Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಇತ್ತೀಚಿಗೆ ಬಿಡದಿಯ ಭದ್ರಾಪುರದಲ್ಲಿ ದಿವ್ಯಾಂಗ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ನಿನ್ನೆ FSL ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೆ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿ ಜಾತಿನಿಂದನೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಕಳೆದ ಶುಕ್ರವಾರ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ 19 ವರ್ಷದ ಬುದ್ಧಿಮಾಂದ್ಯ ಯುವತಿ ಮನೆಯವರು ಕಾರ್ಯನಿಮಿತ್ತ ಬೇರೊಂದು ಗ್ರಾಮಕ್ಕೆ ತೆರಳಿದ್ಧ ವೇಳೆ ಮೆಣಸಿನಕಾಯಿ ಕೇಳುವ ನೆಪದಲ್ಲಿ ಯುವತಿ ಮನೆಗೆ ಬಂದ ಅದೇ ಗ್ರಾಮದ 17 ವರ್ಷದ ಅಪ್ರಾಪ್ತನು ಯುವತಿ ಬಾಯಿಗೆ ಬಟ್ಟೆ ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಲಾಗಿ ನಗ್ನಾವಸ್ಥೆಯಲ್ಲಿದ್ದ ಬಾಲಕ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ…
ಮೈಸೂರು : ಇತ್ತೀಚಿಗೆ ತಾನೆ ಶಾಸಕ ಕೆಎಂ ಶಿವಲಿಂಗೇಗೌಡ, ಮಂತ್ರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಾಮಿಸ್ ಮಾಡಿ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ನನ್ನನ್ನು ಕರೆಸಿಕೊಂಡರು. ಹಾಗಾಗಿ ಮುಂದಿನ ದಿನಗಳಲ್ಲಿ ನನಗೆ ಸಚಿವ ಸ್ಥಾನ ನೀಡುವ ನಂಬಿಕೆ ಇದೆ ಎಂದು ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೆ ಇದೀಗ ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ವಿಧಾನಸಭೆಯ ಉಪ ಸಭಾಪತಿ ರುದ್ರಪ್ಪ ಲವಾಣಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವನಾಗಲು ನನಗೂ ಆಸೆ ಇದೆ ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ ಬಾರಿ ಸಂಪುಟ ರಚನೆ ವೇಳೆ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಅಂತಿಮ ಕ್ಷಣದಲ್ಲಿ ನನ್ನ ಹೆಸರನ್ನು ಬದಲಿಸಲಾಯಿತು ಎಂದು ತಿಳಿಸಿದರು. ಪಕ್ಷದ ನಾಯಕರು ಮನೋವೋಲಿಸಿ ಉಪ ಸಭಾಪತಿ ಸ್ಥಾನ ನೀಡಿದರು. ನಮ್ಮ ಸಮುದಾಯ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದೆ. ಹೀಗಾಗಿ ಸಚಿವ ಸ್ಥಾನ ನನಗೆ ನೀಡುತ್ತಾರೆ ಎನ್ನುವ ಭರವಸೆ ಇದೆ. ಎಲ್ಲರಿಗೂ ಆಸೆ…
ಮುಂಬೈ : ಇತ್ತೀಚಿಗೆ ಬೆಂಗಳೂರಲ್ಲಿ ದುಬೈನಿಂದ 14 ಕೆಜಿಗು ಅಧಿಕವಾಗಿ ಅಕ್ರಮವಾಗಿ ಚಿನ್ನ ಸಾಗಿಸಿದ್ದ ಪ್ರಕರಣ ನಡೆದಿತ್ತು. ಈ ಸಂಬಂಧ ನಟಿ ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಆಗ್ರಹಾರ ಜೈಲಲ್ಲಿ ಇದ್ದಾರೆ. ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಹೌದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5. 75 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ಸಂಬಂಧ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. 5.10 ಕೋಟಿ ಮೌಲ್ಯದ ವಟ್ಟು 5.75 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳು ಇಬ್ಬರು ಮುಂಬೈ ಏರ್ಪೋರ್ಟ್ ನಲ್ಲಿಯೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಮ್ಮ ಬಟ್ಟೆ ಮತ್ತು ಜಾಕೆಟ್ ಜೇಬಿನಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಗಿ ಬಿದ್ದಿದ್ದು, ಇಬ್ಬರನ್ನು ಇದೀಗ ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
