Author: kannadanewsnow05

ಮೈಸೂರು : ಹಿರಿಯ ಮಗಳು ಯುವಕನೊಬ್ಬನ ಪ್ರೀತಿಸಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ದಂಪತಿಗಳು ಹಾಗೂ ತಮ್ಮ ಇನ್ನೋರ್ವ ಪುತ್ರಿಯೊಂದಿಗೆ ಹಗ್ಗ ಕಟ್ಟಿಕೊಂಡು ಕೆರೆಯಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಬೂದನಕೆರೆಯಲ್ಲಿ ಇಂದು ನಡೆದಿತ್ತು. ಇದೀಗ ಆತ್ಮಹತ್ಯೆ ಮಾಡಿಕೊಂಡ ಮೂವರ ಮೃತದೇಹಗಳು ಪತ್ತೆಯಾಗಿವೆ. ಹೌದು ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಮೃತ ಮೂವರ ಮೃತದೇಹಗಳು ಬೂದನೂರು ಕೆರೆಯಲ್ಲಿ ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮಹದೇವಸ್ವಾಮಿ ಪತ್ನಿ ಮಂಜುಳಾ ಮತ್ತು ಪುತ್ರಿ ಹರ್ಷಿತಾ ಮೃತದೇಹಗಳನ್ನು, ಇದೀಗ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Read More

ಹಾವೇರಿ : ಕಳೆದ 2024 ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳು ಇತ್ತೀಚಿಗೆ ಜೈಲಿಂದ ಬಿಡುಗಡೆಯಾಗಿದ್ದರು. ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೆ ಆರೋಪಿಗಳು ರೋಡ್ ಶೋ ಮಾಡಿದ್ದಾರೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ, ಪೊಲೀಸರು ಮತ್ತೆ 7 ಆರೋಪಿಗಳನ್ನು ಜೈಲಿಗೆ ಹಾಕಿದ್ದು, ಅವರ ವಿರುದ್ಧ ಇದೀಗ ರೌಡಿ ಶೀಟ್ ಓಪನ್ ಮಾಡಿದ್ದಾರೆ. ಹೌದು ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಂದ ಮೆರವಣಿಗೆ ನಡೆಸಿದ ವಿಚಾರವಾಗಿ ಇದೀಗ ಪೊಲೀಸರು 7 ಆರೋಪಿಗಳ ವಿರುದ್ಧ ರೌಡಿ ಶೀಟ್ ಓಪನ್ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣೆಯಲ್ಲಿ 7 ಆರೋಪಿಗಳ ವಿರುದ್ಧ ರೌಡಿ ಶೀಟ್ ಓಪನ್ ಆಗಿದೆ. ಅತ್ಯಾಚಾರ ಆರೋಪಿಗಳು ಜಾಮೀನಿನ ಷರತ್ತು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಜಾಮೀನು ರದ್ದು ಪಡಿಸುವಂತೆ ಇದೀಗ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. BNS ಕಾಯ್ದೆ 189/2, 191/2, 281, 351/2, 351/3, 190ರಡಿ ಇದೀಗ ಪ್ರಕರಣ ದಾಖಲಾಗಿದೆ.…

