Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಿಂದ ತಮಿಳುನಾಡಿನವರೆಗೆ ಮೆಟ್ರೋ ನಿರ್ಮಿಸುವ ವಿಚಾರವಾಗಿ ಹೊಸೂರು ಮೆಟ್ರೋ ನಿರ್ಮಾಣಕ್ಕೆ ಇದೀಗ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ.ಬೆಂಗಳೂರಿನಿಂದ ಹೊಸೂರಿನವರೆಗೆ ಮೆಟ್ರೋ ವಿಸ್ತರಿಸದಂತೆ ಹಿರಿಯ ಸಚಿವರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸೂರಿಗೆ ಬೆಂಗಳೂರಿನಿಂದ ಮೆಟ್ರೋ ಬೇಡ ಎಂದು ಹಿರಿಯ ಸಚಿವರು ಸಲಹೆ ನೀಡಿದ್ದಾರೆ ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹಿರಿಯ ಸಚಿವರಿಂದ ಸಲಹೆ ನೀಡಲಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನಿಂದ ಹೊಸೂರಿನವರೆಗೆ ಮೆಟ್ರೋ ನಿರ್ಮಾಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಅಕಸ್ಮಾತ್ ಬೆಂಗಳೂರಿನಿಂದ ಸೋರಿನವರೆಗೆ ಮೆಟ್ರೋ ರೈಲು ನಿರ್ಮಾಣ ಮಾಡಿದ್ದೆ ಆದಲ್ಲಿ ರಾಜ್ಯದಲ್ಲಿರುವಂತಹ ಕೈಗಾರಿಕಾ ಸಂಸ್ಥೆಗಳಿಗೆ ಹೊಡೆತ ಬೀಳಲಿದೆ. ಹೊಸೂರಿನಲ್ಲಿ ಈಗಾಗಲೇ ಕೈಗಾರಿಕಾ ಕಾರ್ಖಾನೆಗಳು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನ ಜನತೆ ಸಹಜವಾಗಿ ಹೊಸೂರಿಗೆ ಮೆಟ್ರೋ ಮೂಲಕ ಸಂಚರಿಸಿ ಅಲ್ಲಿ ಕಾರ್ಯ ನಿರ್ವಹಿಸಬಹುದು ಹಾಗಾಗಿ ರಾಜ್ಯದಲ್ಲಿ ಕೈಗಾರಿಕರಣ ಸಹಜವಾಗಿ ಕುಂಠಿತಗೊಳ್ಳಲಿದೆ. ಇನ್ನೂ ಹೊಸೂರಲ್ಲಿ ತಮಿಳುನಾಡು ಸರ್ಕಾರದಿಂದ ಏರ್ಪೋರ್ಟ್ ನಿರ್ಮಾಣ ಮಾಡಲಿದ್ದು, ಅದರ ಬೆನ್ನಲ್ಲೆ ಇದೀಗ ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸರ್ಕಾರ…
ವಿಜಯಪುರ : ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಯ ವಿಚಾರವಾಗಿ ಸಚಿವರ ನಡುವೆ ಟಾಕ್ ವಾರ್ ಮುಂದುವರೆದಿದ್ದು, ಶಿವಾನಂದ್ ಪಾಟೀಲ್ ಗಿಂತ ನಾನು ಸೀನಿಯರ್ ಎಂದು ಹೇಳಿದ ಎಂಬಿ ಪಾಟೀಲ್ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದು, ಸಿಎಂ ಆಗುವ ಆಸೆ ನನ್ನ ಕನಸು ಮನಸ್ಸಿನಲ್ಲೂ ಇಲ್ಲ. ಪಕ್ಷದಲ್ಲಿ ಹಿರಿಯರಿದ್ದಾರೆ ಅವರ ಸರದಿ ಆದ ಬಳಿಕ ಎಂಬಿ ಪಾಟೀಲ್ ಸರದಿ ಎಂದು ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಬಿ ಪಾಟೀಲ್ ಸಿಎಂ ಆದರೆ ನನ್ನ ಅಭ್ಯಂತರ ಇಲ್ಲ. ಪಕ್ಷದಲ್ಲಿ ಎಂಬಿ ಪಾಟೀಲ್ ಗಿಂತ ಹಿರಿಯರು ಪಕ್ಷದಲ್ಲಿ ಇದ್ದಾರೆ. ಹಿರಿಯರ ಸರದಿಯ ಬಳಿಕ ಎಂಬಿ ಪಾಟೀಲ್ ಸರದಿ.ಕೆಲವರು ರಾಜಕಾರಣ ಮಾಡುವುದರಲ್ಲಿ ನಿರತರಾಗಿದ್ದು ನಾನು ಕ್ಷೇತ್ರದ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ನಿರತನಾಗಿದ್ದೇನೆ ಮೂರು ಇಲಾಖೆಗಳ ಅಭಿವೃದ್ಧಿ ಕೆಲಸದಲ್ಲಿ ನಿರತನಾಗಿದ್ದೇನೆ ಯಾರು ಬೇಕಾದರೂ ಸಿಎಂ ಆಗಲಿ, ನನ್ನ ಅಭ್ಯಂತರ ಇಲ್ಲ ಎಂದು ತಿಳಿಸಿದರು. ಸಿಎಂ ಕುರ್ಚಿ ಅಂತೂ ಖಾಲಿ ಇಲ್ಲ. ನಮಗೆ…
