Author: kannadanewsnow05

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್ ಅನ್ನು ಮಾರ್ಚ್.29, 2025ರಂದು ಮಂಡಿಸಲಾಗುತ್ತಿದೆ. ಬಿಬಿಎಂಪಿಯ 2025-26ನೇ ಸಾಲಿನ ಬಜೆಟ್‌ ಮಾರ್ಚ್‌ 29, ಶನಿವಾರ ಬೆಳಗ್ಗೆ 11ಕ್ಕೆ ಮಂಡನೆಯಾಗಲಿದೆ. ಪಾಲಿಕೆಯ ಆಡಳಿತಗಾರ ಎಸ್.ಆರ್‌.ಉಮಾಶಂಕರ್‌ ಅಧ್ಯಕ್ಷತೆ ಹಾಗೂ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಉಪಸ್ಥಿತಿಯಲ್ಲಿ ಬಜೆಟ್‌ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಡಾ.ಕೆ ಹರೀಶ್‌ಕುಮಾರ್‌ ಆಯವ್ಯಯ ಪ್ರಸ್ತುತಪಡಿಸಲಿದ್ದಾರೆ. ಬಜೆಟ್‌ ಪ್ರಸ್ತುತಿಯು ಯೂಟ್ಯೂಬ್‌ನಲ್ಲಿ ಲೈವ್‌ ಬರಲಿದ್ದು, https://youtube.com/live/eydr2vyROL8… ಲಿಂಕ್‌ ಮೂಲಕ ವೀಕ್ಷಿಸಬಹುದಾಗಿದೆ ಎಂದು ಪಾಲಿಕೆ ತಿಳಿಸಿದೆ. https://twitter.com/KarnatakaVarthe/status/1905186730459988238?t=joWqXzV08NCA39f4xAN9_w&s=19

Read More

ಬೆಂಗಳೂರು : ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಿಸಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಿತು. ಇದೀಗ ಹಾಲಿನ ದರ ಹೆಚ್ಚಾಳವಾದ ಬೆನ್ನಲ್ಲೆ, ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ಕಾಫಿ ಮತ್ತು ಟೀ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸಲು ನಿರ್ಧರಿಸಿದೆ. ಹೌದು ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆ, ಕಾಫಿ ಮತ್ತು ಟೀಯ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ. ಈ ಬಗ್ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದು, ಒಂದು ಕಪ್ ಕಾಫಿ ಅಥವಾ ಟೀಯ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ. ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಆ ದುಡ್ಡನ್ನು ರೈತರಿಗೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದೆ. ಆದರೆ ಜನ ಸಾಮಾನ್ಯರಿಗೆ ಬೆಲೆ ಏರಿಕೆ ಹೊಡೆತ ಬಿದ್ದಿದ್ದು, ಅಲ್ಲದೇ ಇದೀಗ…

Read More

ಬೆಂಗಳೂರು : ರಾಜ್ಯದ ಶಾಲೆಯ ಅಡುಗೆ ಸಿಬ್ಬಂದಿ ಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಮಧ್ಯಾಹ್ನ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ಪಿಎಂಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-2024 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು…

Read More

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತಂತೆ ಆದೇಶ ಹೊರಡಿಸಿದೆ. ಪ್ರತಿ ವರ್ಷದಂತೆ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಆಡಳಿತ ಮಂಡಳಿಯಿಂದ ನಡೆಯುತ್ತಿರುವಂತಹ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಆಡಳಿತ ಮಂಡಳಿಯ ಶಾಲೆಯಿಂದ ಮತ್ತೊಂದು ಆಡಳಿತ ಮಂಡಳಿಯ ಶಾಲೆಯಲ್ಲಿನ ಖಾಲಿ ಹುದ್ದೆಗಳಿಗೆ ಅನುದಾನಿತ ಶಿಕ್ಷಕರನ್ನು ಕೋರಿಕೆ/ಪರಸ್ಪರ ವರ್ಗಾಯಿಸಲು ಕೋರಿ ಆಡಳಿತ ಮಂಡಳಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮಗಳು-1999. ಕಲಂ-12ರಲ್ಲಿ ಅವಕಾಶ ಕಲ್ಪಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಕಾಲಾ ಆಡಳಿತ ಮಂಡಳಿಗಳು ತಮ್ಮ ಅಧೀನದಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿನ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು ಹಾಗೂ ಪ್ರಕ್ರಿಯೆ ಕೈಗೊಳ್ಳಲು ಕೆಳಕಂಡಂತೆ…

