Author: kannadanewsnow05

ದಕ್ಷಿಣಕನ್ನಡ : ಕಳೆದ ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಪಕ್ಷಿಕೆರೆ ಗ್ರಾಮದಲ್ಲಿ ಹೋಟೆಲ್ ಉದ್ಯಮಿ ಕಾರ್ತಿಕ್ ಭಟ್ ಅವರು ತನ್ನ ಪತ್ನಿ ಹಾಗೂ ಮಗುವನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಆ ಕುರಿತು ತನಿಖೆ ನಡೆಸುವ ವೇಳೆ ಅವರಿಗೆ ಡೆತ್ ನೋಟ್ ಸಿಕ್ಕಿದೆ. ಡೆತ್ ನೋಟ್ ನ ಪ್ರಕಾರ ಪೊಲೀಸರು ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ ಹಾಗೂ ಸಹೋದರಿ ಕಣ್ಮಣಿಯನ್ನು ಬಂಧಿಸಿದ್ದಾರೆ. ಪೊಲೀಸರಿಗೆ ದೊರೆತಿರುವ ಡೆತ್ ನೋಟ್ ನಲ್ಲಿ ಕಾರ್ತಿಕ್ ಭಟ್ ಅವರು, ಕೌಟುಂಬಿಕ ಕಲಹದ ಬಗ್ಗೆ ಉಲ್ಲೇಖಿಸಿದ್ದಾರೆ. ತನ್ನ ತಂದೆ ತಾಯಿ ಹಾಗೂ ಸಹೋದರಿ ವಿರುದ್ಧ ಕಾರ್ತಿಕ್ ಭಟ್ ಆರೋಪಿಸಿದ್ದಾರೆ. ಇವರೇ ನಮ್ಮ ಸಂಸಾರ ಹಾಳು ಮಾಡಿದರು. ಇಂತಹ ಅಪ್ಪ-ಅಮ್ಮ ಯಾರಿಗೂ ಸಿಗಬಾರದು. ಅತ್ತೆ ಮಾವ ನಮ್ಮ ಶವ ಸಂಸ್ಕಾರ ಮಾಡಬೇಕೆಂದು ಕಾರ್ತಿಕ್ ಬರೆದಿದ್ದಾರೆ. ಇದೀಗ ಕಾರ್ತಿಕ್ ತಂದೆ ತಾಯಿ ಸೋದರಿ ವಿರುದ್ಧ ಪ್ರಿಯಾಂಕ ಪೋಷಕರು ದೂರು…

Read More

ಬೆಂಗಳೂರು : ರಾಜ್ಯದ ಮೂರು ಪ್ರಮುಖ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಹೀಗಾಗಿ ಉಭಯ ಪಕ್ಷಗಳ ನಾಯಕರೆಲ್ಲರೂ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಇದೀಗ ಅಲ್ಲಿಂದ ತೆರಳಿದ್ದಾರೆ. ಹಾಗಾಗಿ ನಾಳೆಯಿಂದ ಎರಡು ದಿನಗಳ ಕಾಲ ಮೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಭರ್ಜರಿ ಪ್ರಚಾರ ಮಾಡಿದರು. ಈ ವೇಳೆ ಪರಸ್ಪರ ನಾಯಕರ ವಾಕ್ಸಮರ ತೀವ್ರ ತಾರಕಕ್ಕೆ ಏರಿತ್ತು. ಹಾಗಾಗಿ ಇಂದು ಅಂತಿಮವಾಗಿ ಸಂಜಯ್ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಸ್ಪರ್ಧಿಸುತ್ತಿದ್ದಾರೆ. ಅದೇ ರೀತಿಯಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಹಾಗೂ ಕಾಂಗ್ರೆಸ್…

