Author: kannadanewsnow05

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಈ , ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಕೂಡ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

Read More

ಕೊಡಗು : ವಿಪರೀತವಾಗಿ ಸಾಲ ಮಾಡಿಕೊಂಡಿದ್ದ ರೈತನೊಬ್ಬ ಸಾಲ ತೀರಿಸಲಾಗದೆ ಕೋವಿಯಲ್ಲಿ ಕೊಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಎಂಬಲ್ಲಿ ನಡೆದಿದೆ.ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೊಸಗುತ್ತಿ ಗ್ರಾಮದಲ್ಲಿ ರೈತ ಮಜೀದ್ (45) ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ನಿವಾಸಿಯಾಗಿರುವ ಮಜೀದ್ ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮಜೀದ್ ವಿಪರೀತವಾಗಿ ಸಾಲ ಮಾಡಿಕೊಂಡಿದ್ದ. ಆತ್ಮಹತ್ಯೆ ಘಟನೆ ಕುರಿತಂತೆ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಜಲರೇಚಕ ಯಂತ್ರಗಾರದಿಂದ ಅಮೃತ್ ಕೊಳವೆ ಮಾರ್ಗಕ್ಕೆ ಜೋಡಣೆ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ರಾತ್ರಿ 9 ರಿಂದ ಗುರುವಾರ ರಾತ್ರಿ 9 ಗಂಟೆವರೆಗೆ ಈ ಕೆಳಗೆ ತಿಳಿಸಿರುವ ಪ್ರದೇಶ ಗಳಲ್ಲಿ ಕಾವೇರಿ ನೀರುಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ. ಯಾವ್ಯಾವ ಪ್ರದೇಶಗಳು? ರಾಜು ಕಾಲೊನಿ, ಇಬ್ರಾಹಿಮ್ ಸ್ಟ್ರೀಟ್-1 ರಿಂದ 9ನೇ ರಸ್ತೆ, ನೋಬಲ್ ಸ್ಕೂಲ್ -1 ಮತ್ತು 2ನೇ ಅಡ್ಡರಸ್ತೆ, ನೂ‌ರ್ ಲೇಔಟ್, ಶಾಂಪುರ ರೈಲ್ವೆಗೇಟ್-1 ಮತ್ತು 2ನೇ ಅಡ್ಡರಸ್ತೆ, ವಯಾಲಿಕಾವಲ್ ಲೇಔಟ್-1ರಿಂದ 9ನೇ ಮುಖ್ಯ ರಸ್ತೆ, ಸಂದ್ಯಗಪ್ಪ ಲೇಔಟ್-1ರಿಂದ 3ನೇ ಅಡ್ಡರಸ್ತೆ, ವೀರಣ್ಣ ಪಾಳ್ಯ, ನಾರಾಯಣಸ್ವಾಮಿ ಲೇಔಟ್, ವಯಾಲಿ ಕಾವಲ್ ಲೇಔಟ್ -10 ರಿಂದ 16ನೇ ಅಡ್ಡರಸ್ತೆ, ಪ್ರಕೃತಿ ಲೇಔಟ್, ಆಯಿಲ್ ಮಿಲ್ ರಸ್ತೆ(1 ರಿಂದ 15ನೇ ಕ್ರಾಸ್ ತಗ್ಗು ಪ್ರದೇಶ), 16ರಿಂದ 18ನೇ ಅಡ್ಡರಸ್ತೆ(1 ರಿಂದ 15ನೇ ತಿರುವಿನವರೆಗಿನ ಎತ್ತರದ ಪ್ರದೇಶ), 3ನೇ ಬ್ಲಾಕ್ ಸರ್ವೀಸ್ ರಸ್ತೆ, ಎಚ್.ಆ‌ರ್.ಬಿ.ಆರ್ ಲೇಔಟ್, ಹೆಣ್ಣೂರು, ರಾಮಸ್ವಾಮಿ ಪಾಳ್ಯ…

