Author: kannadanewsnow05

ಬೆಂಗಳೂರು : ಇದೇ ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡಿಕೆ ಮಾಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ. ಈ ಕುರಿತು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ತಿಳಿಸಿದ್ದು, ಗೃಹ ಸಚಿವರು ಹಾಗೂ ಡಿಜಿಪಿಗೂ ಪತ್ರ ಬರೆಯಲಾಗಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಬಗ್ಗೆಯೂ ಚರ್ಚೆ ಆಗಿದೆ ಎಂದು ಅವರು ವಿವರಿಸಿದ್ದಾರೆ. ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದು, ಈಗಿನಿಂದಲೇ ಸಿದ್ಧತೆ ನಡೆಸಲಾಗಿದೆ ಎಂದು ಪ್ರಸನ್ನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ತಯಾರಿ ನಡೆದಿದ್ದು, ಹೆಚ್ಚಿನ ನಿಗಾ ಇಡಲು ಪೊಲೀಸ್ ಇಲಾಖೆಯ ನೆರವು ಕೂಡ ಕೋರಲಾಗಿದೆ.ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆ…

Read More

ಬೆಂಗಳೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಪೆಂಡಾಲ್​ನಲ್ಲಿ ಪ್ರಸಾದ ತಯಾರಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶ ವಿರೋಧಿಸಿ ಬಿಜೆಪಿಯಿಂದ ಟ್ವೀಟ್ ಮಾಡಲಾಗಿದೆ. ಪರವಾನಗಿ ಪಡೆದವರಿಂದ ಮಾತ್ರ ಪ್ರಸಾದ ತಯಾರಿಸುವಂತೆ ಆದೇಶಿಸಲಾಗಿದ್ದು, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಈ ಕುರಿತು ಬಿಜೆಪಿ ಟ್ವೀಟ್ ಮಾಡಿದ್ದೂ, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು FSSAI ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ತಯಾರಿಸುವಂತೆ ವಿಘ್ನ ಆದೇಶವನ್ನು ಹೊರಡಿಸಿ ಸಮಸ್ತ ಹಿಂದೂಗಳ ಮನಸ್ಸನ್ನು ಘಾಸಿಗೊಳಿಸಿದ್ದಾರೆ. ‌ ಅನ್ಯಮತೀಯರ ಹಬ್ಬಗಳಲ್ಲಿ ಬೀದಿ ಬೀದಿಗಳಲ್ಲಿ ಆಹಾರ ಬೇಯಿಸುವಾಗ ಕೈ ಕಟ್ಟಿಕೊಂಡಿದ್ದ ಸಿದ್ದರಾಮಯ್ಯನವರು, ಈಗ ಹಿಂದೂಗಳ ಆರಾಧ್ಯ ದೈವ ಗಣಪತಿ ಹಬ್ಬದ ಆಚರಣೆಗೆ ಇಂಥ ವಿಘ್ನಾದೇಶಗಳನ್ನು ಹೊರಡಿಸುವ ಹಕೀಕತ್ತು ಏನಿದೆ? ಮುಖ್ಯಮಂತ್ರಿಗಳೇ, ನಿಮ್ಮ ಓಲೈಕೆಗೂ ಒಂದು ಮಿತಿ ಇರಲಿ ಎಂದು ಬಿಜೆಪಿ ಕುಟುಕಿದೆ. https://twitter.com/BJP4Karnataka/status/1831311637007016213?t=UIPHQdbaUa7VvozAiiRn8w&s=19

Read More

ಬೆಂಗಳೂರು : ಇಂದು ಬೆಂಗಳೂರಿನ ಜಯನಗರದ 4ನೆ ಟಿ ಬ್ಲಾಕ್ ನಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಒಂದು ಬಿದ್ದಿತ್ತು. ಇವಳೇ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕನನ್ನು ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಇದೀಗ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರದ ಕೊಂಬೆ ಬಿದ್ದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಇದೀಗ ಸಾವನಪ್ಪಿದ್ದಾನೆ. ಘಟನೆ ನಡೆದ ತಕ್ಷಣ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಚಾಲಕ ಖಲೀಲ್ ಕೊನೆಯುಸಿರುಳಿದಿದ್ದಾನೆ. ಜಯನಗರದ 4ನೆ ಟೀ ಬ್ಲಾಕ್ ನಲ್ಲಿ ಇಂದು ಬೆಳಿಗ್ಗೆ ಈ ಒಂದು ಅವಘಡ ನಡೆದಿತ್ತು. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿತ್ತು. ಆದರೆ ಆಟೋ ಚಾಲಕ ಖಲೀಲ್ ಗೆ ಗಂಭೀರವಾದ ಗಾಯಗಳಾಗಿದ್ದರಿಂದ ಕೊಡಲೇ ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಆಟೋ ಚಾಲಕ…

