Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಾಳೆ ರಾಜ್ಯಾದ್ಯಂತ ಬಾರ್ ಗಳನ್ನು ಬಂದ್ ಮಾಡಲು ಬಾರ್ ಅಸೋಸಿಯೇಷನ್ ಈ ಹಿಂದೆ ನಿರ್ಧರಿಸಿತ್ತು. ಇದೀಗ ಇಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಬಾರ್ ಅಸೋಸಿಯೇಷನ್ ನಾಳೆ ರಾಜ್ಯಾದ್ಯಂತ ಬಾರ್ ಗಳನ್ನು ಬಂದ್ ಮಾಡುವ ನಿರ್ಧಾರವನ್ನು ವಾಪಸ್ ಪಡೆದಿದೆ. ಹೌದು ನಾಳೆ ರಾಜ್ಯಾದ್ಯಂತ ಯಾವುದೇ ಕಾರಣಕ್ಕೂ ಬಾರ್ಗಳನ್ನು ಬಂದ್ ಮಾಡುವುದಿಲ್ಲ ಎಂದು ಬಂದ್ ನಿರ್ಧಾರವನ್ನು ಬಾರ್ ಅಸೋಸಿಯೇಷನ್ ಇದೀಗ ಹಿಂಪಡೆದಿದೆ. ಬಾರ್ ಮಾಲೀಕರ ಸಂಘದ ಪದಾಧಿಕಾರಿಗಳ ಸಂಧಾನ ಇದೀಗ ಯಶಸ್ವಿಯಾಗಿದೆ. ಹಾಗಾಗಿ ನಾಳೆ ಯಾವುದೇ ಕಾರಣಕ್ಕೂ ರಾಜ್ಯದ ಎಲ್ಲಾ ಬಾರ್ ಗಳನ್ನು ಬಂದ್ ಮಾಡುವುದಿಲ್ಲ. ಕರುಣಾಕರ ಹೆಗಡೆ ನೇತೃತ್ವದ ತಂಡವು ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಸಿ, ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳ ಸಂಧಾನ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಎಂದಿನಂತೆ ಬಾರ್ ಗಳಲ್ಲಿ ಮದ್ಯ ಮಾರಾಟ ನಡೆಯಲಿದೆ.…
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಒಟ್ಟು 12 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರ ರದ್ದು ಮಾಡಲು ಸಂಚು ರೂಪಿಸಿದೆ ಎಂದು ಗಂಭೀರವಾದಂತಹ ಆರೋಪ ಮಾಡಿದರು. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಂಚು ಮಾಡುತ್ತಿದ್ದಾರೆ. ಬಡವರ ರೇಷನ್ ಕಾರ್ಡ್ ರದ್ದಾಗುತ್ತಿರುವುದರಿಂದ ಕಾಂಗ್ರೆಸ್ ರಕ್ತ ಹೀರುವ ಸರ್ಕಾರವಾಗಿದೆ. ರೇಷನ್ ಕಾರ್ಡ್ ರದ್ದು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ರೇಷನ್ ಕಾರ್ಡ್ ಕೊಡುವಾಗ ಅಧಿಕಾರಿಗಳು ಕತ್ತೆ ಕಾಯುತಿದ್ರ? ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿದ್ದಾರೆ ಅಂತಹ ಅಧಿಕಾರಿಯನ್ನು ಅಮಾನತುಗೊಳಿಸಿ ಎಂದು ಆಗ್ರಹಿಸಿದ್ದಾರೆ. ಇನ್ನು ಬಿಜೆಪಿ ಆರ್ ಎಸ್ ಎಸ್ ವಿಷ ಇದ್ದಂತೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ನವರು ಬರಿ ವಿಷ ಅಲ್ಲ ಕಾರ್ಕೋಟ ವಿಷವಿದ್ದಂತೆ.ಆರ್ ಎಸ್ ಎಸ್ ಇಲ್ಲದಿದ್ದರೆ ದೇಶವನ್ನು ಒಡೆದು ಕ್ಷೆದ್ರ ಛಿದ್ರ…
ಶಿವಮೊಗ್ಗ : ಕೀಟನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಒಬ್ಬ ಅಸ್ವಸ್ಥಗೊಂಡಿದ್ದ, ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಹೌದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಅನುದೀಪ್ (16) ಎಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಆತ ಕೀಟನಾಶಕ ಸೇವಿಸಿದ್ದತಕ್ಷಣ ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಯಾಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದರ ಕುರಿತು ಇನ್ನು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
