Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದೀಗ ಬಿ ನಾಗೇಂದ್ರ ಅವರೇ ನಕಲಿ ಅಕೌಂಟ್ ತೆರೆಯಲು ಸೂಚನೆ ನೀಡಿದರು ಎಂಬ ಸ್ಫೋಟಕ ವಾದಂತಹ ಮಾಹಿತಿ ಬಯಲಾಗಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ನಿನ್ನೆ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದರು ಈ ವೇಳೆ ಮಾಜಿ ಸಚಿವ ಭೀ ನಾಗೇಂದ್ರ ಅವರೇ ಒಂದು ಹಗರಣಕ್ಕೆ ಮಾಸ್ಟರ್ ಮೈಂಡ್ ಎಂದು ಉಲ್ಲೇಖವಾಗಿದ್ದು ಇದೀಗ ಮತ್ತೊಂದು ಸ್ಫೋಟಕವಾದ ಮಾಹಿತಿ ಬಹಿರಂಗವಾಗಿದೆ. ಇಡಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದರಲ್ಲಿ ಬಿ.ನಾಗೇಂದ್ರ ಅವರೇ ಅಧಿಕಾರಿಗಳಿಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಎಂದು ಸೂಚನೆ ನೀಡಿದ್ದಾರೆ ಎನ್ನುವುದನ್ನು ಇಡಿ…
ಬೆಂಗಳೂರು : ಇತ್ತೀಚಿಗೆ ಕೊಲ್ಕತ್ತಾದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಈಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹೆಚ್ಚಾಗಿರುವ ಘಟನೆ ಬೆಳಕಿಗೆ ಬಂದಿದೆ ಈ ಕುರಿತು ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ. ಬಟ್ಟೆ ಒಣಗಿ ಹಾಕುವ ಸಲುವಾಗಿ ಬಾಲಕಿ ಮಹಡಿಯ ಮೇಲೆ ತೆರಳಿದಾಗ ಈ ಒಂದು ಪೈಶಾಚಿಕ ಕೃತ್ಯ ನಡೆದಿದೆ. ಪೋಷಕರು ಇಲ್ಲದನ್ನು ಗಮನಿಸಿ, ಮಹಡಿ ಮೇಲೆ ಹೋಗಿದ್ದನ್ನ ದೃಢ ಪಡಿಸಿಕೊಂಡ ದುರುಳ ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಾಲಕಿಯ ಮೇಲೆ ಅತ್ಯಾಚಾರ ಬೆಸೆಗೆ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ. ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸದ್ಯ ಕಾಮುಕನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.…
ಬೆಂಗಳೂರು : ಇಂದು ಬೆಂಗಳೂರಿನಲ್ಲಿ CCB ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗೆ 1.50 ಕೋಟಿ ವಂಚಿಸಿದ ಕೇಂದ್ರದ GST ಅಧಿಕಾರಿಗಳ ಬಂಧನದ ವಿಚಾರವಾಗಿ, ಜಿಎಸ್‌ಟಿ, ಇಡಿ ಅಧಿಕಾರಿಗಳು ಎಂದು ಹಣ ದೋಚಿದವರನ್ನ ಸೆರೆ ಹಿಡಿಯಲಾಗಿದೆ. ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಸಿಸಿಬಿ ಅವರು ಬಂಧಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬೀಗನಂತೆ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿ ಎಸ್ ಟಿ, ED ಅಧಿಕಾರಿಗಳು ಯಾವಾಗ ಉದ್ಯಮಿಯ ಮನೆಗೆ ಬಂದಿದ್ದರು, ಅಲ್ಲದೆ ಬೆದರಿಕೆ ಹಾಕಿ ಯಾವಾಗ ಹಣ ದೋಚಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಈ ಬಗ್ಗೆ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೂಕ್ಷ್ಮತೆ ಗಮನಿಸಿ ಕೇಸ್ CCB ಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಅಧಿಕಾರಿಗಳು ನಾಲ್ವರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಒಂದು ಕೋಟಿ ಐವತ್ತು ಲಕ್ಷ ಹಣ ಜಿಎಸ್‌ಟಿ ಹೆಸರಿನಲ್ಲಿ ಪಡೆಯಲಾಗಿತ್ತು. ಜಿ ಎಸ್ ಟಿ ಹಿರಿಯ ಅಧಿಕಾರಿಗಳ ಸಂಪರ್ಕ ಮಾಡಿದಾಗ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ವರು…
ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ ಘೋಷಿಸಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಮತ್ತಷ್ಟು ವಿವರ ಕೇಳಿರುವುದರಿಂದ ಕಾನೂನು ಸಚಿವ ಎಚ್ ಕೆ ಪಾಟೀಲ್ ಒಂದು ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಹಣ ನೀಡದೆ ಹೋದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದಂತೆ 5300 ಕೋಟಿ ರು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿಗೆ ನಡೆದಂತ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 5300 ಕೋಟಿ ರು. ಅನುದಾನ ಘೋಷಣೆ ಮಾಡಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು…
ರಾಮನಗರ : ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಇಂದು ಅವರು, ರಾಮನಗರದಲ್ಲಿ ರೇಷ್ಮೆ ಮಾರುಕಟ್ಟೆಯನ್ನು ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಜನ ೧೩೬ ಮಂದಿ ಶಾಸಕರನ್ನ ಗೆಲ್ಲಿಸಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ.ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಾರೆ.ಯಾವುದೇ ವ್ಯತ್ಯಾಸ ಆಗಿಲ್ಲ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಅವರೇ ಇರ್ತಾರೆ ಎಂದರು.
ಬೆಂಗಳೂರು : ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಚಾಲಕ ಮರಕ್ಕೆ ಬಸ್ ಡಿಕ್ಕಿ ಹೊಡೆಸಿದ ಘಟನೆ ಕಳೆದ ಭಾನುವಾರ ಬೆಗಳೂರಿನ ಜೈ ಮಾರುತಿ ನಗರದ ಸಮೀಪ ನಡೆದಿದೆ. ಈ ವೇಳೆ ರಸ್ತೆ ಬದಿಯ ವ್ಯಾಪಾರಿಗಳು ಅಪಾಯದಿಂದ ಜಸ್ಟ್ ಮಿಸ್ ಆಗಿದ್ದಾರೆ. ಹೌದು ಸುಮನಹಳ್ಳಿಯ ಬಿಎಂಟಿಸಿ ಡಿಪೋ 31ಕ್ಕೆ ಸೇರಿದ ಕೆಎ 57 ಎಫ್ 2319 ಬಸ್ ಎಂದು ತಿಳಿದುಬಂದಿದ್ದು, ಪದೇಪದೇ ಬಿಎಂಟಿಸಿ ಬಸ್ ಅಪಘಾತಗಳು ನಡೆಯುತ್ತಿದ್ದರು. ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ. ಬ್ರೇಕ್ ಫೇಲಾದ ಬಸ್ ನಲ್ಲಿ ಪ್ರಯಾಣಿಕರು ಇಲ್ಲದಿದ್ದರಿಂದ ಭಾರಿ ಅನಾಹುತ ಒಂದು ಇದೀಗ ತಪ್ಪಿದೆ. ಭಾನುವಾರ ಸಂಜೆ 7:45 ಕ್ಕೆ ಸಂಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈ ಮಾರುತಿ ನಗರದಿಂದ ಮೆಜೆಸ್ಟಿಕ್ ಕಡೆಗೆ ಬಿಎಂಟಿಸಿ ತೆರಳುತ್ತಿತ್ತು. ಬಸ್ ಬ್ರೇಕ್ ಆಗಿದ್ದರಿಂದ ಚಾಲಕ ಗಂಗಾಧರ್ ಕೂಡಲೇ ಮರಕ್ಕೆ ಗುದ್ದಿಸಿದ್ದಾರೆ. ಚಾಲಕ ಗಂಗಾಧರನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಗಾಯಗೊಂಡ ಕಂಡಕ್ಟರ್ ಮಂಜುಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ…
ಉತ್ತರಕನ್ನಡ : ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಗೋಕರ್ಣಕ್ಕೆ ತೆರಳಿದ್ದಾರೆ. ಈ ವೇಳೆ ಸಮುದ್ರದಲ್ಲಿ ಈಜಲು ತೆರಳಿದ್ದ ಯುವಕಯೊಬ್ಬ ಸಮುದ್ರಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಾವಿಕೊಡ್ಲ ಕಡಲ ತೀರದಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಿದ್ದವರಲ್ಲಿ ಕೋಲಾರದ ಶ್ರೀನಿವಾಸಪುರದ ವಿನಯ ಎಸ್.ವಿ (22) ನೀರುಪಾಲಾದ ವಿದ್ಯಾರ್ಥಿಯಾಗಿದ್ದು, ಆತನ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.ಇನ್ನುಳಿದಂತೆ ಆತನೊಂದಿಗೆ ತೆರಳಿದ್ದ ಇನ್ನೂ ಐವರನ್ನು ರಕ್ಷಿಸಲಾಗಿದ್ದು ಅಸ್ವಸ್ಥರಾಗಿರುವ ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಖಾಸಗಿ ಫಾರ್ಮಸಿ ಕಾಲೇಜಿನ ಒಟ್ಟು 48 ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸಮುದ್ರಲ್ಲಿ ಮೋಜು ಮಸ್ತಿ ಮಾಡಲು ತೆರಳಿ ಈ ಅವಘಡ ನಡೆದಿದೆ.ಅಪಾಯದಲ್ಲಿದ್ದವರನ್ನ ಗಮನಿಸಿ ಸ್ಥಳೀಯರಾದ ದುಬ್ಬಸಸಿಯ ಸರ್ವೇಶ ಮೊರ್ಜೆ ಮತ್ತು ಪಂಢರಿನಾಥ ಮೂರ್ಜೆ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಇವರಿಗೆ ಕರಾವಳಿ ಕಾವಲು ಪೊಲೀಸ್ ಪಡೆಯವರು ಸಹಕರಿಸಿ ಹರಸಾಹಸ ಪಟ್ಟು ಒಟ್ಟು ಐವರನ್ನು ದಡಕ್ಕೆ ತಂದು ಪ್ರಾಣ ಉಳಿಸಿದ್ದಾರೆ.