Read More

ಬೆಂಗಳೂರು : ಬಾಗ್ಮನೆ ಡೆವಲಪರ್ಸ್‌ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್‌ಮೆಂಟ್‌ ಪ್ರೈ.ಲಿಗೆ ಬೆಂಗಳೂರಿನ ಡಿಫೆನ್ಸ್‌ ಎಸ್.ಇ.ಝಡ್‌ ಪಾರ್ಕ್​ನಲ್ಲಿ ಅಂದಾಜು 160 ಕೋಟಿ ರೂ. ಬೆಲೆಬಾಳುವ 8 ಎಕರೆ ಭೂಮಿ ನೀಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಇದೀಗ ಸ್ವತಃ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ತಿರಗೇಟು ನೀಡಿದ್ದು, ಸುಳ್ಳನ್ನು ನಿಜ ಮಾಡುವ ಬಿಜೆಪಿಗರು ತಮ್ಮ ಹಳೆ ಸಿದ್ದಾಂತಕ್ಕೆ ಜೋತು ಬಿದ್ದಿದ್ದಾರೆಬುಂದು ಮತ್ತೊಮ್ಮೆ ಸಾಬೀತಾಗಿದೆ ತಿರುಗೇಟು ನೀಡಿದ್ದಾರೆ. ಹೌದು ಈ ಕುರಿತಂತೆ ಅವರು ತಮ್ಮ X ಖಾತೆಯಲ್ಲಿ ಬಿಜೆಪಿ ನಾಯಕರು ಮಾಡಿದೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಸುಳ್ಳಿನ ಕಂತೆ ಸುಳ್ಳೇ ಇವರ ಮನೆ ದೇವರು, ಜೋಕರ್ಸ್ ಆಫ್ ಬಿಜೆಪಿ ಎಂಬ ಪೋಸ್ಟ್ ಹಂಚಿಕೊಳ್ಳುವ ಮೂಲಕ ವಿವರವಾಗಿ ಬರೆದಿದ್ದಾರೆ. ರಾಜ್ಯ ಬಿಜೆಪಿಯವರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕುಟುಕಿದ್ದಾರೆ. @BJP4Karnataka ದವರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ;…

