Author: kannadanewsnow05

ಪ್ರಾಕ್ ಶಿರಾ ಶಯನೇ ವಿಂದ್ಯಾತ್ ಧನಮಾಯುಶ್ಚ ದಕ್ಷಿಣೇ || ಪಶ್ಚಿಮೇ ಪ್ರಬಲಾ ಚಿಂತಾ ಹಾನಿಮೃತ್ಯುರಥೋತ್ತರೇ || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ. ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ ತಲೆಮಾಡಿ ಮಲಗಿದರೆ ಆಯುಸ್ಸು ವೃದ್ಧಿಯಾಗುತ್ತದೆ. ಪಶ್ಚಿಮಕ್ಕೆ ತಲೆ ಇಟ್ಟು ಮಲಗಿದರೆ ನಮ್ಮೊಳಗೆ…

Read More

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ ನಡೆದ ಭೀಕರ ನರಮೇಧಕ್ಕೆ ಇದೀಗ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದು, ಕಾಶ್ಮೀರದಲ್ಲಿ ಬಂಡಿಪುರದಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಹೌದು ಜಮ್ಮು ಕಾಶ್ಮೀರದ ಬಂಡಿಪೋರ ಬಳಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಇದೀಗ ಭಾರತೀಯ ಸೇನೆ ಲಷ್ಕರ್-ಎ-ತೊಯ್ಬಾ ಕಮಾಂಡರನ್ನು ಹತ್ಯೆ ಮಾಡಿದೆ. ಲಷ್ಕರ್-ಎ-ತೊಯ್ಬಾ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಸೇನೆ ಹೊಡೆದುರುಳಿಸಿದೆ. ಯೋಧರು ಮತ್ತು ಉಗ್ರರ ನಡುವೆ ಭಾರಿ ಗುಂಡಿನ ಕಾಳಗ ನಡೆದಿತ್ತು. ಕಾರ್ಯಾಚರಣೆಯ ವೇಳೆ ಒಬ್ಬ ಯೋಧ ಹಾಗೂ ಇಬ್ಬರು ಪೊಲೀಸರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಗೆ ಪ್ರತಿಕಾರ ತೀರಿಸಿಕೊಂಡಿದೆ.

Read More

ನವದೆಹಲಿ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಐವರು ಪಾಕಿಸ್ತಾನಿ ಉಗ್ರರ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಇದರಲ್ಲಿ ಮೂವರು ಪಾಕಿಸ್ತಾನದವರಾದರೆ ಇನ್ನುಳಿದ ಇಬ್ಬರು ಜಮ್ಮು-ಕಾಶ್ಮೀರದವರು ಇದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಮೂಲದ ಆಸಿಫ್ ಹೌಜಿ, ಅಲಿಬಾಯ್ ಹಾಗು ಹಾಸಿಂ ಪಾಕಿಸ್ತಾನದವರಾದರೆ, ಉಳಿದಿಬ್ಬರು ಜಮ್ಮು ಕಾಶ್ಮೀರದ ಪುಲ್ವಾಮಾ ಮೂಲದ ಅಲ್ಸಾನ್ ಹಾಗು ಅನಂತನಾಗ್ ಜಿಲ್ಲೆಯ ಆದಿಲ್ ಹುಸೈನ್ ತೊಕರ್ ಎಂದು ತಿಳಿದುಬಂದಿದೆ. ಸದ್ಯ ಇವರು ಪೀರ್ ಪಂಜಾಲ್ ಪರ್ವತ ಶ್ರೇಣಿಯಲ್ಲಿ ಅಡಗಿ ಕುಳಿತಿದ್ದಾರೆ ಎಂದು ತಿಳಿದುಬಂದಿದೆ.