ಚಿಕ್ಕಮಗಳೂರು : ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ರಾತ್ರೋರಾತ್ರಿ ತಹಶೀಲ್ದಾರ್ ದಂಪತಿಗಳು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ತಹಸೀಲ್ದಾರ್ ಲಿಖಿತಾ ಮೋಹನ್ ಅವರಿಂದ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ 4 ಪಿಕಪ್ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದು 6 ಜನರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿರುವ ಮಾಹಿತಿ ಬಂದಿದೆ. ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಏಕಕಾಲಕ್ಕೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಅಡ್ಡಗದ್ದೆ ಕಲ್ಕಟ್ಟೆಯಲ್ಲಿ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ ಮರಳು ದಂಧೆ ತಡೆಯುವಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿ ಆಗಿರೋ ವಿಚಾರವಾಗಿ ಟ್ವಿಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಚ್‍ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಗ್ರೇಟರ್ ಬೆಂಗಳೂರು!? ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್’ಗಳ ಬೆಂಗಳೂರು ಎಂದು ಕಿಡಿ ಕಾರಿದ್ದಾರೆ. ಟ್ವೀಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್ ಡಿ ಕುಮಾರಸ್ವಾಮಿ, ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ, ನಾಡು ಎಂದರೆ ಮನುಷ್ಯರು. ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ? ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ! ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ…
ನವದೆಹಲಿ : ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ದೆಹಲಿಯ ಪಹರ್ ಗಂಜ ಪ್ರದೇಶದಲ್ಲಿ ಈ ಒಂದು ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಚಿಕಿತ್ಸೆ ಫಲಿಸದೇ ಆತ ಕೂಡ ಸಾವನ್ನಪ್ಪಿದ್ದಾನೆ. ಪಹರ್‌ಗಂಜ್‌ನ ಕೃಷ್ಣ ಹೋಟೆಲ್ ಬಳಿಯ ಅರಾ ಕನ್ಸಾ ರಸ್ತೆಯಲ್ಲಿ, ನಿರ್ಮಾಣ ಹಂತದಲ್ಲಿರುವ ನೆಲಮಾಳಿಗೆಯ ಪಕ್ಕದ ಗೋಡೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಅಗ್ನಿಶಾಮಕ ವಾಹನಗಳನ್ನು ತಕ್ಷಣ ಸ್ಥಳಕ್ಕೆ ಕಳುಹಿಸಲಾಗಿದೆ. ಆರಂಭದಲ್ಲಿ ಮೂರು ಜನರನ್ನು ಸಿಲುಕಿಸಿ ರಕ್ಷಿಸಲಾಯಿತು, ಆದರೆ ನಂತರ ಮೂವರೂ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಅವರು ಹೇಳಿದರು. ಹಿಂದಿನ ದಿನ ಈ ಪ್ರದೇಶದಲ್ಲಿ ಇದೇ ರೀತಿಯ ಹವಾಮಾನ ಪರಿಸ್ಥಿತಿ ಇದ್ದ ನಂತರ, ದೆಹಲಿಯ ಕೆಲವು ಭಾಗಗಳು ಮತ್ತು ಉತ್ತರ ಪ್ರದೇಶದ ನೋಯ್ಡಾ ಮತ್ತು ಗಾಜಿಯಾಬಾದ್‌ನಂತಹ ನೆರೆಯ ನಗರಗಳಲ್ಲಿ ಬಲವಾದ ಗಾಳಿ ಮತ್ತು…
ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ, ಮಂಗಳೂರಿನಲ್ಲಿ ರೌಡಿಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರವಾಗಿ ಕೊಲೆಯಾಗಿತ್ತು. ಇದೀಗ ಉಡುಪಿಯಲ್ಲಿ ಬುರ್ಖಾಧಾರಿ ಮಹಿಳೆಯರು ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ತಡೆಯಲು ಬಂದ ತಾಯಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಹೌದು ಇಬ್ಬರು ಬುರ್ಖಾಧಾರಿ ಮಹಿಳೆಯರು ಮಗುವನ್ನು ಅಪಹರಿಸಲು ಯತ್ನಿಸಿರುವುದು ಉಡುಪಿಯ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ ನಡೆದಿದೆ. ಈ ವೇಳೆ, ತಡೆಯಲು ಬಂದ ಮಗುವಿನ ತಾಯಿಗೆ ಬುರ್ಖಾಧಾರಿ ಮಹಿಳೆಯರು ಚಾಕು ಇರಿದಿದ್ದಾರೆ. ಘಟನೆ ಹಿನ್ನೆಲೆ? ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕಾಲೋನಿಯ ಮೊಹಮ್ಮದ್ ಅಲಿ ಮನೆಗೆ ಇಬ್ಬರು ಬುರ್ಖಾಧಾರಿಗಳು ಬಂದು, ಶೌಚಾಲಯ ಬಳಸುತ್ತೇವೆ ಎಂದು ಮನೆಗೆ ಪ್ರವೇಶಿಸಿದ್ದರು. ಈ ವೇಳೆ ಓರ್ವ ಬುರ್ಖಾಧಾರಿ ಮಹಿಳೆ ತೊಟ್ಟಿಲಿನಲ್ಲಿ ಮಲಗಿದ್ದ ಮಗುವನ್ನ ಎತ್ತಿಕೊಂಡು ಓಡಿ ಹೋಗಲು ಯತ್ನಿಸಿದ್ದಾಳೆ. ತಕ್ಷಣ ಮಹಿಳೆಯನ್ನು ಮಗುವಿನ ತಾಯಿ ತಾಬರಿಸ್ ತಡೆದಿದ್ದಾರೆ. ಈ ವೇಳೆ ಮಗುವನ್ನು ಬಿಟ್ಟು,…
ಬೆಂಗಳೂರು : ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇದೀಗ ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ನಗರದ ಹಲವೆಡೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರು ನಗರದ ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಒಂದು ಕಡೆ ವರುಣ ಅಬ್ಬರಿಸುತ್ತಿದ್ದರೆ, ಇನ್ನೊಂದು ಕಡೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ ಪಂದ್ಯ ನಡೆಯಲಿದ್ದು ಇದೀಗ ಭಾರಿ ಮಳೆ ಆಗುತ್ತಿರುವುದರಿಂದ ಟಾಸ್ ವಿಳಂಬವಾಗಿದೆ. ಇದೇ ರೀತಿ ಮಳೆ ಮುಂದುವರೆದರೆ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ಇದೆ. ಈ ಬಾರಿ ಆರ್ಸಿಬಿ ಉತ್ತಮ ಫಾರ್ಮ್ ನಲ್ಲಿದ್ದು ಫೈನಲ್ ಗೇರಿ ಕಪ್ಪು ಹಿಡಿಯುವ ತವಕದದೆ. ಆದರೆ ಇಂದು ಪಂದ್ಯ ರದ್ದಾದರೆ ಆರ್ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗುವುದು ಗ್ಯಾರಂಟಿ.
BREAKING : ಭದ್ರಾಪುರದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿ ಮೇಲೆ ರೇಪ್ ಆಗಿಲ್ಲವೆಂದ ‘FSL’ ರಿಪೋರ್ಟ್!
ಬೆಂಗಳೂರು : ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವುದು FSL ವರದಿಯಲ್ಲಿ ದೃಢವಾಗಿದೆ. ಹೌದು ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಭದ್ರಾಪುರ ಗ್ರಾಮದಲ್ಲಿ ಇತ್ತೀಚಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು. ಇದೀಗ ಬಂದಂತಹ FSL ವರದಿಯ ಪ್ರಕಾರ ಬಾಲಕಿಯ ದೇಹದ ಮೇಲೆ ಯಾವುದೇ ಸುಟ್ಟ ಕಲೆಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ದಿವ್ಯಾಂಗ ಬಾಲಕಿಗೆ ರೈಲು ಬಡಿದಿರುವುದು ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರವಾದ ಕಾರಣ ತಿಳಿಯಲಿದೆ. ಮೇ 11ರಂದು ಸಂಜೆ ಮನೆಯಿಂದ 14 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಮೇ 12ರಂದು ರೈಲ್ವೆ ಹಳಿ ಸಮೀಪ ಬಾಲಕಿಯ ಶವ ಪತ್ತೆಯಾಗಿತ್ತು. ಭದ್ರಾಪುರ ಬಳಿ ರೈಲ್ವೆ ಹಳಿ ಸಮೀಪ ಬಾಲಕಿಯ ಮೃತ ದೇಹ ಪತ್ತೆಯಾಗಿತ್ತು. ಬಿಡದಿ ಠಾಣೆ ಪೊಲೀಸರು ಕೇಸ್ ದಾಖಲಿಸಿ ಕೊಂಡು ತನಿಖೆ ಅರಭಿಸಿದ್ದರು. ಬಾಲಕಿ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಇದೀಗ FSL ವರದಿಯ ಆಧಾರದಲ್ಲಿ…
ಕೋಲಾರ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಅಲ್ಲಲ್ಲಿ ವಿದ್ಯುತ್ ಅವಘಡಗಳು ಸೇರಿದಂತೆ ಅನೇಕ ಅವಾಂತರ ಸೃಷ್ಟಿಯಾಗುತ್ತಿವೆ. ಹಾಗಾಗಿ ಸಾರ್ವಜನಿಕರು ಗಾಳಿ ಮಳೆಯಲ್ಲಿ ಆದಷ್ಟು ಎಚ್ಚರದಿಂದರಬೇಕು. ಇದೀಗ ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಸಾರಿಗೆ ನೌಕರ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ರೆಡ್ಡಪ್ಪ (58) ಎಂದು ತಿಳಿದುಬಂದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.