Read More

ಬೆಂಗಳೂರು : ವೇತನ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಇದೀಗ 108 ಆಂಬುಲೆನ್ಸ್ ಸಿಬ್ಬಂದಿಗಳು ಮತ್ತೆ ಆರೋಗ್ಯ ಇಲಾಖೆ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದು ಶೀಘ್ರದಲ್ಲಿ ಬಾಕಿ ವೇತನ ಪಾವತಿಸದೆ ಇದ್ದಲ್ಲಿ ಆಂಬುಲೆನ್ಸ್ ಸೇವೆ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ. ಹೌದು ಸಂಬಳ ನೀಡದ ಹಿನ್ನೆಲೆ 108 ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಶನಿವಾರದೊಳಗೆ ವೇತನ ನೀಡದಿದ್ದರೆ ಪ್ರತಿಭಟನೆ ಎಚ್ಚರಿಕೆ ಸಹ ಸಿಬ್ಬಂದಿಗಳು ನೀಡಿದ್ದಾರೆ. ವೇತನ ನೀಡದಿದ್ದರೆ ಸೇವೆಗೆ ಹಾಜರಾಗದಿರಲು ನೌಕರರು ನಿರ್ಧಾರ ಕೈಗೊಂಡಿದ್ದಾರೆ. ಬಾಕಿ ವೇತನ ಪಾವತಿಸುವಂತೆ ನಾಳೆ ಸರ್ಕಾರಕ್ಕೆ 108 ಆಂಬುಲೆನ್ಸ್ ನೌಕರರು ಮನವಿ ಸಲ್ಲಿಸಲಿದ್ದಾರೆ. ಕಳೆದ ವರ್ಷ ಜುಲೈ ನಲ್ಲಿ ಕೂಡ 108 ಆಂಬುಲೆನ್ಸ್ ಸಿಬ್ಬಂದಿಗಳು ಬಾಕಿ ವೇತನ ಪಾವತಿಸದ ಹಿನ್ನೆಲೆಯಲ್ಲಿ ಸೇವೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು, 108 ಸಿಬ್ಬಂದಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್,…

Read More

ಮೈಸೂರು : ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ಪ್ರಿಯಾಪಟ್ಟಣ ತಾಲೂಕಿನ ಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ಈ ಒಂದು ಘಟನೆ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಸುರೇಶ್ ಹಾಗೂ ಪಲ್ಲವಿ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ. ಮೃತರನ್ನು ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತ ಸುರೇಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎನ್ನಲಾಗಿದೆ. ಮೃತ ದಂಪತಿಗಳು ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ಘಟನೆ ಕುರಿತಂತೆ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮುಡಾ ಹಗರಣದ ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ದಾಖಲೆ ಬಿಡುಗಡೆ ಮಾಡಿದ್ದಾರೆ. ಸೈಟ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಮುನ್ನವೇ ಪಾರ್ವತಿ ಸಿದ್ದರಾಮಯ್ಯ ಅವರು ತಹಶೀಲ್ದಾರ್ ಮೂಲಕ ಪಾವತಿಸಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ. ಅರ್ಜಿ ಕೊಡುವ ಮುನ್ನವೇ ಶುಲ್ಕ ಪಾವತಿ ಮಾಡಿಕೊಂಡಿರುವ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ. 2022ರ ಜನವರಿ 12ರಂದು ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅರ್ಜಿ ಸಲ್ಲಿಕೆಗೂ ಮುನ್ನವೇ ಅಂದರೆ 2022ರ ಜನವರಿ 11ರಂದು ಶುಲ್ಕ ಪಾವತಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ನೇಹಮಯಿ ಕೃಷ್ಣ ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ರಶೀದಿ ಪ್ರದರ್ಶನ ಮಾಡಿದ್ದಾರೆ. ನೋಂದಣಿಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಿ ಪತ್ರ ಬರೆದಿದ್ದರು. 2020ರ ಜನವರಿ 12ರಂದು ಪಾರ್ವತಿಯವರು ಮುಡಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಆದರೆ ನೋಂದಣಿ ಶುಲ್ಕವನ್ನು ಒಂದು ದಿನ ಮುಂಚಿತವಾಗಿ ಪಾವತಿ ಮಾಡಿದ್ದರು. ಅಂದರೆ 2020ರ…

Read More

ಮೈಸೂರು : ನಮ್ಮ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿಯವರು ಕಾಂಗ್ರೆಸ್ ಐವತ್ತು ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದರು. ಆದರೆ ನಮ್ಮ ಶಾಸಕರು ಯಾವುದೇ ಹಣದ ಆಮಿಷಕ್ಕೆ ಬಗ್ಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪೋಟಕವಾದ ಹೇಳಿಕೆ ನೀಡಿದರು. ನಿನ್ನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಹೊರಳಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ಸಿನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್ ನೀಡಿದರು ಆದರೆ ನಮ್ಮ ಶಾಸಕರು ಯಾವುದಕ್ಕೂ ಬಗ್ಗಲಿಲ್ಲ ಹೀಗಾಗಿ ನನ್ನ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಹೊರಾಳಹಳ್ಳಿ ಗ್ರಾಮದಲ್ಲಿ ಬಿಜೆಪಿ ವಿರುದ್ಧ ಗಂಭೀರವಾದ ಆರೋಪ ಮಾಡಿದರು. ನನ್ನನ್ನು ಮುಟ್ಟಿದರೆ ನಮ್ಮ ಕರ್ನಾಟಕ ಜನ ಸುಮ್ಮನೆ ಬಿಡಲ್ಲ ಎಂದು ಪ್ರತಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ನನ್ನ ಕಂಡರೆ ಬಿಜೆಪಿಯವರಿಗೆ ಹೊಟ್ಟೆ ಉರಿ. ಬಡವರ ಪರ ಕೆಲಸ ಮಾಡುತ್ತೇನೆ ಅಂತ…

