Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಜಾರಿ ನಿರ್ದೇಶನಾಲಯ (ED) ಇರೋದು ದೇಶದಲ್ಲಿ ವಿರೋಧ ಪಕ್ಷದ ನಾಯಕರನ್ನು ಬ್ಲಾಕ್ಮೇಲ್ ಮಾಡುವುದಕ್ಕೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದು, ಇಡಿ ಇರುವುದು ಭ್ರಷ್ಟಾಚಾರದ ವಿರುದ್ಧ ಅಲ್ಲ ಅದು ಬಿಜೆಪಿಯ ಅಂಗ ಸಂಸ್ಥೆ. ವಿರೋಧಪಕ್ಷದ ನಾಯಕರನ್ನು ಮಟ್ಟ ಹಾಕುವುದಕ್ಕಾಗಿ ಇಡಿ ಇದೆ. ಅದೊಂದು ಪೊಲಿಟಿಕಲ್ ಏಜೆನ್ಸಿ ಅದಕ್ಕೆ ಯಾವುದೇ ನೈತಿಕತೆ ಉಳಿದಿಲ್ಲ ಎಂದು ದಿನೇಶ್ ಗುಂಡೂರಾವ್ ಕಿಡಿ ಕಾರಿದರು. ಇಡಿ ಉದ್ದೇಶವೇ ಇವತ್ತು ಸರಿಯಿಲ್ಲ. ದೇಶದಲ್ಲಿ ಅದು ನಂಬಿಕೆ ಕಳೆದುಕೊಂಡಿದೆ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ ಇಡಿ ಅವರ ಕೆಲಸವಾಗಿದೆ. ಅಪಪ್ರಚಾರ ಹೆದರಿಸುವುದು ಮತ್ತು ನಾಯಕರ ಆತ್ಮಸ್ಥೈರ್ಯ ಕುಗ್ಗಿಸುತ್ತಿದೆ. ಇಡಿ ಇರುವುದು ವಿರೋಧ ಪಕ್ಷದವರನ್ನು ಬ್ಲಾಕ್ಮೇಲ್ ಮಾಡೋಕೆ ಎಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ನವದೆಹಲಿ : ಇತ್ತೀಚಿಗೆ ದೇಶದಲ್ಲಿ ಡಿಜಿಟಲ್ ಬಂಧನ ಹಾಗೂ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಹಾಗಾಗಿ ಇದೀಗ ಕೇಂದ್ರ ಸರ್ಕಾರ ಇದರ ವಿರುದ್ಧ ಕ್ರಮ ಕೈಗೊಂಡಿದ್ದು, 17 ಸಾವಿರಕ್ಕೂ ಹೆಚ್ಚು ವಾಟ್ಸಪ್ ಖಾತೆಗಳನ್ನು ಕೇಂದ್ರದ ಗೃಹ ಸಚಿವಾಲಯ ಇದೀಗ ನಿರ್ಬಂಧಿಸಿದೆ. ಹೌದು ದೇಶದಲ್ಲಿ ಡಿಜಿಟಲ್ ಬಂಧನ ಹಾಗೂ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೀಗ 17,000 ಖಾತೆಗಳನ್ನು ನಿರ್ಬಂಧಿಸಿದೆ. ಮಯನ್ಮಾರ್, ಕಾಂಬೋಡಿಯ ಹಾಗೂ ಲಾವೊಸ್ ವ್ಯಾಪ್ತಿಯಲ್ಲಿ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಸೈಬರ್ ವಂಚಕರ ಸುಮಾರು 17 ಸಾವಿರ ವಾಟ್ಸಾಪ್ ಖಾತೆಗಳನ್ನು ಇದೀಗ ಕೇಂದ್ರದ ಗೃಹ ಸಚಿವಾಲಯ ನಿರ್ಬಂಧಿಸಿದೆ.
ಒಡಿಶಾ : ಕಳೆದ ಕೆಲವು ದಿನಗಳ ಹಿಂದೆ ಕಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ, ಇಡಿ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮತ್ತೊಂದು ಪಶಾಚಿಕ ಕೃತ್ಯ ನಡೆದಿದ್ದು, ಯುವತಿಯ ಬಾಯಿಗೆ ಮಲ ಹಾಕಿ ವ್ಯಕ್ತಿ ಒಬ್ಬ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಒಡಿಶಾದ ಬೋಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಹೌದು ಯುವತಿಯ ಬಾಯಿಗೆ ವ್ಯಕ್ತಿಯೊಬ್ಬ ಮಲ ಹಾಕಿ ಹಲ್ಲೆ ನಡೆಸಿರುವ ಹೃದಯ ವಿದ್ರಾವಕ ಘಟನೆ ಒಡಿಶಾದ ಬೋಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. ಯುವತಿ ತನ್ನ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿರುವಾಗ ಅದೇ ಊರಿನ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್ ಚಲಾಯಿಸಿ ಆಕೆಯ ಬೆಳೆ ನಾಶಪಡಿಸಿದ್ದಾನೆ.ಬಳಿಕ ಆಕೆಯ ಬಾಯಿಗೆ ಬಲವಂತವಾಗಿ ಮಲವನ್ನು ತುರುಕಿದ್ದಾನೆ. ಈ ವೇಳೆ ಮಧ್ಯಪ್ರವೇಶಿಸಿ ಆಕೆಯನ್ನು ರಕ್ಷಿಸಲು ಯತ್ನಿಸಿದ ಯುವತಿಯ ಚಿಕ್ಕಮ್ಮನ ಮೇಲೂ ಅದೇ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಬಿಜೆಡಿ ಸಂಸದ ನಿರಂಜನ್ ಬಿಸಿ ಭುವನೇಶ್ವರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. ಪೊಲೀಸರ…
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ, ಬಾಲಕ ಸೇರಿ ಇಬ್ಬರ ಸಾವು, 15 ಜನರಿಗೆ ಗಾಯ!
