Author: kannadanewsnow05

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಬಾಂಬ್‌ ಬೆದರಿಕೆಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂದು ದೆಹಲಿಯ ಬಜೆಟ್ ಮಂಡನೆಗೆ ನಿಗದಿಯಾಗಿದ್ದು, ಇದೇ ದಿನವೇ ದೆಹಲಿಯ ವಿಧಾನಸಭೆ ಹಾಗೂ ವಿಧಾನ ಸಭೆಯ ಮೆಟ್ರೋ ಸ್ಟೇಷನ್ ಳನ್ನು ಸ್ಪೋಟಿಸಲಾಗುವುದು ಎಂಬ ಸಂದೇಶವಿರುವ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ. 16 RDX ಐಇಡಿಗಳನ್ನು ಇಡಲಾಗಿದೆ. ಇಂದು ಮಧ್ಯಾಹ್ನ 1.40ಕ್ಕೆ ಸ್ಪೋಟಿಸೋದಾಗಿ ಉಲ್ಲೆಖಿಸಲಾಗಿದೆ. ಸ್ಥಳಕ್ಕೆ ಶ್ವಾನ ಡಾ ಸಿಬ್ಬಂದಿ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು, ಮಾರ್ಚ್-25: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮಾರ್ಚ್ 27(27-03-2025) ರ ಶುಕ್ರವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ನಗರದಲ್ಲಿರುವ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ರವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಥವಾ ಇತ್ತೀಚಿನ ಆಡಳಿತಾತ್ಮಕ ಬದಲಾವಣೆಯಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸುತ್ತದೆ. 2026ರ ಶ್ರೀರಾಮ ನವಮಿಯು ಮಾರ್ಚ್ 26, ಗುರುವಾರ ಅಥವಾ ಪಂಚಾಂಗದ ಅನ್ವಯ ಮಾರ್ಚ್ 27, ಶುಕ್ರವಾರದಂದು ಆಚರಿಸಲ್ಪಡುತ್ತಿದ್ದು, ಆ ದಿನದಂದು ಈ ಕೆಳಗಿನ ನಿಯಮಗಳು ಅನ್ವಯವಾಗುತ್ತವೆ: ಪ್ರಮುಖ ನಿರ್ಬಂಧಗಳು: ಕಸಾಯಿಖಾನೆಗಳ ಮುಚ್ಚಲ್ಪಟ್ಟಿರುತ್ತವೆ: ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾಂಸ ಮಾರಾಟ ನಿಷೇಧ: ಚಿಲ್ಲರೆ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಂಸದ ಮಳಿಗೆಗಳಲ್ಲಿ (ಕೋಳಿ, ಕುರಿ, ಮೀನು ಇತ್ಯಾದಿ) ಮಾಂಸ ಮಾರಾಟ ಮಾಡುವಂತಿಲ್ಲ. ದಂಡ ಮತ್ತು ಕ್ರಮ:…