Read More

ರಾಮನಗರ : ಈಗಾಗಲೇ ವಕ್ಫ್ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಅವರು ಸಂಡೂರು ಉಪಚುನಾವಣೆಯ ಚುನಾವಣಾ ಪ್ರಚಾರದಿಂದ ಸಹ ದೂರ ಉಳಿದಿದ್ದಾರೆ. ಇದರ ಮಧ್ಯ ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಹಣ ಹಂಚಿಕೆ ಆರೋಪದ ಮೇಲೆ ಅವರ ವಿರುದ್ಧ ಚುನಾವಣಾ ಅಧಿಕಾರಿಗಳು ಎನ್ ಸಿ ಆರ್ ದಾಖಲಿಸಿಕೊಂಡಿದ್ದಾರೆ. ಹೌದು ನವೆಂಬರ್ 13ರಂದು ಅಂದರೆ ನಾಡಿದ್ದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಈ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹಣ ಹಂಚಿದ ಆರೋಪ ಕೇಳಿಬಂದಿದ್ದು, ಹಾಗಾಗಿ ಚುನಾವಣಾ ಅಧಿಕಾರಿಗಳು ಅವರ ವಿರುದ್ಧ ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚನ್ನಪಟ್ಟಣ ಮತದಾರರಿಗೆ ಹಣ ಹಂಚಿದ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.ಕೆಲವು ದಿನಗಳ ಹಿಂದೆ ಸಚಿವ ಜಮೀರ್ ಅಹ್ಮದ್ ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಜಮೀರ್ ಅಹ್ಮದ್ ಪ್ರಚಾರ ಮಾಡಿದ್ದರು.…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಸಿತ್ತು. ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು .ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ನಾಳೆ ತೀರ್ಪು ಪ್ರಕಟಿಸಲಿದೆ. ‘CBI’ ಎಂಟ್ರಿ ಆದ್ರೆ ಸರ್ಕಾರಕ್ಕೆ ಮತ್ತೆ ಸಂಕಷ್ಟ? ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಬಿಐ ಎಂಟ್ರಿಯಾದ್ರೆ ಈ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಲಿದೆ. ಪ್ರಕರಣದ ತನಿಖೆ ಸಿಬಿಐಗೆ ಹೋದ್ರೆ, ಆಗ ತನಿಖೆ ಆರ್ಥಿಕ ಇಲಾಖೆ…

Read More

ಬೆಂಗಳೂರು : ತನ್ನ ಅಜ್ಜಿ ಪಿತ್ರಾರ್ಜಿತ ಆಸ್ತಿ ಕೊಟ್ಟಿಲ್ಲವೆಂದು ಮನನೊಂದ ಯುವಕನೊಬ್ಬ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲಲ್ ಶಿವನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೃಥ್ವಿ (20) ಎಂದು ತಿಳಿದುಬಂದಿದೆ. ಯುವಕ ಡಿಗ್ರಿ ಓದುತ್ತಿದ್ದು ಅದರ ಜೊತೆಗೆ ಚಾಲಕನಾಗಿಯೂ ಕೂಡ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ತಾಯಿ ಪದ್ಮ ಕೋಣೆಗೆ ಹೋಗಿ ನೋಡಿದಾಗ ಪೃಥ್ವಿ ಫ್ಯಾನಿಗೆ ನೇಣು ಹಾಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಅಜ್ಜಿ ಕುಳಯಮ್ಮ ಮತ್ತಿಕೆರೆಯ ಮನೆಯೊಂದನ್ನ ತನ್ನ ಮಗನ ಮಕ್ಕಳಿಗೆ ಆಸ್ತಿ ಕೊಡದೆ ಹೆಣ್ಣು ಮಗಳಿಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ವಿಷಯವಾಗಿ ಸಂಬಂಧಿಕರನ್ನ ಸೇರಿಸಿ ಮಾತುಕತೆ ಮಾಡಲಾಗಿದ್ದು, ಆದರೆ ಮಾತುಕತೆ ವಿಫಲವಾಗಿದೆ. ಈ ಘಟನೆಯಿಂದ ಮನನೊಂದ ಪೃಥ್ವಿ, ಮನೆಯ ಕೋಣೆಯಲ್ಲಿ ವೇಲ್​ ಬಳಸಿ ಪ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಪ್ಪಳ : ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಒಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿರುವ ಘಟನೆ ಕೊಪ್ಪಳದ ತೋಟಗಾರಿಕಾ ಇಲಾಖೆಯ ಕಛೇರಿಯಲ್ಲಿ ನಡೆದಿದೆ. ಹೌದು 1 ಲಕ್ಷ ಲಂಚ ಸ್ವೀಕರಿಸುವಾಗ ಹಿರಿಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ತೋಟಗಾರಿಕೆ ಕಚೇರಿಯಲ್ಲಿ ಅಧಿಕಾರಿ ಬಲೆಗೆ ಬಿದ್ದಿದ್ದಾರೆ.ಹಿರಿಯ ಸಹಾಯಕ ನಿರ್ದೇಶಕ ಎಚ್ ಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದೀಗ ಎಚ್ ಮಹೇಶ್ ಅವರನ್ನು ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ವೇಗವಾಗಿ ಬಂದಂತಹ ಬೈಕ್ ಒಂದು ಆಟವಾಡುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾದೇವಪುರದಲ್ಲಿ ನಡೆದಿದೆ. ಮಹದೇವಪುರದ ನ್ಯೂ ಟೆಂಪಲ್ ರಸ್ತೆಯ ಬದಿಯಲ್ಲಿ ಆಟವಾಡುತ್ತಿದ್ದ ಪರಶುರಾಮ್ (8) ಎಂಬ ಬಾಲಕನಿಗೆ ಬೈಕ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.ಈ ಕುರಿತು ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಚನ್ನಪಟ್ಟಣ : ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ದೊಡ್ಡ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ.ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರವಾಗಿ ಮತಯಾಚನೆ ಮಾಡಿದ ಅವರು, ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು,ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ ಮೇಲೆ, ಇಲ್ಲಿನ ರೈತ ಸಮುದಾಯ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ, ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ಧಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು.ಈಗ ಯೋಗೇಶ್ವರ್ ಅವರಿಗೆ…