Read More

ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಇಂದು ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್‌ಗೌಡ (11) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಬಾಲಕ ಕಾರ್ಯನಿಮಿತ್ತ ತನ್ನ ತಾತ ಕುಳ್ಳೇಗೌಡನ ಜೊತೆ ಮಂಡ್ಯ ನಗರಕ್ಕೆ ಬೈಕ್ ಮೇಲೆ ಬಂದಿದ್ದ. ಕೆಲಸ ಮುಗಿಸಿಕೊಂಡು ವಾಪಾಸ್ ತೆರಳುವಾಗ ಅಕ್ಕಿ ತುಂಬಿದ ಲಾರಿ ನಗರಸಭೆ ಎದುರು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿ ಲಾರಿಯನ್ನು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಕುಳ್ಳೇಗೌಡ ಅವರನ್ನು ಮಿಮ್ಸ್ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More

ಬಳ್ಳಾರಿ : ಮೂವರು ಬಾಲಕರು ಕಾಲುವೆಯಲ್ಲಿ ಸ್ನಾನಕ್ಕೆಂದುತೆರಳಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಓರ್ವ ಬಾಲಕ ಕೊಚ್ಚಿ ಹೋಗಿದ್ದು ಇಬ್ಬರು ಬಾಲಕರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಶ್ರೀನಿವಾಸ ಕ್ಯಾಂಪ್ ನಲ್ಲಿ ನಡೆದಿದೆ. ಹೌದು ಕಾಲುವೆಯಲ್ಲಿ ಸ್ನಾನಕ್ಕೆ ಎಂದು ತೆರಳಿದ್ದ ಬಾಲಕರಾದ ವಿಕ್ರಂ, ಶಂಭುಲಿಂಗ, ಮತ್ತು ದೀಪು ಕಾಲುವೆಗೆ ಇಳಿದಿದ್ದಾರೆ. ಮೂವರು ಬಾಲಕರು ಕಾಲು ಜಾರಿ ಕಾಲುವೆಗೆ ಬಿದ್ದಿದ್ದಾರೆ. ನೀರಿನ ರಭಸಕ್ಕೆ ಕಾಲುವೆಯಲ್ಲಿ 14 ವರ್ಷದ ವಿಕ್ರಂ ಕೊಚ್ಚಿ ಹೋಗಿದ್ದಾನೆ. ಶಂಭುಲಿಂಗ ಮತ್ತು ದೀಪು ಇಬ್ಬರನ್ನು ಸ್ಥಳೀಯರು ಕೂಡಲೇ ರಕ್ಷಣೆ ಮಾಡಿದ್ದಾರೆ.ಇನ್ನು ವಿಕ್ರಮಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನವರು ಇದೀಗ ಸಿನಿಮಾದಲ್ಲಿ ಬಿಜಿಯಾಗಿದ್ದಾರೆ. ಆದರೆ ಅವರ ಅಭಿಮಾನಿಗಳ ಪುಂಡಾಟ ಮಾತ್ರ ಮುಂದುವರೆದಿದ್ದು, ಇದೀಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ನಲ್ಲಿ ವಾಮನ ಚಲನಚಿತ್ರದ ಟ್ರೈಲರ್ ಲಾಂಚಿಂಗ್ ವೇಳೆ ಗಲಾಟೆ ನಡೆಸಿ ಥಿಯೇಟರ್ ನ ಬಾಗಿಲು, ಕಿಟಕಿ, ಗಾಜು ಒಡೆದು ಗಲಾಟೆ ಮಾಡಿದ್ದಾರೆ. ಹೌದು ದರ್ಶನ್ ಅಭಿಮಾನಿಗಳಿಂದ ಹುಚ್ಚಾಟ ನಡೆದಿದ್ದು, ವಾಮನ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್ ನಲ್ಲಿ ದರ್ಶನ್ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ. ಇಂದು ಪ್ರಸನ್ನ ಚಿತ್ರಮಂದಿರದಲ್ಲಿ ಟ್ರೈಲರ್ ಲಾಂಚ್ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಚಿತ್ರಮಂದಿರದ ಬಾಗಿಲು, ಕಿಟಕಿ ಕುರ್ಚಿಗಳನ್ನು ಫ್ಯಾನ್ಸ್ ಹೊಡೆದು ಹಾಕಿದ್ದಾರೆ ಟ್ರೈಲರ್ ಲಾಂಚ್ ಗೆ ಬಂದಿದ್ದ ದರ್ಶನ್ ಅಭಿಮಾನಿಗಳು ಪುಂಡಾಟ ನಡೆಸಿದ್ದಾರೆ. ಪ್ರಸನ್ನ ಥಿಯೇಟರ್ ನ ಸೆಕೆಂಡ್ ಕ್ಲಾಸ್ನಲ್ಲಿರುವ 80 ಸೀಟ್ ಹಾಗೂ ಬಾಲ್ಕನಿಯಲ್ಲಿದ್ದ 10 ಸೀಟ್ಗಳನ್ನು ದರ್ಶನ್ ಅಭಿಮಾನಿಗಳು ಮುರಿದಿದ್ದಾರೆ. ದರ್ಶನ್ ಫ್ಯಾನ್ಸ್ ನಡೆಗೆ ಪ್ರಸನ್ನ ಥಿಯೇಟರ್ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಸನ್ನ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ಒಂದು ಘೋರವಾದ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದಿದೆ.ಕೊಲೆಯಾದ ಪತ್ನಿಯನ್ನು ಗೌರಿ ಎಂದು ತಿಳಿದುಬಂದಿದ್ದು, ಇನ್ನು ಪತ್ನಿಯನ್ನು ಕೊಂದ ಪಾಪಿ ಪತಿಯನ್ನು ರಾಕೇಶ್ ಎಂದು ತಿಳಿದುಬಂದಿದೆ. ಮಹಾರಾಷ್ಟ್ರ ಮೂಲದ ಪತಿ ಈ ಒಂದು ಕೃತ್ಯ ಎಸಗೀರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಹುಳಿಮಾವು ಎಂಬಲ್ಲಿ ಒಂದು ಘಟನೆ ನಡೆದಿದ್ದು, ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪತಿ ಈ ಕುರಿತು ಕರೆ ಮಾಡಿ ಹೇಳಿದ್ದಾನೇ ಎನ್ನಲಾಗಿದೆ. ಕೊಲೆಯಾದ ಮಹಿಳೆ ಪೋಷಕರಿಂದ ತಕ್ಷಣ ಸ್ಥಳಿಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಮಹಾರಾಷ್ಟ್ರ ಪೊಲೀಸ್ರ ಮಾಹಿತಿಯನ್ನು ಆಧರಿಸಿ ಹುಳಿಮಾವು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದೊಡ್ಡಕನ್ನಹಳ್ಳಿಯ ಮನೆಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಉತ್ತರಕನ್ನಡ : ಯಾವುದೇ ಕೆಲಸ ಮಾಡುವಾಗಲು ಅತ್ಯಂತ ಜಾಗರುಕರಾಗಿರಬೇಕು. ಇಲ್ಲವಾದರೆ ನಮ್ಮ ಪ್ರಾಣಕ್ಕೆ ಸಂಕಷ್ಟ ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತೆ. ಇದೀಗ ಅಡಿಕೆ ಸುಲಿಯುವ ಯಂತ್ರಕ್ಕೆ ಸೀರೆಯ ಸೆರಗು ಸಿಲುಕಿ, ಯಂತ್ರದೊಳಗೆ ಹೋದ ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಹೆಗಡೆ ದಾರುಣವಾಗಿ ಸಾವಿಗೀಡಾಗಿದ್ದಾರೆ. ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೊಸಬಾಳೆ ನಿವಾಸಿ ಶೋಭಾ ಹೆಗಡೆ ಅವರು ಕಳೆದ ಬುಧವಾರ ಮೃತರಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿ.ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಧರ್ಮ ಪತ್ನಿಯಾಗಿದ್ದ ಶೋಭಾ ಹೆಗಡೆ ಅವರು ಕೃಷಿ ಕಾರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸ ನಡೆಯುತ್ತಿತ್ತು. ಶೋಭಾ ಹೆಗಡೆ ಅವರು ಕೆಲಸಗಾರರು ಕೆಲಸದ ಮೇಲ್ವಿಚಾರಣೆ ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಸೀರೆಯ ಸೆರಗು ಸಿಲುಕಿದ್ದು, ಯಂತ್ರ ತನ್ನತ್ತ ಸೆಳೆದು ಬಿಸಾಕಿದ ಪರಿಣಾಮ ಶೋಭಾ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಕೆಲಸಗಾರರು ಅಲ್ಲಿಯೇ…

Read More

ಬೆಂಗಳೂರು : ಕಾಂಕ್ರೀಟ್ ಮಿಕ್ಸರ್ ಲಾರಿ, 2 ಟ್ಯಾಕ್ಸಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಶೆಟ್ಟಿಹಳ್ಳಿ ಬಳಿ ಸರಣಿ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ ಹೊಂದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸರಣಿ ಅಪಘಾತ ನಡೆದಿತ್ತು. ಕಾಂಕ್ರೀಟ್ ಮಿಕ್ಸರ್ ಲಾರಿ 2 ಟ್ಯಾಕ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ಸ್ಥಳಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಲಿದ್ದಾರೆ.

Read More