Read More

ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಜೋರಾಗಿದೆ. ಹೀಗಾಗಿ ಗ್ಯಾಸ್ ಕಂಪನಿಗಳು ಬುಕ್ಕಿಂಗ್ ಹೊಸ ನಿಯಮ ಜಾರಿಗೊಳಿಸಿದೆ. ಸಿಂಗಲ್ ಗ್ಯಾಸ್ ಕನೆಕ್ಷನ್ ಹಾಗೂ ಡಬಲ್ ಕನೆಕ್ಷನ್‌ಗೆ ಬೇರೆ ಬೇರೆ ನಿಯಮಗಳನ್ನು ಜಾರಿತಂದಿದೆ. ಹೌದು ಇಂದಿನಿಂದ ಗ್ಯಾಸ್ ಬುಕ್ಕಿಂಗ್‌ಗೆ ಹೊಸ ನಿಯಮ ಜಾರಿಯಾಗಿದೆ. ಗಡುವು ಮುಗಿಯುವ ಮೊದಲೇ ಗ್ಯಾಸ್ ಬುಕ್ ಮಾಡಿದ್ರೆ ಅಕೌಂಟ್ ಬ್ಲಾಕ್ ಆಗಲಿದೆ ಎಂದು ಕಂಪನಿ ತಿಳಿಸಿದೆ. ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಪಾರದರ್ಶಕತೆ ತರಲು ಹೊಸ ನಿಯಮ ಜಾರಿಗೆ ಬಂದಿದೆ. ನಿಗದಿತ ದಿನಗಳ ಗಡುವು ಮುಗಿಯುವ ಮೊದಲೇ ಸಿಲಿಂಡರ್ ಬುಕ್ ಮಾಡಲು ಪ್ರಯತ್ನಿಸಿದರೆ, ಅಂತಹ ಗ್ರಾಹಕರ ಎಲ್‌ಪಿಜಿ ಐಡಿಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗುವುದು. ಸಬ್ಸಿಡಿ ದುರ್ಬಳಕೆ ತಡೆಯಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಿಂಗಲ್ ಕನೆಕ್ಷನ್ ನಿಯಮ: ಗ್ಯಾಸ್ ಡೆಲವರಿ ಆದ ದಿನದಿಂದ 25 ದಿನದ ನಂತರ ಗ್ಯಾಸ್ ಬುಕ್ ಮಾಡಬೇಕು. ಈ ಮೊದಲು 21 ದಿನವಿತ್ತು. ಇದೀಗ ಅದನ್ನು 25 ದಿನಕ್ಕೆ ಏರಿಸಿದ್ದಾರೆ. ಡಬಲ್…

Read More

ಮಂಡ್ಯ :- ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಮದ್ದೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಹಳೇ ಬಸ್ ನಿಲ್ದಾಣದಲ್ಲಿ ತಾಲೂಕಿನ ವಿವಿಧ ಹಿಂದೂ ಪರ ಸಂಘಟನೆಗಳ ವತಿಯಿಂದ ಸೋಮವಾರ ಸಂಜೆ ಬಲಿದಾನ್ ದಿವಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗ್ಡೆ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರುಗಳು ಬಹಿರಂಗ ಸಭೆಯಲ್ಲಿ ರೋಷವೇಷದ ಮಾತುಗಳನ್ನು ಹೇಳಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಸೆಕ್ಷನ್ 196 (1)(A)BNS ಆಕ್ಟ್ ಪ್ರಕಾರ ನಗರದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ

Read More

ಉತ್ತರಕನ್ನಡ : ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆಪ್ತ ಗೋಪಾಲಕೃಷ್ಣ ನಾಯ್ಕಗೆ ಚಾಕು ಇರಿದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಬಳಿ ನಡೆದಿದೆ. ಗೋಪಾಲಕೃಷ್ಣ ಕಾರಿನಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡಸಿದ್ದಾರೆ. ರಾಡ್ ನಿಂದ ಹೊಡೆದು ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ. ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ, ತಲೆ ಕುತ್ತಿಗೆಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಹೆಸರಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಅಥವಾ ಬೇರೆ ಕಡೆ ಸ್ಮಾರಕ ನಿರ್ಮಿಸಬೇಕು ಎಂಬ ಸಲಹೆಯನ್ನು ಕುಟುಂಬದವರು ನೀಡಿದ್ದು, ಆದನ್ನು ಸ್ವೀಕರಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ವಿಧಾನಸಭೆಗೆ ತಿಳಿಸಿದರು. ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರ ಗಮನ ಸಳೆಯುವ ಸೂಚನೆಗೆ ಉತ್ತರಿಸಿದ ಅವರು, ಕರ್ತವ್ಯಕ್ಕೆ ಸೇರಿ ಕೆಲವೇ ದಿನಗಳಲ್ಲಿ ಈ ದುರ್ಘಟನೆ ನಡೆದಿದೆ. ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಆ ವೇಳೆ 30 ಲಕ್ಷ ರೂಪಾಯಿ ಪರಿಹಾರ ಕೊಡಲು ಸರ್ಕಾರ ಮುಂದಾಗಿತ್ತು. ಆದರೆ ಕುಟುಂಬಸ್ಥರು ಪರಿಹಾರ ಬೇಡ, ಬನ್ನೇರುಘಟ್ಟ ಅಥವಾ ಬೇರೆ ಮೃಗಾಲಯದಲ್ಲಿ ಸ್ಮಾರಕ ಮಾಡಿ ಎಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಸ್ಮಾರಕ ರೂಪಿಸಲು ಸರ್ಕಾರ ಚಿಂತಿಸಲಿದೆ ಎಂದರು. ಯುವ ವೈದ್ಯೆ ಉತ್ಸಾಹಿ ಆಗಿದ್ದರು. ಮೃಗಾಲಯದಲ್ಲಿ ಈ ಹಿಂದೆ ಚಿರತೆಯೊಂದಕ್ಕೆ ಚಿಕಿತ್ಸೆ ನೀಡಿ ಸಂರಕ್ಷಣೆ…

