Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ಮಹಿಳಾ ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಮದ್ಯದಲ್ಲಿ ಡೊಮ್ಯಾಕ್ಸ್ ಮಿಕ್ಸ್ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲ ಠಾಣೆಯ ಪಿಎಸ್ಐ ವರ್ಷವಿರುದ್ದ ಈ ಒಂದು ಕಿರುಕುಳ ಆರೋಪ ಕೇಳಿ ಬಂದಿದೆ. ಪದೇ ಪದೇ ಠಾಣೆಗೆ ಕರೆಸುವುದು ಪಿಎಸ್ಐ ವರ್ಷ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಿವಾಸಿ ದುಷ್ಯಂತ ಎನ್ನುವ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನಿನ್ನೆಯೂ ಕೂಡ ದುಷ್ಯಂತ ಮನೆಗೆ ಹೋಗಿ ಪಿಎಸ್ಐ ವರ್ಷ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಪಿ ಎಸ್ ಐ ವರ್ಷ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಣ ನೀಡದಿದ್ದರೆ ರೌಡಿ ಓಪನ್ ಮಾಡುವುದಾಗಿ ಪಿಎಸ್ಐ ವರ್ಷ ದಮ್ಕಿ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ಹಿಂದೆ ಯುವಕರ ಜೊತೆಗೆ ದೃಶ್ಯಂತ ಗಲಾಟೆ ಮಾಡಿಕೊಂಡಿದ್ದ. ಇದನ್ನೇ ಅಸ್ತ್ರ ಮಾಡಿಕೊಂಡು ದುಷ್ಯಂತಗೆ ನಿರಂತರವಾಗಿ ಪಿಎಸ್ಐ ವರ್ಷ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಮದ್ಯದ…
ಮಂಗಳೂರು : ಮಂಗಳೂರಿನ ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವೈದ್ಯೆ ಅಸಿಫಾ ಫಾತಿಮಾ. ಇದೀಗ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಫಾತಿಮಾ ವಿರುದ್ಧ ಇದೀಗ ತೀವ್ರ ಅಕ್ರೋಶ ವ್ಯಕ್ತವಾಗುತ್ತಿದೆ. ಆಕ್ರೋಶ ಭುಗಿಲೆಳುತ್ತಿದಂತೆ ಆಡಳಿತ ಮಂಡಳಿ ವೈದ್ಯೆ ಅಸಿಫಾ ಫಾತಿಮಾ ಅವರನ್ನು ಆಸ್ಪತ್ರೆಯಿಂದ ವಜಾಗೋಳಿಸಿದೆ. ಸದ್ಯ ಅಸಿಫಾ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಐಲ್ಯಾಂಡ್ ಆಸ್ಪತ್ರೆ ಎಚ್ ಆರ್ ಮೊಹಮ್ಮದ್ ಅಸ್ಲಾಂ ದೂರು…
ಬೆಂಗಳೂರು : ಬೆಂಗಳೂರಲ್ಲಿ ಟಿಪ್ಪರ್ ಇಂದು ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭಾವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಪೌರಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಿವನಗರ ಫ್ಲೈ ಓವರ್ ಬಳಿ ಈ ಒಂದು ದುರಂತ ನಡೆದಿದೆ. ಮೃತ BBMP ಪೌರ ಕಾರ್ಮಿಕ ಮಹಿಳೆಯನ್ನು ಸರೋಜಾ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ವಿಚಾರವಾಗಿ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರಿಗೆ ರಾಜ್ಯಪಾಲರು ಬಿಜೆಪಿ ಶಾಸಕರ ಅಮಾನತು ವಾಪಸ್ ತೆಗೆದುಕೊಳ್ಳುವ ಸಂಬಂಧ ಪತ್ರ ಬರೆದಿದ್ದಾರೆ. ಹೌದು ಶಾಸಕರ ಅಮಾನತು ವಾಪಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಸ್ಪೀಕರ್ಗೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ ಸಲ್ಲಿಸಿತ್ತು. ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತ್ತು. ಈಗ ಬಿಜೆಪಿ ನಿಯೋಗದ ಮನವಿಯ ಬೆನ್ನೆಲೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಂಡು ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಯುಟಿ ಖಾದರ್ ಹಾಗೂ ಎಚ್ ಕೆ ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಆದರೆ ಇದು AI ತಂತ್ರಜ್ಞಾನ ಬಳಸಿ ರಚಿಸಲಾದ ವಿಡಿಯೋ ಎನ್ನಲಾಗಿದೆ. ಹೌದು ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ʼನಮ್ಮ ಮೋದಿʼ ಎಂಬ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ರಾಜ್ಯದ ಮುಖ್ಯಮಂತ್ರಿಯೋರ್ವರ ಕೈಗೆ ಪಾಕಿಸ್ತಾನದ ಧ್ವಜ ಕೊಟ್ಟಿರುವಂತೆ AI ವೀಡಿಯೊ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರು ಖಂಡಿಸಿದ್ದು, ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಪಡಿಸಿ ಹೀಗೆ ವಿಕೃತ ನಕಲಿ ವಿಡಿಯೋಗಳನ್ನು ನಡೆಸುತ್ತಿರುವವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಸೈಬರ್ ಅಪರಾಧ ವಿಭಾಗಕ್ಕೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು : ಆಟೋದಲ್ಲಿ ತೆರಳುತ್ತಿದ್ದ ಯುವತಿಯರನ್ನು ಚುಡಾಯಿಸಿದ ಇಬ್ಬರು ಕಿಡಿಗೇಡಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಬನಶಂಕರಿ ನಿವಾಸಿಗಳಾದ ಮುಬಾರಕ್ ಹಾಗು ಹಫೀಫ್ ಆರೋಪಿಗಳು ಎಂದು ತಿಳಿದುಬಂದಿದ್ದು, ಏಪ್ರಿಲ್ 23 ರಂದು ಬೆಂಗಳೂರಿನ ಸಾರಕ್ಕಿ ಮಾರುಕಟ್ಟೆಯ ಬಳಿ ಈ ಒಂದು ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದು ಆಟೋ ಅಡ್ಡಗಟ್ಟಿ ಇಬ್ಬರೂ ಕಿಡಿಗೇಡಿಗಳು ಯುವತಿಯರನ್ನು ಚುಡಾಯಿಸಿದ್ದರು.ಅಲ್ಲದೇ ಯುವತಿಯರ ತಾಯಿಗೂ ಕೂಡ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆ ಕುರಿತಂತೆ ಕುಮಾರಸ್ವಾಮಿ ಲೇಔಟ್ ಠಾಣೆಗೆ ಯುವತಿಯರ ತಾಯಿ ಈ ಸಂಬಂಧ ದೂರು ನೀಡಿದ್ದರು. ಯುವತಿಯರ ತಾಯಿಯ ದೂರು ಆಧರಿಸಿ ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಡಿಕೇರಿ : ಮಡಿಕೇರಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63) ಮೃತಪಟ್ಟವರು ಎಂದು ತಿಳಿದುಬಂದಿದೆ.ರೈತ ಸಹಕಾರ ಭವನದ ಬಳಿ 11 ಕೆವಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ.ಇದನ್ನು ಗಮನಿಸಿದೆ ತುಳಿದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಕೆಇಬಿ ಇಂಜಿನಿಯರ್ ಸಿಬ್ಬಂದಿಗಳು ಭೇಟಿ ಪರಿಹಾರದ ಭರವಸೆ ನೀಡಿದ್ದಾರೆ.
