Subscribe to Updates
Get the latest creative news from FooBar about art, design and business.
Author: kannadanewsnow05
ಧಾರವಾಡ : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳ್ಳಿಕಟ್ಟಿ ಕ್ರಾಸ್ ಬಳಿ ಮುಂಬೈ ಹಾಗೂ ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ 2 ಕಾರು ಹಾಗೂ ಲಾರಿ ನಡುವೆ ಸರಣಿ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದರೆ. ಭೀಕರ ಅಪಘಾತದಲ್ಲಿ ನಾಲ್ವರ ಸಾವಾಗಿದ್ದು, ಎರಡು ಕಾರು ಲಾರಿ ನಡುವೆ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ನಾಲ್ವರು ದುರ್ಮರಣ ಹೊಂದಿದ್ದು, ಘಟನೆಯು ಕುಂದಗೋಳ ತಾಲೂಕಿನ ಬೆಳ್ಳಿಕಟ್ಟಿ ಕ್ರಾಸ್ ಬಳಿ ನಡೆದ ಅಪಘಾತವಾಗಿದ್ದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳೆ ಕಟ್ಟಿ ಕ್ರಾಸ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕುಂದಗೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಭೀಕರವಾದಂತಹ ಸರಣಿ ಅಪಘಾತದಲ್ಲಿ ಮೃತಪಟ್ಟ ಅವರ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಈ ಕುಡಿದಂತೆ ಕುಂದಗೋಳ ತಾಲೂಕಿನ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಚಿನ್ನಾಭರಣಗಳನ್ನು ಆಸ್ಪತ್ರೆಯ ಸಿಬ್ಬಂದಿ ಕಳವು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಜಾಪುರ ರಸ್ತೆಯ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಸಾಫ್ಟ್‌ವೇರ್ ಎಂಜಿನಿಯರ್ ಕಿಶೋರ್ ಅವರ ಪತ್ನಿ ಡಿ.25ರಂದು ಚಿಕಿತ್ಸೆಗೆ ದಾಖಲಾಗಿದ್ದರು. ಡಿ.27ರಂದು ಶಸ್ತ್ರಚಿಕಿತ್ಸೆಗಾಗಿ ಕರೆದೊಯ್ಯುವಾಗ ಚಿನ್ನಾಭರಣಗಳು ಮೈಮೇಲಿದ್ದವು. ಆದರೆ, ಶಸ್ತ್ರಚಿಕಿತ್ಸೆ ಬಳಿಕ ಹೊರಬಂದಾಗ ಮಾಂಗಲ್ಯ, ಚಿನ್ನದ ಸರ ಸೇರಿದಂತೆ 72 ಗ್ರಾಂ ಚಿನ್ನಾಭರಣ ಇರಲಿಲ್ಲವೆಂದು ಆರೋಪಿಸಿ, ಕಿಶೋರ್ ಅವರು ದೂರು ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.ಆಸ್ಪತ್ರೆ ಸಿಬ್ಬಂದಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಚಿನ್ನ ಸಾಗಣೆ: 12 ಮಂದಿ ಬಂಧನ ಬೆಂಗಳೂರು: ದಾಖಲೆಯಿಲ್ಲದೆ ವಿಮಾನಗಳ ಮೂಲಕ ತಂದಿದ್ದ ₹1.29 ಕೋಟಿ ಮೌಲ್ಯದ ಚಿನ್ನಾಭರಣವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು 12 ಮಂದಿಯನ್ನು ಬಂಧಿಸಿದ್ದಾರೆ.ವಿದೇಶದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ 12 ಮಂದಿ, 2 ಕೆ.ಜಿ 86 ಗ್ರಾಂ ಚಿನ್ನವನ್ನು ತಂದಿದ್ದರು. ಮಸ್ಕತ್…
