Author: kannadanewsnow05

ವಿಜಯಪುರ : ಗಂಡ ಹೆಂಡತಿಯ ಜಗಳ ಬಿಡಿಸಲು ಬಂದ ಅತ್ತೆಯನ್ನೇ ಅಳಿಯನೊಬ್ಬ ಭೀಕರವಾಗಿ ಕೊಲೆ ಮಾಡಿ ಬಳಿಕ ಶವವನ್ನು ಕೆನಾಲ್‌ಗೆ ಎಸೆದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತರನ್ನು ಶಿರಶ್ಯಾಡ ಗ್ರಾಮದ ಗೌರಾಬಾಯಿ ಈರಣ್ಣ ನರಳಿ(65) ಕೊಲೆಯಾಗಿರುವ ಮಹಿಳೆ ಎಂದು ತಿಳಿದುಬಂದಿದೆ.ಇನ್ನು ಅತ್ತೆಯನ್ನು ಕೊಲೆ ಮಾಡಿರುವ ಅಳಿಯನನ್ನು ಭೀಮಪ್ಪ ಗುಗ್ಗರಿ ಎಂದು ತಿಳಿದುಬಂದಿದೆ. ಗೌರಾಬಾಯಿ ಪುತ್ರಿ ದೇವಕಿಯನ್ನು ಭೀಮಪ್ಪ ಮದುವೆಯಾಗಿದ್ದ. ನಿರಂತರ ಮದ್ಯ ಸೇವನೆ ಸಂಬಂಧ ಪತಿ-ಪತ್ನಿ ನಡುವೆ ಜಗಳ ನಡೆದಿತ್ತು. ಇವರಿಬ್ಬರಿಗೆ ಬುದ್ಧಿ ಹೇಳಿ, ಸಂಧಾನ ಮಾಡಲು ಗೌರಾಬಾಯಿ ಮಂಗಳವಾರ ಬಂದಿದ್ದರು. ಆಗ ಕುಡಿದ ಮತ್ತಿನಲ್ಲಿ ಸಿಟ್ಟಿಗೆದ್ದು ದೊಣ್ಣೆಯಿಂದ ಆಕೆಯನ್ನು ಅಳಿಯ ಭೀಮಪ್ಪ ಹತ್ಯೆ ಮಾಡಿದ್ದಾನೆ. ಬಳಿಕ, ಶವವನ್ನು ಚೀಲದಲ್ಲಿ ಕಟ್ಟಿ ಗ್ರಾಮದ ಬಳಿಯಿರುವ ಕೆನಾಲ್ ಗೆ ಬಿಸಾಕಿದ್ದಾನೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಪತ್ನಿಗೆ ಜೀವ ಬೆದರಿಕೆ ಹಾಕಿದ್ದಾನೆ. ನಂತರ ದೇವಕಿ ದೇವರಹಿಪ್ಪರಗಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಘಟನಾ…

Read More

ಬೆಂಗಳೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದುವರೆಗೂ ರಾಜ್ಯದ ಬೆಳಗಾವಿ ಜಿಲ್ಲೆಯ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ 8 ಜನರು ಸಂಪರ್ಕಕ್ಕೆ ಸಿಕ್ಕಿಲ್ಲ. ಇನ್ನೂ ಘಟನೆಯಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಂದು ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಪ್ರಯಾಗ್​ರಾಜ್​ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಡಿದಿರುವ ನಾಲ್ವರು ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈಗಾಗಲೇ ನಾಲ್ವರು ಕನ್ನಡಿಗರ ಪಾರ್ಥೀವ ಶರೀರಗಳನ್ನು ಬೆಳಗಾವಿಗೆ ತರಲು ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೃತ ದೇಹಗಳನ್ನು ರಿಸೀವ್ ಮಾಡಿಕೊಳ್ಳುತ್ತಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಇವತ್ತು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ನಾಳೆ ವಾಪಸ್ಸು ಹೋದ ಬಳಿಕ ಪರಿಹಾರ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

