Author: kannadanewsnow05

ವಿಜಯಪುರ : ಮಾನಸಿಕವಾಗಿ ಮನನೊಂದು ವ್ಯಕ್ತಿ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ .ಈ ವ್ಯಕ್ತಿ ಕಂಬಳಿಯಲ್ಲಿ ಕುಳಿತು ಪೂಜೆ ಮಾಡಿ, ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ಸೂಸೈಡ್‌ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ತನಗೆ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಅಡಿವೆಪ್ಪ ಘಾಯಿ (43) ಎಂದು ಗುರುತಿಸಲಾಗಿದೆ. ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿ ಮದ್ಯಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ.ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇಗುಲದ ಮುಂದೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ. ಅನ್ಯಕೋಮಿನವರಿಗೆ ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರಿಗೂ ಹಿಂದೂ ಸಂಘಟನೆಗಳ ಒಕ್ಕೂಟ ​ಮನವಿ ಸಲ್ಲಿಸಿದೆ. ಸದ್ಯ ಇದು ಪರ ವಿರೋಧಕ್ಕೆ ಕಾರಣವಾಗಿದೆ. ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ, ಜಿಹಾದ್ ಹೆಸರಿನಲ್ಲಿ ದೇಶದ ಅಖಂಡತೆಗೆ ಮಾರಕವಾಗಿರುವ ಕ್ರೂರ ಮತಾಂಧರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ದೇವಸ್ಥಾನದ ಎದುರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.

Read More

ಬೆಂಗಳೂರು: ನಗರದ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸಚಿವ ಸಂಪುಟ ಸಭೆಗೆ ವಿವರವಾದ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಈ ಜಾಗದಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಕೂಡಾ ಮಾಹಿತಿ ನೀಡಬೇಕು ಎಂದೂ ಸೂಚಿಸಿದರು. ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ನಗರದ ಕೇಂದ್ರ ಭಾಗದಲ್ಲಿ ಈ ಜಾಗ ಇರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ವಿವರವನ್ನೂ ಸಲ್ಲಿಸಬೇಕು ಎಂದು ತಿಳಿಸಿದರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.…

Read More

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಜನರಲ್ಲಿ ಭಯ ಉಂಟು ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ನೀಡದ ದಬ್ಬಾಳಿಕೆ ಸರ್ಕಾರವಾಗಿದೆ. ಅನ್ಯಾಯದ ವಿರುದ್ಧ ಧ್ವನಿ‌ ಎತ್ತಿದರೆ ಪ್ರಕರಣ ದಾಖಲಿಸಿ ಹೆದರಿಸುತ್ತಿದೆ. ಜನರ ಧ್ವನಿಯನ್ನು ಹತ್ತಿಕ್ಕಲು ಮುಂದಾಗುತ್ತಿದೆ. ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಡುವ ಹಾಗೂ ದಲಿತ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಕುರಿತು ಮಾತನಾಡದ ಸರ್ಕಾರ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದರು. ರಾಜ್ಯದಲ್ಲಿ ಭಯ ಹುಟ್ಟಿಸುವ ಹಲವಾರು ಘಟನೆಗಳು ಪದೇಪದೇ ನಡೆಯುತ್ತಿವೆ. ಶ್ರೀಕಾಂತ ಪೂಜಾರಿ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಬಂಧಿಸಲಾಗಿತ್ತು. ಗಲಭೆ ಪ್ರಕರಣಕ್ಕೆ ಸಂಬಂಧಿಸಿಯೂ ಅವರ ಮೇಲೆ‌ ಪ್ರಕರಣಗಳಿಲ್ಲ. ಪ್ರಕರಣಗಳಿಲ್ಲದೆ ಬಂಧಿಸಿ ಜೈಲಿಗೆ ಕಳುಹಿಸುವುದು ಎಮರ್ಜೆನ್ಸಿಯಲ್ಲಿ ಮಾತ್ರ ಆಗುತ್ತಿತ್ತು. ಅದೇ ಮಾದರಿ ಈಗ ನಡೆಯುತ್ತಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬಾರದು ಎನ್ನುವ ಕಾಂಗ್ರೆಸ್ ಕನಸು ಭಗ್ನ…

