Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಆಧಾರ್ ಕಾರ್ಡ್ ಧೃಢಿಕರಣಕ್ಕೆ ಕೇಂದ್ರ ಸರ್ಕಾರ ಇದೀಗ ಖಾಸಗಿ ಕಂಪನಿಗಳಿಗೂ ಅನುಮತಿ ನೀಡಿದೆ.ಆಧಾರ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಖಾಸಗಿ ಕಂಪನಿಗಳು ತಮ್ಮ ಸೇವೆಯನ್ನು ಒದಗಿಸುವ ಮೊದಲು ಫಲಾನುಭವಿಗಳ ಆಧಾರ್ ಕಾರ್ಡ್ ಅನ್ನು ಧೃಡೀಕರಿಸಲು ಸರ್ಕಾರ ಅನುಮತಿ ನೀಡಿದೆ. ಉತ್ತಮ ಆಡಳಿತಕ್ಕಾಗಿ ಆಧಾರ್ ಧೃಡೀಕರಣ ತಿದ್ದುಪಡಿ ನಿಯಮ, 20250 ಅಡಿಯಲ್ಲಿ ಕಾಯ್ದೆಯ ಸೆಕ್ಷನ್ 57ರ ಅಡಿಯಲ್ಲಿ ಈ ಸೌಲಭ್ಯವನ್ನು ನೀಡಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಚಿವಾಲಯಗಳು/ ಸರ್ಕಾರದ ಇಲಾಖೆಗಳನ್ನು ಹೊರತುಪಡಿಸಿ ಆಧಾರ್ ಧೃಡೀಕರಣ ಮಾಡಬಯಸುವವರು ರ ಈ ಸೌಲಭ್ಯ ತಮಗೆ ಆಧಾರ್ ಯಾಕೆ ಬೇಕು ಎಂಬ ಬಗ್ಗೆ ಸಮರ್ಥನೆ ನೀಡಿ, ಸಂಬಂಧ ಪಟ್ಟ ಇಲಾಖೆ & ಸಚಿವಾಲಯಕ್ಕೆ ಮನವಿ ಸಲ್ಲಿಸಬೇಕುಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ. ಹೀಗೆ ಸಲ್ಲಿಸಲಾದ ಪ್ರಸ್ತಾವನೆಯು ನಿಯಮ 3ರಕ್ಕೆ ಹಾಗೂ ದೇಶದ ಹಿತಾಸಕ್ತಿಗೆ ಅನುಗುಣವಾಗಿದೆಯೇ ಎಂಬುದನ್ನುಆಇಲಾಖೆ/ಸಚಿವಾಲಯ ಪರಿಶೀಲಿಸಿ, ಕೇಂದ್ರದ ಶಿಫಾರಸಿನೊಂದಿಗೆ ರವಾನಿಸುವುದು. ಇದನ್ನು ಯುಐಡಿಎಐ ಪರಿಶೀಲನೆಯ ಬಳಿಕ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಅನುಮೋದಿಸುವುದು ಎಂದು ತಿಳಿಸಲಾಗಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹುಬ್ಬಳ್ಳಿಯಲ್ಲೂ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ.ಮೆಹಬೂಬ್ ವಿವಿಧ ಸಂಘ ಸಂಸ್ಥೆಗಳಲ್ಲಿ ಒಟ್ಟು 8 ಲಕ್ಷ ರೂಪಾಯಿ ಸಾಲ ಮಾಡಿದ್ದರು.ಪಡೆದ ಸಾಲಕ್ಕೆ ಪ್ರತಿ ತಿಂಗಳು 40 ಸಾವಿರ ಕಂತಿನಂತೆ ಸಾಲ ಮರುಪಾವತಿ ಮಾಡುತ್ತಾ ಬಂದಿದ್ದರಂತೆ. ಆದರೂ ಕೂಡಾ ಕೆಲವು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ಹೆಚ್ಚಾದ ಬೆನ್ನಲೆ ಮೆಹಬೂಬ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಟುಂಬಸ್ಥರ ಗಮನಕ್ಕೆ ಬಂದ ಕೂಡಲೇ ವ್ಯಕ್ತಿಯನ್ನು ರಕ್ಷಿಸಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಕುರಿತು ಹುಬ್ಬಳ್ಳಿ ಕಮರಿಪೇಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ವಿಶೇಷವಾಗಿ, ಕರ್ನಾಟಕವೂ ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳ ಆದ್ಯತೆಗಳನ್ನು ಗುರುತಿಸಿ ಸಂಪನ್ಮೂಲ ಹಂಚಿಕೆಯ ವಿಚಾರದಲ್ಲಿ ಅವುಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು, ಅವುಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಇದರಿಂದ ದೇಶಕ್ಕೆ ಹೆಚ್ಚು ಲಾಭವಿದ್ದು, ಈ ರಾಜ್ಯಗಳ ಸಾಧನೆಯ ಪಾಲು ಇತರೆ ರಾಜ್ಯಗಳಿಗೂ ಸಹಜವಾಗಿಯೇ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನಿರಂತರವಾಗಿ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಅವುಗಳನ್ನು ಪರಿಹರಿಸಲು ಮುಂದಾಗಬೇಕೆಂದು ನಮ್ಮ ಸರ್ಕಾರ ಒತ್ತಾಯಿಸುತ್ತಲೇ ಬ೦ದಿದೆ.…
ಬೆಂಗಳೂರು : ಕಳೆದ ತಿಂಗಳಷ್ಟೇ ತಂದೆ ತೀರಿ ಹೋಗಿದ್ದರು. ಇದರ ಅಘಾತದಿಂದ ಹೊರ ಬರಲು ಬಳ್ಳಾರಿ ಮೂಲದ ಸಹೋದರರಿಬ್ಬರು ಬೆಂಗಳೂರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ನಿನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಟಿಪ್ಪರ್ ಹರಿದು ಇಬ್ಬರು ಸಹೋದರರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬಳ್ಳಾರಿ ಮೂಲದ ಮಸ್ತಾನ್ ಹಾಗೂ ಮೊಹಮದ್ ಎಂದು ಗುರುತಿಸಲಾಗಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ಮಸ್ತಾನ್ ಮತ್ತು ಮೊಹಮದ್ ಅನ್ನೂ ಇಬ್ಬರು ಸಹೋದರರು ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಯೂಟರ್ನ್ ಪಡೆಯೋಕ್ಕೆ ಮುಂದಾಗ್ತಿದ್ದಂತೆ ಎಂಸ್ಯಾಂಡ್ ತುಂಬಿಕೊಂಡು ಬಂದ ಟಿಪ್ಪರ್ ಲಾರಿ ನೋಡ ನೋಡ್ತಿದಂತೆ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದು, ಬೈಕ್ನಲ್ಲಿದ್ದ ಇಬ್ಬರು ಸಹೋದರರು ಕೆಳಗಡೆ ಬಿದ್ದಿದ್ದಾರೆ. ಈ ವೇಳೆ ಯೂಟರ್ನ್ ಪಡೆಯುತ್ತಿದ್ದ ಬೈಕ್ ಮೇಲೆ ಯಮಸ್ವರೂಪಿ ಟಿಪ್ಪರ್ ಲಾರಿ ಹರಿದ ಪರಿಣಾಮ, ಸ್ಥಳದಲ್ಲೇ ಮಸ್ತಾನ್ ಸಾವನ್ನಪ್ಪಿದ್ದಾರೆ, ಜೊತೆಗೆ ಮೊಹಮದ್ ಮೇಲು ಟಿಪ್ಪರ್ ಹರಿದ…
ಬೆಂಗಳೂರು : ಬೈಕ್ ಮೇಲೆ ತೆರಳುವ ಮಕ್ಕಳಿಗೆ ಹೆಮ್ಮೆಟ್ ಕಡ್ಡಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಗೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಮಕ್ಕಳಿಗೆ ಕಡ್ಡಾಯ ಹೆಲ್ಮೆಟ್ ಕುರಿತು ಶಿವಮೊಗ್ಗದ ಡಾ.ಅರ್ಚನಾ ಭಟ್ ಸಲ್ಲಿಸಿರುವ ಪಿಐಎಲ್‌ಅನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, 2022ರ ನಿಯಮ 138 (7)ರ ಪ್ರಕಾರ ಸುರಕ್ಷತಾ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮವು 9 ತಿಂಗಳಿನಿಂದ ನಾಲ್ಕು ವರ್ಷದ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮಟ್ ಕಡ್ಡಾಯ ಎಂದು ಸ್ಪಷ್ಟಪಡಿಸುತ್ತದೆ. ಆದರೂ ಈವರೆಗೂ ಜಾರಿ ಮಾಡಿಲ್ಲವೆಂದು ನ್ಯಾಯಪೀಠದ ಗಮನಕ್ಕೆ ತಂದರು. ವಾದ ಆಲಿಸಿದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿ ವಿವರವಾದ ಆಕ್ಷೇಪಣೆ ಸಲ್ಲಿಸುವಂತೆಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆಗಳು ನಡೆಯುತ್ತಿವೆ ಈ ವಿಚಾರವಾಗಿ, ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ. ಇನ್ನೂ ಸುಗ್ರೀವಾಜ್ಞೆ ಹೊರಡಿಸಿಲ್ಲ. ಸುಗ್ರೀ ವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ ಎಂದು ಅವರು ತಿಳಿಸಿದರು. ಮೈಕ್ರೋ ಫೈನಾನ್ಸ್‌ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀ ವಾಜ್ಞೆ ಮೂಲಕ ಕಠಿಣ ಕಾನೂನು ತರಿದ್ದೇವೆ. ಸುಗ್ರೀವಾಜ್ಞೆ ಹೊರಡಿಸಿದ ಬಳಿಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಬೀಳಲಿದೆ.ಮೈಕ್ರೋ ಫೈನಾನ್ಸ್‌ಗಳು ಆರ್‌ಬಿಐ ನಿಯಮದಡಿ ಬರುತ್ತವೆ. ಶೇ.28, 29, 30ರಷ್ಟು ಬಡ್ಡಿ…
ತುಮಕೂರು : ಟೆಂಪೋ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ. ಗ್ರಾಮದ ತಿರುವಿನ ಬಳಿ ನಿಯಂತ್ರಣದ ತಪ್ಪಿ ಟೆಂಪೋ ಪಲ್ಟಿ ಆಗಿದೆ. ಸೆಂಟ್ರಿಂಗ್ ಕೆಲಸ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಈ ಭೀಕರವಾದ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿರುಮಣಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ನವದೆಹಲಿ: ಕಳೆದ ಕೆಲವು ದಿನಗಳ ಹಿಂದೆ ವಾರಕ್ಕೆ 60ರಿಂದ 90 ಗಂಟೆ ಕೆಲಸ ಮಾಡುವ ಅಗತ್ಯದ ಬಗ್ಗೆ ಇನ್ಫೋಸಿಸ್‌ನ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಮತ್ತು ಎಲ್ ಆ್ಯಂಡ್ ಟಿ ಅಧ್ಯಕ್ಷ ಸುಬ್ರಹ್ಮಣ್ಯಂ ಅವರ ಸಲಹೆ ಕುರಿತು ದೇಶವ್ಯಾಪಿ ಚರ್ಚೆ ನಡೆದ ಬೆನ್ನಲ್ಲೇ, ವಾರಕ್ಕೆ 60 ಗಂಟೆಗಿಂತ ಹೆಚ್ಚಿನ ದುಡಿಮೆಯು ಸಿಬ್ಬಂದಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆ ಹೇಳಿರು ವುದು ಸಂಚಲನ ಮೂಡಿಸಿದೆ. ಹೌದು ಉತ್ಪಾದಕತೆಯ ಹೆಸರಲ್ಲಿ ಕಚೇರಿಗಳಲ್ಲಿ ಸುದೀರ್ಘ ಅವಧಿಗೆ ಕೆಲಸ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ.ನಿತ್ಯವೂ ಕುಳಿತಲ್ಲೇ 12 ತಾಸಿಗಿಂತ ಅಧಿಕ ಕೆಲಸ ಮಾಡುವುದು ಮಾನಸಿಕಸ್ವಾಸ್ಥ್ಯಕ್ಕೆ ಅಪಾಯಕಾರಿ ಎಂದು ಹಲವು ಅಧ್ಯಯನ ವರದಿಗಳು ಹೇಳಿವೆ ಎಂದು ಸರ್ಕಾರ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಆದರೆ ಇಂಥ ಅಭಿಪ್ರಾಯದ ಜೊತೆಜೊತೆಗೇ, ದೇಶದ ಕಾರ್ಮಿಕ ಕಾನೂನುಗಳು ಗರಿಷ್ಠ ಕೆಲಸ ಅವಧಿಗೆ ಹೊಂದಿರುವ ಬಿಗಿ ನಿಯಮಗಳ ಬಗ್ಗೆ ಆಕ್ಷೇಪವನ್ನೂ ವ್ಯಕ್ತಪಡಿಸಿದೆ. ಇಂಥ ಬಿಗಿ ನಿಯಮಗಳು ಉದ್ಯಮಗಳ…
ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ ದಾರಿ ಹುಡುಕಾಟ ನಡೆಸಿರುವ ಸರ್ಕಾರದ ಮುಂದೀಗ ‘ಅತ್ಯಾಚಾರಿಗಳಿಗೆ ಆಸ್ತಿಯಲ್ಲಿ ಹಕ್ಕಿಲ್ಲ’ ಎಂಬ ಪ್ರಸ್ತಾವನೆ ಇದ್ದು, ಅಧಿಕಾರಿಗಳು ಕಾನೂನು ಸಾಧ್ಯಾಸಾಧ್ಯತೆ ಗಮನಿಸಿ ಪ್ರಸ್ತಾವನೆಗೆ ಅನುಮತಿ ನೀಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಈ ಒಂದು ಪ್ರಸ್ತಾವನೆಗೆ ಅನುಮತಿ ದೊರೆತರೆ ಅತ್ಯಾಚಾರವಾಗುವುದನ್ನು ತಡೆಯಬಹುದಾಗಿದೆ. ಈ ಕುರಿತಂತೆ ಈಗಾಗಲೇ ತಜ್ಞರ ಸಮಿತಿ ಮಾಡಿರುವ ಈ ಶಿಫಾರಸನ್ನು ಪರಾಮರ್ಶೆ ಮಾಡಲು ಮುಖ್ಯಕಾರ್ಯದರ್ಶಿಗೆ ಸರ್ಕಾರ ಸೂಚಿಸಿದೆ. ತಜ್ಞರ ವರದಿಯಲ್ಲಿ ರೇಪಿಸ್ಟ್ ಗಳಿಗೆ ಆಸ್ತಿ ಹಕ್ಕು ಹಿಂಪಡೆಯುವ ಪ್ರಸ್ತಾಪ ಇದೆ. ಅಷ್ಟೇ ಅಲ್ಲದೆ, ಸರ್ಕಾರದ ಎಲ್ಲ ಸೌಲಭ್ಯಗಳನ್ನು ಹಿಂಪಡೆಯುವ ಬಗ್ಗೆ ಕ್ರಮಗಳಾಗಬೇಕೆಂದು ಉಲ್ಲೇಖವಿದೆ. ಅಂದರೆ, ಪಡಿತರ ವಿತರಣೆ, ಸ್ಕಾಲರ್ ಶಿಪ್ ಸೇರಿ ಯಾವುದೇ ಸೌಲಭ್ಯ ನೀಡದ ತೀರ್ಮಾನ ಅಗಬೇಕೆಂದು ಹೇಳಲಾಗಿದೆ. 2014ರಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಸರಣಿ ರೀತಿ ನಡೆದಾಗ ಅಂದಿನ ಸರ್ಕಾರ ಎಂ.ಸಿ.ನಾಣಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ…
ಬೆಂಗಳೂರು : ಇಂದು ರಾಜ್ಯದಾದ್ಯಂತ ಹಾಲು ಮೊಸರು ಸಿಗೋದು ಅನುಮಾನ ಎಂದೇ ಹೇಳಲಾಗುತ್ತಿತ್ತು. ಏಕೆಂದರೇ ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಸಮರ ಸಾರಿದ್ದು, ಫೆಬ್ರವರಿ 1ರಿಂದ ಅಂದರೆ ಇಂದಿನಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದರು. ಆದರೆ ಇದೀಗ ಮುಷ್ಕರವನ್ನು ಫೆಬ್ರವರಿ 7ಕ್ಕೆ ಮುಂದೂಡಿದ್ದು, ಇಂದು ಹಾಲಿನ ಉತ್ಪನ್ನಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕುರಿತು ನಿನ್ನೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಅಧಿಕಾರಿ, ನೌಕರರ ಸಂಘದ ಅಧ್ಯಕ್ಷ ಗೋವಿಂದೇಗೌಡ, ಕೆಎಂಎಫ್ ಅಧ್ಯಕ್ಷರು ಮತ್ತು ಸಹಕಾರ ಇಲಾಖೆ ಫೆ.7ರೊಳಗೆ ಏಳನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.1ರಿಂದ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.ಒಂದು ವೇಳೆ ಫೆಬ್ರವರಿ ಮೊದಲ ವಾರದೊಳಗೆ ಬೇಡಿಕೆ ಈಡೇರಿ ಇ ಸದಿದ್ದರೆ ಸಂಘದ ಕಾರ್ಯಕಾರಿ ಮಂಡಳಿ ಸಭೆ ಕರೆದು ಮುಂದಿನ ಹೋರಾಟ ತೀರ್ಮಾನಿಸಲಾಗು 0 ವುದು ಎಂದು ತಿಳಿಸಿದರು.…












