Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಇತ್ತೀಚೆಗೆ ಈ ಒಂದು ಸಾಮಾಜಿಕ ಜಾಲತಾಣದಲ್ಲಿ ಯುವಜನತೆ ಮುಳುಗಿದ್ದು, ಸ್ನೇಹ ಪ್ರೀತಿ ಪ್ರೇಮ ಅಂತ ತಮ್ಮ ಮುಂದಿನ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಯುವತಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನೊಬ್ಬ ಇನ್ಸ್ಟಾಗ್ರಾಮ್ ನಲ್ಲಿ ಬೇರೆ ಹುಡುಗಿಯ ಫೋಟೋ ಲೈಕ್ ಮಾಡಿದ್ದಕ್ಕೆ, ಸಹಿಸದ ಆತನ ಪ್ರೇಯಸಿ ಆತನಿಗೆ ತರಾಟೆ ತೆಗೆದುಕೊಂಡಿದ್ದಾಳೆ. ಇದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂದ ಯುವಕನನ್ನು ಜಿಲ್ಲೆಯ ಬಂಟ್ವಾಳ ತಾಲೂಕಿನ ಪೂಂಜಾಲಕಟ್ಟೆ ಕುಕ್ಕಿಪ್ಪಾಡಿಯ ಚೇತನ್ (25) ಎಂದು ತಿಳಿದುಬಂದಿದೆ.ಮೃತ ಚೇತನ್ಗೆ ಕುಂದಾಪುರದ ಚೈತನ್ಯ ಎಂಬ ಯುವತಿಯು ಇನ್ಸ್ಟ್ರಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು, ಸ್ನೇಹ ಪ್ರೀತಿಗೆ ತಿರುಗಿತ್ತು. ಕಳೆದ 8 ತಿಂಗಳ ಹಿಂದೆ ಇಬ್ಬರ ನಿಶ್ಚಿತಾರ್ಥವಾಗಿತ್ತು. ಜನವರಿ 21 ರಂದು ಚೇತನ್ ತನ್ನ ಪರಿಚಯದ ಬೇರೊಂದು ಯುವತಿಯ ಫೋಟೋಗೆ ಇನ್ಸ್ಟಾಗ್ರಾಮ್ನಲ್ಲಿ ಲೈಕ್ ಕೊಟ್ಟಿದ್ದನು. ಇದನ್ನು ಪ್ರಶ್ನಿಸಲು ಚೈತನ್ಯ ಭಾವಿ ಪತಿ ಚೇತನ್ ಮನೆಗೆ ಬಂದಿದ್ದರು. ಈ…
ಬೆಂಗಳೂರು : ಇದೇ ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ನಮ್ಮ ಮೆಟ್ರೋ ರೈಲುಗಳು ಹೆಚ್ಚುವರಿಯಾಗಿ ಸಂಚರಿಸಲಿವೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸಲಿವೆ ಎಂದು ಈ ಕುರಿತು BMRCL ಮಾಹಿತಿ ನೀಡಿದೆ. ಭಾನುವಾರ ಬೆಳಿಗ್ಗೆ 7ರ ಬದಲು 6 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ. ಲಾಲ್ ಬಾಗ್ ನಲ್ಲಿ ಫ್ಲವರ್ ಶೋ, ಹಾಗೂ ಮಾದವಾರದ BIEC ಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಗಳಿಗೆ ತೆರಳುವವರಿಗೆ ಅನುಕೂಲವಾಗಲು ಹೆಚ್ಚುವರಿ ರೈಲು ಸಂಚರೀಸಲಿವೆ. ನಮ್ಮ ಮೆಟ್ರೋದ ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚಾರ ನಡೆಸಲಿವೆ. ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್ ಬದಲು ಪೇಪರ್ ಟಿಕೆಟ್ ವಿತರಿಸಲಾಗುತ್ತದೆ.ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ಪೇಪರ್ ಟಿಕೆಟ್ ವಿತರಿಸಲಾಗುತ್ತದೆ. ಫ್ಲ್ಯಾಟ್ ರೂ.30 ಯಂತೆ ಮೆಟ್ರೋದಲ್ಲಿ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತದೆ.ಲಾಲ್ ಬಾಗ್ ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.ಈ ವೇಳೆ ಲಾಲ್ಬಾಗ್ನಲ್ಲಿ ಟೋಕನ್…
