Author: kannadanewsnow05

ತುಮಕೂರು : ರಾಜ್ಯದಲ್ಲಿ ನಾನು ಆಕಸ್ಮಿಕವಾಗಿ ಮುಖ್ಯಮಂತ್ರಿ ಆದವನು. ಈ ನಾಡಿನ 6 ಕೋಟಿ ಜನರು ಆಶೀರ್ವಾದ ಮಾಡಿ ನಾನು ಮುಖ್ಯಮಂತ್ರಿ ಆದವನಲ್ಲ ಎಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಈ ನಾಡಿನ ಆರು ಕೋಟಿ ಜನರು ಆಶೀರ್ವಾದ ಮಾಡಿ ನಾನು ಸಿಎಂ ಆದವನಲ್ಲ. ದೈವ ಪ್ರೇರೇಪಣೆ ಹಾಗೂ ಗುರು ಹಿರಿಯರ ಆಶೀರ್ವಾದದಿಂದ ಸಿಎಂ ಆಗಿದ್ದೆ. ಜೊತೆಗೆ ನಮ್ಮ ಪಕ್ಷದಲ್ಲಿ ಗೆದ್ದ ಶಾಸಕರಿಂದ ನಾನು ಸಿಎಂ ಆಗಿದ್ದೆ. ರಾಜ್ಯದಲ್ಲಿ ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ ನಾನು ಕೊಟ್ಟಿರುವ ಯೋಜನೆಗಳಿಗೆ ಎಂದು ಜಾಹಿರಾತು ನೀಡಿಲ್ಲ. ಜನಸಾಮಾನ್ಯರಿಗೆ ಹತ್ತಿರವಾಗಿ ಕೆಲಸ ಮಾಡಿದ್ದೇನೆ ಎಂದು ಚಿಕ್ಕನಾಯಕನಹಳ್ಳಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದರು. ಈ ಹಿಂದೆ ನಾನು ಹಲವು ಬಾರಿ ಚಿಕ್ಕನಾಯಕನಹಳ್ಳಿಗೆ ಭೇಟಿ ನೀಡಿದ್ದೇನೆ 2018ರಲ್ಲಿ ಗ್ರಾಮ ವಾಸ್ತವ್ಯಕ್ಕೆ ತಿಮ್ಮನಹಳ್ಳಿಗೆ ಭೇಟಿ ನೀಡಿದ್ದೆ ಸಭೆ ಮಾಡುವ ತಯಾರಿ ನಡೆಸಿದರು ಆದರೆ ಸಭೆ ಮಾಡಲು ಆಗಲಿಲ್ಲ ಅದೆಲ್ಲವೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗೆ ಇದೀಗ ಮತ್ತೊಂದು ಮಗು ಬಲಿಯಾಗಿದೆ. ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದಿದೆ ಬೆಂಗಳೂರಿನ ಹೊರಮಾವು ಬಳಿಯ ಹಳೆಹಳಿಯಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಎರಡು ವರ್ಷದ ತ್ರಿಶೂಲ್ ಸಾವನ್ನಪ್ಪಿದ್ದಾನೆ. ತ್ರಿಶೂಲನ್ನು ದೇಗುಲಕ್ಕೆ ಕರೆದುಲಾಗುತ್ತಿತ್ತು. ನಿನ್ನೆ ಶಿವರಾತ್ರಿ ಹಿನ್ನೆಲೆ ಇವನ ದೇಗುಲಕ್ಕೆ ಕರೆದೊಯ್ಯುತ್ತಿದ್ದರು ಬೈಕ್ ನಲ್ಲಿ ವಾಪಸ್ ಬರುವಾಗ ಹಿಂಬದಿಯಿಂದ ಕಾರು ಡಿಕ್ಕಿ ಆಗಿ ಕೆಳಗೆ ಬಿದ್ದ ತ್ರಿಶೂಲ್ ಮೇಲೆ ಕಾರು ಹರಿದಿದೆ ಸ್ಥಳದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದೆ. ತಂದೆ ತಾಯಿ ಉಜ್ಜಯ್ಯನಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ ಸ್ಥಳೀಯರು ಘಟನೆ ಸಂಭಂದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read More