xಧಾರವಾಡ : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ತಂದೆಯ ತಲೆಯ ಮೇಲೆ, ಕಲ್ಲು ಎತ್ತಿ ಹಾಕಿ ಜಜ್ಜಿ ಭೀಕರವಾಗಿ ಮಗನೊಬ್ಬ ಕೊಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದ ನಿವಾಸಿ ಅಡಿವೆಪ್ಪ ತಡಕೋಡ (57) ಎಂಬುವವರು ಹೆತ್ತ ಮಗನಿಂದಲೇ ಕೊಲೆಗೆ ಈಡಾಗಿದ್ದಾರೆ. ಇನ್ನು ಕೊಲೆ ಮಾಡಿದ ಮಗನನ್ನು ಶಿವಯೋಗಿ ಎಂದು ತಿಳಿದುಬಂದಿದೆ. ಶಿವಯೋಗಿ ಅದೇ ಗ್ರಾಮದಲ್ಲಿ ಅಕ್ರಮ ಸಂಬಂಧವೊಂದನ್ನು ಇಟ್ಟುಕೊಂಡಿದ್ದ. ಇದಕ್ಕೆ ಅಡಿವೆಪ್ಪ ವಿರೋಧ ವ್ಯಕ್ತಪಡಿಸಿ ತನ್ನ ಮಗನ ಜೀವನ ಚೆನ್ನಾಗಿರಲಿ ಎಂದು ಕನ್ಯೆ ನೋಡುವ ಶಾಸ್ತ್ರ ಕೂಡ ಇಟ್ಟುಕೊಂಡಿದ್ದ. ಅಡಿವೆಪ್ಪನ ಹತ್ಯೆಯಾಗುವ ಹಿಂದಿನ ರಾತ್ರಿ ಇದೇ ವಿಷಯಕ್ಕೆ ಮನೆಯಲ್ಲಿ ಮಗನೊಂದಿಗೆ ಜಗಳ ಕೂಡ ನಡೆದಿತ್ತಂತೆ. ಕಳೆದ ನ.13 ರಂದು ತನ್ನ ಮನೆಯ ಪಕ್ಕದ ಶೆಡ್‌ನಲ್ಲಿ ಮಲಗಿದ ಜಾಗದಲ್ಲೇ ಬರ್ಬರವಾಗಿ ಹತ್ಯೆಗೀಡಾಗಿದ್ದ. ಅಡಿವೆಪ್ಪನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೆಳಗಾಗುವಷ್ಟರಲ್ಲಿ ಅಡಿವೆಪ್ಪ ಹೆಣವಾಗಿದ್ದನ್ನು ಕಂಡು ಆತನ ಮನೆಯವರು ಕಕ್ಕಾಬಿಕ್ಕಿಯಾಗಿದ್ದರು.…
ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಮತದಾನ ನಡೆದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.ಆದರೆ ಮೂರೂ ಕ್ಷೇತ್ರಗಳ ಪೈಕಿ ಹೈ ವೋಲ್ಟೇಜ್ ಕಣವಾಗಿ ಚನ್ನಪಟ್ಟಣ ಕ್ಷೇತ್ರ ಗಮನ ಸೆಳೆದಿದೆ. ಇದೀಗ ಫಲಿತಾಂಶಕ್ಕೂ ಮುನ್ನ ಚೆನ್ನಪಟ್ಟಣ ಕ್ಷೇತ್ರದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದ್ದು ಜನರು ಭೂಮಿ ಕುರಿ ಕೋಳಿ ಜಾನುವಾರುಗಳನ್ನು ಅಡವಿಟ್ಟಿದ್ದಾರೆ. ಹೌದು NDA ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದಾರೆ. ಇನ್ನು ಉಪಚುನಾವಣೆಗೂ ಮುನ್ನ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಿಪಿ ಯೋಗೇಶ್ವರ್ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇವರಿಬ್ಬರ ಮಧ್ಯ ಇದೀಗ ಜನರು ಬೆಟ್ಟಿಂಗ್ ನಡೆಸಿದ್ದಾರೆ.ಈ ಬೆಟ್ಟಿಂಗ್ ದಂಧೆ ಬರೀ ಚನ್ನಪಟ್ಟಣದ ವ್ಯಾಪ್ತಿಯಲ್ಲಷ್ಟೇ ನಡೆಯುತ್ತಿಲ್ಲ, ಬದಲಿಗೆ ಅಕ್ಕಪಕ್ಕದ ಜಿಲ್ಲೆಗಳಿಗೂ ವ್ಯಾಪಿಸಿದೆ. ಬುಕ್ಕಿಂಗ್ ಟ್ರೆಂಡ್ ಪ್ರಕಾರ ಸ್ಥಳೀಯರಿಗೆ ಸಿಪಿ. ಯೋಗೀಶ್ವರ್ ಗೆಲ್ಲುವ ಕಂಟೆಸ್ಟೆಂಟ್ ಆಗಿದ್ರೆ ಹೊರಗಿನವರಿಗೆ ನಿಖಿಲ್ ಕುಮಾರಸ್ವಾಮಿ ಆಗಿದ್ದಾರೆ. ಬೆಟ್ಟಿಂಗ್ ಕಟ್ಟುವವರು ಸಹ…