Read More

ಬೆಳಗಾವಿ : ಸಾವು ಯಾವಾಗ ಹೇಗೆ ಬರುತ್ತೆ ಎನ್ನುವುದು ಸ್ವತಃ ಸೃಷ್ಟಿಕರ್ತನಿಗೂ ಗೊತ್ತಿಲ್ಲ. ಕೆಲವು ಸಾವುಗಳು ಎಷ್ಟು ಕ್ರೂರವಾಗಿರುತ್ತವೆ ಅಂದರೆ ಊಹಿಸಲು ಸಾಧ್ಯವಿಲ್ಲ. ಇಂತದ್ದೇ ಘಟನೆ ಇದೀಗ ಬೆಳಗಾವಿಯಲ್ಲಿ ನಡೆದಿದ್ದು, ಇನ್ನೇನು ಮದುವೆ ಒಂದು ದಿನ ಬಾಕಿ ಇರುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ ದುರ್ಘಟನೆ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ. ಹೌದು ನಾಳೆ ಬೆಳಗಾದರೆ ಸಾಕು ನನಗೂ ನಿನಗೂ ಮದುವೆ ಎಂದು ಖುಷಿಯಿಂದ ಹುಡುಗಿಯೊಂದಿಗೆ ಯುವಕ ಮದುವೆ ಸಿದ್ಧತೆ ಬಗ್ಗೆ ಚಪ್ಪರದಲ್ಲಿ ನಿಂತುಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಝುಂಜರವಾಡ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಸೆ.5 ರಂದು ಮದುವೆ ನಿಶ್ಚಯವಾಗಿತ್ತು. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆ ಮುಂದೆ ಮದುವೆ ಸಿದ್ಧತೆ ಮಾಡಿಕೊಳ್ಳುತ್ತಾ, ಮೊಬೈಲ್‌ನಲ್ಲಿ ಮಾತನಾಡುವಾಗ ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಆತನನ್ನು ತುರ್ತಾಗಿ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದರು ಅದಾಗಲೇ ಯುವಕ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಅಜೇವಿನಲ್ಲಿ ಕೊಲೆ ಆರೋಪಿ ದರ್ಶನಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ನಟ ಚೇತನ್ ಅಹಿಂಸಾ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ಜೈಲಿನಲ್ಲಿ ಇದ್ದ ಸಂದರ್ಭದಲ್ಲಿ ನನಗೆ ಯಾವುದೇ ರೌಡಿಗಳು ಸಹಾಯ ಮಾಡುವುದಗಿ ಹೇಳಿರಲಿಲ್ಲ ಎಂದು ತಿಳಿಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಸಿಕ್ಕಿದ್ದು, ಹಣ ಬಲದಿಂದ ಆಗಿರೋದು. 40 ಜನ ಇರುವ ಬ್ಯಾರಕ್ನಲ್ಲಿ ಶೌಚಾಲಯದ ಸಮಸ್ಯೆ ಕಷ್ಟವಾಗುತ್ತಿತ್ತು. ನನಗೆ ಯಾವುದೇ ರೌಡಿಗಳು ಸಹಾಯ ಮಾಡುವುದಾಗಿ ಹೇಳಲಿಲ್ಲ. ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಜೈಲಿನಲ್ಲಿ ವ್ಯವಸ್ಥೆ ಸರಿ ಪಡಿಸುವ ಮನಸ್ಥಿತಿ ಇರಬೇಕು ಎಂದು ನಟ ಚೇತನ ಅಹಿಂಸಾ ತಿಳಿಸಿದರು. ಇನ್ನೂ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾಚಿ ಶೀಟ್ ಸಲ್ಲಿಸಿದ ವಿಚಾರವಾಗಿ…

Read More

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸಂಪೂರ್ಣವಾಗು ಸುಟ್ಟು ಕರಕಲಾಗಿದ್ದು, ಶವ ಪತ್ತೆಯಾಗಿರುವ ಘಟನೆ ಕಾರವಾರ ತಾಲೂಕಿನ ಶಿರವಾಡದಲ್ಲಿ ನಡೆದಿದೆ. ಇನ್ನು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ಗ್ರಾಮದ ಸಂಜನಾ ಗಜಾನನ ತಳೇಕರ ಎಂಬವರ ಮೃತದೇಹವಾಗಿದೆ. ಮೃತ ದೇಹದ ಪಕ್ಕದಲ್ಲಿದ್ದ ಬ್ಯಾಗ್‌ ತೆರೆದು ನೋಡಿದಾಗ ಅದರಲ್ಲಿದ್ದ ಆಧಾರ ಕಾರ್ಡ್ ಮೂಲಕ ಗುರುತು ಪತ್ತೆ ಮಾಡಲಾಗಿದೆ. ಆಧಾರ್ ಕಾರ್ಡ್ ಮೂಲಕ ಆಕೆಯ ಗಂಡನನ್ನು ಪೊಲೀಸರು ಸಂಪರ್ಕ ಮಾಡಿದ್ದು, ಈಕೆ ನನ್ನ ಹೆಂಡತಿ ಎಂದು ಗಜಾನನ ತಳೇಕರ್ ಗುರುತಿಸಿದ್ದಾನೆ. ಶಿರವಾಡದ ರೇಲ್ವೆ ನಿಲ್ದಾಣದ ಹಿಂಬದಿಯಲ್ಲಿ ಸುಮಾರು ಅಂದಾಜು 35 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ತಲೆ ಹಾಗೂ ಬೆನ್ನಿನ ಭಾಗ ಸುಟ್ಟು ಕರಕಲಾಗಿವೆ. ಪ್ಯಾಂಟ್ ಧರಿಸಿರುವ…