ಧಾರವಾಡ : ಕಳೆದ 2024 ಏಪ್ರಿಲ್ 18 ರಂದು ಕೆಎಲ್‌ಇ ವಿಶ್ವವಿದ್ಯಾಲಯ ಆವರಣದಲ್ಲಿ ನೇಹ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಕೊಲೆ ಆರೋಪಿಯಾಗಿದ್ದ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮೂರನೇ ಬಾರಿಗೆ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ ಕೆಎಲ್ಇ ವಿಶ್ವ ವಿದ್ಯಾಲಯದ ಆವರಣದಲ್ಲಿಯೇ ಫಯಾಜ್ ನೇಹಾ ಹಿರೇಮಠಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. 2014 ಏಪ್ರಿಲ್ 18 ರಂದು ಈ ಒಂದು ಕೊಲೆ ನಡೆದಿತ್ತು. ದೇಶಾದ್ಯಂತ ನೇಹಾ ಹಿರೇಮಠ ಕೊಲೆ ಪ್ರಕರಣ ಭಾರಿ ಸಂಚಲನ ಮೂಡಿಸಿತು. ಇದೀಗ ಫಯಾಜ್ ಗ್ರಾಮೀಣ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಗೊಳಿಸಿದೆ

Read More

ಬೆಂಗಳೂರು : ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರು ಆದೇಶ ಹೊರಡಿಸಿದ್ದಾರೆ. ಪರಾಜಿತ ಅಭ್ಯರ್ಥಿ ಶ್ರೀಮರಾಜು ಅವರು ಅರ್ಜಿ ಸಲ್ಲಿಸಿದ್ದರು. ಆಯ್ಕೆ ಅಸಿಂಧು ಕೋರಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಎಸ್‌.ಎನ್‌. ಸುಬ್ಬಾರೆಡ್ಡಿ ಚುನಾಯಿತರಾಗಿದ್ದರು. ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಜತೆಗೆ ಆಸ್ತಿಗಳ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ. ಹಾಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕೆಂದು ಬಿಜೆಪಿ ಪಕ್ಷದ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಆ ಅರ್ಜಿಯನ್ನು ವಜಾಗೊಳಿಸಲು ಎಸ್‌.ಎನ್‌. ಸುಬ್ಬಾರೆಡ್ಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ದಲ್ಲಿ ತೆರಳುತ್ತಿದ್ದ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿಪುರ ಸರ್ಕಾರಿ ಶಾಲಾ ಶಿಕ್ಷಕಿ ಯೋಗೀಶ್ವರಿ (46) ಸಾವನ್ನಪ್ಪಿದ್ದಾರೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದು ಯೋಗೀಶ್ವರಿ ಸಾವನಪ್ಪಿದ್ದಾರೆ ಶಿಕ್ಷಕಿ ಯೋಗೀಶ್ವರಿ ಮೃತ ದೇಹ ಸರ್ಕಾರಿ ಆಸ್ಪತ್ರೆಗೆ ಶವಾಹಾರಕ್ಕೆ ರವಾನಿಸಲಾಗಿದೆ ಘಟನೆ ಸಂಭಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಬೆಂಗಳೂರಿನಲ್ಲಿ ಡೆಲ್ಲಿ ರಸ್ತೆಗೆ ಇದೀಗ ಮತ್ತೊಂದು ಮಗು ಬಲಿಯಾಗಿದೆ. ಬೈಕ್ ನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಕಾರು ಹರಿದಿದೆ ಬೆಂಗಳೂರಿನ ಹೊರಮಾವು ಬಳಿಯ ಹಳೆಹಳಿಯಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಎರಡು ವರ್ಷದ ತ್ರಿಶೂಲ್ ಸಾವನ್ನಪ್ಪಿದ್ದಾನೆ. ತ್ರಿಶೂಲನ್ನು ದೇಗುಲಕ್ಕೆ ಕರೆದುಲಾಗುತ್ತಿತ್ತು. ನಿನ್ನೆ ಶಿವರಾತ್ರಿ ಹಿನ್ನೆಲೆ ಇವನ ದೇಗುಲಕ್ಕೆ ಕರೆದೊಯ್ಯುತ್ತಿದ್ದರು ಬೈಕ್ ನಲ್ಲಿ ವಾಪಸ್ ಬರುವಾಗ ಹಿಂಬದಿಯಿಂದ ಕಾರು ಡಿಕ್ಕಿ ಆಗಿ ಕೆಳಗೆ ಬಿದ್ದ ತ್ರಿಶೂಲ್ ಮೇಲೆ ಕಾರು ಹರಿದಿದೆ ಸ್ಥಳದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದೆ. ತಂದೆ ತಾಯಿ ಉಜ್ಜಯ್ಯನಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ ಸ್ಥಳೀಯರು ಘಟನೆ ಸಂಭಂದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.a

