Author: kannadanewsnow05

ಬೆಂಗಳೂರು : ರೈಲ್ವೆ ಪರೀಕ್ಷೆಗೆ ಮಂಗಳಸೂತ್ರ ಧರಿಸಿದಂತೆ ನಿರ್ಬಂಧ ವಿಧಿಸಿದ ವಿಚಾರವಾಗಿ ನಿರ್ಬಂಧ ವಾಪಸ್ ಪಡೆದು ರೈಲ್ವೆ ಸಚಿವಾಲಯ ಇದೀಗ ಆದೇಶ ಹೊರಡಿಸಿದೆ. ನೇಮಕಾತಿ ಮಂಡಳಿಗಳಿಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಸೂಚನೆ ಹಿನ್ನೆಲೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವಾದದ ಬೆನ್ನೆಲೆ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಇದೀಗ ನಿರ್ಬಂಧ ವಾಪಸ್ ಪಡೆದುಕೊಳ್ಳಲಾಗಿದೆ.ಈ ಕುರಿತು ಸಚಿವ ವಿ. ಸೋಮಣ್ಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು…

Read More

ಕೋಲಾರ : ಆಕಸ್ಮಿಕ ಬೆಂಕಿಯಿಂದ ಪೈಂಟ್ ಕಾರ್ಖಾನೆ ಒಂದು ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಘಟನೆಯಲ್ಲಿ ಕೂಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಕರಗಲಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ಸೌತ್ ಫೀಲ್ಡ್ ಪೈಂಟ್ಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ಕೋಟ್ಯಂತರ ರೂಪಾಯಿ ಬೆಲೆಯ ದಾಸ್ತಾನು ಹಾಗೂ ಉಪಕರಣಗಳು ಬೆಂಕಿಗಗಾಹುತಿಯಾಗಿದೆ. ಬೆಂಕಿಯಿಂದಾಗಿ ಕೈಗಾರಿಕಾ ವಲಯದಲ್ಲಿ ದಟ್ಟವಾದ ಹೊಗೆ ಏರಿಯಾ ತುಂಬಾ ಅವರಿಸಿಕೊಂಡಿದೆ.ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಲಾರ ಮತ್ತು ಮಾಲೂರಿ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು : ಕಾಶ್ಮೀರದ ಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ 26 ಜನ ಪ್ರವಾಸಿಗರು ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಸವರಾಜ್ ರಾಯರೆಡ್ಡಿ ಹೇಳಿಕೆ ನೀಡಿದ್ದು, ಭಾರತ ಏನಾದರೂ ಪಾಕಿಸ್ತಾನದ ಮೇಲೆ ಯುದ್ಧ ಮಾಡಿದರೆ ಒಂದೇ ವಾರದಲ್ಲಿ ಸರ್ವನಾಶವಾಗುತ್ತದೆ ಎಂದು ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಕಾಏಕಿ ಪಾಕಿಸ್ತಾನ ಉಗ್ರರು ನಮ್ಮ ದೇಶಕ್ಕೆ ನುಗ್ಗಿ ದಾಳಿ ಮಾಡಿದ್ದಾರೆ. ನಾವೆಲ್ಲರೂ ಈ ಒಂದು ಘಟನೆ ಖಂಡಿಸಬೇಕಾದ ವಿಚಾರ. ಕೇಂದ್ರಕ್ಕೆ ನಮ್ಮ ನಾಯಕರು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಮೊದಲು ಭದ್ರತೆ ಸರಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್ ಬಿ ವೈ ವಿಜಯೇಂದ್ರ ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಅಂತ ಒಪ್ಪಿಕೊಂಡಿದೆ. ಅನಿವಾರ್ಯ ಇದ್ದರೆ ಯುದ್ಧ ಮಾಡಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾಳೆ ಇಂದಲೇ ಯುದ್ಧ ಶುರು ಮಾಡಿ ಯಾರು ಬೇಡ ಅಂದ್ರು? ಉಗ್ರರ ಕ್ಯಾಂಪ್ ಮೇಲೆ ಬಾಂಬ್…