Read More

ಬೆಂಗಳೂರು : ಇತ್ತೀಚಿಗೆ ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ಜಟಾಪಟಿ ಏರ್ಪಟ್ಟಿದೆ. ಇದೀಗ ಪ್ರಿಯಾಂಕ ಖರ್ಗೆ ಅವರು ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಿಡಿಕಾರಿದ್ದು, ಪದೇ ಪದೇ ರಜಾಕರು ನಿಜಾಮರು ಎಂದು ಹೇಳುವ ಸಿಟಿ ರವಿ ಅವರೇ, ನಿಮ್ಮ RSS ನಾಯಕರನ್ನು ಪಾಕಿಸ್ತಾನಕ್ಕೆ ಕಳಿಸಿ ಅಖಂಡ ಭಾರತದ ಕನಸು ನನಸು ಮಾಡಿ ಎಂದು ತಿರುಗೇಟು ನೀಡಿದ್ದಾರೆ. ಸಚಿವ ಪ್ರಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ಟೀಕೆ ಮಾಡಿರುವ ವಿಚಾರವಾಗಿ ಸಿಟಿ ರವಿ ಪದೇ ಪದೇ ರಜಾಕರು ನಿಜಾಮರು ಅಂತ ಹೇಳುತ್ತಾರೆ. ನಿಮ್ಮ RSS ನಾಯಕರನ್ನು ಪಾಕಿಸ್ತಾನಕ್ಕೆ ಕಳುಹಿಸಿ. ಅಲ್ಲಿ ಸೆಟಲ್ ಆಗಿ ಅಖಂಡ ಭಾರತದ ಕನಸು ನನಸು ಮಾಡಿ. ರಜಾಕರು, ನಿಜಾಮರು ಅಂತ ಇಲ್ಲಿ ಕುಳಿತು ಮಾತನಾಡಬೇಡಿ ಎಂದರು. ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಆಯಿತು. ಈ ಕೇಸ್ ನಲ್ಲಿ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಏಕೆ ಕೊಡಲಿಲ್ಲಾ? ಸುಪ್ರೀಂ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೀಗ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಇದೀಗ ರಾಜ್ಯದಲ್ಲಿ ಒಟ್ಟು 35 ಪ್ರಕರಣಗಳು ಸಕ್ರಿಯವಾಗಿವೆ. ಹಾಗಾಗಿ ನಾಳೆಯಿಂದ ರಾಜ್ಯದ 8 ಮೆಡಿಕಲ್ ಕಾಲೇಜ್ ಗಳಲ್ಲಿ ಕೋವಿಡ್ ಟೆಸ್ಟ್ ಆರಂಭಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದ್ದು, ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿತ್ತು. ಈ ಕುರಿತು ಸಭೆ ಮಾಡಿ ತಾಂತ್ರಿಕ ಸಲಹಾ ಸಮಿತಿ ಆರೋಗ್ಯ ಸಚಿವರಿಗೆ ಈ ಕುರಿತು ಸಲಹೆ ನೀಡಿದೆ. ಸಲಹಾ ಸಮಿತಿ ಸೂಚನೆ ಮೇರೆಗೆ ಕೋವಿಡ್ ಟೆಸ್ಟ್ ಗೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಕೋಮಾರ್ಬಿಟಿಸ್, ಸಾರಿ, ILI ರೋಗಲಕ್ಷಣ ಹೊಂದಿರುವವರಿಗೆ ಟೆಸ್ಟ್ ಮಾಡಲಾಗುತ್ತದೆ ಎಲ್ಲೆಲ್ಲಿ ಟೆಸ್ಟ್ ಅಂತ ಆರೋಗ್ಯ ಇಲಾಖೆ ಸಂಜೆ ಮಾಹಿತಿ ನೀಡಲಿದೆ. ಇದೀಗ ಉಸಿರಾಟ ಸಮಸ್ಯೆ, SARI ಕೇಸ್ ನಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಆರೋಗ್ಯ ಸಚಿವ ಗಣೇಶ ಗುಂಡುರಾವ್…

