Author: kannadanewsnow05

ರಾಯಚೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗರ್ಭಿಣಿ ಮಹಿಳೆಯನ್ನು ಬರ್ಬರವಾಗಿ ಕೊಂದು ಬಳಿಕ ನೇಣು ಹಾಕಲಾಗಿ ಎಂದು ಶಂಕಿಸಲಾಗಿದ್ದು, ಗಂಡ ಸೇರಿ ಅವರ ಮನೆಯ 6 ಜನರ ವಿರುದ್ಧ FIR ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನುಪಮ (20) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಚೆಂಗಡಿ ಗ್ರಾಮದ ಬಸವರಾಜ ಒಕ್ಕಲಿಗ ಅವರ ಪುತ್ರಿ ಅನುಪಮಾ ಮತ್ತು ಸಿಂಧನೂರು ತಾಲ್ಲೂಕಿನ ಬೂದಿಹಾಳ ಗ್ರಾಮದ ನಾಗರಾಜ ಚನ್ನಬಸಪ್ಪ ಛಲವಾದಿ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಪರಿಚಯರಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನಾಗರಾಜ್ ಹಾಗು ಅನುಪಮಾ ಓಡಿ ಹೋಗಿ ಮದುವೆಯಾಗಿ ಗಂಡನ ಸ್ವಗ್ರಾಮ ಬೂದಿಹಾಳದಲ್ಲಿಯೇ ಅನ್ಯೊನ್ಯವಾಗಿದ್ದರು. ನಂತರ ಹುಡುಗಿಯ ಜಾತಿ ಬೇರೆಯಾಗಿದ್ದರಿಂದ ಹುಡುಗನ ಕುಟುಂಬಸ್ಥರು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಬುಧವಾರ ರಾತ್ರಿ ಅನುಪಮಾ ಗಂಡನ ಮನೆಯಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ. ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಾಗ ಮೃತಪಟ್ಟಿರುವದನ್ನು ವೈದ್ಯರು ಖಚಿತ…

Read More

ಬೆಂಗಳೂರು : ಡಿಕೆ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ಗೌಡಳನ್ನು 14 ದಿನ ಜಾರಿ ನಿರ್ದೇಶನಾಲಯ (ED) ಕಸ್ಟಡಿಗೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಹೌದು 9.82 ಕೋಟಿ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ತಪಾಸಣೆ ನಡೆಸಿದರು. ನಡೆಸಿದರು. ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ, ಫೋನ್​​ ಕರೆ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪ್ರಕರಣದ ಪ್ರಮುಖ ಆರೋಪಿ ಐಶ್ವರ್ಯ ಗೌಡ ಅವರ ಆರ್.ಎಂ.ಸಿ‌. ಯಾರ್ಡ್​ನಲ್ಲಿರುವ ನಿವಾಸದ ಮೇಲೆಯೂ ದಾಳಿ ನಡೆಸಿ, ನಿನ್ನೆ ಸಂಜೆವರೆಗೂ ಪರಿಶೀಲಿಸಿದರು. ಬಳಿಕ ಐಶ್ವರ್ಯಳನ್ನು ವಶಕ್ಕೆ ಪಡೆದು ಶಾಂತಿನಗರ ಇ.ಡಿ. ಕಚೇರಿಗೆ ಅಧಿಕಾರಿಗಳು ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಿದ್ದರು ಇದೀಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಐಶ್ವರ್ಯ ಗೌಡಳನ್ನು 14 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Read More

ಶೃಂಗೇರಿ : ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ  ಬೇಗಾನೆ ರಾಮಯ್ಯನವರು ನಿಧನರಾದ ವಿಷಯ ತಿಳಿದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ  ಮಧು ಬಂಗಾರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.ಇಂದು ಅವರು ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. ‘ಬೋರ್ವೆಲ್ ರಾಮಯ್ಯ’ ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು. ಬೇಗಾನೆ ರಾಮಯ್ಯನವರು 90…