ಬೆಂಗಳೂರು : ನವೆಂಬರ್ ಅಂತ್ಯದಿಂದ ಡಿಸೆಂಬರ್ ತಿಂಗಳ ವರೆಗೆ ರಾಜ್ಯದಲ್ಲಿ ಅಧಿಕ ಚಳಿ ಇರುತ್ತದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದರು. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 8 ರಿಂದ 10 ಡಿಗ್ರಿ ಉಷ್ಣಾಂಶ ಇರಬಹುದು. ಬೆಂಗಳೂರಿನಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೂ ಶೀತದ ವಾತವರಣ ಇರಲಿದ್ದು, ಶೀತ -ಜ್ವರ ಹೆಚ್ಚಾಗಬಹುದು ಎಂದು ಅವರು ಮಾಹಿತಿ ನೀಡಿದರು. ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶ ಕಡಿಮೆಯಾಗುವ ಹಿನ್ನೆಲೆಹೆಚ್ಚಿನ ಚಳಿ ಅನುಭವವಾಗಲಿದೆ.ಹಾಗಾಗಿ ಈ ವರ್ಷ ಚಳಿಗಾಲ ತೀವ್ರವಾಗುವ ಹೆಚ್ಚಿನ ಸಾಧ್ಯತೆ ಇದೆ. ನವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ ಇರಲಿದ್ದು, ಈ ಚಳಿಯ ಅನುಭವ ಮುಂದಿನ ಜನವರಿಯಿಂದ ಮಾರ್ಚ್ ವರೆಗೂ ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಸದ್ಯ ರಾಜ್ಯದಲ್ಲಿ ವಕ್ಫ್ ವಿವಾದ ಬೆನ್ನಲ್ಲೆ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಇದರಿಂದ ರಾಜ್ಯದ ಅರ್ಹ ಬಿಪಿಎಲ್ ಕಾರ್ಡ್ ಗಳು ಸಹ ಕ್ಯಾನ್ಸಲ್ ಆಗಿವೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೆಎಚ್ ಮುನಿಯಪ್ಪ ಅವರಿಗೆ ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ದಾರರನ್ನು ತಪ್ಪಿಸಬೇಡಿ ಕಾರ್ಡ್ ಒದಗಿಸಿ ಎಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುನಿಯಪ್ಪಗೆ ಅದಕ್ಕೆ ಹೇಳಿದ್ದೇನೆ, ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ ನವರನ್ನು ತಪ್ಪಿಸಬೇಡಿ. ಯಾರು ಶ್ರೀಮಂತರು? ಯಾರು ಸರ್ಕಾರಿ ನೌಕರರು ಯಾರು? ಇನ್ಕಮ್ ಟ್ಯಾಕ್ಸ್ ಕಟ್ಟುತ್ತಾರೆ ಅವರು ಬಿಪಿಎಲ್ ಕಾರ್ಡಿಗೆ ಅರ್ಹರಲ್ಲ. ಬಿಪಿಎಲ್ ಕಾರ್ಡ್ ಹೊಂದಿದವರು ಒಬ್ಬರೇ ಒಬ್ಬರು ಕೂಡ ಬಿಟ್ಟು ಹೋಗಬಾರದು. ಅರ್ಹರು ಅರ್ಜಿ ಕೊಟ್ಟರೆ ಅಂತವರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ. ಬಿಜೆಪಿಯಿಂದ ನಾವು ಪಾಠ ಕಲಿಯಬೇಕಾಗಿಲ್ಲ.ಕೆಲವರು ಬಿಪಿಎಲ್ ಕಾರ್ಡ್ ರದ್ದು ಅಂತ…
ದಕ್ಷಿಣಕನ್ನಡ : ಭಾರತದ ಕ್ರಿಕೆಟ್ ತಂಡದ ಖ್ಯಾತ ಬ್ಯಾಟರ್ ಸೂರ್ಯ ಕುಮಾರ್ ಯಾದವ ಅವರು, ಇಂದು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆಗಳನ್ನು ಸಲ್ಲಿಸಿದರು. ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.
