Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಅವರು FIR ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದು, ಈ ವೇಳೆ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಸಚಿವರಿಗೆ ಛೀಮಾರಿ ಹಾಕಿದರು. ಇದೀಗ ಸೋಫಿಯಾ ಖುರೇಶಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ವಿಜಯ ಶಾ ವಿರುದ್ಧ ಬೆಳಗಾವಿಯ ಸೆನ್ ಠಾಣೆಯಲ್ಲಿ ಎಸ್.ಪಿ ಭೀಮಾಶಂಕರ್ ಗುಳೇದ ಅವರ ಸೂಚನೆಯ ಮೇರೆಗೆ ಇದೀಗ ವಿಜಯ ಶಾ ವಿರುದ್ಧ ಪ್ರಕರಣ ದಾಖಲಾಗಿದೆ ಬಿಎನ್ಎಸ್ ಕಾಯ್ದೆ 353, 192ರ ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಸುಪ್ರೀಂ ಛೀಮಾರಿ ಹೌದು ಸೋಫಿಯಾ ಖುರೇಶಿ ಅವರ ಕುರಿತು ವಿಜಯ ಶಾ ಕಾರ್ಯಕ್ರಮ ಒಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು, ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು…
ಬೆಂಗಳೂರು : ಕಾರ್ಯಕ್ರಮ ಒಂದರಲ್ಲಿ ಕನ್ನಡ ಹಾಡು ಹಾಡಿ ಎಂದಿದ್ದಕ್ಕೆ ಖ್ಯಾತ ಗಾಯಕ ಸೋನು ನಿಗಮ್ ಅವರು ಪಹಲ್ಗಾಮ್ ದಾಳಿಗೆ ಕನ್ನಡಿಗರನ್ನು ಹೋಲಿಕೆ ಮಾಡಿ, ಅವಹೇಳನಕಾರಿ ಹೇಳಿಕೆ ನೀಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಸೋನು ನಿಗಮ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ತನ್ನ ವಿರುದ್ಧದ FIR ರದ್ದು ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತನಿಖೆಗೆ ಹಾಜರಾಗಿಲ್ಲ ಎಂದು ಸರ್ಕಾರದ SPP ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ನೀಡಿದ್ದು, ಈ ವೇಳೆ ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು. ಹಾಗಾಗಿ ವಿಚಾರಣೆಗೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಸೋನು ನಿಗಮ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಹೈಕೋರ್ಟ್ ನ್ಯಾಯಾಧೀಶರು ಸೋನು ನಿಗಮ್ ವೆಚ್ಚದಲ್ಲಿ ಅವರಿದ್ದ ಸ್ಥಳದಲ್ಲಿ ತನಿಖೆ ಅಥವಾ…
ಮಂಗಳೂರು : ಇತ್ತೀಚಿಗೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಮಂಗಳೂರಿನ ಬಜ್ಪೆಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಳಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನ ಕಳವಾರು ಗ್ರಾಮದ ಆಶ್ರಯ ಕಾಲನಿ ನಿವಾಸಿ ಅಜರುದ್ದೀನ್ (29), ಬಜ್ಪೆ, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿಯ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ಬಂಟ್ವಾಳದ ಫರಂಗಿಪೇಟೆಯ ಕುಂಪನಮಜಲು ರಸ್ತೆ ನಿವಾಸಿ ನೌಷಾದ್ (39) ದಸ್ತಗಿರಿಯಾದ ಆರೋಪಿಗಳು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದಿಬ್ಬರಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದ ತನಿಖೆಯು ಮುಂದುವರೆದಿದ್ದು, ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಬೆಂಗಳೂರು : ಆನಂದ್ ಗುರೂಜಿಗೆ ಹಣಕ್ಕೆ ಬ್ಲಾಕ್ ಮೇಲ್ ಮಾಡಿದ್ದು ಅಲ್ಲದೇ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ಆನಂದ್ ಗುರೂಜಿ ಇದೀಗ ದೂರು ನೀಡಿದ್ದಾರೆ. ಆನಂದ್ ಗುರೂಜಿ ದೂರಿನ ಮೇರೆಗೆ ಪೊಲೀಸರು ಇಬ್ಬರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. A1 ಕೃಷ್ಣಮೂರ್ತಿ ಹಾಗು A2 ದಿವ್ಯ ವಸಂತ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆನಂದ್ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್ ನಿಂದ ತಡೆಯಾಜ್ಞೆ ತಂದರೂ ಸಹ ಆನಂದ್ ಗುರೂಜಿಗೆ ಬೆದರಿಕೆ ಹಾಕಲಾಗಿದೆ. ಹಣಕ್ಕಾಗಿ ಬೆದರಿಸಿ ಬ್ಲಾಕ್ಮೇಲ್ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಆನಂದ ಗುರೂಜಿಯ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಚಿಕ್ಕಜಾಲ ಠಾಣೆ ಪೊಲೀಸರು ಇದೀಗ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು : ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಹಬ್ ಹೀಗೆ ಹಲವು ವಿಚಾರಗಳಲ್ಲಿ ಬೆಂಗಳೂರು ಈಗಾಗಲೇ ವಿಶ್ವಮಟ್ಟದಲ್ಲಿ ಮಹತ್ವ ಪಡೆದಿದೆ. ಇದೀಗ ರಾಜಧಾನಿ ನಗರದ ಹೆರಿಗೇ ‘ಗ್ರೇಟರ್’ ಎಂಬ ಕಿರೀಟ ತೊಡಿಸಲು ಸರ್ಕಾರ ಮುಂದಾಗಿದೆ. ಇದೀಗ ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಇನ್ಮುಂದೆ ಬಿಬಿಎಂಪಿ ಇರುವುದಿಲ್ಲ ಜಿಬಿಎ ಆಗಲಿದೆ. ಗ್ರೇಟರ್ ಬೆಂಗಳೂರು ಕಾಯ್ದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. ಗ್ರೇಟರ್ ಬೆಂಗಳೂರು ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಾನು ಅಧ್ಯಕ್ಷ ಆಗಿರುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಸದ್ಯ ಬಿಬಿಎಂಪಿ ವಿಸರ್ಜನೆಯಾಗಿದ್ದು, 3 ಭಾಗಗಳಾಗಿ ಬೆಂಗಳೂರು ವಿಂಗಡಣೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಸೇರಿ ಮೂರು ಭಾಗಗಳಾಗಿ ವಿಂಗಡಣೆ ಮಾಡಲು ಚಿಂತನೆ…
ನವದೆಹಲಿ : ಪಹಲ್ಗಾಮ್ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ವೇಳೆ ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಕೂಡ ಭಾರತ ದಾಳಿ ಮಾಡಿದೆ. ಅದರಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಕೂಡ ಒಂದು. ಆದರೆ ಭಾರತ ಅಣ್ವಸ್ತ್ರ ಗೋದಾಮಿನ ಮೇಲೆ ದಾಳಿ ಮಾಡಿದೆ ಎಂದು ಪಾಕಿಸ್ತಾನ ಆರೋಪಿಸಿತ್ತು. ಇದೀಗ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಸಾಕ್ಷಿ ಸಮೇತ ಸ್ಪಷ್ಟನೆ ನೀಡಿದ್ದು ಪರಮಾಣು ಗೋದಾಮಿಗೆ ಯಾವುದೇ ರೀತಿಯಾಗಿ ಹಾನಿಯಾಗಿಲ್ಲ ಎಂದು ತಿಳಿಸಿದೆ. ಪಾಕಿಸ್ತಾನದಲ್ಲಿ ಅಣ್ವಸ್ತ್ರ ಗೋದಾಮಿಗೆ ಯಾವುದೇ ರೀತಿಯಾಗಿ ಹಾನಿ ಆಗಿಲ್ಲ ಪಾಕಿಸ್ತಾನದ ಕಿರಾನಾ ಬೆಟ್ಟಕ್ಕೆ ಯಾವುದೇ ಹಾನಿಯಾಗಿಲ್ಲ ಅನ್ನೋದಕ್ಕೆ ಇದೀಗ ಸಾಕ್ಷಿ ದೊರಕಿದೆ. ಕಿರಾನಾ ಬೆಟ್ಟದಲ್ಲಿ ಪರಮಾಣು ವಿಕಿರಣ ಸೋರಿಕೆ ಆಗಿಲ್ಲ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಮಾಹಿತಿ ನೀಡಿದೆ. ಪಾಕಿಸ್ತಾನದ ಸರ್ಗೋಧ ವಾಯು ನೆಲೆಯ ಮೇಲೆ ದಾಳಿಯಾಗಿದೆ. ಆದರೆ ಪಾಕಿಸ್ತಾನದಲ್ಲಿ ಇರುವ ಅಣ್ವಸ್ತ್ರ ಗೋದಾಮಿಗೆ ಯಾವುದೇ ರೀತಿಯಾಗಿ…
