Author: kannadanewsnow05

ಮೈಸೂರು : ತುಂಡಾಗಿ ಬಿದ್ದಿದಂತಹ ವಿದ್ಯುತ್ ಅಂತೇನೋ ತೊಳೆದು ಅವರು ರೈತ ಹಾಗೂ ಎರಡು ಜಾನುವಾರುಗಳು ಧಾರಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೌದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿ ಮೊತ್ತ ಗ್ರಾಮದಲ್ಲಿ ಶೇಖರ್ (45)ಎನ್ನುವ ರೈತ ಸಾವನ್ನಪ್ಪಿದ್ದಾನೆ. ಜೊತೆಗೆ ಒಂದು ಹಸು ಒಂದು ಎತ್ತು ಕೂಡ ಸಾವನ್ನಪ್ಪಿವೆ. ನಿನ್ನೆ ಜಾನುವಾರುಗಳನ್ನು ಮೆಯಿಸಿಕೊಂಡು ಮನೆಗೆ ಬರುವಾಗ ಈ ಒಂದು ದುರಂತ ಸಂಭವಿಸಿದೆ. ಘಟನೆಗೆ ಸಂಬಂಧಸಿದಂತೆ ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯುತ್ ತಂತಿಗಳು ಹಳೇದಾಗಿದೆ ಬದಲಿಸುವಂತೆ ಹಲವಾರು ಬಾರಿ ದೂರು ನೀಡಿದ್ದರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಚೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಇದೀಗ ಅಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳೆವಣಿಗೆ ಆಗಿದೆ. ಈ ಪ್ರಕರಣ ಸಂಬಂಧ ಪೊಲೀಸ್​ ಇನ್ಸ್​ಪೆಕ್ಟರ್​ ಐಯಣ್ಣ ರೆಡ್ಡಿ ಅವರನ್ನು ಬಂಧಿಸಲಾಗಿದೆ. ಇನ್ಸ್ ಪೆಕ್ಟರ್ ಅಯ್ಯಣ್ಣ ರೆಡ್ಡಿ ಬಂಧನವನ್ನು ಎಸ್‌ಐಟಿ ಮೂಲಗಳು ಖಚಿತಪಡಿಸಿವೆ. ಹೌದು ಶಾಸಕ ಮುನಿರತ್ನ ವಿರುದ್ದದ ಅತ್ಯಾಚಾರ ಕೇಸ್ ತನಿಖೆ ಮತ್ತೆ ಚುರುಕುಗೊಂಡಿದೆ. ಜಾಮೀನು ಪಡೆದು ಮುನಿರತ್ನ ಹೊರ ಬಂದ ಬೆನ್ನಲ್ಲೇ ಇದೀಗ ಸಹಕರಿಸಿದ ಆರೋಪ ಮೇಲೆ ಹೆಬ್ಬಗೋಡಿ ಇನ್ಸ್ ಪೆಕ್ಟರ್ ಐಯಣ್ಣ ರೆಡ್ಡಿಯನ್ನ ಎಸ್ ಐಟಿ ಬಂಧಿಸಿದೆ. ಇವತ್ತು ಸಿಐಡಿಗೆ ಕರೆಸಿದ ಎಸ್ ಐಟಿ ಇನ್ಸ್ ಪೆಕ್ಟರ್ ರನ್ನ ವಿಚಾರಣೆ ನಡೆಸಿ ಬಂಧಿಸಿದೆ.ಕೇವಲ ಸಂತ್ರಸ್ಥೆ ಮಹಿಳೆ ಅಲ್ಲದೇ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಸೇರಿದಂತೆ ಕೆಲ ಮಹಿಳೆಯರು ಐಯಣ್ಣ ರೆಡ್ಡಿ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗಿದೆ. ರಾಜಕಾರಣಿಗಳ ಟ್ರ್ಯಾಪ್‌ಮಾಡಲು ಸಹಕರಿಸ್ತಿದ್ದ ಒಳಸಂಚಿನಲ್ಲಿ ಇನ್ಸ್ ಪೆಕ್ಟರ್ ಇರೋ ಆರೋಪ ಹಿನ್ನಲೆ ಬಂಧಿಸಿದ್ದು ವಿಚಾರಣೆ ಮಾಡಲಾಗ್ತಿದೆ. ಸದ್ಯ ಐಯಣ್ಣರೆಡ್ಡಿಯನ್ನ ಬಂಧಿಸಿದ್ದು, ನ್ಯಾಯಧೀಶರ…

