರಣ ಕೋರ್ಟ್​ ಮೆಟ್ಟಿಲೇರಿದೆ.ಈ ಕಾರಣದಿಂದ ವಿರೋಧಿಗಳ ಹಣಿಯಲು…

Read More

ರಾಮನಗರ : ತರಕಾರಿ ಮಾರಾಟ ಮಾಡುವ ವಿಚಾರವಾಗಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬನ ತಲೆಯ ಮೇಲೆ ಕಲ್ಲು ಹತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರವಾಗಿ ಹತ್ಯೆಗೈಯಲಾಗಿದೆ.ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಪ್ರವೀಣ್ (33) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ತರಕಾರಿ ವ್ಯಾಪಾರ ಮಾಡುತ್ತಿದ್ದ ಮಾಗಡಿ ನಿವಾಸಿ ಪ್ರವೀಣ್ ಇದೇ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬಿಎಂಟಿಸಿ ಬಸ್ ಒಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬಿಟ್ಟು ಡಿವೈಡರ್ ಮೇಲೆ ಹತ್ತಿದ ಘಟನೆ ಬೆಂಗಳೂರಿನ ಬನಶಂಕರಿ ಬಸ್ ನಿಲ್ದಾಣ ಬಳಿ ಈ ಒಂದು ಘಟನೆ ನಡೆದಿದೆ. ಬನಶಂಕರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬಸ್ ಡಿಪೋದಿಂದ ಬಸ್ ಸ್ಟ್ಯಾಂಡ್ ಕಡೆ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಯಾವುದೇ ಪ್ರಯಾಣಿಕರು ಇಲ್ಲವಾದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಇದರಿಂದ ಕೆಲಕಾಲ ಈ ಒಂದು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Read More

ಕೊಡಗು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದ್ದು ರಾಮನಗರದಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಡ್ಯಾನ್ಸ್ ಮಾಡುವಂತೆ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಈ ಕುರಿತಂತೆ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ಅವರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಹೌದು ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 5ರಿಂದ 10ರವರೆಗೆ ಕೊಡಗು ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಈ ಒಂದು ಘಟನೆ ನಡೆದಿದೆ. ಮೂರು ವಿದ್ಯಾರ್ಥಿಯನೀರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಈ ಕುರಿತು ಮಹಿಳಾ ಉಪನ್ಯಾಸಕರಿಗೆ ಮಾಹಿತಿ ನೀಡಲಾಗಿದೆ. ಮಹಿಳಾ ಉಪನ್ಯಾಸಕಿಯರ ಬಳಿ ವಿದ್ಯಾರ್ಥಿನಿಯರು ಹೇಳಿದ್ದರು. ಆದರೆ ಕಾಲೇಜು ಅಂದಮೇಲೆ ಇದು ಕಾಮನ್ ಎಂದು ಅಧ್ಯಾಪಕಿಯರು ವಿದ್ಯಾರ್ಥಿನಿಯರಿಗೆ ತಿಳಿಸಿದ್ದಾರೆ. ನಂತರ ಮಕ್ಕಳ ಹಕ್ಕುಗಳ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಇದ್ದಾರೆ. ಅಲ್ಲದೆ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಇದೇ ಅಕ್ಟೋಬರ್ 22ರಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದರ ಮಧ್ಯನಟ ದರ್ಶನ್ ವಿರುದ್ಧದ ಹಳೆ ಕೇಸಿಗೆ ಮತ್ತೆ ಮರುಜೀವ ಬಂದಿದೆ. ನಿರ್ಮಾಪಕ ಭರತಗೆ ಕರೆ ಮಾಡಿ ದರ್ಶನ್ ಬೆದರಿಕೆ ಹಾಕಿದ್ದ ಕೆಸ್ ಇದೀಗ ಮರುಜೀವ ಪಡೆದುಕೊಂಡಿದೆ. ಈ ಕುರಿತಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಎನ್ ಸಿ ಆರ್ ದಾಖಲಾಗಿದೆ. 2022 ಆಗಸ್ಟ್ ನಲ್ಲಿ ಕೆಂಗೇರಿ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು.ನಟ ಧ್ರುವನ್ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.ಸಿನಿಮಾ ವಿಚಾರವಾಗಿ ನಟ ದರ್ಶನ್ ಬಳಿ ದ್ರುವನ್ ಹೋಗಿದ್ದರು. ದರ್ಶನ್ ಮೂಲಕ ನಿರ್ಮಾಪಕ ಭರತ್ಗೆ ದ್ರುವಂತ್ ಕರೆ ಮಾಡಿಸಿದ್ದರು. ಸಿನಿಮಾ ಚಿತ್ರೀಕರಣ ಮುಗಿಸದಿದ್ದರೆ ನೀನೇ ಇರುವುದಿಲ್ಲ ಅಂತ ದರ್ಶನ್ ಬೆದರಿಕೆ ಹಾಕಿದ್ದಾರೆ. ನಿರ್ಮಾಪಕ ಭರತ್…