Read More

ವಿಜಯನಗರ : ರಾಜ್ಯದಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣಗಳು ನಡೆದಿತ್ತು ಇದೀಗ ವಿಜಯನಗರ ಜಿಲ್ಲೆಯಲ್ಲಿ ಕೂಡ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಣಂತಿಯೋರ್ವರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಿಸೆರಿಯನ್ ಮೂಲಕ ಹೆಣ್ಣು ಶಿಶುಗೆ ಜನ್ಮ ನೀಡಿದ ಬಾಣಂತಿ ಸಾವನ್ನಪ್ಪಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಶಾಂತ (26) ಸಾವನ್ನಪ್ಪಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ನಿವಾಸಿ ಎನ್ನಲಾಗಿದ್ದು, ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವಾಗಿದೆ ಎಂದು ಇದೀಗ ಪೋಷಕರು ಆರೋಪಿಸುತ್ತಿದ್ದಾರೆ.

Read More

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ್ದರು. ಇದೀಗ ಈ ಒಂದು ದಾಳಿಯ ಕುರಿತು ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದು, ED ದಾಳಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ. ಕಿರುಕುಳಕ್ಕೂ ಒಂದು ಮಿತಿ ಇರುತ್ತೆ, ನನಗೆ ತುಂಬಾ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆಯಲ್ಲಿ ವಿಡಿಯೋ ಅಧಿಕಾರಿಗಳು ನಿನ್ನೆಯಿಂದ ಶೋಧ ನಡೆಸಿದ್ದರು. ಇಂದು ಪರಿಶೀಲನೆ ಅಂತ್ಯಗೊಳಿಸಿ ತೆರಳಿದರು.ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವಿನಯ್ ಕುಲಕರ್ಣಿ ನನ್ನ ಮನೆಯ ಮೇಲೆ ಇಡಿ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತವಾಗಿದೆ. ವಿಡಿಯೋ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ ಎಂದು ತಿಳಿಸಿದರು. ಮನೆಯಲ್ಲಿ ದಾಖಲೆ ಪರಿಶೀಲನೆ ವೇಳೆ ಇಡೀ ಅಧಿಕಾರಿಗಳಿಗೆ ಏನು ಸಿಕ್ಕಿಲ್ಲ ಹೈಕೋರ್ಟ್ ನಲ್ಲಿ ನಾನು ಸಾಕ್ಷಿದಾರನಾಗಿದ್ದೇನೆ. ಕೆಲವು ಪ್ರಕರಣಗಳಿಗೆ…

Read More

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ನಡೆದಂತಹ ಉಗ್ರರ ದಾಳಿಯಿಂದ ಓದಕ್ಕೂ ಹೆಚ್ಚು ಅಮಾಯಕರು ಬಲಿಯಾಗಿದ್ದಾರೆ ಘಟನೆ ಖಂಡಿಸಿ ಈಗಾಗಲೇ ಭಾರತ ಸರ್ಕಾರ ಪಾಕಿಸ್ತಾನದ ಹಲವು ಕಠಿಣ ಕ್ರಮ ಕೈಗೊಂಡಿದ್ದು ಇದೀಗ ಮತ್ತೊಂದು ಬೆಚ್ಚಿ ಬೆಳಿಸುವ ಸುದ್ದಿ ಬಹಿರಂಗವಾಗಿದೆ ಹೌದು ಜಮ್ಮು ಕಾಶ್ಮೀರದಲ್ಲಿ 120 ಭಯೋತ್ಪಾದಕರು ಆಕ್ಟಿವ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಜಮ್ಮು ಕಾಶ್ಮೀರದಲ್ಲಿ ಒಟ್ಟು 120 ಭಯೋತ್ಪಾದಕರಿದ್ದಾರೆ. ಕಾಶ್ಮೀರದಲ್ಲಿ 75 ಭಯೋತ್ಪಾದಕರು ಆಕ್ಟಿವ್ ಆಗಿದ್ದಾರೆ ಎನ್ನಲಾಗಿದ್ದು, ಇನ್ನೂ 50 ಜನ ಉಗ್ರರು ಜಮ್ಮುವಿನಲ್ಲಿ ಆಕ್ಟಿವ್ ಆಗಿದ್ದಾರೆ. 120 ಜನರಲ್ಲಿ 110 ಜನರು ಪಾಕಿಸ್ತಾನ ಮೂಲದ ಉಗ್ರರು ಎಂದು ತಿಳಿದುಬಂದಿದೆ. ಈಗಾಗಲೇ ಕಾಶ್ಮೀರದಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರ ಮನೆಗಳನ್ನು ಧ್ವಂಸಗೊಳಿಸಿದ್ದು, ಅಲ್ಲದೆ ಕಾಶ್ಮೀರದ ಬಂಡಿಪೋರದಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಕಮಾಂಡರ್ ನಲ್ಲಿಯನ್ನು ಭಾರತೀಯ ಸೈನಿಕರು ಹತ್ಯೆಗೈದಿದ್ದಾರೆ. ಒಂದು ಗುಂಡಿನ ಚಿಕ್ಕಮಕಿಯಲ್ಲಿ ಓರ್ವ ಯೋಧ ಹಾಗೂ ಇಬ್ಬರು ಪೊಲೀಸರಿಗೆ ಗಂಭೀರವಾದ ಗಾಯಗಳಾಗಿವೆ.