Read More

ಬೆಂಗಳೂರು : ಎದೆಹಾಲು ಸಂಗ್ರಹ ಮತ್ತು ಸಂಸ್ಕರಿಸಿ ಮಾರಾಟ ಮಾಡಲು ಖಾಸಗಿ ಕಂಪನಿಗಳಿಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ.ಎದೆಹಾಲಿನ ವಾಣಿಜ್ಯಕರಣವನ್ನು ತಡೆಯುವಂತೆ ಕೋರಿ ಮುನೇಗೌಡ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠವು ಎದೆಹಾಲು ಸಂಗ್ರಹಕ್ಕೆ ಅನುಮತಿಸಿ ನೀಡಿರುವ ಪರವಾನಗಿಗಳನ್ನು ರದ್ದು ಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಆಯುಷ್ ಸಚಿವಾಲಯವು ಇತ್ತೀಚೆಗೆ ನಿರ್ದೇಶಿಸಿದೆ. ಈಗಾಗಲೇ ಒಂದು ಕಂಪನಿಯ ಲೈಸನ್ಸ್‌ ರದ್ದಾಗಿದ್ದು, ಆ ಕಂಪನಿ ಅದನ್ನು ಹೈಕೋರ್ಟ್‌ನಲ್ಲಿ ಕಾಮತ್, ಖಾಸಗಿ ಕಂಪನಿಗಳಿಗೆ ಪ್ರಶ್ನಿಸಿದೆ ಎಂದು ವಿವರಿಸಿದರು. ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟ‌ರ್ ಜನರಲ್ ಅರವಿಂದ್ ಎದೆಹಾಲು ಸಂಗ್ರಹಕ್ಕೆ ಅನುಮತಿಸಿ ನೀಡಿರುವ ಪರವಾನಗಿಗಳನ್ನು ರದ್ದು ಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಆಯುಷ್ ಸಚಿವಾಲಯವು ಇತ್ತೀಚೆಗೆ…

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರ ಜನತೆಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಹುಟ್ಟುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಹಾಗೂ ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದೆ.ಪಶ್ಚಿಮಘಟ್ಟ ಅರಣ್ಯ ಪ್ರದೇಶದಿಂದಲೇ ತುಂಗಾ-ಭದ್ರಾ, ಕಾವೇರಿ, ಕೃಷ್ಣಾ, ಮಲಪ್ರಭ, ಘಟಪ್ರಭ, ಹೇಮಾವತಿ ಸೇರಿದಂತೆ 15ಕ್ಕೂ ಹೆಚ್ಚಿನ ನದಿಗಳು ಉಗಮವಾಗುತ್ತವೆ. ಹಾಗಾಗಿ ಈ ನದಿಗಳ ನೀರನ್ನು ಬೆಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗ ಳೂರು, ಚಿಕ್ಕಮಗಳೂರು, ಬೆಳಗಾವಿ, ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ನಗರ ಮತ್ತು ಪಟ್ಟಣಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಪೂರೈಸ ಲಾಗುತ್ತಿದೆ. ಅಲ್ಲಿನ ಸ್ಥಳೀಯ ಜಲ ಮಂಡಳಿಯಿಂದ ನೀರಿನ ಸಂಪರ್ಕ ಪಡೆದವರಿಗೆ ನೀರಿನ ಬಿಲ್‌ನಲ್ಲಿ ಹಸಿರು ಸೆಸ್ ವಿಧಿಸುವ ಪ್ರಸ್ತಾವನೆ ಸಿದ್ಧಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. 3 ರೂ. ವಿಧಿಸುವ ಸಾಧ್ಯತೆ ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಹಸಿರು ಸೆಸ್ ವಿಧಿಸುವ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ. ಹಸಿರು ಸೆಸ್…

Read More

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀ‌ರ್ ಅಹ್ಮದ್‌ ಖಾನ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಆರೋಪದಡಿ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬುಧವಾರ ತಡರಾತ್ರಿ ಚಾಮರಾಜಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಸಚಿವರ ಆಪ್ತ ಸಹಾಯಕ ಬಿ. ಎಸ್.ಅಶೋಕ್‌ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಅಗತ್ಯ ಬಿದ್ದರೆ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ವೇಳೆ ಜಮೀ‌ರ್ ಅವರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ‘ಕರಿಯ’ ಎಂದು ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಪುನೀತ್‌ ಕೆರೆಹಳ್ಳಿ ಅವರು ನ.11ರಂದು ಫೇಸ್‌ಬುಕ್‌ನಲ್ಲಿ ಸಚಿವರನ್ನು ನಿಂದಿಸಿದ್ದರು ಎನ್ನಲಾಗಿದೆ. ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ಅವರು ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲ ತಾಣದ ಫೇಸ್ ಬುಕ್ ಲಿಂಕ್ ನಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್…

Read More