ಬೆಂಗಳೂರು : ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ. ಬಡತನ ರೇಖೆಗಿಂತ ಮೇಲೆ ಇದ್ದವರು ಹಾಗೂ ಬಿಪಿಎಲ್ ಕಾರ್ಡ್ ಗಳಿಗೆ ಅರ್ಹರಲ್ಲದವರನ್ನು ಗುರುತಿಸಿ ಅಂತವರ ಕಾರ್ಡ್ ಗಳನ್ನು ಎಪಿಎಲ್ ಗೆ ಬದಲಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದರು. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಭಯಪಡಬೇಕಿಲ್ಲ. ಬಿಜೆಪಿಯವರು ಸುಮ್ಮನೆ ತರಲೆ ಮಾಡುತ್ತಿದ್ದಾರೆ. ಬಡವರಿಗೆ ಅಕ್ಕಿ ಕೊಡುತ್ತಿರುವುದರಿಂದ ಇವರಿಗೆ ಸಮಾಧಾನ ಇಲ್ಲ. 20 ರಿಂದ 25 ರಷ್ಟು ಅರ್ಹರಲ್ಲದವರು ಸೇರಿಕೊಂಡಿದ್ದಾರೆ. ಬಡವರು ಅಲ್ಲದವರು ಹಾಗೂ ಅರ್ಹರಲ್ಲದವರು ಸೇರಿಕೊಂಡಿದ್ದಾರೆ. ರಾಜ್ಯದಲ್ಲಿ ಬಡವರ ಪ್ರಮಾಣ ಶೇಕಡ 80ರಷ್ಟಿದೆ ಇದು ಸಾಧ್ಯವಾ? ಕರ್ನಾಟಕದ ಅಂತಹ ರಾಜ್ಯದಲ್ಲಿ ಶೇಕಡಾ 80ರಷ್ಟು ಬಡವರಿದ್ದಾರಾ? ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ. ಇದಕ್ಕೆ ರಾಜಕೀಯ ಬೆರೇಸಿ ದೊಡ್ಡ ಗದ್ದಲ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಯಾರು ಕೆಳಗಿದ್ದಾರೋ ಬಡತನ ರೇಖೆಗಿಂತ…
ಮಂಡ್ಯ : ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ವಾರ್ ಮತ್ತೆ ಭುಗಿಲೆದ್ದಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಕಾಂಗ್ರೆಸ್ ನಲ್ಲೂ ಕಿಂಡರ್ ಗಾರ್ಡನ್ ಪದ್ಧತಿ ಇದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಬೇಡಿಕೆ ಇಲ್ಲ. ಅದು ನನ್ನ ಹಕ್ಕು ಎಂದು ಮಂಡ್ಯದಲ್ಲಿ ಮಳವಳ್ಳಿಯ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಹೇಳಿಕೆ ನೀಡಿದ್ದಾರೆ. ಸಂಪುಟ ಪುನಾರಚನೆಯ ವೇಳೆ ಸಚಿವ ಸ್ಥಾನ ಪಡೆಯುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದಲ್ಲೂ ಕಿಂಡರ್ ಗಾರ್ಡನ್ ಪದ್ಧತಿ ಇದೆ. ರಾಜಕೀಯ ಹಿನ್ನೆಲೆ ಇದ್ದರೆ ಮಾತ್ರ ಸ್ನಾನ ಮಾನ ಸಿಗುತ್ತದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಹಾಗಾಗಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಮಂಡ್ಯದಲ್ಲಿ ಮಳವಳ್ಳಿಯ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಅಸಮಾಧಾನ ಹೊರಹಾಕಿದರು.