Read More

ವಿಜಯನಗರ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಇದೀಗ ರಾಜ್ಯದಲ್ಲಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇರಾನ್ – ಇಸ್ರೇಲ್ ಯುದ್ಧದಿಂದ ಬೇರೆ ದೇಶಗಳಿಗೆ ಟೊಮ್ಯಾಟೋ ರಫ್ತಾಗುತ್ತಿಲ್ಲ. ಅಲ್ಲದೇ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಸರಿಯಾಗಿ ನಡೆಯದ ಹಿನ್ನೆಲೆ ಟೊಮ್ಯಾಟೋ ವ್ಯಾಪಾರ ಕುಸಿದಿದೆ. ಇದೇ ಕಾರಣಕ್ಕೆ ಟೊಮ್ಯಾಟೋ ಬೆಲೆ ಸಹ ಕುಸಿದಿದೆ. ವ್ಯಾಪಾರಿಗಳು 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋವನ್ನು ಮಾರಾಟ ಮಾಡುತ್ತಿದ್ದಾರೆ. ಏಕಾಏಕಿ ಟೊಮ್ಯಾಟೋ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಮಾಡಿ ಟೊಮ್ಯಾಟೋ ಬೆಳೆದು ಮಾರುಕಟ್ಟೆಗೆ ತರೋ ರೈತರ ಪರಿಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.

Read More

ಕೋಲಾರ : ಕೋಲಾರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಹಳೆಯ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಮುಳಬಾಗಿಲು ನಗರದಲ್ಲಿ ನಡೆದಿದೆ. ಈ ಅವಘಡದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಬಾಲಕಿಯನ್ನು ವಹಿನೂರ್ (15) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸುಹೇಲ್, ಕೌಸರ್, ಅಯಾಜ್ ಮತ್ತು ಅಬ್ಜರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪಾರ್ಕಿಂಗ್ ಕಿರಿಕಿರಿ ತಪ್ಪಿಸಲು ಸರ್ಕಾರವು ‘ಟೋಯಿಂಗ್’ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಮುಂದಾಗಿದೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ಈ ನಿಯಮ ಈಗ ಹೊಸ ರೂಪದಲ್ಲಿ ಬರಲಿದೆ. ಟೋಯಿಂಗ್ ಎಂದರೇನು? ಸರಳವಾಗಿ ಹೇಳಬೇಕೆಂದರೆ, ‘ನೋ ಪಾರ್ಕಿಂಗ್’ ವಲಯದಲ್ಲಿ ಅಥವಾ ರಸ್ತೆಯ ಮಧ್ಯೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ವಾಹನಗಳನ್ನು ಸಂಚಾರಿ ಪೊಲೀಸರು ಕ್ರೇನ್ ಅಥವಾ ವಿಶೇಷ ವಾಹನಗಳ ಮೂಲಕ ಎತ್ತಿ ಕೊಂಡೊಯ್ಯುವುದನ್ನು ಟೋಯಿಂಗ್ ಎನ್ನಲಾಗುತ್ತದೆ. ಹೀಗೆ ವಶಪಡಿಸಿಕೊಂಡ ವಾಹನಗಳನ್ನು ಪೊಲೀಸ್ ಸ್ಟೇಷನ್ ಅಥವಾ ನಿಗದಿಪಡಿಸಿದ ಮೈದಾನಕ್ಕೆ ಕೊಂಡೊಯ್ಯಲಾಗುತ್ತದೆ. ಟ್ರಾಫಿಕ್ ಜಾಮ್‌ಗೆ ಮುಕ್ತಿ ನೀಡಲು ಟೋಯಿಂಗ್ ಅನಿವಾರ್ಯ ಎಂಬುದು ಸರ್ಕಾರದ ವಾದ. ಆದರೆ, ಈ ಹಿಂದೆ ಟೋಯಿಂಗ್ ಸಿಬ್ಬಂದಿಯ ಅಸಭ್ಯ ವರ್ತನೆಯಿಂದಾಗಿ ಈ ಪ್ರಕ್ರಿಯೆಯನ್ನು ನಿಲ್ಲಿಸಲಾಗಿತ್ತು. ಈಗ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲವು ಬದಲಾವಣೆಗಳೊಂದಿಗೆ ಇದನ್ನು ತರಲಾಗುತ್ತಿದೆ. ಟೋಯಿಂಗ್ ನಿಯಮದ ಪ್ರಮುಖ ಅಂಶಗಳು: ನೋ ಪಾರ್ಕಿಂಗ್ ವಲಯ: ಸೈನ್ ಬೋರ್ಡ್ ಇರುವ ಕಡೆ ವಾಹನ ನಿಲ್ಲಿಸುವಂತಿಲ್ಲ.…

