Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ, ಎನ್ಇಪಿ ಕರಡು ಸಮಿತಿ ಅಧ್ಯಕ್ಷರಾಗಿದ್ದ ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರ ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಾಗಾಗಿ ನಾಳೆ ನಡೆಯಲಿರುವ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ. ಕಸ್ತೂರಿರಂಗನ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಇವರ ಕೊಡುಗೆ ಸ್ಮರಣೀಯವಾದದ್ದು. ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ…
ಚಾಮರಾಜನಗರ : ಈ ಸರಿಯಾದ ಹತ ಎನ್ನುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ವಯಸ್ಸಿನ ಮಿತಿಯಿಲ್ಲದೆ ಎಲ್ಲರಲ್ಲೂ ಹೃದಯಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಹೃದಯಘಾತದಿಂದ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಜರುಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆಲಬಾವಿ ಗ್ರಾಮದ ಪರಶುರಾಮ್ (31) ಮೃತಪಟ್ಟ ಕಾನ್ಸ್‌ಟೇಬಲ್. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆಯಲ್ಲಿ ಪರಶುರಾಮ್ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಎಸ್.ಬಿ ಕರ್ತವ್ಯ ಮಾಡುತ್ತಿದ್ದರು. ಇಂದು ಬೆಳಗ್ಗೆ ಕರ್ತವ್ಯದಲ್ಲಿದ್ದಾಗಲೇ ಹೃದಯಘಾತ ಸಂಭವಿಸಿದೆ. ತಕ್ಷಣ ಸಹೋದ್ಯೋಗಿಗಳು ರಾಮಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದ್ಯೂಯುವಂತೆ ಸಲಹೆ ನೀಡಿದ್ದಾರೆ. ಕಾರಿನಲ್ಲಿ ಚಿಕಿತ್ಸೆಗೆ ಕರೆ ತರುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಹಾವೇರಿ : ಇತ್ತೀಚಿಗೆ ಈ ಸಂಬಂಧ ಎನ್ನುವುದಕ್ಕೆ ಅರ್ಥವೇ ಇಲ್ಲದಂತಾಗಿದೆ. ಏಕೆಂದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಹಿರಿದ ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮನೆ ಮುಂದೆ ಆಟ ಆಡುತ್ತಿದ್ದ 7 ವರ್ಷದ ಬಾಲಕಿಯ ಮೇಲೆ ವೃದ್ಧ ಒಬ್ಬ ಲೈಂಗಿಕ ದೌರ್ಜನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಿಹಾರ್ ಮೂಲದ ಪ್ರತಿಯೊಬ್ಬ ಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಬಳಿಕ…
ಉತ್ತರಕನ್ನಡ : ಒಂದೆಡೆ ಪಹಲ್ಗಾಮ್ ನಲ್ಲಿ ಉಗ್ರರ ನರಮೇಧಕ್ಕೆ ಇಡಿ ದೇಶಕ್ಕೆ ದೇಶವೇ ಕಿಡಿ ಕಾರುತ್ತಿದ್ದು, ಇತ್ತ 2020ರಲ್ಲಿ ಬೆಂಗಳೂರಿನ ಕೆಜಿ ಹಳ್ಳಿ-ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ದೇಶಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿದ್ದರು. ಇದೀಗ, ಪಕ್ರರಣದ ಮೋಸ್ಟ್ ವಾಂಟೆಡ್ ಆರೋಪಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಅನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಹೌದು 2020ರಲ್ಲಿ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಆರೋಪಿ 302 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಮೌಸೀನ್ ಸಿಂಧಗಿಯಲ್ಲಿರುವ ಮಾಹಿತಿ ತಿಳಿದ ಪೊಲೀಸರು, ಕೂಡಲೇ ಕಾರ್ಯಪ್ರವೃತ್ತರಾಗಿ ಆತನನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಉಗ್ರ ಚಟುವಟಿಕೆ ಸಂಬಂಧಿಸಿ ಶಿರಸಿಯಲ್ಲಿ ಎನ್ಐಎಯಿಂದ ಬಂಧಿತನಾಗಿದ್ದ ಸಾದಿಕ್, ಆರೋಪಿ ಮೌಸೀನ್ನನ್ನು ಟ್ರೇನ್…
ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ ತಾಲೂಕಿನ ಕದಬಹಳ್ಳಿ ಬಳಿ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು.ಕದಬಹಳ್ಳಿ ಟೋಲ್‍ಗೇಟ್ ಬಳಿ ಇದ್ದಕ್ಕಿದ್ದಂತೆ ಬಸ್‍ನಲ್ಲಿ ಬೆಂಕಿ ಕಾಣಿಸಿದೆ. ಕೂಡಲೇ ಬಸ್ ಚಾಲಕನ ಸೂಚನೆಯಿಂದ ಎಲ್ಲ ಪ್ರಯಾಣಿಕರು ಲಗೇಜ್ ಸಮೇತ ಕೆಳಗೆ ಇಳಿದಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‍ನ ಬೆಂಕಿಯನ್ನು ನಂದಿಸಿದರು. ಆದರೆ ಅಸ್ಟೊತ್ತಿಗಾಗಲೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ಒಂದು ಘಟನೆ ಕುರಿತಂತೆ ಬಿಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಇದೀಗ ದಾಂಡೇಲಿಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಸಂಡೆ ಮಾರ್ಕೆಟ್ ನಿವಾಸಿ ಅನೀಸ್ ಹುಲ್ಗರ್ ಎಂಬಾತ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದು ತನಿಖೆ ಕೈಗೊಂಡಿದ್ದಾರೆ.