ಯಾದಗಿರಿ : ಒಂದು ಕಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ತಮ್ಮ ಮನೆ ಬಿಟ್ಟು ಊರನ್ನೇ ತೊರೆಯುತ್ತಿದ್ದಾರೆ. ಇನ್ನೊಂದು ಕಡೆ ಮೀಟರ್ ಬಡ್ಡಿ ದಂಧೆಗೆ ಹಲವರು ಸಾಲಗಾರರ ಕಿರುಕುಳಕ್ಕೆ ಒಳಗಾಗಿದ್ದು ಇನ್ನೂ ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದೀಗ ಯಾದಗಿರಿಯಲ್ಲಿ ಕೊಟ್ಟ ಸಾಲ ಮರುಪಾವತಿಸುವುದಕ್ಕೆ ತಡವಾಗಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ಚಿಕಿತ್ಸೆ ಫಲಿಸಿದೆ ಯುವಕ ಸಾವನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ ಹೌದು ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ನಡೆದಿದೆ. ಮೃತ ಯುವಕನನ್ನು ಖಾಸೀಂ ಅಲಿಯಾಸ್ ಬಿಲ್ಲಿ ಎಂದು ತಿಳಿದುಬಂದಿದೆ. ಈತ ಯಾಸೀನ್ ಎನ್ನುವವನ ಬಳಿ 35 ಸಾವಿರ ರೂ ಸಾಲ ಪಡೆದಿದ್ದನಂತೆ, ಮರು ಪಾವತಿಸುವುದು ತಡವಾಗಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನಂತೆ. ಹಲ್ಲೆಗೆ ಒಳಗಾದ ಖಾಸಿಂ ಅನ್ನು ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಸಲ್ಲಿಸಿದೆ ಖಾಸಿಂ ಇದೀಗ ಸಾವನಪ್ಪಿದ್ದಾನೆ. ಯಾಸಿನ್ ಬಳಿ 35 ಸಾವಿರ…
BIG NEWS : ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ
ಮಂಡ್ಯ : ಈಗಾಗಲೇ ಬಿಜೆಪಿಯಲ್ಲಿ ಬಿವೈ ವಿಜಯೇಂದ್ರ ಬಣ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣ ಒಂದೊಂದು ಕಡೆಯಾದರೆ. ಇತ್ತ ಶಾಸಕ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದೆ. ಅಲ್ಲದೆ ಶ್ರೀರಾಮುಲು ಅವರು ಬಿಜೆಪಿ ಪಕ್ಷ ಬಿಡುತ್ತೇನೆ ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ವಿಷಯ ಕೂಡ ಕೇಳಿ ಬರುತ್ತಿದೆ.ಈ ವಿಚಾರವಾಗಿ ಸಚಿವ ಚೆಲುವರಾಯ ಸ್ವಾಮಿ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ತಿಳಿಸಿದರು. ಈ ವಿಚಾರವಾಗಿ ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ರಾಮುಲು ಎಂ.ಪಿ ಚುನಾವಣೆ ವೇಳೆ ಪಕ್ಷಕ್ಕೆ ಬರುತ್ತಾರೆ ಎಂಬ ಚರ್ಚೆ ಆಗಿತ್ತು. ಆಗ ಶ್ರೀರಾಮಲು ಬರಲಿಲ್ಲ ಈಗ ಬರುತ್ತಾರೆ ಇಲ್ಲವೋ ಗೊತ್ತಿಲ್ಲ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತ ಇದೆ ಎಂದು ತಿಳಿಸಿದರು. ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸಂತೋಷ. ಪಕ್ಷಕ್ಕೆ ಬರುವವರ ಬಗ್ಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರು ಹಾಗೂ ಹೈಕಮಾಂಡ್…
ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳು ರೆಗುಲರ್ ಬೇಲ್ ಪಡೆದುಕೊಂಡು ಬಿಡುಗಡೆಯಾಗಿದ್ದರು. ಆದರೆ ರಾಜ್ಯ ಸರ್ಕಾರ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 7 ಆರೋಪಿಗಳ ವಿರುದ್ಧ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು ಇಂದು ಸುಪ್ರೀಂಕೋರ್ಟ್ ನಲ್ಲಿ ಇದೀಗ ಈ ಒಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆ ಆರಂಭವಾದಾಗ ಹೈ ಕೋರ್ಟ್ ಜಾಮೀನು ನೀಡಿದೆ. ಹಾಗಾಗಿ ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರದ ಪರ ವಕೀಲರಿಂದ ಕೋರ್ಟ್ ಗೆ ಮನವಿ ಮಾಡಲಾಯಿತು. ಈ ವೇಳೆ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಹೌದು ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ ಎಂದು ಇದೀಗ ತಿಳಿದು ಬಂದಿದೆ. ವಿಚಾರಣೆ ವೇಳೆ ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರೆ…
ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಉದ್ಯಮಿ ಒಬ್ಬರಿಗೆ ಗನ್ ತೋರಿಸಿ ಕೊಲೆ ಬೆದರಿಕೆ ಆರೋಪದ್ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಲ್ಲಿ ಫೈಟರ್ ರವಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದಾಶಿವನಗರ್ ಪೊಲೀಸರಿಂದ ಫೈಟರ್ ರವಿಯನ್ನು ಬಂಧಿಸಲಾಗಿದೆ.ಉದ್ಯಮಿಗೆ ಗನ್ ತೋರಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು.ಉದ್ಯಮಿ ಸೋಮಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು. ಹಣಕಾಸು ವಿಚಾರಕ್ಕೆ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿತ್ತು. ಗನ್ ತೋರಿಸಿ ಬೆದರಿಕೆ ಹಾಕಿದ್ದ ಆರೋಪದಡಿ ಇದೀಗ ಪ್ರಕರಣ ಕೂಡ ದಾಖಲಾಗಿದೆ. ಶ್ರೀಕಾಂತ್ ಎಂಬಾತನಿಗೆ ಸೋಮಶೇಖರ್ 75 ಲಕ್ಷ ಕೊಟ್ಟಿದ್ದರು. ಈ ಒಂದು ಹಣಕಾಸಿನ ವಿಚಾರವಾಗಿ ಫೈಟರ್ ರವಿ ಮಧ್ಯ ಪ್ರವೇಶಿಸಿದ್ದು ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದ. ಹಾಗಾಗಿ ಈ ಒಂದು ಬೆದರಿಕೆ ಪ್ರಕರಣದಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ಬೆಂಗಳೂರಿನ ಸದಾಶಿವನಗರ ಠಾಣೆ ಪೋಲೀಸರು ಫೈಟರ್ ರವಿಯನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಹಲವು ಮಸೂದೆಗಳನ್ನು ಕಳುಹಿಸಿಕೊಡಲಾಗಿತ್ತು ಆದರೆ ರಾಜ್ಯಪಾಲರು ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳಿಸಿದ್ದಾರೆ ಇದೀಗ ರಾಜಪಾಲರ ನಡೆಗೆ ರಾಜ ಸರ್ಕಾರ ತೀವ್ರವಾಗಿ ಖಂಡಿಸಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸಿದೆ. ಹೌದು ರಾಜ್ಯಪಾಲರು ನಡೆಯಿಂದ ರಾಜ್ಯ ಸರ್ಕಾರ ಆಕ್ರೋಶಗೊಂಡಿದ್ದು, ರಾಜ್ಯಪಾಲರು ವಿರುದ್ಧ ಕಾನೂನು ಹೋರಾಟಕ್ಕೆ ಇದೀಗ ಚಿಂತನೆ ನಡೆಸುತ್ತಿದೆ. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ ಮುಂದುವರೆದಿದ್ದು, ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸುತ್ತಿದ್ದಾರೆ. ರಾಜಪಾಲರಿಂದ ರಾಜ್ಯ ಮಸೂದೆಗಳು ಇದೀಗ ವಾಪಸ್ ಕಳುಹಿಸಿದ್ದಾರೆ. ಸರ್ಕಾರದ ನಾಲ್ಕು ಮಸೂದೆಗಳನ್ನು ರಾಜ್ಯಪಾಲರು ಇದೀಗ ವಾಪಸ್ ಕಳುಹಿಸಿದ್ದಾರೆ. ಅಲ್ಲದೇ ಇನ್ನು ನಾಲ್ಕು ಮಸೂದೆ ಅಂಗೀಕರಿಸಲು ರಾಜಪಾಲರು ಬಾಕಿ ಉಳಿಸಿಕೊಂಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ನಾಲ್ಕು ವಿಧೇಯಕ ಅಂಗೀಕಾರಗೊಂಡಿತ್ತು. ಆದರೆ ರಾಜ್ಯಪಾಲರು ನಾಲ್ಕು ವಿಧೇಯಕಗಳಿಗೆ ಅಂಗೀಕಾರ ಹಾಕದೆ ವಾಪಸ್ ಕಳುಹಿಸಿದ್ದಾರೆ. ಹಾಗಾಗಿ ಇದೀಗ ಗವರ್ನರ್ ವಿರುದ್ಧ ರಾಜ್ಯ ಸರ್ಕಾರ ಆಕ್ರೋಶ ಹೊರಹಾಕಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸುತ್ತಿದೆ. ರಾಜ್ಯಪಾಲರಿಂದ…
ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾದೇಶದ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾಮಮೂರ್ತಿ ನಗರ ಬಳಿಯ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಾ ಎಸಗೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಮೂಲತಃ ಬಾಂಗ್ಲಾದೇಶದ ನಿವಾಸಿಯಾಗಿದ್ದ ನಜ್ಮಾ ಎನ್ನುವ ಮಹಿಳೆ, ಅಪಾರ್ಟ್ಮೆಂಟ್ನಲ್ಲಿ ನಜ್ಮಾ ಎನ್ನುವ ಮಹಿಳೆ ಕೆಲಸ ಮಾಡುತ್ತಿದ್ದಳು. ಈಕೆಗೆ ಮೂರು ಮಕ್ಕಳಿದ್ದು ಸದ್ಯ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಅಲ್ಲದೆ ಭೀಕರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ ಘಟನೆ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸ್ರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮುಖಾಂತರ ನಾಡಿನ ಸಮಸ್ತ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಟ್ವೀಟ್ ನಲ್ಲಿ ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಹೆಣ್ಣುಮಕ್ಕಳು ಪ್ರವೇಶ ಮಾಡದೆ ಇರುವ ಕ್ಷೇ ತ್ರಗಳಿಲ್ಲ, ಸಾಧಿಸದ ಗುರಿಯಿಲ್ಲ, ಏರದ ಎತ್ತರವಿಲ್ಲ.