Read More

ಉತ್ತರಕನ್ನಡ : ಮೋಸ್ಟ ವಾಂಟೆಡ್ ಕ್ರಿಮಿನಲ್ ಹಾಗೂ ಭಯೋತ್ಪಾದಕರ ಜೊತೆಗೆ ಸಂಪರ್ಕ ಹೊಂದಿದ್ದ ಎನ್ನಲಾದ ಉತ್ತರ ಕನ್ನಡ ಜಿಲ್ಲೆಯ ಮೌಸಿನ್ ಶುಕುರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಇದೀಗ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆದೇಶ ನೀಡಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದ್ದು, ಉಳಿದ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಪಡೆಯಲು ಪೊಲೀಸರು ಸಜ್ಜಗಿದ್ದಾರೆ. ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವ ಮೌಸಿನ್ ಶುಕುರ್ ಈತನ ವಿರುದ್ಧ ಉತ್ತರಕನ್ನಡ, ಬೆಂಗಳೂರು, ಮಂಗಳೂರಿನಲ್ಲಿ ಹಲವು ಕೇಸ್ಗಳಿವೆ ಭಯೋತ್ಪಾದಕ ಜೊತೆ ಮೋಸಿನ್ ಸಂಪರ್ಕ ಹೊಂದಿದ್ದ ಬಗ್ಗೆ ಮಾಹಿತಿ ಇದೆ. ಹೀಗಾಗಿ ಮೌಸಿನ್ ಶುಕುರ್ ನನ್ನು ವಿಚಾರಣೆ ಮಾಡಲು ಪೊಲೀಸರು ಹಾಗೂ ಎನ್ಐಎ ತಂಡ ಮುಂದಾಗಿದೆ. ಅಲ್ಲದೇ ಆತನಿಗೆ ಆಶ್ರಯ ಕೊಟ್ಟು ಸುಳ್ಳು ಮಾಹಿತಿ ನೀಡಿದವರನ್ನು ಕೂಡ ಬಂಧನ ಮಾಡಲಾಗಿದೆ. ಮೌಸಿನ್ ತಾಯಿ ಮತ್ತು ನಾಲ್ವರು ಸಹೋದರ ಸಂಬಂಧಿಗಳನ್ನು ಅರೆಸ್ಟ್ ಮಾಡಲಾಗಿದೆ. ಇದೀಗ…

Read More

ಬಾಗಲಕೋಟೆ: ಶಾಸಕ ವಿಜಯಾನಂದ ಕಾಶಪ್ಪನವರ್ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಯತ್ನಾಳ್ ಒಬ್ಬ ಹುಚ್ಚು ನಾಯಿ, ಆತನಿಗೆ ದಯೆಯೂ ಇಲ್ಲ ಧರ್ಮವು ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ.ದಯವೇ ಧರ್ಮದ ಮೂಲವಯ್ಯ ಎಂದು ಬಸವಣ್ಣನವರ ವಚನ ಹೇಳಿ ಯತ್ನಾಳ್ ವಿರುದ್ಧ ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ಹೊರ ಹಾಕಿದರು. ಯತ್ನಾಳ್ ಒಬ್ಬ ನರಪಿಳ್ಳೆ, ಯತ್ನಾಳ್ ಗೆ ದಯೆಯೂ ಇಲ್ಲ ಧರ್ಮವೂ ಇಲ್ಲ ಯತ್ನಾಳ್ ಒಬ್ಬ ಹುಚ್ಚು ನಾಯಿ ಗೊಡ್ಡು ಎಮ್ಮೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಕಿಡಿಕಾರಿದರು.

Read More

ಬೆಳಗಾವಿ : ಹಿಂದೂ ಬೆಳಗಾವಿಯ ಸಿಪಿಯೇಟ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಭರತ್ ಸಮಾವೇಶ ಹಮ್ಮಿಕೊಂಡಿದ್ದು ಈ ಒಂದು ಸಮಾವೇಶದಲ್ಲಿ ಬಿಜೆಪಿಯಿಂದ ದೊಡ್ಡ ಹೈಡ್ರಾಮವೇ ನಡೆಯಿತು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ತಕ್ಷಣ ಪೊಲೀಸರು ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದುಕೊಂಡರು. ಹೌದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ ಹೈಡ್ರಾಮಾ ನಡೆಯಿತು. ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶಿಸಿ ಸಮಾವೇಶಕ್ಕೆ ಕೆಲ ಕಾಲ ಅಡ್ಡಿಪಡಿಸಿದ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆಯೇ ಸಮಾವೇಶದಲ್ಲಿ ನೆರೆದಿದ್ದ ಜನರ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಂತೆ ಕುಳಿತಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಲಾರಂಭಿಸಿದ್ದಾರೆ. ಏಕಾಏಕಿ ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದ್ದಾರೆ.ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ಭಾಷಣ ನಿಲ್ಲಿಸಿ ಇಲ್ಲಿಯ ಎಸ್ಪಿ ಯಾರು ಎಂದು…