ಬೆಳಗಾವಿ : ಹತ್ತಿ ಬಿಡಿಸುವ ಕೂಲಿ ಕಾರ್ಮಿಕರು ಕೆಲಸ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ, ಕ್ರೂಜರ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ತಡ ರಾತ್ರಿ ಘಟನೆ ಸಂಭವಿಸಿದೆ. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಜನರು ಹತ್ತಿ ಬಿಡಿಸುವ ಕೆಲಸಕ್ಕೆಂದು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಸ್ವಗ್ರಾಮ ಚುಂಚನೂರಿಗೆ ತೆರಳುತ್ತಿದ್ದಾಗ ಅಪಘಾತ ಘಟಿಸಿದೆ. ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ (50) ಸ್ಥಳದಲ್ಲೇ ಮೃತಪಟ್ಟರೆ, 16 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸವದತ್ತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕ್ರೂಸರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಅಪಘಾತದ ಕುರಿತಂತೆ ಸೌದತ್ತಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಚಿಕ್ಕಬಳ್ಳಾಪುರ : ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯದ FTSC-1 ಅಪರಾಧಿ ರಾಜು ಅಲಿಯಾಸ್ ದಾಸಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಅಪರ ಜಿಲ್ಲಾ ಸತ್ರ ನ್ಯಾಯಾಲಯ FTSC-1 ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. 2020ರಲ್ಲಿ ರಾಜು ಸ್ನೇಹಿತನ ಮಗಳನ್ನೇ ಅಪಹರಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಘಟನೆ ಕುರಿತಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿತ್ತು.
ದಕ್ಷಿಣಕನ್ನಡ : ಕಾಲೇಜಿಗೆ ಬೈಕ್ ತಂದಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕನೊಬ್ಬ ಹಿಗ್ಗಾ ಮುಗ್ಗಾ ಥಳಿಸಿ, ಹಲ್ಲೆ ಮಾಡಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬನ ದೇಹದ ಹಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜದಲ್ಲಿ ಕಾಲೇಜಿಗೆ ಬೈಕ್ ತಂದಿದ್ದಕ್ಕೆ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಥಳಿತಕ್ಕೆ ಒಳಗಾಗದ ಓರ್ವ ವಿದ್ಯಾರ್ಥಿಯ ಕೈಯಲ್ಲಿ ರಕ್ತ ಹೆಪ್ಪುಗಟ್ಟಿದೆ. ಕೇವಲ ಕಾಲೇಜಿಗೆ ಬೈಕ್ ತಂದಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಉಪನ್ಯಾಸಕ ಈ ರೀತಿ ಹಲ್ಲೆ ಮಾಡಿದ್ದಾನೆ. ಕೂಡಲೇ ವಿದ್ಯಾರ್ಥಿಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿವೆ.