ಗದಗ : ಗದಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಚಲಿಸುತ್ತಿದ್ದ ಕಾರಲ್ಲಿ ಏಕಾಏಕಿ ಮೆಟ್ ಕಾಣಿಸಿಕೊಂಡಿದೆ ಈ ವೇಳೆ ನಡು ರಸ್ತೆಯಲ್ಲಿಯೇ ಕಾರು ಧಗಧಗನೆ ಹೊತ್ತಿ ಉರಿದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವರದಿಯಾಗಿದೆ. ಈರಣ್ಣ ಜಾಲಿಹಾಳ ಅವರು ತಮ್ಮ ಕುಟುಂಬದವರೊಂದಿಗೆ ಕಾರಿನಲ್ಲಿ ಗದಗನಿಂದ ಹನುಮಸಾಗರಕ್ಕೆ ಹೊರಟಿದ್ದರು. ಕಾರು ಚಲಿಸುತ್ತಿರುವ ವೇಳೆ ಇಂಜಿನ್‌ನಲ್ಲಿ ಸ್ವಲ್ಪ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಈರಣ್ಣ ಮತ್ತು ಕುಟುಂಬಸ್ಥರು ಕಾರಿನಿಂದ ಹೊರಗಡೆ ಬಂದಿದ್ದಾರೆ. ಎಲ್ಲರೂ ಕಾರಿನಿಂದ ಹೊರಗಡೆ ಬಂದ ತಕ್ಷಣ ನಡು ರಸ್ತೆಯಲ್ಲಿಯೇ ಕಾರು ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇರಾನ್ : ದಕ್ಷಿಣ ಇರಾನ್ನ ಬಂದರ್ ಅಬ್ಬಾಸ್ನ ಶಾಹಿದ್ ರಾಜೀ ಬಂದರಿನಲ್ಲಿ ಶನಿವಾರ ಭಾರಿ ಸ್ಫೋಟ ಸಂಭವಿಸಿದ್ದು, 4 ಜನ ಸಾವನ್ನಪ್ಪಿದ್ದು, 500 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ. ಘಟನೆ ಬೆನ್ನಲ್ಲೇ ಇರಾನ್ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ ಎಂದು ತಿಳಿದುಬಂದಿದೆ. ಒಮಾನ್ ನಲ್ಲಿ ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಮೂರನೇ ಸುತ್ತಿನ ಪರಮಾಣು ಮಾತುಕತೆಗಳು ಪ್ರಾರಂಭವಾದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ.ಆದರೆ ಅಧಿಕಾರಿಗಳು ಇನ್ನೂ ನಿಖರವಾದ ಕಾರಣವನ್ನು ನಿರ್ಧರಿಸಿಲ್ಲ. ಆದಾಗ್ಯೂ, ನಗರದ ರಾಜೈ ಬಂದರಿನಲ್ಲಿ ಕಂಟೇನರ್ ಗಳಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೆರುಸಲೇಂ ಪೋಸ್ಟ್ ಪ್ರಕಾರ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ನೌಕಾ ನೆಲೆಯ ಬಳಿ ಸ್ಫೋಟ ಸಂಭವಿಸಿದೆ. ಆದರೆ, ಸ್ಫೋಟದಲ್ಲಿ ಯಾವುದೇ ಪಾತ್ರವಿಲ್ಲ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ನಿರಾಕರಿಸಿದೆ.ಸ್ಫೋಟದ ನಂತರ ಕಪ್ಪು ಹೊಗೆ ಆವರಿಸಿರುವುದನ್ನು ಸಾಮಾಜಿಕ ಮಾಧ್ಯಮ ವೀಡಿಯೊಗಳು ತೋರಿಸಿವೆ. ಇತರ ವೀಡಿಯೊಗಳಲ್ಲಿ ಕಟ್ಟಡಗಳು…
ಬೆಂಗಳೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರರು ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳುವಳಿಕೆ ನಮ್ಮ ಕಾರ್ಯಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ…
ಜಮ್ಮು ಕಾಶ್ಮೀರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಕಳೆದ ಎಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಭೀಕರ ಗುಂಡಿನ ದಾಳಿ ನಡೆಸಿದ್ದರು. ಈ ಒಂದು ಘಟನೆ ಬಳಿಕ ಭಾರತವು ಪಾಕಿಸ್ತಾನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು ಸಿಂಧು ನದಿ ಜಲ ಒಪ್ಪಂದ ರದ್ದುಗೊಳಿಸಿದ್ದು, ಈ ಒಂದು ಕ್ರಮವನ್ನು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ವಿಚಾರವಾಗಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಸಹ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಜಮ್ಮು ಕಾಶ್ಮೀರದ ರಾಂಬನ್ ನಲ್ಲಿ ಸಿಎಂ ಓಮರ್ ಅಬ್ದುಲ್ಲಾ ಹೇಳಿಕೆ ನೀಡಿದರು.