Read More

ರಾಯಚೂರು : ರಾಜ್ಯದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ರಾಯಚೂರು ಜಿಲ್ಲೆಯಲ್ಲಿ ಕತ್ತು ಸೀಳಿ MSC ಓದುತ್ತಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಹೊರಭಾಗದಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿಯನ್ನು ಸಿಫಾ (22) ಎಂದು ತಿಳಿದುಬಂದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂ ಎಸ್ ಸಿ ಓದುತ್ತಿದ್ದ ಸಿಫಾ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ನಿವಾಸಿಯಾಗಿದ್ದಾಳೆ. ಪರಿಚಯಸ್ತರೇ ವಿದ್ಯಾರ್ಥಿನಿ ಸಿಫಾಳನ್ನು ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಸಿಂಧನೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬಿಜೆಪಿಯ ಬಣ ಬಡಿದಾಟ ಇದೀಗ ಬೀದಿಗೆ ಬಂದಿದ್ದು, ಒಂದು ಕಡೆ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಹಾಗೂ ಸಂಸದ ಕೆ. ಸುಧಾಕರ್ ಅವರು ವಾಗ್ದಾಳಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಶ್ರೀರಾಮುಲು ಹಾಗೂ ಜನಾರ್ಧನ ರೆಡ್ಡಿ ಅವರ ನಡುವೆ ಬಿರುಕು ಮೂಡಿದೆ. ನಿನ್ನೆ ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ಕೆ ಸುಧಾಕರ್ ವಿರುದ್ಧ ಇದೀಗ ಶಾಸಕ ಎಸ್ ಆರ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿರಲು ಕೋವಿಡ್ ಹಗರಣಗಳೆ ಕಾರಣ ಎಂದು ಆರೋಪಿಸಿದ್ದಾರೆ. ನೀನು ಮಂತ್ರಿ ಆಗಿದ್ದಾಗ ದುರಹಂಕಾರಿ ಆಗಿರಲಿಲ್ಲವೇ? ಶಾಸಕರ ಮಂತ್ರಿಗಳ ಫೋನ್ ತೆಗೆಯುತ್ತಿದ್ದೇಯ? ಯಲಹಂಕ ಕಾರ್ಯಕರ್ತರು ಹೋದರೆ ಮನೆಗೆ ಸೇರಿಸುತ್ತಿದ್ದೆಯ? ನಿನಗೆ ತಾಕತ್ತಿದ್ದರೆ ಬೇರೆ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸು. ಯಲಹಂಕದಲ್ಲಿ ನೀನು ಒಂದು ವೋಟ ಲೀಡರ್ ತೆಗೆದುಕೋ. ಕೋವಿಡ್ನಿಂದ ಸತ್ತ ಆತ್ಮಗಳ ಆಶೀರ್ವಾದ ನಿನಗೆ ಇರಬೇಕು. ಪಕ್ಷದ ಸಿಸ್ಟಮ್ ನಿನಗೆ ಗೊತ್ತಿರಲಿ ಸುಧಾಕರ್. ಕ್ಷೇತ್ರದಲ್ಲಿ ಬಂದು ನನ್ನ ವಿರುದ್ಧವೇ…