ತಾಯಿ, ಅಕ್ಕ-ತಂಗಿ, ಹೆಂಡತಿಯಾಗಿ ಹೀಗೆ ಪುರುಷನ ಬದುಕಿನ ಪ್ರತಿ ಹಂತದಲ್ಲೂ ಕಷ್ಟ – ಸುಖಗಳಿಗೆ, ನೋವು – ನಲಿವುಗಳಿಗೆ ಹೆಗಲಾಗಿ ನಿಲ್ಲುವ ಹೆಣ್ಣುಮಕ್ಕಳು ನಿಸರ್ಗದ ಅದ್ಭುತ ಸೃಷ್ಟಿ. ಆಧುನಿಕ ಯುಗದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಲಿಂಗಾಧಾರಿತ ಅಸಮಾನತೆ, ಅವಕಾಶಗಳಲ್ಲಿ ತಾರತಮ್ಯದಂತಹ ಅಡೆ-ತಡೆ, ಅಡ್ಡಿ-ಆತಂಕಗಳ ವಿರುದ್ಧದ ಹೋರಾಟಕ್ಕೆ ನಾವು, ನೀವೆಲ್ಲರೂ ಬೆಂಬಲವಾಗಿ ನಿಂತು, ಹೆಣ್ಣುಮಕ್ಕಳ ಸಮಾನತೆ ಹಾಗೂ ಘನತೆಯ ಬದುಕಿನ ಕನಸನ್ನು ನನಸಾಗಿಸೋಣ. ನಮ್ಮ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ, ಶಕ್ತಿ ಮುಂತಾದ ಯೋಜನೆಗಳು ಸ್ತ್ರೀ ಸಬಲೀಕರದ ನಿಟ್ಟಿನಲ್ಲಿ ಹೊಸ ಇತಿಹಾಸ ನಿರ್ಮಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿವೆ. ಇದು ಹೆಣ್ಣುಮಕ್ಕಳ ಬಗೆಗಿನ…
ಚಿಕ್ಕಮಗಳೂರು : ಸದ್ಯ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಎಷ್ಟೋ ಜನರು ತಮ್ಮ ಸ್ವಂತ ಮನೆ ಹಾಗೂ ಊರನ್ನು ಬಿಟ್ಟು ತೊರೆದಿದ್ದಾರೆ.ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಸುಮಾರು 15 ಜನ ಮಹಿಳೆಯರು, ಮನೆಯನ್ನು ತೊರೆದಿರುವ ಘಟನೆ ವರದಿಯಾಗಿದೆ. ಹೌದು ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ಭೀಮ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹಾಂದಿ ಗ್ರಾಮದಿಂದ 15 ಕ್ಕೂ ಹೆಚ್ಚು ಸ್ತ್ರೀಯರು ಮನೆ ಬಿಟ್ಟು ಹೋಗಿದ್ದಾರೆ. ಕೂಲಿ ಕಾರ್ಮಿಕರು ಬಡ ಮಹಿಳೆಯರೇ ಮೈಕ್ರೋ ಫೈನಾನ್ಸ್ ಗಳಿಗೆ ಟಾರ್ಗೆಟ್ ಆಗಿದ್ದು, ಗ್ರಾಮದ ಮಹಿಳೆಯರನ್ನೇ ಒಗ್ಗೂಡಿಸಿ ಸಂಘ ಸ್ಥಾಪಿಸಿ ಸಾಲ ನೀಡುತ್ತಿದ್ದರು. ಸಂಘದವರು ಸಾಲಕಟ್ಟದಿದ್ದರೆ ಜವಾಬ್ದಾರಿ ಹೊತ್ತಿದ್ದ ಮಹಿಳೆಯರಿಗೆ ಕಿರುಕುಳ ನೀಡಲು ಆರಂಭಿಸಿದ್ದಾರೆ. ಇದೀಗ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ಸುಮಾರು 15 ಜನರು ಮಹಿಳೆಯರು ಊರು ಬಿಟ್ಟಿದ್ದಾರೆ. ಮೈಕ್ರೋ ಫೈನಾನ್ಸ್ ಸಾಲ ಕೂಲಿ ಕಾರ್ಮಿಕರ ಬದುಕಿಗೆ ಕೊಳ್ಳಿ ಇಟ್ಟಿದೆ. ಆಲ್ದೂರು…