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಬಿಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಗೈದು ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿರುವ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್‌ಮೃತದೇಹದ ಅಂತ್ಯ ಸಂಸ್ಕಾರ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ. ಹೌದು ರಿತೇಶ್ ಕುಮಾರ್ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದು, ಮೃತದೇಹ ದಹನ ಮಾಡದಂತೆ ಹಾಗೂ ಶವವನ್ನು ಸಂರಕ್ಷಿಸಿ ಇಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಪಿಯುಸಿ ಎಲ್ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾ ಗೀಯ ಪೀಠ ಈ ಆದೇಶ ಮಾಡಿತು. ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಹಾಗೂ ಎನ್‌ಕೌಂಟರ್‌ಬಗ್ಗೆಯೂ ತನಿಖೆ ಆಗಬೇಕು ಎಂಬ ಅರ್ಜಿ ದಾರರ ಮನವಿ ಸೇರಿ ಇಡೀ ಪ್ರಕರಣದ ಬಗ್ಗೆ ಸಮಗ್ರ ಆದೇಶ ಹೊರಡಿಸಲಾ ಗುವುದು ಎಂದು ಹೇಳಿ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿತು. ಪ್ರಕರಣ…
ಬೆಂಗಳೂರು : ತಡರಾತ್ರಿ ಬೆಂಗಳೂರಿನ ಏರ್ಪೋರ್ಟ್ ಫ್ಲೈ ಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. ರಾತ್ರಿ 12 ಗಂಟೆ ಸುಮಾರಿಗೆ 4 ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು ನಿಂದ ಏರ್ಪೋರ್ಟಿಗೆ ತೆರಳುವ ಮಾರ್ಗದಲ್ಲಿ ಈ ಒಂದು ಸರಣಿ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬರುತ್ತಿದ್ದ ವಾಹನಗಳ ನಡುವೆ ಡಿಕ್ಕಿಯಾಗಿ ಈ ಅಪರಾಧ ಸಂಭವಿಸಿದೆ.ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಿಂದ ಒಂದು ಮನಕಲಕುವ ವಿಡಿಯೋ ಹೊರಬಿದ್ದಿದ್ದು, ಕೆಳಗೆ ನಡೆಯುತ್ತಿರುವ ಮಾರಕ ಭಯೋತ್ಪಾದಕ ದಾಳಿಯ ಅರಿವಿಲ್ಲದೆ ಪ್ರವಾಸಿಗರೊಬ್ಬರು ಸುಂದರವಾದ ಭೂದೃಶ್ಯದಾದ್ಯಂತ ಶಾಂತವಾಗಿ ಜಿಪ್‌ಲೈನ್‌ನಲ್ಲಿ ಚಲಿಸುತ್ತಿರುವುದನ್ನು ತೋರಿಸುತ್ತಿದೆ. ಇದೀಗ ಜಿಪ್ ಲೈನ್ ಆಪರೇಟರ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಉಗ್ರರ ದಾಳಿ ನಡೆಸುತ್ತಿರುವ ದೃಶ್ಯ ಪ್ರವಾಸಿಗನೊಬ್ಬ ಜಿಪ್ ಲೈನ್ ನಲ್ಲಿ ತೆರಳುವ ವೇಳೆ ಸೆಲ್ಫಿ ವಿಡಿಯೋದಲ್ಲಿ ಸೆರೆಯಾಗಿತ್ತು. ಉಗ್ರರ ದಾಳಿಯ ಮತ್ತೊಂದು ಭಯಾನಕ ವಿಡಿಯೋ ನಿನ್ನೆ ವೈರಲ್ ಆಗಿತ್ತು. ರಿಷಿ ಭಟ್ ಎನ್ನುವವರು ಜಿಪ್ ಲೈನ್ ಆಡುವ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ಪ್ರವಾಸಿಗರು ಕೆಳಗೆ ಕುಸಿದು ಬೀಳುತ್ತಿರುವ ದೃಶ್ಯ ಸೆರೆಯಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿರುವ ಎನ್ಐಎ ಅಧಿಕಾರಿಗಳು ಜಿಪ್ ಲೈನ್ ಆಪರೇಟರ್ ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಉಗ್ರರು ಗುಂಡಿನ ದಾಳಿ ನಡೆಸುವ ವೇಳೆ ರಿಷಿ ಭಟ್ ಜಿಪ್ ಲೈನ್ ಏರಿದ್ದರು. ಈ…