Read More

ಬೆಳಗಾವಿ : ಬೆಳಗಾವಿಯ ಜಿಲ್ಲಾ ಬಳಿ ಯುವಕ ಯುವತಿಯ ಮೇಲೆ ಅನ್ಯಕೋಮಿನ ಸುಮಾರು 15 ದಿನ ಪುಂಡರು ವ ನೈತಿಕ ಪೊಲೀಸ್ ಗಿರಿ ನಡೆಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾರ್ಕೆಟ್ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದ್ದಾರೆ. ನಿನ್ನೆ ಯುವಕ ಹಾಗೂ ಯುವತಿ ಯುವನಿಧಿ ಯೋಜನೆಗೆ ಅಪ್ಲಿಕೇಶನ್ ಹಾಕಲು ಬಂದಿದ್ದಾಗ ಸರ್ವರ್ ಬ್ಯುಸಿ ಇರುವ ಕಾರಣ ಕಿಲಾ ಬಳಿ ಕುಳಿತುಕೊಂಡಿದ್ದರು ಈ ವೇಳೆ ಅನ್ಯಕೋಮಿನ 15 ಜನರ ಯುವಕರ ಗುಂಪೊಂದು ಬಂದು ಯುವಕ ಮತ್ತು ಯುವತಿಯನ್ನು ಅಕಿಲ ಬಳಿ ಇರುವ ಕೋಣೆಗೆ ಕರೆದುಕೊಂಡು ಹೋಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಯುವತಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಘಟನೆ ಕುರಿತಂತೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯ 10 ಕಲಂ ಅಡಿಯಲ್ಲಿ ದೂರು ದಾಖಲಾಗಿದೆ. ಮಾರ್ಕೆಟ್ ಪೊಲೀಸರಿಂದ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. 15ಕ್ಕೂ…

Read More

ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ಈ ಕುರಿತಾಗಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿಲ್ಲ. ನಾನು ಶಿವನ ಭಕ್ತ ಆಂಜನೇಯನ ಮೂರ್ತಿ ಇಲ್ಲಿದೆ ನೋಡಿ.ಎಲ್ಲಾ ದೇವರುಗಳು ನನ್ನ ಹೃದಯದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ. ಬೊಮ್ಮಾಯಿ ಫುಡ್ ಆಕ್ಟ್ ತಂದಿದ್ಯಾರು ಎಂಬುದನ್ನೇ ಮರೆತಿದ್ದಾರೆ. ಮೊದಲು ಅನ್ನಭಾಗ್ಯ ಯೋಜನೆಯ ಪ್ರಾರಂಭಿಸಿದ್ದೆ ಸಿಎಂ ಸಿದ್ದರಾಮಯ್ಯ.ಪಾಪ ಬಸವರಾಜ ಬೊಮ್ಮಾಯಿಗೆ ಇದು ಮರೆತುಹೋಗಿದೆ ಎಂದು ಡಿಕೆ ಶಿವಕುಮಾರ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಡಿಕೆಶಿ ಇಂದಲೇ ಕಾಂಗ್ರೆಸ್ ಅಂತ್ಯ ಎಂಬ ಎಚ್ಡಿ ದೇವೇಗೌಡ ಅವರ ಈ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ 138 ವರ್ಷಗಳ ಇತಿಹಾಸ ಇದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನ ಬಂದಿದೆ. ಇಬ್ಬರು ಪಕ್ಷೇತರರು ನಮ್ಮ ಪಕ್ಷಕ್ಕೆ ಸೇರಿದ್ದಾರೆ.ದೇವೇಗೌಡರು…