Read More

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್‌ ರೇಷನ್‌ ಕಾರ್ಡ್‌ ನೀಡಲು ನಿಗದಿಗೊಳಿಸಿರುವ ₹1.20 ಲಕ್ಷ ಕನಿಷ್ಠ ಆದಾಯ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಸಂಬಂಧ ಶೀಘ್ರದಲ್ಲೇ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಮಂಗಳವಾರ ಬಿಜೆಪಿ ಸದಸ್ಯ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಈ ವಿಚಾರ ಪ್ರಸ್ತಾಪಿಸಿದರು. ಆಹಾರ ಭದ್ರತಾ ಕಾಯ್ದೆಯಡಿ ನಗರ ಪ್ರದೇಶದಲ್ಲಿ ಶೇ.50ರಷ್ಟು ಜನಕ್ಕೆ ಬಿಪಿಎಲ್‌ ಕಾರ್ಡ್‌ ಕೊಡಬೇಕು. ಪ್ರಸ್ತುತ ಬೆಂಗಳೂರು ನಗರದಲ್ಲಿ ಶೇ.15 ರಷ್ಟೂ ಇಲ್ಲ. ಹೀಗಾಗಿ ಕಾಯ್ದೆ ಪ್ರಕಾರ ಬೆಂಗಳೂರು ನಗರಕ್ಕೆ ಶೇ.50ರಷ್ಟು ಬಿಪಿಎಲ್‌ ಕಾರ್ಡ್‌ ಕೊಡಬೇಕು. ಜೊತೆಗೆ ಕನಿಷ್ಠ ಆದಾಯ ಮಿತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 1.24 ಕೋಟಿ ಬಿಪಿಎಲ್‌ ರೇಷನ್ ಕಾರ್ಡ್‌ಗಳಿವೆ. 4.50 ಕೋಟಿ ಫಲಾನುಭವಿಗಳಿದ್ದಾರೆ. ರಾಜ್ಯದ ಜನಸಂಖ್ಯೆಯ ಶೇ.73ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಶೇ.52 ದಾಟಿಲ್ಲ. ಪ್ರಗತಿ ಪಥದಲ್ಲಿರುವ ಕರ್ನಾಟಕದಲ್ಲಿ ಫಲಾನುಭವಿಗಳ ಪ್ರಮಾಣ ಜನಸಂಖ್ಯೆಯ ಶೇ.73ರಷ್ಟಿದೆ ಎಂದು ಹೇಳಿದರು. ಆಡಳಿತ…

Read More