ಬೆಳಗಾವಿ : ಸಿಎಂ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆ ಆಗುತ್ತಿದ್ದು, ಸದ್ಯ ಸಿಎಂ ಕುರ್ಚಿಯ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರ ಕಣ್ಣು ಬಿದ್ದಿದ್ದು, ಅವರವರ ವೈಯಕ್ತಿಕ ಅಭಿಪ್ರಾಯ ಹೇಳುತ್ತಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಶ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದರು. ಇನ್ನೂ ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಕೈ ನಾಯಕರ ಹೇಳಿಕೆಗೆ ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು. ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ…
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ದರ್ಶನ್ ಬಳ್ಳಾರಿ ಜೈಲು ಪಾಲಾಗಿದ್ದಾರೆ. ಇನ್ನು ನಿನ್ನೆ ದರ್ಶನ್ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ 5 ನಿಮಿಷಗಳ ಕಾಲ ಮಾತನಾಡಿದರು. ಅಲ್ಲದೆ ನಾಳೆ ಭೇಟಿಗೆ ಜೈಲಿಗೆ ಆಗಮಿಸಿ ಎಂದು ತಿಳಿಸಿದರು. ಆದರೆ ಇದೀಗ ಈ ಒಂದು ಭೇಟಿ ರದ್ದಾಗಿದೆ ಎಂದು ತಿಳಿದು ಬಂದಿದೆ. ಹೌದು ನಾಳೆ ದರ್ಶನ್ ರ ನ್ಯಾಯಾಂಗ ಬಂಧನದ ಮುಕ್ತಾಯ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಇದೆ ಅಂತ ಭೇಟಿಯನ್ನು ರದ್ದು ಮಾಡಿದ್ದಾರೆ. ಇಂದು ದರ್ಶನ್ ನೋಡಲು ಬರ್ತೀನಿ ಎಂದು ಪತ್ನಿ ವಿಜಯಲಕ್ಷ್ಮಿ ಹೇಳಿದ್ದರು. ಇದೀಗ ದರ್ಶನ್ ಭೇಟಿಯನ್ನು ಪತ್ನಿ ವಿಜಯಲಕ್ಷ್ಮಿ ರದ್ದು ಮಾಡಿದ್ದಾರೆ. ನಿನ್ನೆ ಪ್ರಿಸನ್ ಕಾಲ್ ಸಿಸ್ಟಂ ಮೂಲಕ ದರ್ಶನ್ ಪತ್ನಿ ವಿಡಿಯೋ ಲಕ್ಷ್ಮಿ ಅವರೊಂದಿಗೆ 5 ನಿಮಿಷಗಳ ಕಾಲ ಮಾತನಾಡಿದರು. ನಾಳೆ ಜೈಲಿಗೆ ಬಂದು ಭೇಟಿ ಮಾಡಿ ಎಂದು ತಿಳಿಸಿದ್ದರು. ಈ ವೇಳೆ ದರ್ಶನ್ ಅವರು ಭಾವುಕರಾಗಿದ್ದರು. ನಾಳೆ ಪತ್ನಿ ವಿಜಯಲಕ್ಷ್ಮಿ…
ದಾವಣಗೆರೆ : ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಸಿಎಂ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಹೋಗುತ್ತಿದೆ. ಹಿರಿಯ ನಾಯಕರಾದ ಆರ್ ವಿ ದೇಶಪಾಂಡೆ, ಸಚಿವರಾದ ಶಿವಾನಂದ ಪಾಟೀಲ್, ಎಂ ಬಿ ಪಾಟೀಲ್ ಸೇರಿದಂತೆ ಸಿಎಂ ಸ್ಥಾನದ ಕುರಿತಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.ಇದೀಗ ದಾವಣಗೆರೆಯಲ್ಲಿ ಕಾಂಗ್ರೆಸ್ಸಿನ ಹಿರಿಯ ಶಾಸಕ ಶಮಣರು ಶಿವಶಂಕರಪ್ಪ ಅವರು ಪ್ರಸಂಗ ಬಂದರೆ ನಾನು ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಸೀನಿಯರ್, ಜೂನಿಯರ್ ಎಂಬ ಪ್ರಶ್ನೆ ಬರುವುದಿಲ್ಲ. ಹೈಕಮಾಂಡ್ ಯಾರನ್ನು ಹೇಳುತ್ತಾರೋ ಅವರೆ ಫೈನಲ್. ಚುನಾಯಿತ ಶಾಸಕರು ಯಾರಿಗೆ ಬಹುಮತ ಕೊಡುತ್ತಾರೋ ಅವರಿಗೆ ನಮ್ಮ ಹೈಕಮಾಂಡ್ ಸೂಚಿಸುತ್ತಾರೆ. ಅಂತ ಪ್ರಸಂಗ ಬಂದರೆ ನಾನು ಕೂಡ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೇನೆ ಬಿಡುವುದಿಲ್ಲ ಎಂದರು.