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಇದೀಗ ಇಂದು ಸ್ಕೂಟರ್ ಗೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಸವಾರನೊಬ್ಬ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಮೆಜೆಸ್ಟಿಕ್ ನಿಂದ ಸಿಕೆಪಾಳ್ಯ ಕಡೆಗೆ ಬಿಎಂಟಿಸಿ ಬಸ್ ಹೊರಟಿತ್ತು. ಕೆ ಆರ್ ಸರ್ಕಲ್ ಇಂದ ನೃಪತುಂಗ ರೋಡ್ ನಲ್ಲಿ ಸವಾರ ಬರುತ್ತಿದ್ದ, ಈ ವೇಳೆ ಸ್ಕೂಟರಿಗೆ ಸೈಡ್ ಬಿಡಲಿಲ್ಲ ಎನ್ನುವ ಕಾರಣಕ್ಕೆ ಬಿಎಂಟಿಸಿ ಚಾಲಕ ಕುಶಾಲ್ ಕುಮಾರ್ ಎನ್ನುವವರ ಮೇಲೆ ಸ್ಕೂಟರ್ ಸವಾರ ಹಲ್ಲೆ ಮಾಡಿದ್ದಾನೆ. ಬಳಿಕ ಬಸ್ ಚಾಲಕ ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಎಂಟಿಸಿ ಬಸ್ ಚಾಲಕ ಕುಶಾಲ್ ಕುಮಾರ್ ಅವರ ಕೊರಳಪಟ್ಟಿಗೆ ಕೈಹಾಕಿ ಹಲ್ಲೆ ಮಾಡಿದ್ದಾನೆ. ಕುತ್ತಿಗೆ ಹಾಗೂ ಕೈ ಮತ್ತು ದೇಹದ ಹಲವು ಭಾಗಗಳ ಮೇಲೆ ಹಲ್ಲೆ ಮಾಡಿದ್ದು ಚಾಲಕನಿಗೆ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಘಟನೆ ಕುರಿತಂತೆ ಹಲಸೂರು ಗೇಟ್…
ಬೆಳಗಾವಿ : ಸದ್ಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಕುರಿತಂತೆ ವಿರೋಧ ಪಕ್ಷದವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು, ಬಿಪಿಎಲ್ ರೆಕಾರ್ಡ್ ಹೊಂದಿರುವವರ ಜೊತೆಗೆ ಎಪಿಎಲ್ ಕಾರ್ಡ್ ಹೊಂದಿರುವವರೆಗೂ ಗೃಹಲಕ್ಷ್ಮಿ ಹಣ ಬರುತ್ತದೆ. ಆದರೆ ಯಾವುದೇ ಕಾರಣಕ್ಕೂ ತೆರಿಗೆ ಪಾವತಿಸುತ್ತಿದ್ದರೆ ಅವರಿಗೆ ಗ್ರಹಲಕ್ಷ್ಮಿ ಹಣ ಬರುವುದಿಲ್ಲ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಕಾರ್ಡ್ಗಳನ್ನು ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಕಂತುಗಳನ್ನು ಪಡೆಯುವುದು ಮುಂದುವರಿಯುತ್ತದೆ. ಪರಿಶೀಲನಾ ಪ್ರಕ್ರಿಯೆಯ ಬಳಿಕ ಬಿಪಿಎಲ್ನಿಂದ ಎಪಿಎಲ್ ಕಾರ್ಡ್ಗೆ ಶಿಫ್ಟ್ ಆದ ಕುಟುಂಬದ ಮನೆಯ ಯಜಮಾನಿ ಕೂಡ 2 ಸಾವಿರ ರೂಪಾಯಿ ಮಾಸಿಕ ಕಂತು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಬಡತನ ರೇಖೆಗಿಂತ ಮೇಲಿನ ಪಡಿತರ ಚೀಟಿ ಹೊಂದಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ.ಆದರೆ, ಇವರುಗಳು ಆದಾಯ ತೆರಿಗೆ…
ಬೆಂಗಳೂರು : ರಾಜ್ಯದಲ್ಲಿ ಸದ್ಯ ಅರ್ಹರಲ್ಲದವರ ಬಿಪಿಎಲ್ ಕಾಡುಗಳನ್ನು ಪರಿಷ್ಕರಣೆ ಮಾಡಿ ಎಪಿಎಲ್ ಕಾರ್ಡುಗಳಿಗೆ ಬದಲಾಯಿಸುವ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮಧ್ಯ ಸರ್ಕಾರದ ನೌಕರರು, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ಗಳನ್ನು ಅಷ್ಟೇ ರದ್ದು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರರಿಗೆ ಬಿಪಿಎಲ್ ಕಾರ್ಡ್ ನೀಡಿದ್ದರೆ ಅದನ್ನು ರದ್ದುಪಡಿಸಿ ಎಪಿಎಲ್ಗೆ ಪರಿವರ್ತಿಸಬೇಕು. ಇವರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸು ನೀಡುವಂತೆ ಸಿಎಂ ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಅಲ್ಲದೇ ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಿಎಂ…
ಚಿತ್ರದುರ್ಗ : ಪೌತಿ ಖಾತೆ ಮಾಡಿ ಕೊಡಲು ವ್ಯಕ್ತಿ ಒಬ್ಬರ ಬಳಿ 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮದಲ್ಲಿ ನಡೆದಿದೆ. ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೆಲಗೇಲತಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಲೋಕಾ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾನೆ. ಕಚೇರಿಯಲ್ಲಿ 10,000 ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದಾನೆ. ಗ್ರಾಮದ ಚನ್ನಕೇಶವಯ್ಯ ಎಂಬುವವರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದಿದ್ದಾನೆ. ಗ್ರಾಮ ಲೆಕ್ಕಾಧಿಕಾರಿಗೆ ಸಹಕಾರ ನೀಡಿದ್ದ ಖಾಸಗಿ ವ್ಯಕ್ತಿ ಬೋರೇಶ್ ಎನ್ನುವ ವ್ಯಕ್ತಿಯನ್ನು ಸಹ ಇದೀಗ ಬಂಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ವಾಸುದೇವ್ ರಾವ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.