Read More

ಕಲಬುರ್ಗಿ : ಕಳೆದ ಎರಡು ದಿನಗಳ ಹಿಂದೆ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ನಡೆದಂತಹ ಕರ್ಮಕಾಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಲ್ಬುರ್ಗಿ ಕಮಿಷನರ್ ಡಾ.ಶರಣಪ್ಪ ಅವರು ಈ ಒಂದು ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ಹೌದು ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಕರ್ಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿ ಕಲ್ಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಅಲ್ಲಿ ರಾಜಾತಿಥ್ಯ ಪಡೆದುಕೊಳ್ಳುವ ವಿಚಾರವಾಗಿ ನಂತರ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾದರಿಯಲ್ಲೇ ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳು ಜೈಲಿನಲ್ಲಿ ಇದ್ದುಕೊಂಡೆ ಸ್ಮಾರ್ಟ್ ಫೋನ್ ಬಳಸಿ ವಿಡಿಯೋ ಕಾಲ್ ಮಾಡಿರುವ ಫೋಟೋ ಇದೀಗ ವೈರಲ್ ಆಗಿದತ್ತು. ವಿಶಾಲ, ಸಾಗರ ಹಾಗೂ ಸೋನು…

Read More

ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರಿನಲ್ಲಿ ಮಟನ್ ಚಿಕನ್ ಅಂಗಡಿ ಒಂದು ಓಪನ್ ಆಗಿದ್ದು, ಇದೀಗ ಅಂಗಡಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ. ಈ ಒಂದು ಅಂಗಡಿ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಬಸ್‌ ನಿಲ್ದಾಣದ ಬಳಿ ಅಂಗಡಿಯ ಮಾಲಕ ಖಾದಿರ್‌ ಬಾಬಣ್ಣ ಕಲಾಲ್‌ 20 ವರ್ಷಗಳಿಂದ ಸಚಿವೆ ಶೋಭಾ ಅವರ ಅಭಿಮಾನಿಯಾಗಿದ್ದಾರೆ. ಅಂಗಡಿಗೂ ಸಹ ಶೋಭಾ ಕರಂದ್ಲಾಜೆ ಮಟನ್‌ ಚಿಕನ್‌ ಸೆಂಟರ್‌ ಎನ್ನುವ ಬೋರ್ಡ್‌ ಹಾಕಿಸಿದ್ದಾರೆ. ಕುಕನೂರು ಪಟ್ಟಣದ ಯುವಕ ಖಾಧೀರ್ ಕಲಾಲ್‌ ಎನ್ನುವ ಯುವಕ ಆರಂಭಿಸಿರುವ ಉದ್ಯಮ ಇದೀಗ ಸಾಕಷ್ಟು ಸದ್ದು ಮಾಡುತ್ತಿದೆ. ಅದಕ್ಕೆ ಆತ ತನ್ನ ಉದ್ಯಮಕ್ಕೆ ಇಟ್ಟಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು. ಪಟ್ಟಣದ ನಿವಾಸಿ ಖಾಧೀರ್ ಬಾಬಣ್ಣ ಕಲಾಲ್‌ ಎನ್ನುವ ಯುವಕ ಕಳೆದ 20 ವರ್ಷಗಳಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯಾಗಿದ್ದಾನೆ. ಕುಕನೂರಿನ ಖಾಧೀರ್…

Read More

ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು ಹಾಗಾಗಿ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಅಂಬಿ ವೈ ವಿಜಯೇಂದ್ರ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ನೀಡುವ ವಿಚಾರವಾಗಿ ವರಿಷ್ಠರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಬಿಜೆಪಿ 2:1 ಅನುಪಾತದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದ್ದು, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬುದರ ಕುರಿತು ಬಿಜೆಪಿ ವರಿಷ್ಠರು ಎಚ್ ಡಿ ಕುಮಾರಸ್ವಾಮಿ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಕಡೆ ಈ ಬಾರಿ ಟಿಕೆಟ್ ನನಗೆ ಎಂದು ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಬಿ ವೈ ವಿಜಯೇಂದ್ರ ಅವರಿಗೆ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವುದು ದೊಡ್ಡ ಸವಾಲಾಗಿದೆ. ಹಾಗಾಗಿ ಅವರು ನಾಳೆ ದೆಹಲಿಗೆ ಪ್ರಯಾಣಿಸಲಿದ್ದು, ವರಿಷ್ಠರ ಜೊತೆಗೆ ಚರ್ಚಿಸಿ ಸೂಕ್ತ ಅಭ್ಯರ್ಥಿಗೆ…

Read More