Read More

ಬೆಂಗಳೂರು : ಪಾಳುಬಿದ್ದ ಕಟ್ಟಡದಿಂದ ಬಿದ್ದು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸಮೀಪದ ದೊಡ್ಡನೇಕ್ಕುಂದಿಯಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದಿಂದ ಬಿದ್ದು ರಾಯಚೂರು ಮೂಲದ ಪ್ರಕಾಶ್ (19) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ತಂದೆ ಚಾಲಕರಾಗಿದ್ದು, ತಾಯಿ ಕೂಲಿ ಕೆಲಸವನ್ನು ಮಾಡಿಕೊಂಡಿದ್ದರು. ಈ ಮೊದಲು ಅಪಘಾತವಾಗಿ ಪ್ರಕಾಶ್ ಕಾಲಿಗೆ ಪೆಟ್ಟಾಗಿತ್ತು.. ಘಟನಾಸ್ಥಳಕ್ಕೆ ಮಾದೇವಪುರ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ಹೈಕೋರ್ಟ್ ವಿಸ್ತರಣೆ ಮಾಡಿ ವಿಚಾರಣೆಯನ್ನು ಫೆಬ್ರವರಿ 7 ಕ್ಕೆ ಮುಂದೂಡಿ ಆದೇಶ ಹೊರಡಿಸಿತು. ಇಂದು ಹೈಕೋರ್ಟ್ ನಲ್ಲಿ ಎಚ್ ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ, ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ಹೈಕೋರ್ಟ್ ವಿಸ್ತರಣೆ ಮಾಡಿದೆ. ಮಧ್ಯಂತರ ಆದೇಶ ಫೆಬ್ರವರಿ 7ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಹೀಗಾಗಿ ಎಚ್ ಡಿ ರೇವಣ್ಣ ಅವರಿಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಏನಿದು ಪ್ರಕರಣ? ಹೆಚ್​​ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್​ 28 ರಂದು ಅವರ ಮನೆಯ ಸಹಾಯಕಿಯು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಶಾಸಕರ…

Read More

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಷಯಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್​​ನಲ್ಲಿ ಗುರುವಾರ ನಡೆಯಿತು. ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ವಾದ, ಪ್ರತಿವಾದ ಆಲಿಸಿದ ಕೋರ್ಟ್​, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿಕೆ ಮಾಡಿದೆ. ಹೌದು ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್​​ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ವೇಳೆ, ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾ. ನಾಗಪ್ರಸನ್ನ ಪ್ರಶ್ನಿಸಿದರು. ಇದೇ ವೇಳೆ, ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು…

Read More

ಹಾವೇರಿ : ವಿದ್ಯಾರ್ಥಿಯೋರ್ವ 500 ರೂಪಾಯಿ ಕದ್ದಿದ್ದಾನೆ ಎಂದು ಆರೋಪಿಸಿ ಆತನನ್ನು ಕಿಡ್ನ್ಯಾಪ್ ಮಾಡಿ ಅನ್ನ, ನೀರು ಕೊಡದೆ ಕಂಬಕ್ಕೆ ಕಟ್ಟಿ ಬಾಸುಂಡೆ ಬರುವ ಹಾಗೆ ಹಲ್ಲೆ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕು ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದಂತ ವಿದ್ಯಾರ್ಥಿಯನ್ನು ತಿಮ್ಮಾಪುರ ಗ್ರಾಮದ ಎಸ್​ವಿಎಲ್​ಪಿ ಸರ್ಕಾರಿ ಪ್ರೌಡ ಶಾಲೆಯ ನಾಗರಾಜ್ ಶೇಖರ್ ಮೈಸೂರ್ (15) ಎಂದು ತಿಳಿದುಬಂದಿದೆ.ಮಂಜುನಾಥ್ ಬಗಾಡೆ ಅವರ ಮನೆಯಲ್ಲಿ ವಿದ್ಯಾರ್ಥಿ 500 ರೂಪಾಯಿ ಕದ್ದ ಎಂಬ ಅನುಮಾನದಿಂದ ಹಲ್ಲೆ ಮಾಡಿದ್ದಾರೆ. ಗಣಪತಿ ಗುಣೋಜಿ, ಮಂಜುನಾಥ್ ಬಗಾಡೆ ಎನ್ನುವ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಆರೋಪಿಗಳು ಶಾಲೆಯ ಮುಖ್ಯೋಪಾಧ್ಯಾಯರ ಅನುಮತಿ ಪಡೆಯದೇ ನಿನ್ನೆ ಮಧ್ಯಾಹ್ನ 1 ಗಂಟೆಗೆ ತರಗತಿಗೆ ನುಗ್ಗಿ,ಓಮ್ನಿ ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ. ಶಾಲೆಯಿಂದ ಕೊರಳಪಟ್ಟಿ ಹಿಡಿದು ಕರೆದೊಯ್ದು ತೋಟದ ಮನೆಯಲ್ಲಿ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ.ಈ ಕುರಿತು ವಿದ್ಯಾರ್ಥಿ ನಾಗರಾಜ್ ತಂದೆ ಶೇಖರ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Read More