ಬೆಂಗಳೂರು : ಅಧಿಕಾರದುದ್ದಕ್ಕೂ ಕಾಂಗ್ರೆಸ್ ದಲಿತರನ್ನು ವೋಟ್ ಬ್ಯಾಂಕ್‌ನಂತೆ ದುರುಪಯೋಗ ಮಾಡಿಕೊಂಡು, ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟೀಕಿಸಿದರು. ಬಿಜೆಪಿ ರಾಜ್ಯ ಕಚೇರಿಯಲ್ಲಿ ಶುಕ್ರವಾರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮಕ್ಷಮ ಏರ್ಪಡಿಸಿದ್ದ ಪಕ್ಷದ ಬಲವರ್ಧನೆಗಾಗಿ ಭೀಮ ಸಮಾವೇಶದಲ್ಲಿ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿಯವರು ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆ ಬಯಸಿ ಯೋಜನೆ ಜಾರಿಗೊಳಿಸಿದ್ದಾರೆ. ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ನಾವೂ ಸಾಗಬೇಕಿದೆ. ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವಿನ ಸಂಕಲ್ಪ ಸಾಕಾರಗೊಳಿಸಲು ಶ್ರಮಿಸಬೇಕು. ಮೋದಿಯವರ ನಾಯಕತ್ವದ ಪಕ್ಷದಲ್ಲಿದ್ದೇವೆ ಎಂಬ ಹೆಮ್ಮೆ ನಮ್ಮದು ಎಂದರು. ರಾಜ್ಯಾದ್ಯಂತ ಪ್ರವಾಸ: ಪಕ್ಷ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯ ಪ್ರವಾಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಯವರ ಕೈ ಬಲಪಡಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆ ದೃಷ್ಟಿಯಿಂದ ರಾಜ್ಯ ಪ್ರವಾಸದ ವೇಳೆ ಪ್ರಮುಖರ ಜತೆಗೆ ಮಾತನಾಡುವೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿ…
ಬೆಂಗಳೂರು : ದೇಶದಲ್ಲಿ ಕೊರೊನಾ ವೈರಸ್ ಮತ್ತೆ ಅಬ್ಬರಿಸುತ್ತಿದ್ದು ಇದೀಗ ರಾಜ್ಯದಲ್ಲೂ ಕೂಡ ದಿನದಿಂದ ದಿನಕ್ಕೆ ಕರೋನ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಜನರು ಯಾವುದೇ ರೀತಿಯಾದಂತಹ ಆತಂಕ ಪಡದೆ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ. ರಾಜ್ಯದಲ್ಲಿ 328 ಜನರಿಗೆ ಕೊರೊನ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 163 ಜನರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ.ರಾಜ್ಯದಲ್ಲಿ ಕೊರೊನ ಪಾಸಿಟಿವಿಟಿ ಶೇಕಡ 4.55 ಇದ್ದು, ರಾಜ್ಯದಲ್ಲಿ 159 ಜನರಲ್ಲಿ ಕರೋನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಒಂದೇ ದಿನ 7205 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಮೈಸೂರು 26, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 18, ತುಮಕೂರು 15,ಹಾಸನ 12, ಚಿಕ್ಕಬಳ್ಳಾಪುರದಲ್ಲಿ 10, ಬಳ್ಳಾರಿ 9, ದಕ್ಷಿಣ ಕನ್ನಡ 8, ಚಿಕ್ಕಮಂಗಳೂರು 7, ಮಂಡ್ಯ 7, ವಿಜಯನಗರ 7, ಶಿವಮೊಗ್ಗ 6, ಉತ್ತರಕನ್ನಡ ಜಿಲ್ಲೆಯಲ್ಲಿ 6, ಚಾಮರಾಜನಗರ ಐದು ಚಿತ್ರದುರ್ಗ 5 ಕಲಬುರ್ಗಿಯಲ್ಲಿ 4, ಬಾಗಲಕೋಟೆ 4, ರಾಯಚೂರು 4, ದಾವಣಗೆರೆಯಲ್ಲಿ 3,…
ಶಿವಮೊಗ್ಗ : ಭದ್ರಾ ಅಚ್ಚು ಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ರೈತರು ಒತ್ತಾಯಿಸುತ್ತಿದ್ದಾರೆ.ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಫೆಬ್ರವರಿ ಒಂದರಿಂದ ನೀರು ಹರಿಸುವಂತೆ ರೈತರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಇಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರೈತರು ಒತ್ತಾಯಿಸುತ್ತಿದ್ದಾರೆ. ದಾವಣಗೆರೆಯ ನೀರಾವರಿ ಇಲಾಖೆಯಲ್ಲಿ ರೈತರು ಸಭೆ ನಡೆಸಿದ್ದು ಫೆಬ್ರವರಿ ಮಾರ್ಚ್ ಎಪ್ರಿನಲ್ಲಿ ತಲಾ 20 ದಿನ ನೀರು ಹರಿಸುವಂತೆ ಅಗ್ರಹಿಸಿದ್ದಾರೆ. ಆದ್ದರಿಂದ ಇಂದು ಶಿವಮೊಗ್ಗದಲ್ಲಿ ನಡೆಯುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ 20 ದಿನಗಳವರೆಗೆ ನೀರು ಹರಿಸುವ ಈ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದು, ಒಂದು ವೇಳೆ ನೀರು ಹರಿಸುವುದನ್ನು ತಪ್ಪಿಸಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ರಾಜ್ಯ ಸರ್ಕಾರವು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮೇಲೆ ಹಿಂದಿನ ಪ್ರಕರಣ ರೀ ಓಪನ್ ಮಾಡಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಕಿದ್ದಾರೆ. ಶುಕ್ರವಾರ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಸೇಡಿನ ರಾಜಕೀಯ ಮಾಡಿದ್ದಾರೆ. ಲೋಕಸಭೆ ಚುನಾವಣೆಗೆ ಎನ್‌ಡಿಎ ಜತೆ ಕೈ ಜೋಡಿಸಲಾಗಿದ್ದು, ಇದರ ಬಗ್ಗೆ ಸಂಶಯ ಬೇಡ. ಕರಸೇವಕರ ಮೇಲಿನ ಪ್ರಕರಣ ಮರು ತನಿಖೆ ಮಾಡಿದ್ದು ಸೇಡಿನ ರಾಜಕೀಯ. ಮೈತ್ರಿ ಇರುವವರೆಗೆ ಸೇಡಿನ ರಾಜಕೀಯ ಮಾಡಿದರೆ ನಾವು ದನಿ ಎತ್ತಲಿದ್ದೇವೆ. ಇಂತಹ ಸಮಯದಲ್ಲಿ ನಾವು ಮಾತನಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು. ಕಾಂಗ್ರೆಸ್ ಅಂತ್ಯ ಕಾಣಲಿದೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಅಂತ್ಯ ಕಾಣಲಿದೆ. 60 ವರ್ಷ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನಾವು ಅವರನ್ನು ನಾವು ಸೋಲಿಸಿಯೇ ಸೋಲಿಸುತ್ತೇವೆ. ಎನ್‌ಡಿಎ ಸೋಲಿಸಿ ರಾಜ್ಯದಲ್ಲಿ…
ಬೆಂಗಳೂರು : ನನಗೆ ಕಿರುಕುಳ ನೀಡುವ ಉದ್ದೇಶದಿಂದ ದ್ವೇಷ ರಾಜಕಾರಣ ನಡೆಯುತ್ತಿದೆ. ಅಧಿಕಾರಿಗಳೂ ರಾಜಕೀಯ ಮಾಡುತ್ತಿದ್ದಾರೆ, ಮಾಡಲಿ. ಭಗವಂತ ಹಾಗೂ ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ. ಕಾಲಚಕ್ರ ಉರುಳಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ ಕಿಡಿ ಕಾರಿದ್ದಾರೆ. ಇದು, ತಮ್ಮ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿರುವುದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ವಿರುದ್ಧ ಕೂಡ ಆಕ್ರೋಶ ಹೊರಹಾಕಿದರು. ಈ ಸಂಬಂಧ ಶುಕ್ರವಾರ ವಿಧಾನಸೌಧ ದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ನಾಯಕರ ಮೇಲೂ ಇದೇ ರೀತಿ ಪ್ರಕರಣಗಳು ಇದ್ದರೂ ಅವರ ಮೇಲೆ ಯಾವುದೇ ಕ್ರಮ ಇಲ್ಲ. ನನಗೆ ಕಿರುಕುಳ ನೀಡುವುದಕ್ಕೂ ಒಂದು ಮಿತಿ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದುನನಗೆ ಗೊತ್ತಿದೆ. ರಾಜ್ಯಸಭೆಗೆ ಅಹ್ಮದ್ ಪಟೇಲ್ ಅವರು ಸ್ಪರ್ಧಿಸಿದ್ದಾಗ ನಾನು ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ನನ್ನ ಮೇಲೆ ದಾಳಿ ನಡೆಯುತ್ತಿದೆ…