Read More

ದಾವಣಗೆರೆ : ವಧು ವರರಿಗೆ ಈ ಮ್ಯಾಟ್ರಿಮೊನಿ ಸಾಮಾಜಿಕ ಜಾಲತಾಣ ಒಂದು ಉತ್ತಮ ವೇದಿಕೆಯಾಗಿದೆ. ಆದರೆ ಇದರಲ್ಲಿ ಕೂಡ ಈಗ ವಂಚನೆ, ಮೋಸ ಪ್ರಕರಣಗಳು ನಡೆಯುತ್ತವೆ. ಹೌದು ದಾವಣಗೆರೆಯಲ್ಲಿ ವಂಚಕನೊಬ್ಬ ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಯುವತಿಯರಿಗೆ ಕೆಲಸ ಕೊಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಅವರಿಂದ 62 ಲಕ್ಷ ಪೀಕಿ ವಂಚಿಸಿದ್ದಾನೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮಂಡ್ಯ ತಾಲ್ಲೂಕಿನ ಮಾಚಹಳ್ಳಿಯ ಎಂ.ಮಧು (31) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೆಲಸ ಕೊಡಿಸೋದಾಗಿ ಯುವತಿಯರಿಂದ ಲಕ್ಷಾಂತರ ರೂಪಾಯಿ ಪಡೆದಿದ್ದು, ಈ ಕುರಿತು ವಂಚನೆಗೆ ಒಳಗಾಗಿದ್ದ ಯುವತಿ ಸೆನ್ ಠಾಣೆಯಲ್ಲಿ ದೂರು ನೀಡಿದ್ದರಿಂದ ಯುವಕನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕನ್ನಡ ಮ್ಯಾಟ್ರಿಮೋನಿ ಜಾಲತಾಣದಲ್ಲಿ ನಗರದ ಯುವತಿಯೊಬ್ಬರನ್ನು ಆರೋಪಿ ಪರಿಚಯಿಸಿಕೊಂಡಿದ್ದ. ವಿವಾಹವಾಗುವ ನಂಬಿಕೆ ಗಿಟ್ಟಿಸಿಕೊಂಡು ರೈಲ್ವೆ ಇಲಾಖೆಯ ಮೈಸೂರಿನ ವರ್ಕ್‌ಶಾಪ್‌ನಲ್ಲಿ ಉದ್ಯೋಗ ಕೊಡಿಸುವ ಭರವಸೆ ಮೂಡಿಸಿದ್ದ. ನಯವಾದ ಮಾತುಗಳಿಗೆ ಮಾರುಹೋದ ಯುವತಿ ಹಂತಹಂತವಾಗಿ ಆರೋಪಿಯ ಬ್ಯಾಂಕ್‌ ಖಾತೆಗೆ 21 ಲಕ್ಷ ರೂಪಾಯಿ ಹಣ ಹಾಕಿದ್ದರು ಎಂದು ಪೊಲೀಸರು…

Read More

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ. ಗುರುವಾರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು…

Read More

ಬೆಂಗಳೂರು : ಈಗಾಗಲೇ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯ ಅಡಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಹೌದು ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂ ದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಚರಣ್, ‘ನಿಮ್ಮ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಿ. ಅದರಲ್ಲಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೀರಿ.…