Read More

ಕೊಡಗು : ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿ ಗೆ ಇಬ್ಬರು ಕನ್ನಡಿಗರು ಸೇರಿದಂತೆ ಪ್ರವಾಸಿಗರು ಬಲಿಯಾಗಿದ್ದಾರೆ. ಇದೀಗ ಈ ಒಂದು ನರಮೇಧವನ್ನು ಸಮರ್ಥಿಸಿ ಕೊಡಗಿನಲ್ಲಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ FIR ದಾಖಲಾಗಿದೆ. ಹೌದು ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್​ ಹಾಕಲಾಗಿದೆ. ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ​ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ‌ಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ…

Read More

ಮಡಿಕೇರಿ : ಕಾಂಗ್ರೆಸ್ಸಿನ ಹಿರಿಯ ನಾಯಕ ಮಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ. ಕೊಡಗು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಬಿಟ್ಟು ಚಂಗಪ್ಪ ಅವರು ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗು ಆರ್. ಗುಂಡೂರಾವ್ ಸೇರಿದಂತೆ ಹಲವು ನಾಯಕರ ಆಪ್ತರಾಗಿದ್ದರು ಎನ್ನಲಾಗಿದ್ದು, ಮಡಿಕೇರಿಯ ಗಾಂಧೀ ಮೈದಾನದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಡಿಕೇರಿ ನಗರದಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬೆಂಗಳೂರು : ಯುವ ವಕೀಲೆ ಹಾಗೂ ಆಕೆಯ ಮನೆಯಲ್ಲಿದ್ದ ಇನ್ನೊಬ್ಬ ವ್ಯಕ್ತಿ ಸಹ ಶವವಾಗಿ ಪತ್ತೆಯಾಗಿರುವ ಘಟನೆ ಇದೀಗ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಶ್ರೀನಿವಾಸಪುರದ ತೋಟದ ಮನೆಯಲ್ಲಿ ಯುವ ವಕೀಲೆ ರಮ್ಯಾ (27) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಾಗು ಆಕೆಯ ಮನೆಯಲ್ಲಿ ಇದ್ದಂತಹ ಪುನೀತ್ ಎನ್ನುವ ವ್ಯಕ್ತಿ ಕೂಡ ಶವವಾಗಿ ಪತ್ತೆಯಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಮತ್ತು ಈ ಹಿಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ ಕಡ್ಡಾಯ ಪರೀಕ್ಷೆ ಬರೆದಿರುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ‘ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ’ ವಿನಾಯಿತಿ ನೀಡಿರುವುದಾಗಿ ಪ್ರಕಟಿಸಿದೆ. ಎಸ್ಸೆಸ್ಸೆಲ್ಸಿ ಅಥವಾ ರಾಜ್ಯ ಸರ್ಕಾರವು ಅದಕ್ಕೆ ತತ್ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರುವ, ಈ ಹಿಂದೆ ಆಯೋಗ ಅಥವಾ ಯಾವುದೇ ಆಯ್ಕೆ ಪ್ರಾಧಿಕಾರವು ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದೆ. ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಉಳಿಕೆ ಮೂಲವೃಂದದ 70 ಮತ್ತು ಹೈದರಾಬಾದ್ ಕರ್ನಾಟಕ ವೃಂದದ 6 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯ ಟ್ಯಾಬ್‌ನಲ್ಲಿ ಏ.24ರೊಳಗೆ ಮಾಹಿತಿ…

Read More

ಶ್ರೀನಗರ : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಮ್ಮು ಕಾಶ್ಮೀರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಭಯೋತ್ಪಾದಕರ ನಿವಾಸಗಳನ್ನು ಭಾರತೀಯ ಸೇನೆ ದ್ವಂಸಗೊಳಿಸಿದೆ. ಹೌದು ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಉಗ್ರರ ದಾಳಿಯಲ್ಲಿ ಆದಿಲ್ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದ್ದು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಆದಿಲ್ ಉಗ್ರ ತರಬೇತಿ ಪಡೆದಿದ್ದ. 2018 ರಲ್ಲಿ ಆದಿಲ್ ಪಾಕಿಸ್ತಾನಕ್ಕೆ ತೆರಳಿದ್ದ. ಇದೀಗ ಆತನ ಮನೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಅದೇ ರೀತಿಯಾಗಿ ದಕ್ಷಿಣ ಕಾಶ್ಮೀರದಲ್ಲಿರುವ ಮತ್ತೋರ್ವ ಉಗ್ರ ಆಸಿಫ್ ಶೇಕ್ ನಿವಾಸವನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಲಷ್ಕರ್ ಉಗ್ರರಾದ ಆದಿಲ್ ಹಾಗು ಆಸಿಫ್ ಶೇಕ್ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ದಕ್ಷಿಣ ಕಾಶ್ಮೀರದಲ್ಲಿ ಇರುವಂತಹ ಜಿಲ್ಲೆಯಲ್ಲಿ ಬಿಜ್ ಬೆಹರಾದಲ್ಲಿರುವ ಆದಿಲ್ ನಿವಾಸ ಧ್ವಂಸಗೊಳಿಸಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಈ ಇಬ್ಬರು ಉಗ್ರರು ಪ್ರಮುಖ ಪಾತ್ರ ವಹಿಸಿದ್ದರು.

Read More

ರಾಮನಗರ : ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಉತ್ತರ ರಿಕ್ಕಿ ರೈ ಮೇಲೆ ಇತ್ತೀಚಿಗೆ ಬಿಡದಿಯ ಬಳಿ ಫೈರಿಂಗ್ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೃಕ್ಕಿರೈ ಗನ್ ಮ್ಯಾನ್ ವಿಠ್ಠಲ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಹೌದು ರಿಕ್ಕಿ ರೈ ಮೇಲೆ ಫೈರಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗನ್ ಮ್ಯಾನ್ ಅರೆಸ್ಟ್ ಆಗಿದ್ದು, ಬಂಧಿತ ಆರೋಪಿಯನ್ನು ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಕರಣದ ಹಿನ್ನೆಲೆ? ಬೆಂಗಳೂರಿನ ಭೂಗತ ಲೋಕದ ಮಾಜಿ ಡಾನ್​ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಏಪ್ರಿಲ್ 18 ರಂದು ರಾಮನಗರದ ಬಿಡದಿ ಬಳಿ ಫೈರಿಂಗ್​ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ…

Read More

ಬೆಂಗಳೂರು : ಅಧಿಕಾರದಲ್ಲಿ ಇಲ್ಲದೆ ಇದ್ದರೂ ಕೂಡ ಮಾಜಿ ಶಾಸಕರು ಸಂಸದರು ರಾಷ್ಟ್ರೀಯ ಲಾಂಛನ, ರಾಷ್ಟ್ರೀಯ ಧ್ವಜ ಹಾಗೂ ಸರ್ಕಾರದ ಲೆಟರ್ ಹೆಡ್ ಗಳನ್ನು ಬಳಸುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಆಕ್ರೋಶ ಹೊರ ಹಾಕಿದ್ದು, ಇದೀಗ ರಾಷ್ಟ್ರೀಯ ಲಾಂಛನಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶ ಹೊರಡಿಸಿದೆ. ಮಾಜಿ ಶಾಸಕರು, ಸಂಸದರು ರಾಷ್ಟ್ರೀಯ ಲಾಂಛನಗಳು ಮತ್ತು ಧ್ವಜಗಳನ್ನು ತಮ್ಮ ಲೆಟರ್‌ಹೆಡ್‌ ಹಾಗೂ ವಾಹನಗಳಿಗೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರುದೃಷ್ಠಕರ ಎಂದಿರುವ ಹೈಕೋರ್ಟ್‌, ರಾಷ್ಟ್ರೀಯ ಲಾಂಚನಗಳು ಮತ್ತು ಧ್ವಜದ ಹೆಸರುಗಳನ್ನು ಬಳಕೆ ತಡೆಯಲು ಕೋರಿ ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸಾರ್ವಜನಿಕ ಸ್ಥಳಗಳು ಮತ್ತು ವಾಹನಗಳಲ್ಲಿ ರಾಷ್ಟ್ರೀಯ ಚಿಹ್ನೆಗಳು ಮತ್ತು ಲಾಂಛನಗಳನ್ನು ಅನಧಿಕೃತ ಬಳಕೆ ಮತ್ತು ದುರುಪಯೋಗ ತಡೆಗಟ್ಟಲು 1950ರ ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ)…

Read More