Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ಈ ಬಾರಿಯ ರಾಮಕೃಷ್ಣಗೆ ಘೋಷಿಸಿದ್ದ ಉತ್ತಮ ಶಿಕ್ಷಕ ಪ್ರಶಸ್ತಿ ತಡೆದ ವಿಚಾರವಾಗಿ, ಇಂದು ರಾಷ್ಟ್ರೀಯ ಹೆದ್ದಾರಿ ತಡೆದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕೃತಿಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನ ತಡೆದು ಧರಣಿ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 169 ಎ ಪಡೆದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಈ ವೇಳೆ ಉಡುಪಿಯ ಶಾಸಕ ಯಶ್ ಪಾಲ್ ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಕಾಪು ಶಾಸಕ ಸುರೇಶ್ ಶೆಟ್ಟಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಐವರು ಯುವಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಯುವಕರು ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಕಾರು ಗದ್ದೆಗೆ ಉರುಳಿ ಬಿದ್ದಿದೆ ಗಾಯಾಳು ಯುವಕರಿಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ .ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳಾದ ಹಾಸಿಗೆ, ದಿಂಬು ಕುರಿತಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆ ಕೂಡ ಅನುದಾನ ನೀಡಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ನೀಡುವ ಹಾಸಿಗೆ ದಿಂಬಿನಲ್ಲೂ ಸರ್ಕಾರ ಲೂಟಿ ಮಾಡಿದೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿದಂತೆ ಟ್ವೀಟ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ, ಶೋಷಿತ ಸಮುದಾಯವನ್ನು ಚುನಾವಣೆ ಬಂದಾಗ ಮಾತ್ರ ಓಲೈಸಲು ಹವಣಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ ನಿತ್ಯ ಶೋಷಿಸುವ ಮೂಲಕ ಮಜಾ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಕರ್ನಾಟಕದ ವಸತಿ ಶಿಕ್ಷಣ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ 2024-25ರ ಬಜೆಟ್ ನಲ್ಲಿ ನಯಾ ಪೈಸೆ ನೀಡಿಲ್ಲ. ಹೀಗಾಗಿ, ಪರಿಶಿಷ್ಟ ವಿದ್ಯಾರ್ಥಿಗಳು ಹರಿದ ಹಾಸಿಗೆ, ಧೂಳು ಹಿಡಿದ ದಿಂಬು, ಮುರುಕು ಡೆಸ್ಕ್ನಲ್ಲೇ ದಿನ ದೂಡುವಂತಾಗಿದೆ.…
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ ಬರಬಹುದು, 2026ರಲ್ಲಿ ಬರಬಹುದು, 2025ರಲ್ಲೇ ಚುನಾವಣೆ ಬರಬಹುದು. ಯಾವುದಕ್ಕೂ ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ಧರಾಗಿ ಎಂದು ಹೇಳಿದರು. ಜನತೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಸಮಾಧಾನವಿದೆ. ಹಿಂದಿನ ಸರ್ಕಾರದ ಬಗ್ಗೆ ಆರೋಪ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಭಿವೃದ್ಧಿ ಕಾಣ್ತಾ ಇಲ್ಲ. ಜನ ಬೇಸತ್ತಿದ್ದಾರೆ. ಮುಂದಿನ ಮೂರೂವರೆ ವರ್ಷಗಳವರೆಗೆ ಅವಧಿ ಇದ್ದರೂ ಕಾಂಗ್ರೆಸ್ ನಾಯಕರ ತಪ್ಪಿನಿಂದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.