Read More

ಬೆಂಗಳೂರು : ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ಭೀಕರ ಬರಗಾಲ ಎದುರಾಗಿದ್ದು ರೈತರು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿಯ ಕೃಷ್ಣ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶಗಳಿಗೆ 2.77 ಟಿಎಂಸಿ ನೀರು ಬಿಡುವಂತೆ ನಿರ್ಧರಿಸಲಾಗಿದೆ ಎಂದು ಡಿಸೆಂಬ ಡಿಕೆ ಶಿವಕುಮಾರ್ ತಿಳಿಸಿದರು. ಕೃಷ್ಣ ಮೇಲ್ದಂಡೆ ಅಚ್ಚುಕಟ್ಟು ಜನಪ್ರತಿನಿಧಿಗಳ ಜೊತೆಗೆ ಚರ್ಚಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.ತಡರಾತ್ರಿ ಜನಪ್ರತಿನಿಧಿಗಳು ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ್ದೇನೆ. ವೀಡಿಯೋಕಾನ್ಸ್ ಮೂಲಕ ಸಭೆ ನಡೆಸಿ ಮಾಹಿತಿಯನ್ನು ಪಡೆದಿದ್ದೇನೆ. ಯಾದಗಿರಿ ಸೇರಿ ಹಲವು ಜಿಲ್ಲೆಯ ಶಾಸಕರು ಭೇಟಿ ಮಾಡಿದ್ದರು ಕುಡಿಯುವ ನೀರಿಗೆ ಬಹಳ ದೊಡ್ಡ ತೊಂದರೆ ಆಗುವ ಪರಿಸ್ಥಿತಿ ಇದೆ ಎಂದು ತಿಳಿಸಿದರು. ರೈತರು ಕಚೇರಿ ಮುಂದೆ ಗುಂಡಿ ತೋಡಿಕೊಂಡು ಅದರಲ್ಲಿ ಕೂತಿದ್ದಾರೆ.ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಲು ಹೋಗಬಾರದು ಅಂತ ಹೇಳಿದ್ದೇನೆ. ರೈತರಿಂದಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ 2.75 ಟಿಎಂಸಿ ನೀರು ಬಿಡಬೇಕೆಂದು ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ ಮೆಣಸು ಬೆಳೆಗಾರರಿಗೆ ತೊಂದರೆ ಆಗಿದೆ…

Read More

ಹುಬ್ಬಳ್ಳಿ : ಪುನೀತ್ ಕೆರೆಹಳ್ಳಿ ಎಂಬ ಮತಾಂಧ ನಿಗೆ ಬಿಜೆಪಿ ರಾಜ್ಯದಲ್ಲಿ ಕೋಮುಗಳಭೆ ಸೃಷ್ಟಿಸಲು ತತ್ವ ಹೊರಡಿಸಿದೆ ಎಂದು ಸಾಕ್ಷಿ ಸಮೇತ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ಇದೀಗ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದು ರಾಮಮಂದಿರ ಆಗಬಾರದು ಅನ್ನೋದು ಕಾಂಗ್ರೆಸ್ಸಿನ ಆಸೆಯಾಗಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಸರ್ಕಾರದಲ್ಲಿ ಅನುಭವಿಸಿದ ಬಂದು ವಾತಾವರಣ ಇದೆ ಸಿಎಂ ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದರು. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಕೇಸ್ ಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಭಯ ಹುಟ್ಟಿಸುವ ಪ್ರಯತ್ನ ಆಗುತ್ತಿದೆ.ಶ್ರೀಕಾಂತ್ ವಿರುದ್ಧ ಯಾವ ಕೇಸ್ ಇಲ್ಲ ಆದರೂ ಜೈಲಿಗೆ ಹಾಕಿದ್ದರು. ಶ್ರೀಕಾಂತ್ ಬಂಧಿಸಿದ ಇನ್ಸ್ಪೆಕ್ಟರ್ ಸಚಿವರು ಕ್ಷಮೆ ಕೇಳಲಿಲ್ಲ.ಏಳು ತಿಂಗಳಲ್ಲೇ ಅಧಿಕಾರದ ಮದ ಏರಿದೆ ನಾಳೆ ಚಿಂತನ ಮಂಥನ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸದರು. ರಾಮಮಂದಿರ ಆಗಬಾರದು ಅನ್ನೋದು…