ನವದೆಹಲಿ : ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಅವರು FIR ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದು, ಈ ವೇಳೆ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಸಚಿವರಿಗೆ ಛೀಮಾರಿ ಹಾಕಿದರು. ಹೌದು ಸೋಫಿಯಾ ಖುರೇಶಿ ಅವರ ಕುರಿತು ವಿಜಯ ಶಾ ಕಾರ್ಯಕ್ರಮ ಒಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದರು, ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರಿಗೆ ತಕ್ಕ ಪಾಠ ಕಲಿಸಲು ನಾವು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಈ ಒಂದು ಹೇಳಿಕೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆ ಕೂಡ ಯಾಚಿಸಿದರು. ಆದರೆ ಇವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎಫ್ ಐ ಆರ್ ರದ್ದು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ವೇಳೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಜೆ…
ದಾವಣಗೆರೆ : ದಾವಣಗೆರೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನ ಹಳ್ಳಿಯಲ್ಲಿ ನಡೆದಿದೆ. ಮೃತ ಯುವತಿಯರನ್ನು ಪಲ್ಲವಿ ಹಾಗು ಸುಮಾ ಎಂದು ಗುರುತಿಸಲಾಗಿದೆ. ಒಂದೇ ಬೈಕ್ನಲ್ಲಿ ಪಲ್ಲವಿ, ಸುಮಾ ಹಾಗೂ ಸಚಿನ್ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಮೂವರು ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಪಲ್ಲವಿ ಮತ್ತು ಸುಮಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸಚಿನ್ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತುಮಕೂರು : ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಹಿಟ್ ಅಂಡ್ ರಂಡಿಗೆ ಬೈಕ್ ಸಮಾರಂಭ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ. ತಾವರೆಕೆರೆಯ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತಾವರೆಕೆರೆ ಎಂಬಲ್ಲಿ ಈ ಒಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದೆ. ತಾವರೆಕೆರೆ ಬಡಾವಣೆ ನಿವಾಸಿ ಸುರೇಶ್ (38) ಸಾವನಪ್ಪಿದ್ದಾನೆ. ಕೆಲಸಕ್ಕೆ ತೆರಳಿ ಮನೆಗೆ ವಾಪಸ್ ಆಗುವಾಗ ಈ ಒಂದು ದುರ್ಘಟನೆ ನಡೆದಿದೆ. ಅಪಘಾತದ ಕುರಿತು ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಕೇಂದ್ರ ಸರ್ಕಾರವು ಭಾರತದಲ್ಲಿರುವ ಪಾಕಿಸ್ತಾನ ಪ್ರಜೆಗಳಿಗೆ ದೇಶ ತೊರೆಯುವಂತೆ ಆದೇಶ ನೀಡಿದ್ದು, ಬಳಿಕ ಭಾರತದಲ್ಲಿನ ಪಾಕಿಸ್ತಾನ ಪ್ರಜೆಗಳು ದೇಶವನ್ನು ತೊರೆದಿದ್ದರು. ಇದೀಗ ಸರಕು ಸಾಗಾಟ ಮಾಡುವ ಹಡಗಿನಲ್ಲಿ ಪಾಕಿಸ್ತಾನದ ಪ್ರಜೆಯು ಒಬ್ಬ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಂದರಿಗೆ ಬಂದು ಇಳಿದಿದ್ದಾನೆ. ಹೌದು ಕಾರವಾರಕ್ಕೆ ಹಡಗಿನಲ್ಲಿ ಪಾಕಿಸ್ತಾನ ಪ್ರಜೆ ಆಗಮಿಸಿದ್ದಾನೆ. ಪಾಕಿಸ್ತಾನ ಪ್ರಜೆಯ ಕಾಲಿಡಲು ಅಧಿಕಾರಿಗಳು ಬಿಟ್ಟಿಲ್ಲ. ಭಾರತದ ನೆಲಕ್ಕೆ ಕಾಲಿಡಲು ಅಧಿಕಾರಿಗಳು ಪಾಕಿಸ್ತಾನ ಪ್ರಜೆಗೆ ಬಿಡುತ್ತಿಲ್ಲ. ಹಡಗಿನ ಕ್ಯಾಪ್ಟನ್ ಮೂಲಕವೇ ಪಾಕಿಸ್ತಾನದ ಪ್ರಜೆಯ ಮೊಬೈಲ್ ಸೀಜ್ ಮಾಡಿದ್ದಾರೆ. ಸರಕು ಸಾಗಣೆ ಹಡಗಿನಲ್ಲಿ ಪಾಕಿಸ್ತಾನದ ಪ್ರಜೆ ಕಾರವಾರ ಬಂದರಿಗೆ ಆಗಮಿಸಿದ್ದಾನೆ. ಮೇ 12 ರಂದು ಇರಾಕ್ ನಿಂದ ಹಾಗು ಕಾರವಾರಕ್ಕೆ ಬಂದಿದೆ. ಬಿಟುಮಿನ್ ತುಂಬಿಕೊಂಡು ಸರಕಿನ ಹಡಗು ಕಾರವಾರ ಬಂದರಿಗೆ ಆಗಮಿಸಿತ್ತು.