ಬೆಂಗಳೂರು : ಸ್ಯಾಂಡಲ್ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದ್ರೆ, ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ಇಂದು ಮಧ್ಯಾಹ್ನ 1:30ರ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಿರ್ದೇಶಕ ನಾಗಶೇಖರ್ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ.ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ಅಪಘಾತದ ಕುರಿತು ನಾಗಶೇಖರ್ ಪ್ರತಿಕ್ರಿಯೆ ನೀಡಿದ್ದು, ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದ ಪರಿಣಾಮ ಅಪಘಾತಕ್ಕೆ ಕಾರಣವಾಯಿತು. ಕಾರು ಡ್ಯಾಮೇಜ್ ಆಗಿದೆ, ಅದು ಬಿಟ್ಟರೆ ನನಗೇನು ತೊಂದರೆ ಆಗಿಲ್ಲ ಎಂದು ನಾಗಶೇಖರ್ ತಿಳಿಸಿದ್ದಾರೆ. ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ, ಇನ್ನು ನಿರ್ದೇಶಕ ನಾಗಶೇಖರ್ ಅವ್ರ ಚೆಂಜ್ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ : ಪತಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದ. ಇದನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಬಳಿಕ ಹೆದರಿ ಶರಾವತಿ ನದಿ ಸೇತುವೆ ಮೇಲಿಂದ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಹೌದು ಪತಿಯ ಹಲ್ಲೆಯಿಂದ ಗಾಯಗೊಂಡ ಪತ್ನಿ ಸಬೀತಾ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂದ ವ್ಯಕ್ತಿಯನ್ನು ಸದಾನಂದ ಭಟ್, ಎಂದು ತಿಳಿದುಬಂದಿದೆ.ಕಳೆದ 12 ವರ್ಷಗಳಿಂದ ಪ್ರತಿನಿತ್ಯ ಜಗಳ ಮಾಡಿಕೊಂಡಿದ್ದ ದಂಪತಿ. ಕಳೆದ ನಾಲ್ಕು ವರ್ಷಗಳಿಂದ ಒಂದೇ ಮನೆಯಲ್ಲಿದ್ದರೂ ಇಬ್ಬರು ಬೇರೆ ಬೇರೆ ಅಡುಗೆ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಪತಿಗೆ ಅನೈತಿಕ ಸಂಬಂಧ ಇರುವುದು ಪತ್ನಿಯ ಗಮನಕ್ಕೆ ಬಂದಿದೆ. ಈ ವಿಚಾರವಾಗಿ ಗಂಡನೊಂದಿಗೆ ಜಗಳಕ್ಕೆ ಬಿದ್ದಿದ್ದ ಪತ್ನಿ. ದಿನನಿತ್ಯ ಇದೇ ವಿಚಾರವಾಗಿ ಜಗಳವಾಡುತ್ತಿದ್ದ ಪತ್ನಿ. ಇದರಿಂದ ಬೇಸತ್ತು. ಪತ್ನಿ ಸಬಿತಾ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಸದಾನಂದ ಭಟ್. ಪತಿಯ ಹಲ್ಲೆಯಿಂದ ತೀವ್ರ ಪೆಟ್ಟಾಗಿ…
ಬೆಂಗಳೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿದೆ. ಇದರ ಮಧ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿರುವುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಹೌದು ಇಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011 ರಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಅಡಿ ಉಚಿತ ಸೀರೆ ಹಂಚಿಕೆಯಲ್ಲಿ 23 ಕೋಟಿ ಹಗರಣ ನಡೆದಿದೆ. ಸೂರತ್ನಿಂದ 100 ರೂಪಾಯಿ ಬೆಲೆಯ ಸೀರೆಗಳನ್ನು ಹೆಚ್ಚಿನ ಬೆಲೆ ನೀಡಿ ಸುಮಾರು 10 ಲಕ್ಷ ಸೀರೆಗಳನ್ನು ತರಿಸಲಾಗಿತ್ತು. ಈ ಕುರಿತು ವಿಧಾನ ಪರಿಷತ್ ಅಲ್ಲಿ ಮೋಟಮ್ಮ ಅವರು ವಿರೋಧ ಪಕ್ಷದ ನಾಯಕರಾಗಿ ಇದ್ದಾಗ ಈ ವಿಚಾರದ ಬಗ್ಗೆ ಚರ್ಚೆಯಾಗಿದೆ. ಈ ಹಗರಣದ ಬಗ್ಗೆ ತನಿಖೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ…
ಬಾಗಲಕೋಟೆ : ಕಳೆದ ಕೆಲವು ತಿಂಗಳುಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮಹಾರಾಷ್ಟ್ರದ ಮಹಿಳೆ ಒಬ್ಬಳು ಗರ್ಭಪಾತದಿಂದ ಸಾವನ್ನಪ್ಪಿದ್ದ ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೆ ಮಹಾಲಿಂಗಪುರದಲ್ಲಿ ಎರಡನೇ ಪ್ರಕರಣ ಬೆಳಕಿಗೆ ಬಂದಿದ್ದು, ಹೆಣ್ಣು ಮಗುವೆಂದು ಗರ್ಭಪಾತ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರದ ಮಹಿಳೆ ಸಾವು ಕೇಸ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಮಹಾಲಿಂಗಪುರದ ಪಾಟೀಲ್ ಆಸ್ಪತ್ರೆಯಲ್ಲಿ ಹೆಣ್ಣು ಮಗು ಎಂದು ಗರ್ಭಪಾತ ಮಾಡಿಸುವ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಈ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗರ್ಭಪಾತ ಮಾಡಿಸಿದ್ದಾರೆ ಆದರೆ ಗಂಡು ಮಗು ಎಂದು ಗೊತ್ತಾದ ಹಿನ್ನೆಲೆ ಕೇಸ್ ಬಹಿರಂಗವಾಗಿದೆ. ಡಾಕ್ಟರ್ ರಾಜೇಂದ್ರ ಪಾಟೀಲ್ ವಿರುದ್ಧ ಗರ್ಭಪಾತ ಮಾಡಿದ ಆರೋಪ ಇದೀಗ ಕೇಳಿಬಂದಿದ್ದು,…
ಮೈಸೂರು : ಆಕೆ 8 ತಿಂಗಳ ತುಂಬು ಗರ್ಭಿಣಿ ಇದನ್ನು ಲೆಕ್ಕಿಸದೆ ಪತಿಯಾದವನು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದರಿಂದ ಮನನೊಂದು 8 ತಿಂಗಳ ಗರ್ಭಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಹೌದು ಮೈಸೂರಿನ ಕನಕಗಿರಿಯಲ್ಲಿ ಚೈತ್ರ @ ಚಿಕ್ಕದೇವಿ (23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಕನಕಗಿರಿಯ ಶರತರಾಜು ಜೊತೆ ಚೈತ್ರ ಮದುವೆಯಾಗಿದ್ದಳು. ಇನ್ನೂ ಚೈತ್ರಾ ಪತಿ ಶರತ್ ರಾಜ್ ನನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರುಕುಳ ತಾಳಲಾರದೆ ಚೈತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪ ಹೇಳಿ ಬಂದಿದ್ದು ಪತಿಯ ಮನೆಯ ವಿರುದ್ಧ ವಿರುದ್ಧ ಚೈತ್ರ ಪೋಷಕರು ದೂರು ಸಲ್ಲಿಸಿದ್ದು, ಘಟನೆ ಕುರಿತಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಹಂತದ ಯೋಜನೆ ಉದ್ಘಾಟನೆ ಮಾಡಿ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದರು. ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ ಯಾವುದೇ ಸಂಶಯ ಬೇಡ. ಎರಡನೇ ಹಂತದ ಯೋಜನೆಯ ಕಾಮಗಾರಿ 2026 27ಕ್ಕೆ ಮುಗಿಯಲಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಯಾವುದೇ ಅನುಮಾನ ಬೇಡ. ಎತ್ತಿನಹೊಳೆ ಯೋಜನೆ ಕಾಮಗಾರಿಗೆ ನಾನೇ ಭೂಮಿ ಪೂಜೆ ಮಾಡಿದ್ದು. 2014ರಲ್ಲಿ ಚಿಕ್ಕಬಳ್ಳಾಪುರದಲ್ಲಿ ನಾನು ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ್ದೆ. ಇಂದು ನಾನೇ ಆ ಒಂದು ಕಾಮಗಾರಿಯ ಉದ್ಘಾಟನೆ ಮಾಡಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ಈ ಒಂದು ಯೋಜನೆಯು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ರಾಮನಗರ, ಚಿಕ್ಕಮಂಗಳೂರು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿತ್ತು. 7 ಜಿಲ್ಲೆಗಳಿಗೆ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. 527 ಕೆರೆಗಳಿಗೆ ನೀರು ತುಂಬಿಸುವ ಕುಡಿಯುವ ನೀರಿನ ಯೋಜನೆಯಾಗಿದೆ…