Read More

ಬೆಳಗಾವಿ : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣವನ್ನು ರಾಜ್ಯದ ಯಜಮಾನೀಯರ ಖಾತೆಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇನ್ನೊಂದು ವಾರದಲ್ಲಿ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಭರವಸೆ ಕೊಟ್ಟಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.

Read More

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎರ್ಟಿಗಾ ಕಾರಿಗೆ ವೇಗವಾಗಿ ಬಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದು ಮಗು ಸೇರಿದಂತೆ ಇಬ್ಬರು ಪುರುಷರು ಹಾಗೂ ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಣಿಪಾಕಂನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇನ್ನು ಹಲವರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ನಾನು ಶಾಂತಿಯನ್ನು ಬಯಸುತ್ತೇನೆ ಸದ್ಯದ ಪರಿಸ್ಥಿತಿಯಲ್ಲಿ ಯುದ್ಧದ ಅವಶ್ಯಕತೆ ಇಲ್ಲ ಎಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ನಾನು ಸದ್ಯದ ಪರಿಸ್ಥಿತಿಯಲ್ಲಿ ಯುದ್ಧದ ಅವಶ್ಯಕತೆ ಇಲ್ಲ ಅಂತ ಹೇಳಿದ್ದೇನೆ ಹೊರತು ಯುದ್ಧವೇ ಬೇಡ ಅಂತ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದೀಗ ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ಯುದ್ಧಕ್ಕೆ ಸದಾ ಸಿದ್ಧ ಎಂದು ತಿಳಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು…

Read More

ಕೋಲಾರ : ಹಣ ಮನುಷ್ಯನನ್ನು ಯಾವ ರೀತಿ ಬೇಕಾದರೂ ಆಟ ಆಡಿಸುತ್ತದೆ ಹಾಗೂ ಯಾವ ಮಟ್ಟಕ್ಕಾದರೂ ಇಳಿಸುತ್ತದೆ. ಇದೀಗ ಕೋಲಾರದಲ್ಲಿ ಕೂಡ ಅಂತಹ ಘಟನೆ ನಡೆದಿದ್ದು ಹಣದ ಆಸೆಗಾಗಿ ಯುವಕನೊಬ್ಬ ಬೆಟ್ಟಿಂಗ್ ಕಟ್ಟಿ, ನೀರು ಬೆರೆಸದೇ ಐದು ಬಾಟಲ್ ಪೂರ್ತಿಯಾಗಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಯುವಕ ಎಣ್ಣೆ ಪಾರ್ಟಿಯಲ್ಲಿ ಬಾಜಿ ಕಟ್ಟಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಕುಡಿದಿದ್ದಾನೆ. ಆದರೆ, ದೇಹಕ್ಕೆ ಸೇರಿದ ಎಣ್ಣೆಯನ್ನು ಅರಗಿಸಿಕೊಳ್ಳಲಾಗದೇ ಜೀವ ಬಿಟ್ಟಿದ್ದಾನೆ. ಮೃತ ಯುವಕನನ್ನು ಕಾರ್ತಿಕ್ (21) ಎಂದು ತಿಳಿದುಬಂದಿದ್ದು, ಮದ್ಯ ಸೇವಿಸಿ ಸಾವನ್ನಪ್ಪಿದ್ದಾನೆ. ಕಾರ್ತೀಕ ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ನೀರು ಬೆರಸದೆ ಮದ್ಯ ಸೇವನೆ ಮಾಡಿ ಪ್ರಾಣ ಕಳೆದುಕೊಂಡಿದ್ದಾನೆ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಇದೇ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು…

Read More