Read More

ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಒಂದೇ ದಿನಕ್ಕೆ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ವಿಜಯಪುರದಲ್ಲಿ ಕೂಡ ಹೃದಯಾಘಾತದಿಂದ ಯುವಕನೊರ್ವ ಸಾವನ್ನಪ್ಪಿದ್ದಾನೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೆ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ. ಹೌದು ಡ್ಯಾನ್ಸ್ ಮಾಡುತ್ತಿದ್ದಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. 28 ವರ್ಷದ ಯುವಕ ಇದೀಗ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ವಿಜಯಪುರದ ಚಪ್ಪರ ಬಂದ ಕಾಲೋನಿಯಲ್ಲಿ ಈ ಒಂದು ದುರಂತ ನಡೆದಿದೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಮೊಹಮದ್ ಪೈಗಂಬರ್ ಗಂಗನಹಳ್ಳಿ (28) ಎಂಬ ಯುವಕ ಸಾವನ್ನಪ್ಪಿದ್ದಾನೆ. ಎಲ್ಲರ ಎದುರೇ ಕುಸಿದು ಬಿದ್ದು ಮೊಹಮ್ಮದ್ ಸಾವನಪ್ಪಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ವರ್ಕ್ಸ್ ಕೆಲಸ ಮಾಡುತ್ತಿದ್ದ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ನಾಲ್ಕು ವರ್ಷಗಳ ಹಿಂದೆ ಇಡೀ ಜಗತ್ತಿನಾದ್ಯಂತ ರಣಕೇಕೆ ಹಾಕಿದ್ದ ಕೋರೋನ ಮಹಾಮಾರಿ ಇದೀಗ ಮತ್ತೆ ಭಾರತಕ್ಕೆ ಒಕ್ಕರಿಸಿದೆ. ಅದರಲ್ಲೂ ಇದೀಗ ಕರ್ನಾಟಕದಲ್ಲಿ 35 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ ಹಾಗಾಗಿ ಆರೋಗ್ಯ ಇಲಾಖೆಯು ಶೀಘ್ರದಲ್ಲೇ ಕರೋನ ಕುರಿತಂತೆ ಎಚ್ಚರ ವಹಿಸಲು ಮಾರ್ಗಸೂಚಿ ಪ್ರಕಟವಾದ ಸಾಧ್ಯತೆ ಇದೆ. ಹೌದು ಕೊರೋನಾ ಮಹಾಮಾರಿ ಇದೀಗ ರಾಜ್ಯಕ್ಕೂ ಕಾಲಿಟ್ಟಿದ್ದು, ನಾಳೆಯಿಂದಲೇ ಕೋವಿಡ್ ಟೆಸ್ಟ್ ಆರಂಭವಾಗಲಿದೆ. ರಾಜ್ಯದ ಎಂಟು ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ನಡೆಯಲಿದೆ. ಬೆಂಗಳೂರಿನಲ್ಲಿಯೇ ಹೆಚ್ಚು ಕೋವಿಡ್ ಟೆಸ್ಟ್ ನಡೆಸಲು ಸೂಚನೆ ನೀಡಲಾಗಿದೆ. ಏಕೆಂದರೆ ಬೆಂಗಳೂರಿನಲ್ಲಿ 32 ಕೊರೋನ ಸಕ್ರಿಯ ಪ್ರಕರಣಗಳಿವೆ ಹಾಗಾಗಿ ಮುನ್ನೆಚ್ಚರಿಕೆ ಕ್ರಮ ಪಾಲನೆಗೆ ಆರೋಗ್ಯ ಇಲಾಖೆ, ಸೂಚನೆ ನೀಡಿದೆ. ಮೆಡಿಕಲ್ ಕಾಲೇಜುಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗುತ್ತದೆ. ಇನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಸಿ.ವಿ ರಾಮನ್ ನಗರ ಆಸ್ಪತ್ರೆಯಲ್ಲಿ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೆ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಓಪನ್ ಗೆ…