Read More

ಬೆಂಗಳೂರು : ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಇಂದು 21ನೇ ಚಿತ್ರ ಸಂತೆ ಆಯೋಜಿಸಿದ್ದು ನಗರದ ಕುಮಾರ ಕೃಪ ರಸ್ತೆಯಲ್ಲಿ ಆಯೋಜಿಸಿದ್ದ ಚಿತ್ರ ಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಇಂದಿನ ಚಿತ್ರರಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ ಎಂದು ತಿಳಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಅತ್ಯಂತ ಸಂತೋಷದಿಂದ ಚಿತ್ರಸಂತೆಯನ್ನು ಉದ್ಘಾಟನೆ ಮಾಡಿದ್ದೇನೆ. ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿ ಚಿತ್ರಸಂತೆ ನಡೆಯುತ್ತಿದ್ದು ರೂ.1500ಕ್ಕೂ ಹೆಚ್ಚು ಕಲಾವಿದರು, ಚಿತ್ರ ಸಂತೆಯಲ್ಲಿ ಭಾಗವಹಿಸಿದ್ದಾರೆ. 24 ರಾಜ್ಯದ ಕಲಾವಿದರಿಗೆ ನನ್ನ ಕಡೆಯಿಂದ ಅಭಿನಂದನೆ ತಿಳಿಸುತ್ತಿದ್ದೇನೆ. ಚಿತ್ರ ಸಂತೆಗೆ ಸರ್ಕಾರದಿಂದ 50 ಲಕ್ಷ ಅನುದಾನ ನೀಡುತ್ತಿದ್ದೇನೆ ಎಂದು ಚಿತ್ರ ಸಂತೆ ಉದ್ಘಾಟಿಸಿದ ಬಳಿಕ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದು ಇಂದಿನ ಚಿತ್ರ ಸಂತೆಯನ್ನು ಇಸ್ರೋ ವಿಜ್ಞಾನಿಗಳಿಗೆ ಅರ್ಪಿಸಿದ್ದೇವೆ ಎಂದು ತಿಳಿಸಿದರು.

Read More

ಚಿಕ್ಕಮಗಳೂರು : ಕೋಮುಗಲಭೆ ಸೃಷ್ಟಿಸಲು ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ತತ್ವ ಬಂದಿದೆ ಎಂಬ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಅವರ ಆರೋಪಕ್ಕೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದು, ರಾಮದೇವರ ಉದ್ಘಾಟನೆ ವೇಳೆ ಕೋಮು ಗಲಭೆಗೆ ‘ಕೈ’ ಪ್ಲಾನ್ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಶಾಂತವಾಗಿದೆ ಮೋದಿ ಆಡಳಿತದಲ್ಲಿ ಕೋಮುದಳ್ಳುರಿ ನಡೆದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ದೇಶದ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ.ದಾಳಿ ಆದಾಗ ಕಾಂಗ್ರೆಸ್ ನವರಿಗೆ ಇದು ನಮ್ಮ ಸರ್ಕಾರ ಅನಿಸುತ್ತಿತ್ತು ಎಂದು ವಾಗ್ದಾಳಿ ನಡೆಸಿದರು. ಮೋದಿ ಬಂದ ಮೇಲೆ ಭಯೋತ್ಪಾದಕ ಮಾನಸಿಕ ಜನರಿಗೆ ಭಯ ಉಂಟಾಗಿದೆ. ರಾಮದೇವರ ಉದ್ಘಾಟನೆ ವೇಳೆ ಮತ್ತೆ ಕೋಮು ಗಲಭೆಗೆ ಕೈ ಪ್ಲಾನ್ ಮಾಡಿಕೊಂಡಿದೆ. ಅದರ ಚಿಕ್ಕ ಝಲಕ್ ಅನ್ನು ಎಂ ಎಲ್ ಸಿ ಹರಿಪ್ರಸಾದ್ ಹೇಳಿರಬಹುದು ಎಂದು ಅವರು ಆರೋಪಿಸಿದರು. ದೇಶದ ಜನರಿಗೆ ಹಿಂಸೆ ಬೇಡ ಜನ ಶಾಂತಿ ವಹಿಸುತ್ತಿದ್ದಾರೆ ಮಂದಿರ ನಿರ್ಮಾಣದ ಬಳಿಕ ರಾಮನಿಗೊಂದು ಅಸ್ಮಿತೆ…

Read More