Read More

ಹಾವೇರಿ : ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಇದೆ ಎಂದು ಹಾವೇರಿಯ ಎಸ್ಪಿ ಅಂಶು ಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಯಾಸಿರ್ ಪಠಾಣ್ ಎಸ್ ಪಿ ಅವರಿಗೆ ಕನ್ನಡ ಅಷ್ಟಾಗಿ ಬರಲ್ಲ. ನಿಮಗೆ ಗೊಂದಲ ಆಗಿದೆ. ಅಲ್ಲದೆ ಭರತ್ ಬೊಮ್ಮಾಯಿ ಮೇಲೆ ಬಿಟ್ ಕಾಯಿನ್ ಆರೋಪವಿದೆ ಎಂದು ತಿರುಗೇಟು ನೀಡಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಯಡಗುಂದ ಗ್ರಾಮದಲ್ಲಿ ಅಭ್ಯರ್ಥಿ ಯಾಸಿರ್ ಪಠಾಣ್ ಪ್ರತಿಕ್ರಿಯೆ ನೀಡಿದ್ದು ಹಾವೇರಿ ಎಸ್ ಪಿ ಅವರಿಗೆ ಕನ್ನಡ ಅಷ್ಟಾಗಿ ಬರಲ್ಲ. ನಿಮಗೆ ಗೊಂದಲ ಆಗಿದೆ. ಮಾಜಿ ಮುಖ್ಯಮಂತ್ರಿ ನನ್ನ ಮೇಲೆ ಹಲವು ಆರೋಪ ಮಾಡಿದ್ದಾರೆ. ಅಕ್ರಮ ಮಾಡಿದ್ದೇನೆ ಎಂದು ಹೇಳುತ್ತಾರೆ ಆದರೆ ಅದನ್ನು ತಡೆಯುವ ಶಕ್ತಿ ಇಲ್ವಾ ಅವರಿಗೆ? ಸೋಲಿನ ಭಯದಿಂದ ಈ ರೀತಿಯಾಗಿ ಮಾಡುತ್ತಿದ್ದಾರೆ. ಹಿಂದೆ ಅಜ್ಜಂಪಿರ್ ಖಾದ್ರಿ ಆತಂಕವಾದಿ ಎಂದಿದ್ದರು. ಟೆರರಿಸ್ಟ್ ಹೌದೋ…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಇದೀಗ ಮತ್ತೆ ನಕ್ಸಲರ ಚಟುವಟಿಕೆ ಆರಂಭವಾಗಿದ್ದು, ಮಲೆನಾಡಿನ ಹಲವು ಗ್ರಾಮಗಳಿಗೆ ನಕ್ಷತ್ರರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸ್ ವರಿಷ್ಠ ಅಧಿಕಾರಿ ವಿಕ್ರಂ ಆಂಟಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹೌದು ಮಲೆನಾಡಿನ ಹಲವು ನಿವಾಸಿಗಳ ಮನೆಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚಿಕ್ಕಮಂಗಳೂರು ಪೊಲೀಸ್ ವರಿಷ್ಠ ಅಧಿಕಾರಿ ವಿಕ್ರಂ ಅಮ್ಟೆ ಮತ್ತು ನಕ್ಸಲ್ ಅನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಜಯಪುರ ಠಾಣಾ ವ್ಯಾಪ್ತಿಯ ಮನೆಗಳಿಗೆ ನಕ್ಸಲರು ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಕೊಪ್ಪ ತಾಲೂಕಿನ ಯಡಗುಂದಿ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಗ್ರಾಮದ ಒಂಟಿ ಮನೆಗಳಿಗೆ ನಕ್ಸಲರು ಭೇಟಿ ನೀಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಯಡಗುಂದಿ ಗ್ರಾಮದಲ್ಲಿ ಕಾರ್ಯಾಚರಣೆ ಇದೀಗ ತೀವ್ರಗೊಂಡಿದೆ. ಗ್ರಾಮಸ್ಥರಿಂದ ANF ಹಾಗೂ ಪೊಲೀಸರು ಸಂಪೂರ್ಣವಾದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಅರಣ್ಯ ಒತ್ತುವರಿ ಕಸ್ತೂರಿರಂಗನ್ ವರದಿ ಸಂಬಂಧ ಯಡಗುಂದಿ ಗ್ರಾಮಸ್ಥರ ಜೊತೆ…

Read More