ವಿಜಯಪುರ : ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನೂ ಮೃತ ಯುವಕನನ್ನು ದೇವೇಂದ್ರ ಬಡಿಗೇರ್ (24) ಎಂದು ತಿಳಿದುಬಂದಿದೆ. ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್ ಪಿ ರಾಜೀವ್ ಅವರು ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮಾಡಿಕೊಂಡಿದ್ದ ಅಕ್ರಮ ಬಯಲಾಗಿದೆ. ಹೌದು ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ ಅಕ್ರಮ ಬಯಲಾಗಿದ್ದು, ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಕೊಂಡಿದ್ದ ಮಾಜಿ ಅಧ್ಯಕ್ಷ ರಾಜೀವ್, 2022 ಫೆಬ್ರವರಿ 22ರಂದು ಈ ಒಂದು ಅಕ್ರಮ ನಡೆದಿದೆ. ಈ ಒಂದು ಅಕ್ರಮದ ಕುರಿತು ಮುಡಾ ಅಕ್ರಮದ ಬಗ್ಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದು, ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು. ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ ಪತ್ರ ಬರೆದಿದ್ದ ಎನ್ನಲಾಗಿದೆ. ಕೇರ್ಗಳ್ಳಿ, ಬಲ್ಲಹಳ್ಳಿ ವ್ಯಾಪ್ತಿಯಲ್ಲಿ ಬಡಾವಣೆ ಮಾಡಲಾಗಿದ್ದು, 252 ನಗರ 10ಗುಂಟೆ ಪ್ರದೇಶದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರದಿಂದ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ…
ಬೆಂಗಳೂರು : ಇಂದು ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಗೆ ಅಮೆರಿಕಾದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ಸಮೇತ ಇಂದು ರಾತ್ರಿ ಡಿಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಕಮಲ ಹ್ಯಾರಿಸ್, ಅಮೆರಿಕ ಅಧ್ಯಕ್ಷ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ. ನಾರ್ತ್ ಕ್ಯಾರೋಲಿನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ಟ್ರಸ್ಟಿಗೆ ಡಿಕೆ ಶಿವಕುಮಾರ್ ನೆರವು ನೀಡಲಿದ್ದು, ಟ್ರಸ್ಟ್ ಗೆ ಡಿಕೆಶಿ ಸಹಾಯ ಮಾಡಿದ್ದಾರೆ. ಕಮಲಾ ತಾಯಿಯವರ ಟ್ರಸ್ಟ್ ಜೊತೆಗೆ ಡಿಕೆ ಶಿವಕುಮಾರ್ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಈ ಆಪ್ತತೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಕಮಲಾ ಹ್ಯಾರಿಸ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಕಮಲಾ ಹ್ಯಾರಿಸ್ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಕೂಡ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ಆಗಲಿದ್ದಾರೆ. ಅಲ್ಲದೆ ಪ್ರಜಾಪ್ರಭುತ್ವ ಹಾಗೂ ಚುನಾವಣೆ ಸಂವಾದದಲ್ಲೂ ಡಿಕೆ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.…