ಬೀದರ್ : ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತುವಾಗ 17 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದ ವಿಧಾನ ಬಳಿಕ ಇದೀಗ ಬೀದರ್ ನಲ್ಲಿ ಸಾರಿಗೆ ಕಚೇರಿಯಲ್ಲಿ ಮೋಟಾರ್ ವಾಹನ ನಿರೀಕ್ಷಕರು ಒಬ್ಬರು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಜಯಕುಮಾರ್ ಭಜಂತ್ರಿ (53) ಎಂದು ತಿಳಿದುಬಂದಿದ್ದು, ವಿಜಯಕುಮಾರ್ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ನವರು ಎಂದು ತಿಳಿದುಬಂದಿದೆ.ನಾಲ್ಕು ತಿಂಗಳ ಹಿಂದೆ ಇಲ್ಲಿಗೆ ವರ್ಗವಾಗಿ ಬಂದಿದ್ದರು. ಇವರು ಮದುವೆಯಾಗದೆ ಹಾಗೆ ಇದ್ದಿದ್ದರಿಂದ ಇವರಿಂದ ಮನೆಯಲ್ಲಿ ಯಾವ ಕುಟುಂಬದ ಸದಸ್ಯರು ಇರಲಿಲ್ಲ.ಇಡೀ ದಿನ ಮನೆಯ ಬಾಗಿಲು ತೆರೆಯದಿದ್ದ ಕಾರಣ ಮತ್ತು ಮೊಬೈಲ್ ರಿಂಗಣಿಸುತ್ತಿದ್ದರಿಂದ ಮರುದಿನ ರಾತ್ರಿ ಬಾಗಿಲು ಒಡೆದು ಕೊಠಡಿಗೆ ಹೋಗಿ ಪರಿಶೀಲಿಸಲಾಯಿತು.ಹೀಗಾಗಿ ಇವರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಗ್ಗ ಜಗ್ಗಾಟದ ನಡುವೆ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಎಲ್ಲವನ್ನು ತಣ್ಣಗೆ ಮಾಡಿದ್ದರು ಆದರೆ ಸಚಿವ ಸತೀಶ್ ಜಾರಕಿಹೊಳಿ ಇದೀಗ ತನ್ನ 25 ಆಪ್ತ ಶಾಸಕರೊಂದಿಗೆ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದರ ಮಧ್ಯ ಕಾಂಗ್ರೆಸ್ ಹೈಕಮಾಂಡ್ ರಾಜ್ಯಕ್ಕೆ ಆಗಮಿಸಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರ ಎಲ್ಲಿಯೂ ಮಾತನಾಡದಂತೆ ಸೂಚನೆ ನೀಡಿತ್ತು. ಅಲ್ಲದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದರು. ಆದರೆ ಇದು ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸತೀಶ್ ಜಾರಕಿಹೊಳಿ ಸುಮಾರು 25 ಮಂದಿ ಆಪ್ತ ಶಾಸಕರು ದುಬೈ ಪ್ರವಾಸಕ್ಕೆ ತೆರಳುತ್ತಿದ್ದು, ಇದರ ನೇತೃತ್ವವನ್ನು ಸತೀಶ್ ಜಾರಕಿಹೊಳಿ…

Read More