Read More

ಬೆಂಗಳೂರು : ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜಾಜಿನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ಸುರೇಶ್ ಕುಮಾರ್ ಅವರಿಗೆ ರೂಪಾಂತರಿ ಚಿಕನ್ ಗುನ್ಯಾಯಿಂದ ಬಳಳುತ್ತಿದ್ದರು ಹಾಗಾಗಿ ನಿನ್ನೆ ಆರೋಗ್ಯದಲ್ಲಿ ಅವರಿಗೆ ಏರುಪೇರಾಗಿತ್ತು. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಹೌದು ರೂಪಾಂತರಿ ಚಿಕುನ್ ಗುನ್ಯಾ ಸೋಂಕು ತಗುಲಿದ ಕಾರಣ ಸುರೇಶ್ ಕುಮಾರ್ ಕೆಲ ದಿನಗಳ ಹಿಂದೆ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಐಸಿಯು ಘಟಕದಲ್ಲಿ ಸುರೇಶ್ ಕುಮಾರ್‌ಗೆ ಚಿಕಿತ್ಸೆ ನೀಡಿದ್ದಾರೆ. ಈಗ ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು.ಅಲ್ಲದೇ ಅವರಿಗೆ ಬ್ರೈನ್ ಹಾಗೂ ಸ್ಪೈನಲ್ ಕಾರ್ಡ್ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ.ಕಳೆದ ನಾಲ್ಕು ದಿನಗಳಿಂದ ತೀರ್ವ ಜ್ವರದಿದಂ ಬಳಲುತ್ತಿದ್ದಂತ ಅವರನ್ನು ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಇದೀಗ ಅವರು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ.

Read More

ದಕ್ಷಿಣಕನ್ನಡ : ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಕುರಿತು ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಳಿಕ ವಜಾಗೊಳಿಸಿದ್ದಾರೆ. ಕಳೆದ ಮಾರ್ಚ್ 4 ರಂದು ಕೇರಳ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ವಿದ್ಯಾರ್ಥಿನಿಯು ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಕೃತ್ಯ ಎಸಗಿದ್ದ. ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ, ಪಡೆದುಕೊಂಡು ಬಂದಿದ್ದ. ಕೊಯಮುತ್ತೂರಿನಿಂದ ಆ್ಯಸಿಡ್ ಖರೀದಿಸಿದ್ದ. ಸಮವಸ್ತ್ರ ಧರಿಸಿಕೊಂಡಿದ್ದ ಆರೋಪಿಯು ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಈ ವೇಳೆ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಗಾಯಗಳಾಗಿದ್ದವು. ಈ…

Read More

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದೆಡೆ ಮುಡಾ ಹಗರಣ ಸದ್ದು ಮಾಡುತ್ತಿದ್ದಾರೆ ಇನ್ನೊಂದೆಡೆ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ.ಇದೀಗ ಮಾಜಿ ಸಂಸದ ಡಿಕೆ ಸುರೇಶ್ ಅವರು ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಕೇಳುವುದರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನವರು ಅವರ ಪಕ್ಷ ಉಳಿಸಿಕೊಳ್ಳಲು ಹೇಳ್ತಾರೆ. ಬಲಿಷ್ಠ ಸರ್ಕಾರವಿದೆ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ನಾಯಕತ್ವವಿದೆ. ಯಾರು ಏನೇ ಪ್ರಯತ್ನ ಪಟ್ಟರೂ ಖಂಡಿತ ಕಾಂಗ್ರೆಸ್ ಸರ್ಕಾರ ಅವಧಿ ಪೂರ್ಣ ಇರುತ್ತದೆ. ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರ್ತಾರೆ. ಈ ಬಗ್ಗೆ ಡಿಸಿಎಂ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್‌ರ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕುತಂತ್ರ ನಡೆಸಿದೆ ರಾಜ್ಯಪಾಲರ ಮುಂದೆ ಹಳೇ ಪ್ರಕರಣಗಳು ಬಾಕಿ ಇದ್ದರೂ ಸದ್ದು ಮಾಡ್ತಿಲ್ಲ.…

Read More