Read More

ಬೆಂಗಳೂರು : ಮಕ್ಕಳ ದಿನಾಚರಣೆಯ ದಿನದಂದೇ ಶಿಕ್ಷಣ ಸಚಿವ ಶಿಕ್ಷಕರ ಹುದ್ದೆಗಳ ಆಕಾಂಕ್ಷಿಗಳಿಗೆಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿ ಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. ಜೋಗುಪಾಳ್ಯದ ಬಾಲಕರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ರಿಚರ್ಡ್ ಕೇಳಿದ ಪ್ರಶ್ನೆಗೆ ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಉತ್ತರ ನೀಡಿದ ಬಳಿಕ,ಸಚಿವ ಮಧು ಬಂಗಾರಪ್ಪ ಕೂಡ ವಿವರಣೆ ನೀಡಿದರು.ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13 ಸಾವಿರ ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಸಂಬಂಧಿತ ಪ್ರಕರಣಗಳ ಸಂಪೂರ್ಣ ಆಯಾಮಗಳ ತನಿಖೆಗಾಗಿ ವಿಶೇಷ ಎಸ್‌ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 25 ವಿಷಯಗಳನ್ನ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು. ಕೋವಿಡ್ ಹಗಣರದ ಚರ್ಚೆ ವಿಚಾರವಾಗಿ ಮಾತನಾಡಿದಂತ ಅವರು, ಜಗತ್ತು ಕೊರೊನಾದಿಂದ ಅಲ್ಲೋಲ ಕಲ್ಲೋಲ ಆಗಿತ್ತು. ದೊಡ್ಡ ದುರಂತವನ್ನ ಜಗತ್ತು ಅನುಭವಿಸಿತ್ತು. ದೇಶ ನಮ್ಮ ರಾಜ್ಯವೂ ದುರಂತ ಅನುಭವಿಸ್ತು. ಆಗಿನ ಸರ್ಕಾರ ಅಮಾನವೀಯವಾಗಿ ನಡೆದುಕೊಂಡಿದೆ. ಭ್ರಷ್ಟಾಚಾರ, ಬೇಜವಾಬ್ದಾರಿ, ಮೋಸ ಮಾಡಿದೆ. ಮಾಹಿತಿಗಳನ್ನ‌ಅದುಮಿಟ್ಟುಕೊಳ್ಳುವುದು. ಕಾನೂನುಗಳನ್ನ ಸಿಗದಂತೆ ಮಾಡುವುದು. ಎಲ್ಲವನ್ನು ಆಸಂದರ್ಭದಲ್ಲಿ ಮಾಡಿದ್ದಾರೆ ಎಂದರು. ಎಲ್ಲಾ ಸಮಿತಿಗಳನ್ನ ನಿಷ್ಕ್ರಿಯಗೊಳಿಸಿತ್ತು. ಯಾರ ಗಮನಕ್ಕೂ ಬರದಂತೆ ಭ್ರಷ್ಟಾಚಾರ ಮಾಡಿತ್ತು. 200, 300 ಪಿಪಿಎ ಕಿಟ್ ಗೆ 2100 ಕೊಟ್ಟಿದೆ. ಲಕ್ಚಾಂತರ ಕಿಟ್ ಬೇರೆ ದೇಶದಿಂದ ತರಿಸಿದೆ. ಔಷಧಿಗಳನ್ನ ಎರಡು ಪಟ್ಟು ಹೆಚ್ಚು…