Read More

ಬೆಂಗಳೂರು : ತನ್ನ ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎರಡು ಬಾರಿ ಗರ್ಭಪಾದ ಮಾಡಿಸಿರುವ ಆರೋಪ ಹೊತ್ತಿರುವ ಕಿರುತೆರೆ ನಟ ಮಡೆನೂರು ಮನುವನ್ನು ಇದೀಗ ಪೊಲೀಸರು ಸ್ಥಳ ಮಹಜರುಗಾಗಿ ಕರೆದುಕೊಂಡು ಹೋಗಿದ್ದಾರೆ. ಹೌದು ನಟ ಮಡೇನೂರು ಮನು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲಿಸರು ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಬೆಂಗಳೂರಿನ ಕಾಮಾಕ್ಯ ಬಳಿ ಇರುವ ಮನೆಗೆ ಕರೆದೋಯ್ದು ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. 3 ವರ್ಷಗಳಿಗೂ ಹೆಚ್ಚು ಕಾಲ ಸಂತ್ರಸ್ತೇ ಬಾಡಿಗೆಗೆ ಇದ್ದಂತಹ ನಿವಾಸದಲ್ಲಿ ಇದೀಗ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮನು ಜೊತೆಗೆ ಮತ್ತಿಬ್ಬರನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ. ನಾಗರಬಾವಿ ಬಳಿಯ ಸಂತ್ರಸ್ತೆ ಮನೆಯಲ್ಲಿ ಕೂಡ ಇದೀಗ ಮಹಜರು ನಡೆಸಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಮತ್ತೊಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಟಿಪ್ಪರ್ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಗುಜ್ಜೆಗೌಡನಪುರ ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಗುಜ್ಜೇಗೌಡನಪುರದ ಗ್ರಾಮಸ್ಥರು ಬಸವ ಜಯಂತಿ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳುತ್ತಿದ್ದರು. ಕಟ್ಟೆಮನುಗನಹಳ್ಳಿ ಇಂದ ಟಾಟಾ ಏಸ್ ವಾಹನದಲ್ಲಿ ತೆರಳುತ್ತಿದ್ದರು. ಟಾಟಾ ಏಸ್ ನಲ್ಲಿದ್ದ ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಗ್ರಾಹಕನ ಮೇಲೆ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾನೆ. ಜೆಪ್ಟೊ ಡೆಲಿವರಿ ಬಾಯ್ ನಿಂದ ಗ್ರಾಹಕನ ಮೇಲೆ ಹಲ್ಲೆ ನಡೆದಿದೆ. ಮೇ 21ರಂದು ಬಸವೇಶ್ವರನಗರದಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತಂತೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೆಪ್ಟೊದಲ್ಲಿ ಶಶಾಂಕ್ ಎನ್ನುವವರ ಅವರ ಪತ್ನಿ ಆರ್ಡರ್ ಮಾಡಿದ್ದಾರೆ. ಈ ವೇಳೆ ರಿಸೀವ್ ಮಾಡಿಕೊಳ್ಳುವಾಗ ಡೆಲಿವರಿ ಬಾಯ್ ಕಿರಿಕ್ ಮಾಡಿದ್ದಾನೆ. ಅಡ್ರೆಸ್ ತಪ್ಪಾಗಿ ಕೊಟ್ಟಿದ್ದೀರಾ ಎಂದು ಮಾತಿಗೆ ಮಾತಿಗೆ ಬೆಳೆದು ಹಲ್ಲೆ ಮಾಡಿದ್ದಾನೆ. ಶಶಾಂಕ್ ಮೇಲೆ ಕೈಯಿಂದ ಮುಖದ ಮೇಲೆ ಗುದ್ದಿದ್ದಾನೆ. ಈ ವೇಳೆ ಶಶಾಂಕ್ ಕಣ್ಣಿನ ಕೆಳಭಾಗದಲ್ಲಿ ಗಂಭೀರವಾದ ಗಾಯವಾಗಿದೆ. ಘಟನೆ ಕುರಿತು ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮೈಸೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್‍ಡಿ ಕೋಟೆ ತಾಲೂಕಿನ ಬೂದನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಮೃತರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತ ಇದೀಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಯುವಕನೋರ್ವನನ್ನು ಪ್ರೀತಿಸಿ ಅರ್ಪಿತ ಮನೆ ಬಿಟ್ಟು ಹೋಗಿದ್ದಾಳೆ. ಹಾಗಾಗಿ ಮನನೊಂದು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಕುರಿತು ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More