Read More

ಚಾಮರಾಜನಗರ : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದರು. ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು.…

Read More

ಬೆಂಗಳೂರು : ಭೂಗತ ಲೋಕದ ಮಾಜಿ ಡಾನ್ ದಿ.​ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್​​​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿಸಿದ ಬಳಿಕ ವಿಚಾರಣೆ ನಡೆಸಿದ ಪೊಲೀಸರು ಗನ್ ಮ್ಯಾನ್ ಸ್ಪೋಟಕವಾದ ಹೇಳಿಕೆ ನೀಡಿದ್ದು ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದಾನೆ. ಹೌದು ಗನ್ ಮ್ಯಾನ್ ವಿಠ್ಠಲ್ ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ಈ ವೇಳೆ ಪೊಲೀಸರು ಗನ್ ಮ್ಯಾನ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಅದಕ್ಕೆ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದು, ಪೊಲೀಸರು ಆತನಿಂದ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಮಾಜಿ ಡಾನ್​ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಶುಕ್ರವಾರ ರಾತ್ರಿ (ಏಪ್ರಿಲ್ 18) ರಾಮನಗರದ ಬಿಡದಿ…

Read More

ಬೆಂಗಳೂರು : ಕಳೆದ ಏಪ್ರಿಲ್ 16ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿತ್ತು ಈ ವೇಳೆ ಶಿವಮೊಗ್ಗ ಬೀದರ್ ಹಾಗೂ ಧಾರವಾಡದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಇಡಿ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದು ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಹೌದು ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಹಕ್ಕುಗಳಿಗೆ ಚ್ಯುತಿ ತಂದ ಆರೋಪದ ಹಿನ್ನೆಲೆ ರಾಜ್ಯ ಸರ್ಕಾರದ ನಡೆಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ದೂರು ಸಲ್ಲಿಸಿದ್ದಾರೆ. ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರ್. ಅಶೋಕ್ ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ,…

Read More

ಚಾಮರಾಜನಗರ : ಅದೊಂದು ಕಾಲವಿತ್ತು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ಯಾವುದೇ ರಾಜಕಾರಣಿ ಅಧಿಕಾರ ಕಳೆದುಕೊಳ್ಳುತ್ತಿದ್ದರು ಎಂಬ ಮಾತಿತ್ತು. ಅದಕ್ಕೆ ಸಾಕಷ್ಟು ಉದಾಹರಣೆಗಳು ಕೂಡ ಇವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ ಬಳಿಕ ನನ್ನ ಅಧಿಕಾರ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮರಾಜನಗರಕ್ಕೆ ಬಂದಿರುವುದರಿಂದ ಅಧಿಕಾರ ಮತ್ತಷ್ಟು ಗಟ್ಟಿಯಾಗುತ್ತಿದೆ. ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಸಲ ಚಾಮರಾಜನಗರಕ್ಕೆ ಬಂದಿದ್ದೇನೆ. ಇದರಿಂದ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ ಎಂದು ತಿಳಿಸಿದರು. ED ದಾಳಿ ರಾಜಕೀಯ ಪ್ರೇರಿತ ಮಾಜಿ ಸಂಸದ ಡಿಕೆ ಸುರೇಶ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ದಾಳಿ ಕುರಿತಂತೆ…

Read More