Read More

ಬೆಂಗಳೂರು : ಕಾಂಗ್ರೆಸ್ಸಿನ 50 ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಫರ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ. ಈ ಒಂದು ಆರೋಪಕ್ಕೆ ಬಿಜೆಪಿ ಎಂಎಲ್ಸಿ ಸಿಟಿ ರವಿ ತಿರುಗೇಟು ನೀಡಿದ್ದು, ಶಾಸಕರನ್ನು ಖರೀದಿ ಮಾಡೋಕೆ ಅವರೇನು ಕುದುರೆಯೋ ಕತ್ತೆಯೋ ಅಥವಾ ದನಾನೋ ಎಂದು ಕಿಡಿಕರಿದ್ದಾರೆ. ಯಾರು ಯಾರನ್ನ ಯಾವಾಗ ಖರೀದಿಸಿದಲು ಯತ್ನಿಸಿದರು? ಸಾಕ್ಷಿಗಳು ಇದ್ದರೆ ದೂರು ಕೊಡಿ ಸಿಎಂ ಸ್ಥಾನದ ಜವಾಬ್ದಾರಿ ಮರೆತು ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ. ಬಿಜೆಪಿ ಮೇಲೆ ತಪ್ಪ ಅಭಿಪ್ರಾಯ ಮೂಡಿಸಲು ಷಡ್ಯಂತರ ನಡೆಸುತ್ತಿದ್ದಾರೆ. ನಿಮ್ಮ ಇತ್ತೀಚಿನ ನಡವಳಿಕೆ ನೋಡಿದಾಗ ದಿನತ್ಯ ಸುಳ್ಳು ಹೇಳುವುದು ನಿಮ್ಮ ರಾಜಕೀಯ ಬದುಕಿನ ಭಾಗ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುಳ್ಳು ಹೇಳದೇ ಇದ್ದರೆ ನಿಮಗೆ ತಿಂದ ಅನ್ನ ಜೀರ್ಣ ಆಗಲ್ಲ. ಸುಳಿನಿಂದಲೇ ನಿಮ್ಮ ರಾಜಕೀಯ ಬದುಕು ಪ್ರಾರಂಭವಾಗಿದೆ. ಸುಳಿನಿಂದಲೇ ನಿಮ್ಮ ದಿನಚರಿ ಮುಕ್ತಾಯ ಆಗುತ್ತದೆ ಅನಿಸುತ್ತದೆ. ನಮ್ಮ ಪಕ್ಷದ ಮೇಲೆ ಸುಳ್ಳು ಆರೋಪ ಮಾಡಿದ್ದೀರಿ.…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​j ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್​ ವಿಭಾಗೀಯಪೀಠ ನಿಗದಿಪಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರ ತಡೆ ಕಾಯ್ದೆ 17A ಅಡಿಯಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದರು. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠವು ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಗೊಳಿಸಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಏಕ ಸದಸ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ವೇಳೆ ತುರ್ತು ವಿಚಾರಣೆ ಅಗತ್ಯವಿದೆ ಎಂದು ಸಿಜೆ ಪ್ರಶ್ನಿಸಿದ್ದಾರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೌದು ತುರ್ತು…

Read More

ಮಂಗಳೂರು : ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧವಾರ ಮೃತಪಟ್ಟಿದ್ದಾರೆ.ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಮೃತಪಟ್ಟ ಉಪನ್ಯಾಸಕಿ ಎಂದು ತಿಳಿದುಬಂದಿದೆ. ಬಜ್ಪೆ ಪಡು ಪೆರಾರ ನಿವಾಸಿ ಗ್ಲೋರಿಯಾ ಆಶಾ ರೋಡ್ರಿಗಸ್​ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪಡೆದಿದ್ದರು. ಬಳಿಕ ಇದೇ ಕಾಲೇಜಿನಲ್ಲಿ ಬಿ.ಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು. ನ.8ರಂದು ಕಾಲೇಜಿನಲ್ಲಿ ಮೆಟ್ಟಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಬಿದ್ದ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಕೂಡಲೇ ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು. ಅಂಗಾಂಗ ದಾನ ಗ್ಲೋರಿಯಾ ರೋಡ್ರಿಗಸ್‌ ಅವರ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣು, ಹೃದಯ, ಚರ್ಮ, ಯಕೃತ್‌, ಎರಡು ಕಿಡ್ನಿ, ಶ್ವಾಸಕೋಶವನ್ನು ದಾನ ಮಾಡಲಾಗಿದೆ. ಯಕೃತ್‌(ಲಿವರ್‌) ಮಂಗಳೂರಿನ ಎಜೆ ಆಸ್ಪತ್ರೆಗೆ…

Read More