ಚಿಕ್ಕಮಗಳೂರು: ನಿನ್ನೆ ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಗಣಪತಿ ಮೂರ್ತಿ ತರಲು ಹೋಗುವಾಗ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮೃತರ ಕಣ್ಣುಗಳನ್ನು ದಾನ ಮಾಡಲು ಅವರ ಪೋಷಕರು ನಿರ್ಧರಿಸಿದ್ದು, ಇದರಿಂದ ನಾಲ್ವರು ಅಂಧರಿಗೆ ಮೃತ ಯುವಕರು ಬೆಳಕಾಗಿದ್ದಾರೆ. ಹೌದು ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ (20 ವರ್ಷ) ಮತ್ತು ಧನುಷ್ (17 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದರು. ಇತರ ಮೂವರು ಗಂಭೀರ ಗಾಯಗೊಂಡಿದ್ದರು. ಮೃತ ಯುವಕರ ಪೋಷಕರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು, ತರೀಕೆರೆ ಆಸ್ಪತ್ರೆಯ ವೈದ್ಯರ ನೆರವಿನಿಂದ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರ ಸಲಹೆ ಮೇರೆಗೆ ಯುವಕರ ಪೋಷಕರಾದ ಕುಬೇಂದ್ರ- ಪದ್ಮಾ ಮತ್ತು ರಮೇಶ್-ಶೋಭಾ ಅವರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದರಿಂದ ನಾಲ್ವರು ಅಂಧರಿಗೆ ದೃಷ್ಟಿ ದೊರಕಿದಂತಾಗುತ್ತದೆ ಎಂದು ತರೀಕೆರೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದೇವರಾಜು ತಿಳಿಸಿದ್ದಾರೆ. ಘಟನೆ ಹಿನ್ನೆಲೆ? ಟಾಟಾ ಏಸ್ ವಾಹನದಲ್ಲಿ…
ಬೆಂಗಳೂರು : ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ನಾಳೆ ಮುಕ್ತಾಯವಾಗಲಿದೆ. ಹಾಗಾಗಿ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರೂ ಆರೋಪಿಗಳು ವಿಚಾರಣೆಗೆ ಹಾಜರಾಗಲಿದ್ದು, ಜಾಮೀನಿಗಾಗಿ ದರ್ಶನ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಮತ್ತೊಂದೆಡೆ ಡಿ ಗ್ಯಾಂಗಿಗೆ ಜೈಲುವಾಸ ಮುಂದುವರೆಯಲಿದೆಯಾ ಎಂದು ಕಾದು ನೋಡಬೇಕು. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿಗಳ ವಿಚಾರಣೆ ನಡೆಯಲಿದೆ. ಅಲ್ಲದೆ ನಾಳೆ ಆರೋಪಿಗಳ ಪರ ವಕೀಲರಿಗೆ ಚಾರ್ಜ್ ಶೀಟ್ ಪ್ರತಿಯನ್ನು ಸಲ್ಲಿಸಲಾಗುತ್ತದೆ. ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ನ್ಯಾಯಾಲಯಕ್ಕೆ ಹೋಲಿಸಲು ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಒಂದು ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಅತ್ಯಂತ ಪ್ರಭಾವ ವಾದಂತಹ ಸಾಕ್ಷಿಗಳನ್ನು ಪೊಲೀಸರು…