Read More

ಕೋಲಾರ : ರಾಜ್ಯದ ಕೋಲಾರ ಜಿಲ್ಲೆಯು ಇದೀಗ ರಾಷ್ಟ್ರಮಟ್ಟದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ…

Read More

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಕೋರ್ಟಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇಮೇಲ್ ಮೂಲಕ ಕಿಡಿಗೇಡಿಗಳು ಬಾಮ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಕೋರ್ಟ್ನಲ್ಲಿ 12 ಆರ್ ಡಿ ಎಕ್ಸ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಬಾಂಬ್ ಬೆದರಿಕೆ ಸಂದೇಶ ಬಂದ ತಕ್ಷಣ ಕೋರ್ಟ್ ಹಾಲ್ನಲ್ಲಿ ಇದ್ದ ನ್ಯಾಯಾಧೀಶರು ವಕೀಲರು , ಕಕ್ಷಿದಾರರು ಹಾಗೂ ಸಿಬ್ಬಂದಿಗಳು ಹೊರಗಡೆ ಬಂದಿದ್ದಾರೆ. ಇಂದು ಒಂದೇ ದಿನ ಧಾರವಾಡ ಹೈಕೋರ್ಟ್ ಪೀಠ, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ ಜಿಲ್ಲಾ ಕೋರ್ಟ್ ಗಳಿಗೆ ಬೆದರಿಕೆ ಸಂದೇಶ ಬಂದಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹುಟ್ಟು ಹಬ್ಬದ ದಿನದಂದೆ ಪವಿತ್ರ ಗೌಡಗೆ ಬಿಗ್ ಶಾಕ್ ಎದುರಾಗಿದೆ. ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ ಇದೀಗ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ. ಹೌದು ಮಗಳ ಪರೀಕ್ಷೆ ಕಾರಣಕ್ಕೆ ಪವಿತ್ರ ಗೌಡ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಈ ಒಂದು ಅರ್ಜಿ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ಪವಿತ್ರ ಗೌಡಗೆ ಮಧ್ಯಂತರ ಜಾಮೀನು ನೀಡಲು ಇದೀಗ ಕೋರ್ಟ್ ನಿರಾಕರಿಸಿದೆ.

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕಟ್ಟಡದ ಮೂರನೇ ಮಹಡಿನ ಬಿದ್ದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ (16) ಆತ್ಮಹತ್ಯೆ ಶರಣಾಗಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ಈ ಒಂದು ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್, ವಾರ್ಡನ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಕೊಟ್ರೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು ಬಂದಿದೆ. ಮೃತ ವಿದ್ಯಾರ್ಥಿ ಕೊಟ್ರೇಶ್ ತಂದೆ ಗುರುಲಿಂಗಯ್ಯ ಅವರು ಈ ಆರೋಪ ಮಾಡಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More