ಮಂಡ್ಯ : ರಾಜ್ಯ ಅಷ್ಟೆ ಅಲ್ಲದೆ ಇಡೀ ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಂಡ್ಯ ಜಿಲ್ಲೆಯಲ್ಲಿ ನಡೆದಂತಹ ಹೆಣ್ಣು ಭ್ರೂಣಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರಿಂದ ಮತ್ತೆ ಮೂವರು ಆರೋಪಿಗಳ ಬಂಧನವಾಗಿದೆ. ಬಂಧಿತರನ್ನು ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಎಂದು ತಿಳಿದುಬಂದಿದ್ದೆ. ಸದ್ಯ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಸ್ಕ್ಯಾನಿಂಗ್ ಯಂತ್ರ, ಒಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಇದುವರೆಗೂ 12 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನೂ 6- 7 ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದ ಮತ್ತೊಂದು ಸ್ಪೋಟಕವಾದಂತಹ ಅಂಶ ಬಹಿರಂಗವಾಗಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸುವಾಗ ಆತನ ಎಡಗಣ್ಣಿಗೆ ಗಂಭೀರವಾದ ಗಾಯವಾಗಿತ್ತು. ಇದೀಗ ಎಡಗಣ್ಣಿಗೆ ಹೇಗೆ ಗಾಯ ಆಗಿತ್ತು ಎಂಬುದರ ಕುರಿತು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ ಅಂದು ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾ ಸ್ವಾಮಿ ಎಡೆಗಣ್ಣಿಗೆ ಏಟು ಬಿದ್ದಿದ್ದು ಹೇಗೆ? ಅಂದು ದರ್ಶನ್ ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸುವಾಗ ಸಿನೆಮಾ ಸ್ಟೈಲ್ ನಲ್ಲಿ ರೇಣುಕಾ ಸ್ವಾಮಿ ಕಣ್ಣಿಗೆ ಪಂಚ್ ಕೊಟ್ಟಿದ್ದಾರೆ. ತಮ್ಮ ಪಟಾಲಂ ಮಾತು ಕೇಳಿ ಕಣ್ಣಿಗೆ ಪಂಚ್ ಕೊಟ್ಟಿದ್ದ ಆರೋಪಿ ದರ್ಶನ್. ತಮ್ಮ ಸುತ್ತಲೂ ಇದ್ದ ಕೆಲವು ಆರೋಪಿಗಳಿಬ್ಬರ ಮಾತು ಕೇಳಿ ದರ್ಶನ್ ಎಡಗಣ್ಣಿಗೆ ಪಂಚ್ ಕೊಟ್ಟಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲೋ ಉಲ್ಲೇಖವಾಗಿದೆ. ಹೊಡಿರಿ ಬಾಸ್ ಹೊಡಿರಿ ಅತ್ತಿಗೆನ ಕೆಟ್ಟ ದೃಷ್ಟಿಯಲ್ಲಿ ನೋಡಿದ ಈ ಕಣ್ಣು ಇರಬಾರದು ಎಂದು ಇಬ್ಬರು ರೇಣುಕಾ ಸ್ವಾಮಿಯ…
ಬೆಂಗಳೂರು : ರಾಜ್ಯದಲ್ಲಿ ಇದೀಗ ಉತ್ತರ ಕರ್ನಾಟಕ ಭಾಗ ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10 ರವರೆಗೂ ಭಾರೀ ಮಳೆ ಮುನ್ಸೂಚನೆ ಇದೆ. ಇನ್ನು ಶಿವಮೊಗ್ಗ, ಹಾಸನ ಚಿಕ್ಕಮಗಳೂರಿಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದ್ದು, ಭಾರೀ ಗಾಳಿ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಪ್ಟೆಂಬರ್ 8 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ…